ಕಾರ್ಕಳ(ಜು,30): ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇದಿಕೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 28 ಜುಲೈ 2025 ರಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು. ಕಾರ್ಯಗಾರದ ಉದ್ಘಾಟನೆಯನ್ನು ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ನ […]
Month: July 2025
ಗಂಗೊಳ್ಳಿ : ಧ್ವನಿಬೆಳಕು ಸಂಯೋಜಕರ ಸಂಘಟನೆ ನಾರಾಯಣ ಖಾರ್ವಿ ಆಯ್ಕೆ
ಗಂಗೊಳ್ಳಿ(ಜು ,27): ಧ್ವನಿಬೆಳಕು ಸಂಯೋಜಕರ ಸಂಘಟನೆ ಉಡುಪಿ ಜಿಲ್ಲೆ ಇದರ ಕುಂದಾಪುರ ವಲಯದ 2025-26ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಖಾರ್ವಿ ಗಂಗೊಳ್ಳಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ಬಿ.ಬಿ. ಹೆಗ್ಡೆ ಕಾಲೇಜು: ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ
ಕುಂದಾಪುರ (ಜು.25): 2025-26ನೇ ಸಾಲಿನಲ್ಲಿ ಕಾಲೇಜಿಗೆ ಸೇರ್ಪಡೆಗೊಂಡ ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಜುಲೈ 25 ರಂದು ಹಮ್ಮಿಕೊಳ್ಳಲಾಯಿತು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಬಿ.ಬಿ.ಎ ಕೋರ್ಸ್ಗಳ ವಿಶೇಷತೆಗಳು ಹಾಗೂ ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಇದರಿಂದ ಲಭ್ಯವಾಗುವ ಪ್ರಯೋಜನಗಳ ಕುರಿತು ತಿಳಿಸಿದರು. ವಿಭಾಗದ ಪ್ರಾಧ್ಯಾಪಕರುಗಳಾದ ಶ್ರೀಮತಿ ಅವಿತಾ ಕೊರೆಯಾ, ಶ್ರೀ ಹರೀಶ್ ಬಿ, ಶ್ರೀ ರಜತ್ ಬಂಗೇರ ಹಾಗೂ ವಿಶಾಲಾಕ್ಷಿ ಉಪಸ್ಥಿತರಿದ್ದರು.ಸಹಾಯಕ ಪ್ರಾಧ್ಯಾಪಕರಾದ ಶ್ರೀ […]
ಭಾರತವೆನ್ನುವುದು ಪುಣ್ಯಕ್ಷೇತ್ರ : ಅಕ್ಷಯ ಗೋಖಲೆ ಕಾರ್ಗಿಲ್ ವಿಜಯ ದಿವಸ ‘ಮೌಲ್ಯಸುಧಾ’ದಲ್ಲಿ ಅಭಿಮತ
ಗಣಿತನಗರ( ಜು,28): ನಾವು ಬದುಕಿನಲ್ಲಿ ಸಾಧನೆ ಮಾಡಿದರೂ ಸಹ ಬದುಕು ದೇಶಕ್ಕೆ ಸಮಪಿತವಾಗಿರಲಿ ಎಂದು ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ 38ರಲ್ಲಿ ಕಾರ್ಗಿಲ್ ವಿಜಯ ದಿವಸದ ಶುಭಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ ‘ಬಹುರತ್ನ […]
ಗಣೇಶ ಮೊಗವೀರರವರಿಗೆ ರಾಷ್ಟ್ರೀಯ ಮಟ್ಟದ ಡಾ.| ಶ್ಯಾಮ್ ಪ್ರಸಾದ್ ಮುಖರ್ಜಿ ಮೆಮೋರಿಯಲ್ ಪ್ರಶಸ್ತಿ ಪ್ರದಾನ
ಹೆಮ್ಮಾಡಿ(ಜು,28): ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರ ಇದುವರೆಗಿನ ಶೈಕ್ಷಣಿಕ ಸಾಧನೆ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ 2025 ನೇ ಸಾಲಿನ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಡಾ| ಶ್ಯಾಮ್ ಪ್ರಸಾದ್ ಮುಖರ್ಜಿ ಮೆಮೋರಿಯಲ್ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಗಣೇಶ ಮೊಗವೀರರವರನ್ನು ಆಯ್ಕೆ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಿ ಜುಲೈ 25 ರಂದು ಮುಂಬೈನ ಪ್ರಸಿದ್ಧ […]
ಬಿ. ಬಿ. ಹೆಗ್ಡೆ ಕಾಲೇಜು: 5 ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ ಸಂಪನ್ನ
