ಕುಂದಾಪುರ (ಮಾ. 8) : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕುಂದಾಪುರ ಎಜುಕೇಶನ್ ಸೊಸೈಟಿ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿಮಾರ್ಚ್ 08 ರ ಶನಿವಾರದಂದು ಗ್ರ್ಯಾಜುಯೇಷನ್ ಡೇ ನಡೆಯಿತು. ಸಂಸ್ಥೆಯ ಹಳೆ ವಿದ್ಯಾರ್ಥಿ, ಅಡ್ವೊಕೇಟ್ , ಚಿದಾನಂದ ರಾವ್ ಪಿ ಉದ್ಘಾಟಿಸಿದರು. ಪೋಷಕರು ಮಕ್ಕಳ ಮನಸ್ಸು ಮತ್ತು ಭಾವನೆಗಳನ್ನು ಅರಿತು ಅದಕ್ಕೆ ಪೂರಕವಾದ ಪ್ರತಿಕ್ರಿಯೆಗಳನ್ನು ನೀಡಬೇಕು. ಮಕ್ಕಳೆಲ್ಲರೂ ಮುಂದೆ ಬರುವ ರಜೆಯನ್ನು ಆನಂದಿಸಿ ಎಂದು ಹೇಳಿದರು. […]
Month: March 2025
ಬಿ.ಕಾಂ.ಮತ್ತು ಬಿ.ಸಿ.ಎ.ಪದವಿಯಲ್ಲಿ ಬಿ .ಬಿ .ಹೆಗ್ಡೆ ಕಾಲೇಜಿಗೆ ರ್ಯಾಂಕ್ಗಳು
ಕುಂದಾಪುರ, (ಮಾ.08): ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಬಿ.ಕಾಂ. ಮತ್ತು ಬಿ.ಸಿ.ಎ. ಪದವಿಯಲ್ಲಿ ರ್ಯಾಂಕ್ ಗಳಿಸಿದ್ದಾರೆ. ಮೊಳಹಳ್ಳಿಯ ಶ್ರೀ ನಾಗೇಶ್ವರ ಉಡುಪ ಹಾಗೂ ಸವಿತಾ ಎನ್. ಉಡುಪ ದಂಪತಿಗಳ ಪುತ್ರಿ ರಶ್ಮಿ ಉಡುಪ ಬಿ.ಕಾಂ. ಪದವಿಯಲ್ಲಿ 6ನೇ ರ್ಯಾಂಕ್, ಯಡಮೊಗೆಯ ಶ್ರೀ ಪುರುಷೋತ್ತಮ ಕನ್ನಂತ ಹಾಗೂ ನಾಗರತ್ನ ದಂಪತಿಗಳ ಪುತ್ರಿ ಕೀರ್ತನಾ ಬಿ.ಸಿ.ಎ. ಪದವಿಯಲ್ಲಿ 5ನೇ ರ್ಯಾಂಕ್ಗಳಿಸಿದ್ದಾರೆ. […]
ಯು .ಸಿ .ಇ .ಇ .ಡಿ ಸಾಮಾನ್ಯ ಪ್ರವೇಶ ಪರೀಕ್ಷೆ : ಅಖಿಲ ಭಾರತ ಮಟ್ಟದಲ್ಲಿ ಉನ್ನತ ಸ್ಥಾನ ಪಡೆದ ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ಅಮೂಲ್ಯ
ಕುಂದಾಪುರ (ಮಾ .11): ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ನಡೆಸುವ UCEED(ವಿನ್ಯಾಸಕ್ಕಾಗಿ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ) ಪ್ರವೇಶ ಪರೀಕ್ಷೆ ಬರೆದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಅಖಿಲ ಭಾರತ ಮಟ್ಟದಲ್ಲಿ AIR-3827 Rank ಪಡೆಯುವುದರ ಮೂಲಕ ಅತ್ಯುನ್ನತ ಸಾಧನೆ ಮೆರೆದಿದ್ದಾಳೆ. ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧಿಸಿದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುವುದರ ಮೂಲಕ ಕಾಲೇಜು ವಿಶೇಷವಾಗಿ ಗುರುತಿಸಿಕೊಂಡಿದೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, […]
ಶ್ರೀ ಗಣೇಶ ಮೊಗವೀರರಿಗೆ ಮಂತ್ರಾಲಯ ಪರಿಮಳ ಪ್ರಶಸ್ತಿ 2025
