ಹೊಸಂಗಡಿ( ಜು ,8): ಸರಕಾರಿ ಪದವಿ ಪೂರ್ವ ಕಾಲೇಜು, ಹೊಸಂಗಡಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ” ದ ಅಂಗವಾಗಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮವನ್ನು ಜೂನ್ 25 ರಂದು ಹಮ್ಮಿಕೊಳ್ಳಲಾಯಿತು. ಅಮಾಸೆಬೈಲು ಪೊಲೀಸ್ ಠಾಣೆಯ ಎಸ್. ಐ ಶ್ರೀ ಅಶೋಕ್ ಕುಮಾರ್ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ‘ ನಶಾ ಮುಕ್ತ ಭಾರತ ‘ ಈ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳನ್ನು ತಿಳಿಸಿದರು. ಬೀಡಿ, ಸಿಗರೇಟ್, ತಂಬಾಕು, ಇತರ ಮಾದಕ ದ್ರವ್ಯಗಳ […]
Month: July 2025
ಉಡುಪಿಯ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಕಾರ್ಯಗಾರ
ಉಡುಪಿ(ಜು ,4):ಉಡುಪಿ ಜಿಲ್ಲಾ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘದ ವತಿಯಿಂದ ಉಡುಪಿಯ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ಕಳೆದ ಬುಧವಾರ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗಾಗಿ ವಿಷಯಾಧಾರಿತ ಕಾರ್ಯಗಾರವು ನಡೆಯಿತು. ಉಡುಪಿ ಜಿಲ್ಲಾ ಪದವಿಪೂರ್ವ ವಿಭಾಗದ ಡೆಪ್ಯುಟಿ ಡೈರೆಕ್ಟರ್ ಮಾರುತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಶೇಷ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ರೊಟೇರಿಯನ್ ಸತೀಶ್ ಶೆಟ್ಟಿ ಹದಿಹರೆಯದ ಸವಾಲುಗಳು ಮತ್ತು ಎದುರಿಸಬೇಕಾದ ವಿಧಾನಗಳ ಬಗ್ಗೆ ವಿಚಾರಗಳನ್ನು ಹಂಚಿಕೊಂಡರು. ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಕುಮಾರ್ ಅಧ್ಯಕ್ಷತೆ […]
ಕೆಂಪೇಗೌಡ ದಿನಾಚರಣೆ ಸ್ಪರ್ಧೆ ನಾವುಂದ ಕಾಲೇಜಿನ ಮೂರು ವಿದ್ಯಾರ್ಥಿಗಳಿಗೆ ಬಹುಮಾನ
ನಾವುoದ(ಜು ,4): ಕೆಂಪೇಗೌಡ ದಿನಾಚರಣೆಯ ಅಂಗವಾಗಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಆಯೋಜಿಸಿದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ನಾವುಂದದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಿಂಚನ ಕೆ.ಪ್ರಥಮ ಸ್ಥಾನವನ್ನು, ವಿದ್ಯಾರ್ಥಿನಿ ತ್ರಿಶಾ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಮನ್ವಿತ ತೃತೀಯ ಸ್ಥಾನ ಗಳಿಸಿರುತ್ತಾರೆ. ಪ್ರಾಂಶುಪಾಲರು ಭೋದಕ ಮತ್ತು ಬೋಧಕೇತರ ವೃಂದದವರು ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ
ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಉದ್ಘಾಟನೆ
ಕಾರ್ಕಳ(ಜು ,4): ಮಕ್ಕಳಲ್ಲಿ ನಾಯಕತ್ವ ಹಾಗೂ ಜವಾಬ್ದಾರಿ ನಿರ್ವಹಣಾ ಸಾಮರ್ಥ್ಯ ಮತ್ತು ಜವಬ್ದಾರಿಯುತ ಭಾವೀ ನಾಗರಿಕರನ್ನು ಬೆಳೆಸುವಲ್ಲಿ ಶಾಲಾ ಸಂಸತ್ತು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅಡ್ವಕೇಟ್ ಶ್ವೇತಾ ವಿಪುಲ್ ತೇಜ್ ಹೇಳಿದರು. ಇವರು ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತಿನ ಅಧಿಕಾರ ಸ್ವೀಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಮಕ್ಕಳೇ ಮುಂದಿನ ನಾಯಕರು ಎಂದು ಹೇಳುವಾಗ ಮಕ್ಕಳಲ್ಲಿ ನಾಯಕತ್ವ ಸಾಮರ್ಥ್ಯ ಅಭಿವೃದ್ಧಿಪಡಿಸುವ ಅಗತ್ಯತೆ ಇದೆ, ಶಾಲಾ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಸಿ ಎ ದಿನಾಚರಣೆ
