ಕುಂದಾಪುರ( ಫೆ.24): ಕುಂದಾಪುರ ಎಜುಕೇಷನ್ ಸೊಸೈಟಿಯ ಸುವರ್ಣ ಸಂಭ್ರಮದ ಅಂಗವಾಗಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿಗೆ ಕೊಡ ಮಾಡಿದ ವೆಹಿಕಲ್ ಶೆಲ್ಟರ್ ಅನ್ನು ಕುಂದಾಪುರದ ನಿವೃತ್ತ ಪ್ರಾಂಶುಪಾಲರಾದ ಡಾ. ಜಿ. ಎಚ್. ಪ್ರಭಾಕರ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕುಂದಾಪುರ ಎಜುಕೇಷನ್ ಸೊಸೈಟಿಯ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ […]
Day: February 25, 2025
ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ
ಗಂಗೊಳ್ಳಿ(ಫೆ,25):ಅವಕಾಶ ಫೌಂಡೇಶನ್ ತನ್ನ ದಶಮಾನೋತ್ಸವದ ಅಂಗವಾಗಿ ಇತ್ತೀಚಿಗೆ ಅಮಾವಾಸೆ ಬೈಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಆರರಿಂದ ಎಂಟನೇ ತರಗತಿಯವರೆಗಿನ ವಿದ್ಯಾರ್ಥಿಗಳ ವಿಭಾಗದ ಗ್ರಾಮೀಣ ಜೀವನ ಕುರಿತಾದ ಚಿತ್ರಕಲಾ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗ ಇವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಇವರು ಗಂಗೊಳ್ಳಿಯ ಸ್ಯಾಕ್ಸೋಫೋನ್ ಕಲಾವಿದ ಮಾಧವ ದೇವಾಡಿಗ ಮತ್ತು ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ […]
ಜೆಇಇ ಮೈನ್ (ಬಿ.ಆರ್ಕ್) ಫಲಿತಾಂಶ : ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ,22 ವಿದ್ಯಾರ್ಥಿಗಳಿಗೆ 95ಕ್ಕಿಂತ ಅಧಿಕ ಪರ್ಸಂಟೈಲ್
ಕಾರ್ಕಳ(ಫೆ,24):ರಾಷ್ಟ್ರಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕ್ನ ಮೊದಲ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 22 ವಿದ್ಯಾರ್ಥಿಗಳಿಗೆ 95ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಕೆ.ಮನೋಜ್ ಕಾಮತ್ 99.8233055 ಪರ್ಸಂಟೈಲ್, ದರ್ಶನ್ ಡಿ ಬಾಯಾರ್ 99.6466111 ಪರ್ಸಂಟೈಲ್, ಚಿಂತನ ಜೆ. ಮೆಘವತ್ 99.2615078 ಪರ್ಸಂಟೈಲ್, ಆಕಾಶ್ ಎಚ್ ಪ್ರಭು 98.9987314 ಪರ್ಸಂಟೈಲ್, ಪ್ರಜ್ವಲ್ ನಾಯಕ್ 98.6430772 […]
ಔದ್ಯಮಿಕ ಕ್ಷೇತ್ರದ ಸಾಧಕ ಶ್ರೀ ಎಸ್.ಎಸ್. ಹೆಗ್ಡೆಯವರಿಗೆ ಸನ್ಮಾನ
ಕುಂದಾಪುರ (ಫೆ.24) : ಬೆಂಗಳೂರಿನ ಪ್ರತಿಷ್ಟಿತ ಸೌತ್ ಫೀಲ್ಡ್ ಕೋಟಿಂಗ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ತನ್ನ ಅತ್ಯುತ್ತಮ ಔದ್ಯಮಿಕ ನಿರ್ವಹಣೆಗಾಗಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿಗೆ ಭಾಜನರಾದ ನೆಲೆಯಲ್ಲಿ ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕ ಸರ್ಕಾರದ ಗೌರವಾನ್ವಿತ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿ ತವರೂರು ಕುಂದಾಪುರಕ್ಕೆ ಆಗಮಿಸಿದ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಮಹಾ ನಿರ್ದೇಶಕರು ಬಂಟ ಸಮುದಾಯದ ಮಹಾ ದಾನಿಗಳು ಆದ ಶ್ರೀ ಎಸ್.ಎಸ್. ಹೆಗ್ಡೆಯವರನ್ನು […]
ಹೆಮ್ಮಾಡಿ ಜನತಾ ಪಿ ಯು ಕಾಲೇಜು: ಇಇ ಮೈನ್ಸ್ ಬಿ.ಆರ್ಚ್ ಪ್ರವೇಶ ಪರೀಕ್ಷೆಯಲ್ಲಿ 98.22 ಪರ್ಸಂಟೈಲ್
ಹೆಮ್ಮಾಡಿ( ಫೆ .24): ರಾಷ್ಟ್ರೀಯ ಮಟ್ಟದ ಜೆಇಇ ಮೈನ್ಸ್ ಬಿ.ಆರ್ಚ್ ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀಯಾ 98.22 ಪರ್ಸಂಟೈಲ್ ಪಡೆದು ಸಾಧನೆಗೈದಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುವುದರ ಮೂಲಕ ರಾಜ್ಯ,ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಕಾಲೇಜಿನಲ್ಲಿ ತರಬೇತಿ ಪಡೆದ ಸಾವಿರಾರು ವಿದ್ಯಾರ್ಥಿಗಳು ರಾಜ್ಯ, ದೇಶ-ವಿದೇಶದ ಪ್ರತಿಷ್ಟಿತ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆದು ವ್ಯಾಸಾಂಗ ಮಾಡುವ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ […]










