ಕುಂದಾಪುರ( ಆ,24): ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ (ನೊಂ.)ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ಇವರ ಸಹಯೋಗದೊಂದಿಗೆ ರಾಜ್ಯ ಮಟ್ಟದ ಯೋಗಾಸನಾ ಸ್ಪರ್ಧೆ ಶ್ರೀ ಅನುಭವ ಮಂಟಪ ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗ್ರಾಮ ಪಂಚಾಯತ್ ತ್ರಾಸಿ ಸಿಬ್ಬಂದಿ ಸಂದೀಪ್ ಪೂಜಾರಿಯವರು ವಿವಿಧ ಹಂತದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆ […]
Month: August 2025
ಡಾl ಬಿ.ಬಿ ಹೆಗ್ಡೆ ಕಾಲೇಜು : ಎನ್ಎಸ್ಎಸ್ ಪ್ರಾಕ್ತನ ವಿದ್ಯಾರ್ಥಿಗಳಿಂದ ನೆಲ್ಮೆಯ ನಮನ
ಕುಂದಾಪುರ(ಆ. 23): ವಿದ್ಯಾರ್ಥಿ ಬದುಕಿನಲ್ಲಿ ಪಠ್ಯದ ಜೊತೆಗೆ ಪಠ್ಯಪೂರಕ ಚಟುವಟಿಕೆಗಳು ಅತಿ ಪ್ರಮುಖವಾದ್ದು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಏನ್ ಎಸ್ ಎಸ್ ನಂತಹ ವೇದಿಕೆಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ. ವಿದ್ಯಾರ್ಥಿ ಸಮುದಾಯದಲ್ಲಿ ವ್ಯಕ್ತಿತ್ವದ ವಿಕಸನದ ಜೊತೆಗೆ ಮಾನವೀಯ ಮತ್ತು ಸಂವಿಧಾನಿಕ ಮೌಲ್ಯವನ್ನು ಬೆಳೆಸಲು ರಾಷ್ಟ್ರೀಯ ಸೇವಾ ಯೋಜನೆಯಂತಹ ಪಠ್ಯ ಪೂರಕ ವೇದಿಕೆಗಳು ಅತ್ಯವಶ್ಯಕ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಏನ್ ಏಸ್ ಏಸ್ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಡಾ. ಗಣನಾಥ ಎಕ್ಕಾರು […]
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ:ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ
ಕುಂದಾಪುರ: (ಆ 21 ): ಕುಂದಾಪುರ ಎಜುಕೇಶನ್ ಸೊಸೈಟಿ( ರಿ ) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳ ಪ್ರಾಥಮಿಕ ವಿಭಾಗದ 7ನೇ ತರಗತಿಯ ವಿದ್ಯಾರ್ಥಿನಿ ಸಂಹಿತಾ ತಂತ್ರಿ ಲಯನ್ಸ್ ಕ್ಲಬ್ ಹಂಗಳೂರು ಇವರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಯೋಜಿಸಲ್ಪಟ್ಟ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ. ವಿಜೇತ ವಿದ್ಯಾರ್ಥಿನಿಯನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ […]