ಕುಂದಾಪುರ (ಜು.25): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡ 5 ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ ಸಂಪನ್ನಗೊoಡಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮ್ಯಾಜಿಕ್ ಬಸ್ ಫೌಂಡೇಶನ್ನ ಹಿರಿಯ ತರಬೇತುದಾರರಾದ ಶ್ರೀ ಜೋಶ್ವಾ ಡೇನಿಯಲ್ ಅತಿಥಿ ನೆಲೆಯ ಮಾತುಗಳನ್ನಾಡಿದರು. ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿಯಾದ […]
ಜ್ಞಾನಸುಧಾ : ಮೌಲ್ಯಸುಧಾ-38ರಲ್ಲಿ ‘ಕಾರ್ಗಿಲ್ ವಿಜಯ ದಿವಸ’
ಗಣಿತ ನಗರ(ಜು ,25) : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು ಕಾರ್ಗಿಲ್ ವಿಜಯದಿವಸದ ಶುಭಸಂದರ್ಭದಲ್ಲಿ ಆಯೋಜಿಸಲಾಗಿದ್ದು, ಜುಲೈ 26ರ ಶನಿವಾರದಂದು ಅಪರಾಹ್ನ 3.30ಕ್ಕೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ “ಬಹುರತ್ನ ಪ್ರಸವೀ ಭಾರತೀ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು […]
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅನುಭವ ಕೇಂದ್ರಿತ ಶಿಕ್ಷಣಕ್ಕೆ ಪ್ರೇರಣೆ – ಜಾನ್ ಡಿ’ಸೋಜಾ
ಕುಂದಾಪುರ(ಜು. 23): ವಿದ್ಯಾರ್ಥಿಗಳ ಬದುಕು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗಬಾರದು, ಅದು ಅನುಭವ ಕೇಂದ್ರಿತವಾಗಿರಬೇಕು. ಆ ನಿಟ್ಟಿನಲ್ಲಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಗೆ ಕಲಿಕೆ ಜೊತೆಗೆ ವಿವಿಧ ಅನುಭವಕೇಂದ್ರಿತ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಪ್ರಶಂಸನೀಯ ಎಂದು ಕುಂದಾಪುರದ ಹಿರಿಯ ಪತ್ರಕರ್ತರಾದ ಜಾನ್ ಡಿ’ಸೋಜ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ […]
ಬಿ.ಬಿ. ಹೆಗ್ಡೆ ಕಾಲೇಜು: ಉತ್ತಮ ಆರೋಗ್ಯವೇ ನಿಜವಾದ ಸಂಪತ್ತು–ಡಾ| ಸೋನಿ ಡಿ’ಕೋಸ್ಟ
ಕುಂದಾಪುರ (ಜು.24): ದಿನನಿತ್ಯದ ಪ್ರಾರ್ಥನೆ, ವ್ಯಾಯಾಮ, ಗುಣಮಟ್ಟದ ಆಹಾರ ಪದ್ಧತಿ ಹಾಗೂ ಒತ್ತಡ ನಿರ್ವಹಣೆ ಇಂತಹ ಆರೋಗ್ಯಕರ ಅಭ್ಯಾಸಗಳಿಂದ ಮಾತ್ರ ಉತ್ತಮ ಆರೋಗ್ಯವನ್ನು ಪಡೆಯಲು ಸಾಧ್ಯ ಎಂದು ಕುಂದಾಪುರದ ಇಶಾನಿ ಮೆಡಿಕಲ್ ಸೆಂಟರ್ನ ವೈದ್ಯಾಧಿಕಾರಿ ಡಾ| ಸೋನಿ ಡಿಕೋಸ್ಟ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ಉತ್ತಮ ಆರೋಗ್ಯ’ […]
ಹೊಸಂಗಡಿ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ರಚನೆ
ಹೊಸಂಗಡಿ (ಜು,24): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ 2025 – 26 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ನಾಯಕ ಹಾಗೂ ನಾಯಕಿಯ ಆಯ್ಕೆ, ಪದಾಧಿಕಾರಿಗಳ ಆಯ್ಕೆ ವಿದ್ಯಾರ್ಥಿ ಸಂಸತ್ತು ರಚನೆ ಮತ್ತು ಮಂತ್ರಿಮಂಡಲದ ರಚನೆ ( Cabinet Formation) ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು. ಭಾರತೀಯ ಚುನಾವಣಾ ಮಾದರಿಯ ಕುರಿತು ವಿದ್ಯಾರ್ಥಿಗಳಿಗೆ ಪ್ರಾತಕ್ಷಿಕೆ ನೀಡುವುದರ ಜೊತೆಗೆ, ಚುನಾವಣೆಯ ಬಗ್ಗೆ ನೇರ ಅನುಭವ ನೀಡಬೇಕು ಎಂಬ ಆಕಾಂಕ್ಷೆಯೊಂದಿಗೆ ಎಲ್ಲವೂ ಕೂಡಾ […]