ಕುಂದಾಪುರ (ಜು.01): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಸಿಎ ದಿನಾಚರಣೆಯ ಸಂದರ್ಭ ಒತ್ತಡ ನಿರ್ವಹಣೆಯ ಕುರಿತಾಗಿ ವಿಭಿನ್ನ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಉಡುಪಿಯ ಆರ್ಟ್ ಆಫ್ ಲಿವಿಂಗ್ನ ಯೋಗ ಮತ್ತು ಪ್ರಾಣಾಯಾಮ ತರಬೇತುದಾರರಾದ ಶೈಲಜಾ ಕೃಷ್ಣಾನಂದ, ಒತ್ತಡ ನಿರ್ವಹಣೆ ಹಾಗೂ ಏಕಾಗೃತೆಯ ಸಾಧನೆಯನ್ನು ಆಸನ ಹಾಗೂ ಪ್ರಾಣಾಯಾಮದ ಮೂಲಕ ಹೇಗೆ ಸಿದ್ಧಿಸಿಕೊಳ್ಳುವುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಉಡುಪಿಯ ವೀ-ರೀಚ್ ಅಕಾಡೆಮಿಯ ಸ್ಥಾಪಕರಾದ ಸಿಎಸ್ ಸಂತೋಷ್ ಪ್ರಭುರವರು […]
ತಾನು ಕಲಿತ ಪ್ರೈಮೇರಿ ಶಾಲೆಗೆ ಬಸ್ ಕೊಡುಗೆ ನೀಡಿದ ಶಾಲಾ ಹಳೆ ವಿದ್ಯಾರ್ಥಿ ಶ್ರೀ ಗಣೇಶ ಮೊಗವೀರ
ಹೆಮ್ಮಾಡಿ(ಜು ,4): ತನ್ನ ಭವಿಷ್ಯದ ಭದ್ರ ಬುನಾದಿ ಹಾಕಿಕೊಟ್ಟ ಪ್ರಾಥಮಿಕ ಶಿಕ್ಷಣವನ್ನು ಪಡೆದ ಹೆಮ್ಮಾಡಿ ಊರಿನ ಹೆಮ್ಮೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಗತ್ಯ ಸೌಲಭ್ಯಗಳಲ್ಲಿ ಒಂದಾಗಿರುವ ವಾಹನ ಸೌಲಭ್ಯವನ್ನು, ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಶಾಲೆಗೆ ಬಸ್ ವ್ಯವಸ್ಥೆಯನ್ನು ಮಾಡುವುದರ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷರು,ಪದಾಧಿಕಾರಿಗಳು, ಸರ್ವಸದಸ್ಯರು,ಶಾಲಾ ಮುಖ್ಯ […]
ಹೆಮ್ಮಾಡಿಯ ಜನತಾ ಅನುದಾನಿತ ಪ್ರೌಢಶಾಲೆಗೆ ಬಸ್ ಕೊಡುಗೆ ನೀಡಿದ ಗಣೇಶ ಮೊಗವೀರ
ಹೆಮ್ಮಾಡಿ (ಜು ,5): ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಶ್ರೀ ವಿ.ವಿ.ವಿ.ಮಂಡಳಿ(ರಿ) ಆಡಳಿತ ಮಂಡಳಿಗೆ ಒಳಪಟ್ಟಿರುವ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಹೆಮ್ಮೆಯ ಶಿಕ್ಷಣ ಸಂಸ್ಥೆ.ಗ್ರಾಮೀಣ ಭಾಗಗಳಿಂದ ನೂರಾರು ವಿದ್ಯಾರ್ಥಿಗಳು ಈ ಶಿಕ್ಷಣ ಸಂಸ್ಥೆಯಲ್ಲಿ ದಾಖಲಾತಿ ಪಡೆದುಕೊಂಡು ಶಿಕ್ಷಣ ಪಡೆಯುತ್ತಿರುವ ಈ ಸಂದರ್ಭದಲ್ಲಿ ಶಾಲಾ ಅಗತ್ಯ ಸೌಲಭ್ಯಗಳಲ್ಲಿ ಒಂದಾಗಿರುವ ಶಾಲಾ ವಾಹನ ಸೌಲಭ್ಯವನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು […]
ಮಾನವನ ವ್ಯಕ್ತಿತ್ವ ಹಲವಾರು ವಿಚಾರಗಳ ಮಿಶ್ರಣ : ವೀರೇಶಾನಂದ ಸರಸ್ವತಿ ಸ್ವಾಮೀಜಿತಿಂಗಳ ಮೌಲಿಕ ಕಾರ್ಯಕ್ರಮ ‘ಮೌಲ್ಯಸುಧಾ’ದಲ್ಲಿ ಅಭಿಮತ
ಗಣಿತ ನಗರ(ಜು,01): ಜೀವನದಲ್ಲಿ ಯಶಸ್ಸಿಗಿಂತ ಮೌಲ್ಯಗಳಿಗೆ ಬೆಲೆಕೊಡಬೇಕು ಹಾಗೂ ಗೌರವಿಸ ಬೇಕು, ನಾವು ಬುದ್ದಿವಂತರಾದರೆ ಸಾಲದು, ಪ್ರಜ್ಞಾವಂತರಾಗಬೇಕು ಎಂದು ವೀರೇಶಾನಂದ ಸರಸ್ವತಿ ಸ್ವಾಮೀಜಿಯವರು ನುಡಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ “ಮೌಲ್ಯಸುಧಾ”-37ರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ತುಮಕೂರಿನ ರಾಮಕೃಷ್ಣ ನಗರದ ರಾಮಕೃಷ್ಣ – ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಪೂಜ್ಯ […]