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ‘ವಸ್ತ್ರಭಾರತೀ’ಫ್ಯಾಶನ್ ಪೆರೇಡ್
ಕುಂದಾಪುರ (ಆ,13) : ಇಲ್ಲಿನ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ, ‘ವಸ್ತ್ರ ಭಾರತೀ’ ಅಂತರ್ ತರಗತಿ ದೇಶಭಕ್ತಿ ಫ್ಯಾಶನ್ ಪೆರೇಡ್ ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸ್ಪರ್ಧೆಯ ಪ್ರಥಮ ಸುತ್ತಿನಲ್ಲಿ 17 ತಂಡಗಳು ಭಾಗವಹಿಸಿ, ದ್ವಿತೀಯ ಸುತ್ತಿಗೆ 10 ತಂಡಗಳು ಆಯ್ಕೆಯಾದವು. ಆರು ವಿದ್ಯಾರ್ಥಿಗಳನ್ನೊಳಗೊಂಡ ತರಗತಿವಾರು ತಂಡದವರು ದಂಡಿ ಸತ್ಯಾಗ್ರಹ, ಬೇರೆ ಬೇರೆ ರಾಜ್ಯಗಳ ಸಂಸ್ಕೃತಿ, ಜನಪದ, ಭಾವೈಕ್ಯತೆ […]
ಜನತಾ ಪಿಯು ಕಾಲೇಜು ಹೆಮ್ಮಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ-ಜನತಾ ವಿರಾಟ್
ಹೆಮ್ಮಾಡಿ( ಆ ,17): ಹಳ್ಳಿಯ ಎಲ್ಲ ಮಕ್ಕಳಿಗೂ ಶಿಕ್ಷಣ ಸಿಗಬೇಕು.ಆಗ ಮಾತ್ರ ಗಾಂಧಿ ಕಂಡ ಕನಸ್ಸು ಸಾರ್ಥಕತೆ ಪಡೆಯುತ್ತದೆ.ಹಳ್ಳಿಯ ಪ್ರತಿ ಮಗು ಸಮಾಜದ ಮುಖ್ಯ ವಾಹಿನಿಗೆ ಬರಲು ನಾವೆಲ್ಲಾ ಶ್ರಮಿಸಬೇಕು. ವಿದ್ಯಾರ್ಥಿಗಳು ಕೂಡ ವೀರ ಯೋಧರ ತ್ಯಾಗ ಸ್ಮರಿಸಿ ಅವರ ಆದರ್ಶ ಗಳನ್ನುತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜನತಾ ಪಿಯು ಕಾಲೇಜು ಹೆಮ್ಮಾಡಿಯ ಪ್ರಾಂಶುಪಾಲರಾದ ಗಣೇಶ ಮೊಗವೀರ ಹೇಳಿದರು. ಜನತಾ ಪಿಯು ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂಸ್ಯ ಇಂಗ್ಲೀಷ್ […]
ಕುಂದಾಪುರ ಸಮುದಾಯ ಮುಂಚಲನೆಯ ಸಾಂವಿಧಾನಿಕ ಪ್ರಜ್ಞೆ – ವಿಶೇಷ ಉಪನ್ಯಾಸ ಕಾರ್ಯಕ್ರಮ
ಕುಂದಾಪುರ(ಆ,21):ಸಮುದಾಯ ಮುಂಚಲನೆಯ ಸಾಂವಿಧಾನಿಕ ಪ್ರಜ್ಞೆ – ವಿಶೇಷ ಉಪನ್ಯಾಸ ಕಾರ್ಯಕ್ರಮಡಾ. ದೇವರಾಜು ಅರಸು ರವರ ಜನ್ಮದಿನಾಚರಣೆ ಪ್ರಯುಕ್ತ ಚಕೋರ ಸಾಹಿತ್ಯ ವಿಚಾರ ವೇದಿಕೆ ಉಡುಪಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಸಹಯೋಗದೊಂದಿಗೆ ಸಮುದಾಯ ಮುಂಚಲನೆಯ ಸಾಂವಿಧಾನಿಕ ಪ್ರಜ್ಞೆ – ವಿಶೇಷ ಉಪನ್ಯಾಸ ಕಾರ್ಯಕ್ರಮವು ಆಗಸ್ಟ್ 20 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು […]
ಸ್ವಾತಂತ್ರ್ಯದ ಸದ್ವಿನಿಯೋಗವೇ ನೈಜ ದೇಶಭಕ್ತಿ – ಅಮವಾಸೆಬೈಲ್ ಆರಕ್ಷಕ ಠಾಣೆಯ ಎಸ್. ಐ – ಚಂದ್ರ