ಕುಂದಾಪುರ (ಮಾ.11): ಸ್ಪೇಸ್ ಮೀಡಿಯಾ DCX ಸಿಸ್ಟಮ್ಸ್ ಲಿಮಿಟೆಡ್ ಅರ್ಷಿಸುವ,ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲ ಮಹಾಸಂಸ್ದಾನ ಶ್ರೀ ರಾಘವೇಂದ್ರ ಸ್ವಾಮೀಜಿಗಳ ಮಂತ್ರಾಲಯ,ಪರಮಪೂಜ್ಯ ಶ್ರೀ ಶ್ರೀ ಶ್ರೀ 1008 ಶ್ರೀ ಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಕೊಡ ಮಾಡುವ ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2025ನ್ನು ಪ್ರಶಸ್ತಿಗೆ ಹೆಮ್ಮಾಡಿಯ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ (ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ […]
ಸಿ. ಎ ಫೌಂಡೇಷನ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ (ಮಾ. 5): ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆAಟ್ಸ್ ಆಫ್ ಇಂಡಿಯಾ ನಡೆಸುವ ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ ಸಾಧನೆಗೈದಿದ್ದಾರೆ. ವಿಘ್ನೇಶ್, ಶ್ರದ್ಧಾ, ಸಿಂಚನ, ಮನೀಷ್, ಕೌಶಲ್, ಸುರಕ್ಷಾ ಹಾಗೂ ಶ್ರೇಯಸ್ ಇವರು ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ಪಠ್ಯ […]
ಮಣಿಪಾಲ್ ಹೈಸ್ಕೂಲ್ ಟ್ರಸ್ಟ್ ನೂತನ ಪಿ.ಆರ್.ಒ ಆಗಿ ರಾಮಚಂದ್ರ ನೆಲ್ಲಿಕಾರು ನೇಮಕ
ಮಣಿಪಾಲ(ಮಾ.05) : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಸಹಭಾಗಿತ್ವದಲ್ಲಿರುವ ಮಣಿಪಾಲ್ ಹೈಸ್ಕೂಲ್ ಟ್ರಸ್ಟ್ ನ ಸಾರ್ವಜನಿಕ ಸಂಪರ್ಕಾಧಿಕಾರಿ (ಪಿ.ಆರ್.ಒ)ಯಾಗಿ ಶ್ರೀ ರಾಮಚಂದ್ರ ನೆಲ್ಲಿಕಾರು ನೇಮಕಗೊಂಡಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ 33 ವರ್ಷದ ಅನುಭವ ಹೊಂದಿರುವ ಇವರು ಕಳೆದ 12 ವರ್ಷಗಳಿಂದ ಪ್ರಾಂಶುಪಾಲರಾಗಿ, ಆಂಗ್ಲಭಾಷಾ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವಿ. ಖ್ಯಾತ ವಾಗ್ಮಿಯಾಗಿರುವ ಶ್ರೀಯುತರು 2ಸಾವಿರಕ್ಕೂ ಅಧಿಕ ಅನೇಕ ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಭಾಷಣಕಾರರಾಗಿ, ರಾಜ್ಯಮಟ್ಟದಲ್ಲಿ ನಡೆದ ಎನ್.ಎಸ್.ಎಸ್ ಶಿಬಿರದಲ್ಲಿ ಮೂರು ಬಾರಿ […]
ಸಿ ಎ ಫೌಂಡೇಶನ್ ಪರೀಕ್ಷೆ -2025 : ಉತ್ತಮ ಸಾಧನೆಗೈದ ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ;(ಮಾ,05): ಸಿ ಎ ಫೌಂಡೇಶನ್ ಪರೀಕ್ಷೆ 2025ರಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ವಿಘ್ನೇಶ್ 228 ಅಂಕಗಳು,ಕೌಶಲ್ ಆಚಾರ್ 209 ಅಂಕಗಳು,ರಿತೇಶ್ ಮೊಗವೀರ 208 ಅಂಕಗಳನ್ನು ಪಡೆಯುವುದರ ಮೂಲಕ ಮುಂದಿನ ಹಂತಕ್ಕೆ ತೇರ್ಗಡೆಯಾಗಿರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಪದವಿಪೂರ್ವ ಶಿಕ್ಷಣಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಸಾಧನೆಯೊಂದಿಗೆ ಕಾಲೇಜು ವಿಶೇಷವಾಗಿ ಗುರುತಿಸಿಕೊಂಡಿದೆ.ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ […]
ಗುಹೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಜು ಮೆಂಡನ್ ತ್ರಾಸಿ ಆಯ್ಕೆ
ಗುಜ್ಜಾಡಿ(ಮಾ.5): ಇಲ್ಲಿನ ಗುಹೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ರಾಜು ಮೆಂಡನ್ ತ್ರಾಸಿ ಆಯ್ಕೆಯಾಗಿದ್ದಾರೆ. ಹಲವಾರು ಸಂಘ ಸಂಸ್ಥೆ ಗಳಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರ ದಲ್ಲಿ ಅಪಾರ ಸೇವೆ ಸಲ್ಲಿಸಿರುವ ಇವರು ತ್ರಾಸಿ ಗ್ರಾಮ ಪಂಚಾಯತ್ ನ ಸದಸ್ಯರಾಗಿ ರಾಜಕೀಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದಾರೆ. ಮೊಗವೀರ ಮಹಾಜನ ಸೇವಾ ಸಂಘ (ರಿ,) ಮುಂಬೈ, ಬಗ್ವಾಡಿ ಹೋಬಳಿ ಕುಂದಾಪುರ ಶಾಖಾ ಸದಸ್ಯರಾಗಿ, ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ,ಹೆಮ್ಮಾಡಿ […]
ಗುಹೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಜು ಮೆಂಡನ್ ತ್ರಾಸಿ ಆಯ್ಕೆ
ಗುಜ್ಜಾಡಿ(ಮಾ.5): ಇಲ್ಲಿನ ಗುಹೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ರಾಜು ಮೆಂಡನ್ ತ್ರಾಸಿ ಆಯ್ಕೆಯಾಗಿದ್ದಾರೆ. ಹಲವಾರು ಸಂಘ ಸಂಸ್ಥೆ ಗಳಲ್ಲಿ ,ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರ ದಲ್ಲಿ ಅಪಾರ ಸೇವೆ ಸಲ್ಲಿಸಿರುವ ಇವರು ತ್ರಾಸಿ ಗ್ರಾಮ ಪಂಚಾಯತ್ ನ ಸದಸ್ಯರಾಗಿ ರಾಜಕೀಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದಾರೆ. ಮೊಗವೀರ ಮಹಾಜನ ಸೇವಾ ಸಂಘ (ರಿ,) ಮುಂಬೈ ,ಬಗ್ವಾಡಿ ಹೋಬಳಿ ಕುಂದಾಪುರ ಶಾಖಾ ಸದಸ್ಯರಾಗಿ, ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ […]
ಬಿ.ಬಿ. ಹೆಗ್ಡೆ ಕಾಲೇಜು : ‘ಗಣಕ ವಿಜ್ಞಾನದಲ್ಲಿ ಇತ್ತೀಚಿನ ಪ್ರವೃತ್ತಿಗಳು’ – ಬೋಧಕ ಪುನಶ್ಚೇತನ ಕಾರ್ಯಕ್ರಮ
ಕುಂದಾಪುರ (ಮಾ 01): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕಶಾಸ್ತ್ರ ವಿಭಾಗದ ಆಶ್ರಯದಲ್ಲಿ ಪ್ರಾಧ್ಯಾಪಕರು ಹಾಗೂ ಸಿಬ್ಬಂದಿಗಳಿಗಾಗಿ ಮಾರ್ಚ್ 1, 2025ರಂದು ‘ಗಣಕ ವಿಜ್ಞಾನದಲ್ಲಿ ಇತ್ತೀಚಿನ ಪ್ರವೃತ್ತಿಗಳು’ ಎಂಬ ವಿಷಯದ ಕುರಿತು ಬೋಧಕ ಪುನಶ್ಚೇತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ USAನ ದಿ ಎಲ್ಸ್ ಇನ್ಸ್ಟಿಟ್ಯೂಟ್ ನಲ್ಲಿ ಸಂಶೋಧಕ ಪ್ರಾಂಶುಪಾಲರಾದ ಡಾ. ಸುದರ್ಶನ್ ಮೂರ್ತಿರವರು “ಅಧ್ಯಾಪಕರು ಪ್ರಸ್ತುತ ಕಾಲಮಾನಕ್ಕೆ ತಮ್ಮನ್ನು ತಾವು ಉನ್ನತೀಕರಣಗೊಳಿಸಿಕೊಂಡು ಬದಲಾವಣೆಗೆ ಒಗ್ಗಿಕೊಂಡಲ್ಲಿ […]










