ಗಂಗೊಳ್ಳಿ( ಆ,25): ನವೆಂಬರ್ 01 ರಂದು ಕನ್ನಡ ಸಂಘ ಕಾಂತಾವರ (ರಿ ) ವತಿಯಿಂದ ಕಾಂತಾವರದಲ್ಲಿ ನಡೆಯಲಿರುವ ಕಾಂತಾವರ ಉತ್ಸವ 2024ರಲ್ಲಿ ಕಾಂತಾವರ ಕನ್ನಡ ಸಂಘದ ಸ್ಥಾಪಕ ಅಧ್ಯಕ್ಷರಾದ ಡಾ ನಾ. ಮೊಗಸಾಲೆ ಅವರ ಗೌರವ ಸಂಪಾದಕತ್ವದಲ್ಲಿ ಮತ್ತು ಹಿರಿಯ ಸಾಹಿತಿ ಡಾ. ಬಿ ಜನಾರ್ದನ್ ಭಟ್ ಅವರ ಸಂಪಾದಕತ್ವದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ವಿವಿಧ ಕ್ಷೇತ್ರಗಳ ಸಾಧಕರನ್ನು ಪರಿಚಯಿಸುವ ‘ನಾಡಿಗೆ ನಮಸ್ಕಾರ’ ಗ್ರಂಥಮಾಲೆಯಡಿ […]
Day: October 25, 2024
ಕಾರ್ಕಳ: ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಪ್ರತ್ಯುಶ್ ಶೆಟ್ಟಿ ಜಿಲ್ಲಾಮಟ್ಟಕ್ಕೆ
ಕಾರ್ಕಳ ( ಆ,25): ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಹಾಗೂ ಸರಕಾರಿ ಪ್ರಾಥಮಿಕ ಶಾಲೆ ಶಿರ್ಲಾಲು ಸೂಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ಬಾಲಕ ಮತ್ತು ಬಾಲಕಿಯರ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಅಥ್ಲೆಟಿಕ್ ಮೀಟ್ 2024 -25 ನಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಯಾದ ಪ್ರತ್ಯುಶ್ ಶೆಟ್ಟಿ 200 ಮೀ. ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ […]
ಜನತಾ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಐ.ಟಿ. ಕ್ವಿಜ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ(ಆ,25): ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಗ್ರಾಮೀಣ ಐ.ಟಿ.ಕ್ವಿಜ್ ವಿಭಾಗದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಅಭಿದೀಪ್ ಹೆಬ್ಬಾರ್ ಹಾಗೂ ನಿದಿಲ್ ಶೆಟ್ಟಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕ್ರಿಯೇಟಿವ್ ಕಾಲೇಜಿನಲ್ಲಿ ಯುವ ಬರಹಗಾರರ ಸಮ್ಮೇಳನ “ಅಕ್ಷರ ಯಾನ”
ಕಾರ್ಕಳ ( ಆ .25): ಯುವ ಮತ್ತು ಪ್ರತಿಭಾವಂತ ಬರಹಗಾರರನ್ನು ಪ್ರೋತ್ಸಾಹಿಸಲು ಕ್ರಿಯೇಟಿವ್ ಪುಸ್ತಕ ಮನೆ ಹಾಗೂ ವಿಕಾಸ ಸೇವಾ ಸಂಸ್ಥೆ ಕಾರ್ಕಳ ಇದರ ಸಹಯೋಗದಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಯುವ ಬರಹಗಾರರ ಸಮ್ಮೇಳನ ‘ಅಕ್ಷರಯಾನ – ಬರವಣಿಗೆಯ ಮೆರವಣಿಗೆ’ ಕಾರ್ಯಕ್ರಮವು ಅಕ್ಟೋಬರ್ 30 ರಂದು ನಡೆಯಲಿದೆ. ಈ ಸಮಾರಂಭದ ಉದ್ಘಾಟಕರಾಗಿ ಕರ್ನಾಟಕ ಸರ್ಕಾರದ ಮಾಜಿ ಸಚಿವರು, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶ್ರೀ ವಿ. […]
ಡಾl ಬಿ.ಬಿ ಹೆಗ್ಡೆ ಕಾಲೇಜು : ನೊವೇಶನ್ ಮ್ಯಾನೇಜ್ಮೆಂಟ್ ಫೆಸ್ಟ್-2024 ಸಂಪನ್ನ
ಕುಂದಾಪುರ (ಅ. 24): ಇಲ್ಲಿನ ಡಾI ಬಿ .ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇದರ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ಅಕ್ಟೋಬರ್, 24 ಹಾಗೂ 25 ರಂದು ನಡೆದ ನೊವೇಶನ್ ಮ್ಯಾನೇಜ್ಮೆಂಟ್ ಫೆಸ್ಟ್ -2024 ಸಂಪನ್ನಗೊಂಡಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಇಂಡಿಯನ್ ಓವರ್ಸೀಸ್ ಬ್ಯಾಂಕ್ ಕುಂದಾಪುರ ಶಾಖೆಯ ಪ್ರಬಂಧಕರುಗಳಾದ ಶ್ರೀ ನಿಶಿತ್ ಪಾರ್ಮರ್ ಹಾಗೂ ಶ್ರೀ ರವಿ ಆಗಮಿಸಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ. […]










