ಕುಂದಾಪುರ(ಫೆ,10): ಮಾದಕ ವ್ಯಸನಿಗಳಿಗೆ ಸಮಾಜದಲ್ಲಿ ಬಹುಕಾಲ ಬದುಕಿಲ್ಲ. ಇಂತಹ ವಸ್ತುಗಳಿಂದ ವ್ಯಕ್ತಿಯ ನೋವು, ಸಂಕಟಗಳನ್ನು ಮರೆಯಲು ಸಾಧ್ಯವಿಲ್ಲ. ಸೃಜನಾತ್ಮಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ವಿದ್ಯಾರ್ಥಿಗಳು ಕಲಿಕೆಯಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಡಾ. ಎ. ವಿ. ಬಾಳಿಗ ಸಮೂಹ ಸಂಸ್ಥೆಗಳ ನಿರ್ದೇಶಕರೂ, ಮನೋವೈದ್ಯರೂ ಆದ ಡಾ. ಪಿ. ವಿ. ಭಂಡಾರಿ ಮಾತನಾಡಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಆಂಗ್ಲ ಪ್ರಾಥಮಿಕ ಮತ್ತು ವಿ. ಕೆ. […]
Day: February 13, 2025
ಜೆ.ಇ.ಇ (ಮೈನ್) ಫಲಿತಾಂಶ : ಕ್ರಿಯೇಟಿವ್ ವಿದ್ಯಾರ್ಥಿಗಳ ಉತ್ತಮ ಸಾಧನೆ
ಉಡುಪಿ(ಫೆ,10): ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) 2025 ಅರ್ಹತಾ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಚೇತನ್ ಗೌಡ ಎನ್.ಎಸ್ 99.4676491, ಸಾನಿಕ ಕೆ.ಎನ್ 99. 2028725, ಎಂ. ಮಂಜುನಾಥ್ 99.0174525, ಮೋಹಿತ್ ಎಂ 99.1632262, ಎಚ್. ಎ ರಾಜೇಶ್ 99.1055485, ಪರ್ಸಂಟೈಲ್ ಗಳಿಸಿರುತ್ತಾರೆ. ಸಂಸ್ಥೆಯು ಆರಂಭದ ವರ್ಷದಿಂದಲೇ […]
ಕುಂದಾಪುರ ಯುವ ಬಂಟರ ಸಂಘದಿಂದ ಕೊಡುಗೆ
ಕುಂದಾಪುರ (ಫೆ, 05):ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಉಡುಪಿಯ ಕೊಳಲಗಿರಿಯ ಸಮೀಪ ಇರುವ ಹೋಂ ಡಾಕ್ಟರ್ ಫೌಂಡೇಶನ್ ನ ಆಡಳಿತಕ್ಕೂಳಪಟ್ಟ ಸ್ವರ್ಗ ಅಸಹಾಯಕರ ಅರಮನೆ ಅನಾಥಾಶ್ರಮಕ್ಕೆ 35000 ರೂಪಾಯಿ ಮೌಲ್ಯದ ಶುದ್ಧ ಕುಡಿಯುವ ನೀರಿನ ವಾಟರ್ ಫಿಲ್ಟರ್ ಹಾಗೂ ಆಶ್ರಮಕ್ಕೆ ಬೇಕಾದ 10000 ರೂಪಾಯಿ ಮೌಲ್ಯದ ದಿನಚರಿ ವಸ್ತುಗಳನ್ನು ಕೊಡುಗೆಯಾಗಿ ನೀಡಿದರು. ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ ವತ್ಸಲಾ ದಯಾನಂದ ಶೆಟ್ಟಿ ಹೋಮ್ ಡಾಕ್ಟರ್ ಫೌಂಡೇಶನ್ ನ ಆಡಳಿತ […]
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಂಪಾರು ಮೂರು ಕೈ : ಸ್ಮಾರ್ಟ್ ಕ್ಲಾಸ್ ಉದ್ಘಾಟನೆ
ಅoಪಾರು(ಫೆ,13): ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಂಪಾರು ಮೂರು ಕೈ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮ ಫೆಬ್ರವರಿ 08 ರಂದು ನಡೆಯಿತು. ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀಮತಿಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಭಾ ಕಾರ್ಯಕ್ರಮವನ್ನು ಪಂಚಾಯಿತಿ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಕಿಣಿ ಇವರು ಉದ್ಘಾಟಿಸಿದರು. ಸ್ಮಾರ್ಟ್ ಕ್ಲಾಸ್ ಶ್ರೀಯುತ ತಿಮ್ಮಪ್ಪ ಶೆಟ್ಟಿ ಉದ್ಘಾಟಿಸಿದರು. ಸಿದ್ವಿನ್ ಔಟೋ ಟೆಕ್ ಕಂಪನಿ ಬೆಂಗಳೂರು ಇಲ್ಲಿಯ ಇಂಜಿನಿಯರ್ ಮನೀಶ್ ನಾಯಕ್ […]
ಜ್ಞಾನಸುಧಾದ ಜೆ ಇ.ಇ ಮೈನ್ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ- ಪ್ರೋತ್ಸಾಹ ಧನ ವಿತರಣೆ
ಕಾರ್ಕಳ(ಫೆ,13): ತಂದೆ-ತಾಯಿ-ಗುರುಗಳಿಗೆ ವಂದಿಸಿ ಪಡೆದ ವಿದ್ಯೆಯು ವಿದ್ಯಾರ್ಥಿಯ ಸಾಧನೆಗೆ ಕಾರಣವಾಗುತ್ತದೆ. ಸಂಕಲ್ಪ ಶುದ್ಧದಿಂದ ಇಟ್ಟಹೆಜ್ಜೆಯು ಯಶಸ್ಸನ್ನೇ ತಂದುಕೊಡುತ್ತದೆ. ಯಶಸ್ವಿ ಬದುಕಿನ ಸಾರ್ಥಕತೆ ಪೋಷಕರದಾಗುತ್ತದೆ ಎಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಹೇಳಿದರು. ಅವರು ರಾಷ್ಟ್ರ ಮಟ್ಟದಲ್ಲಿ ಇಂಜಿನಿಯರಿoಗ್ ಪ್ರವೇಶಕ್ಕೆ ಎನ್.ಟಿ.ಎ ನಡೆಸಿದ ಪ್ರಥಮ ಹಂತದ ಜೆ.ಇ.ಇ ಮೈನ್ ಫಲಿತಾಂಶದಲ್ಲಿ 97ಕ್ಕೂ ಅಧಿಕ ಪರ್ಸಂಟೈಲ್ ಗಳಿಸಿದ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 47 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು. […]










