ಗಣಿತ ನಗರ(ಜು ,25) : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು ಕಾರ್ಗಿಲ್ ವಿಜಯದಿವಸದ ಶುಭಸಂದರ್ಭದಲ್ಲಿ ಆಯೋಜಿಸಲಾಗಿದ್ದು, ಜುಲೈ 26ರ ಶನಿವಾರದಂದು ಅಪರಾಹ್ನ 3.30ಕ್ಕೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ “ಬಹುರತ್ನ ಪ್ರಸವೀ ಭಾರತೀ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು […]
Day: July 25, 2025
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅನುಭವ ಕೇಂದ್ರಿತ ಶಿಕ್ಷಣಕ್ಕೆ ಪ್ರೇರಣೆ – ಜಾನ್ ಡಿ’ಸೋಜಾ
ಕುಂದಾಪುರ(ಜು. 23): ವಿದ್ಯಾರ್ಥಿಗಳ ಬದುಕು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗಬಾರದು, ಅದು ಅನುಭವ ಕೇಂದ್ರಿತವಾಗಿರಬೇಕು. ಆ ನಿಟ್ಟಿನಲ್ಲಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಗೆ ಕಲಿಕೆ ಜೊತೆಗೆ ವಿವಿಧ ಅನುಭವಕೇಂದ್ರಿತ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಪ್ರಶಂಸನೀಯ ಎಂದು ಕುಂದಾಪುರದ ಹಿರಿಯ ಪತ್ರಕರ್ತರಾದ ಜಾನ್ ಡಿ’ಸೋಜ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ […]
ಬಿ.ಬಿ. ಹೆಗ್ಡೆ ಕಾಲೇಜು: ಉತ್ತಮ ಆರೋಗ್ಯವೇ ನಿಜವಾದ ಸಂಪತ್ತು–ಡಾ| ಸೋನಿ ಡಿ’ಕೋಸ್ಟ
ಕುಂದಾಪುರ (ಜು.24): ದಿನನಿತ್ಯದ ಪ್ರಾರ್ಥನೆ, ವ್ಯಾಯಾಮ, ಗುಣಮಟ್ಟದ ಆಹಾರ ಪದ್ಧತಿ ಹಾಗೂ ಒತ್ತಡ ನಿರ್ವಹಣೆ ಇಂತಹ ಆರೋಗ್ಯಕರ ಅಭ್ಯಾಸಗಳಿಂದ ಮಾತ್ರ ಉತ್ತಮ ಆರೋಗ್ಯವನ್ನು ಪಡೆಯಲು ಸಾಧ್ಯ ಎಂದು ಕುಂದಾಪುರದ ಇಶಾನಿ ಮೆಡಿಕಲ್ ಸೆಂಟರ್ನ ವೈದ್ಯಾಧಿಕಾರಿ ಡಾ| ಸೋನಿ ಡಿಕೋಸ್ಟ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ಉತ್ತಮ ಆರೋಗ್ಯ’ […]
ಹೊಸಂಗಡಿ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ರಚನೆ
ಹೊಸಂಗಡಿ (ಜು,24): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ 2025 – 26 ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ನಾಯಕ ಹಾಗೂ ನಾಯಕಿಯ ಆಯ್ಕೆ, ಪದಾಧಿಕಾರಿಗಳ ಆಯ್ಕೆ ವಿದ್ಯಾರ್ಥಿ ಸಂಸತ್ತು ರಚನೆ ಮತ್ತು ಮಂತ್ರಿಮಂಡಲದ ರಚನೆ ( Cabinet Formation) ಆಯ್ಕೆ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು. ಭಾರತೀಯ ಚುನಾವಣಾ ಮಾದರಿಯ ಕುರಿತು ವಿದ್ಯಾರ್ಥಿಗಳಿಗೆ ಪ್ರಾತಕ್ಷಿಕೆ ನೀಡುವುದರ ಜೊತೆಗೆ, ಚುನಾವಣೆಯ ಬಗ್ಗೆ ನೇರ ಅನುಭವ ನೀಡಬೇಕು ಎಂಬ ಆಕಾಂಕ್ಷೆಯೊಂದಿಗೆ ಎಲ್ಲವೂ ಕೂಡಾ […]










