ಕುಂದಾಪುರ (ನ, 01): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಂದಗನ್ನಡ ಸಂಘದ ಜಂಟಿ ಆಶ್ರಯದಲ್ಲಿ ದೀಪಾವಳಿ ಸಂಭ್ರಮಾಚರಣೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿ ಹಾಗೂ ಶಿಕ್ಷಕ ಸತೀಶ್ ವಡ್ಡರ್ಸೆ ಕುಂದಾಪುರದಲ್ಲಿ ಭೂಮಿಯೊಂದಿಗೆ ಬೆಸೆದುಕೊಂಡ ಈ ದೀಪಾವಳಿ ಕೃಷಿ ಸಂಬoಧಿಯಾಗಿ ಬೆಳೆದು ಬಂದಿದ್ದು. ಹೀಗಾಗಿ ನರಕ ಚತುರ್ದಶಿ, ಬಲಿ ಪೂಜೆ ಮತ್ತು ಗೋಪೂಜೆಗಳು […]
Day: November 4, 2024
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ- ಶತಕಂಠ ಗಾಯನ
ಕುಂದಾಪುರ (ನ, 01): ಇಲ್ಲಿನ ಡಾ| ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ಸಂಘದ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿಶೇಷ ಉಪನ್ಯಾಸ, ಕನ್ನಡ ಗೀತ ಗಾಯನ ಹಾಗೂ ವಿದ್ಯಾರ್ಥಿಗಳಿಂದ ಶತಕಂಠ ಗಾಯನ ನಡೆಯಿತು. ಮುಖ್ಯ ಅತಿಥಿ ಮೂಡುಬಿದರೆ ಆಳ್ವಾಸ್ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ| ಕೃಷ್ಣರಾಜ ಕರಬ ಅವರು ಮಾತನಾಡಿ, ಅನೇಕ ಪ್ರಾದೇಶಿಕ ಭಾಷೆಗಳಿಂದ ಕೂಡಿದ ಕನ್ನಡ ಜಗತ್ತಿನ ಶ್ರೀಮಂತ […]
ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಫರ್ಧೆ :ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪಿ ಯು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಕೊಲ್ಲೂರು ( ನ .04): ಶಾಲಾ ಶಿಕ್ಷಣ ಇಲಾಖೆ( ಪದವಿಪೂರ್ವ) ಉಡುಪಿ ಜಿಲ್ಲಾ ಮಟ್ಟದ ಗುಡ್ಡಗಾಡು ಓಟ ಸ್ಫರ್ಧೆಯಲ್ಲಿ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ನಾಗಮಣಿ ವೈ ಎಂ ಹಾಗೂ ಪ್ರಥಮ ವಾಣಿಜ್ಯ ವಿಭಾಗದ ಅಶ್ವಿನಿ ಪ್ರಶಸ್ತಿಯನ್ನು ಪಡೆದು ತುಮಕೂರಿನಲ್ಲಿ ನೆಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿಜೇತ ಕ್ರೀಡಾಪಟುಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಕೋರಿದ್ದಾರೆ.
ಅಬಾಕಸ್ : ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಆದ್ಯಾ ಕಾಂಚನ್
ಕಿರಿಮಂಜೇಶ್ವರ( ನ .04): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಆಯೋಜಿಸಿದ 19ನೆಯ ಕರ್ನಾಟಕ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತಮೇಟಿಕ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿನಿ ಆದ್ಯಾ ಕಾಂಚನ್(4ನೇ ತರಗತಿ) ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಹೆಮ್ಮಾಡಿ :ಜನತಾ ಪಿ ಯು ಕಾಲೇಜು ಹಾಗೂ ಜನತಾ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ಹೆಮ್ಮಾಡಿ( ನ .04):ಜನತಾ ಪದವಿಪೂರ್ವ ಕಾಲೇಜು ಹಾಗೂ ಜನತಾ ಪ್ರೌಢಶಾಲೆ ಹೆಮ್ಮಾಡಿ ಸಂಯುಕ್ತ ಆಶ್ರಯದಲ್ಲಿ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಮಂಜು ಕಾಳಾವರರವರು ಅಧ್ಯಕ್ಷತೆ ವಹಿಸಿ ಕನ್ನಡದ ಮನಸ್ಸುಗಳೆಲ್ಲವೂ ಒಂದಾಗಿ ಕನ್ನಡದ ಹಿರಿಮೆಯನ್ನು ಜಗದಗಲ ಪಸರಿಸಬೇಕೆಂದರು.ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀ ರಮೇಶ ಪೂಜಾರಿಯವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ಕನ್ನಡ ಉಪನ್ಯಾಸಕ ಶ್ರೀ ಉದಯ ನಾಯ್ಕರವರು ನಾಡು-ನುಡಿ-ಸಂಸ್ಕ್ರತಿಯ ಅನಾವರಣದ ಕುರಿತಾಗಿ ಮಾತನಾಡಿ […]
ರಾಜ್ಯ ಮಟ್ಟದ ಅಬಾಕಸ್ ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆ: ಲಕ್ಷ್ ರಾಜೇಶ್ ಪ್ರಥಮ
ಕುಂದಾಪುರ ( ನ .04): ಕಳೆದ ವರ್ಷ ಹಾಸನದಲ್ಲಿ ಜರುಗಿದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ,ಕೊಯಮತ್ತೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ‘ಚಾಂಪಿಯನ್ ಆಫ್ ಚಾಂಪಿಯನ್’ ಹಾಗೂ ಮಹಾಬಲಿಪುರಂನಲ್ಲಿ ಜರುಗಿದ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ‘‘Gold prize winner in World City Cup-2023’ ’ ಬಹುಮಾನ ಪಡೆದ ಲಕ್ಷ್ ರಾಜೇಶ್ ಆಕ್ಟೋಬರ್ 27 ರಂದು ಚಿತ್ರದುರ್ಗದಲ್ಲಿ ನಡೆದ 19ನೇ ರಾಜ್ಯಮಟ್ಟದ […]