ಹೊಸಂಗಡಿ(ಆ,21): 79ನೇ ಸ್ವಾತಂತ್ರ್ಯೋತ್ಸವವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗ ಹೊಸಂಗಡಿ ಇಲ್ಲಿ ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಜಾಥ, ಜಾಗೃತಿ ಕಾರ್ಯಕ್ರಮ, ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಪ್ರಜೆ, ಅಧ್ಯಕ್ಷರಾದ ಶ್ರೀಮತಿ ಶಾಂತಿ ನಾಯಕ್ ಇವರು ಧ್ವಜಾರೋಹಣಗೈದು ಮಕ್ಕಳಿಗೆ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಶ್ರೀಮತಿ ಶಾರದ ನಾಯಕ್ ಸದಸ್ಯರಾದ ಶ್ರೀಯುತ ಅವಿನಾಶ್ ರವರು ಉಪಸ್ಥಿತರಿದ್ದರು. […]
ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಎಸ್ .ವಿ ಗಂಗೊಳ್ಳಿ ಪ್ರಥಮ ಸ್ಥಾನ
ಗಂಗೊಳ್ಳಿ (ಆ ,21): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಅಂಗವಾಗಿ ನಡೆದ ಮಹಿಳೆಯರ ತ್ರೋಬಾಲ್ ನಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಕ್ತನ ಮತ್ತು ಪ್ರಸ್ತುತ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನವನ್ನು ಗಳಿಸಿದೆ. ವಿಜೇತರಿಗೆ ಸಂಸ್ಥೆ ಅಭಿನಂದನೆ ಕೋರಿದೆ.
ಆರೋಗ್ಯಕರ ಸಮಾಜಕ್ಕಾಗಿ ವ್ಯಸನದಿಂದ ದೂರವಿರಿ – ನಂಜ ನಾಯ್ಕ್
ಕುಂದಾಪುರ (ಆ18): ನಶಾ ಮುಕ್ತ ಭಾರತ ಅಭಿಯಾನವು ದೇಶದ ಆರೋಗ್ಯಕರ ಮತ್ತು ಪ್ರಗತಿಪರ ಸಮಾಜ ನಿರ್ಮಾಣದ ಮಹತ್ವದ ಪ್ರಯತ್ನವಾಗಿದೆ. ಇಂದಿನ ಕಾಲದಲ್ಲಿ ಯುವಜನರು ಮಾದಕ ವಸ್ತುಗಳ ಬಲೆಗೆ ಬೀಳುತ್ತಿರುವುದು ವಿಷಾದನೀಯ. ವ್ಯಸನವು ವ್ಯಕ್ತಿಯ ಆರೋಗ್ಯವನ್ನು ಮಾತ್ರವಲ್ಲ, ಕುಟುಂಬದ ಶಾಂತಿ ಮತ್ತು ಸಮಾಜದ ಪ್ರಗತಿಯನ್ನು ಸಹ ಹಾಳುಮಾಡುತ್ತದೆ ಎಂದು ಕುಂದಾಪುರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ನಂಜ ನಾಯ್ಕ್ ಅವರು ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ ಹೆಗ್ಡೆ ಪ್ರಥಮ […]
ಜ್ಞಾನಸುಧಾ : ಸಂಸ್ಥಾಪಕರ ಜನ್ಮ ದಿನಾಚರಣೆ-ರಕ್ತದಾನ ಶಿಬಿರ ಹಾಗೂ ಸಾಮಾಜಿಕ ನೆರವಿನ ಕಾರ್ಯಕ್ರಮ
ಕಾರ್ಕಳ (ಆ.19) : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 104ನೇ ಜನ್ಮದಿನದ ಅಂಗವಾಗಿ ಆಗಸ್ಟ್ 21ರಂದು ಸಾಮಾಜಿಕ ನೆರವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಆ ದಿನ ಬೆಳಗ್ಗೆ ಕೆ.ಎಂ.ಸಿ. ಬ್ಲಡ್ ಸೆಂಟರ್ನ ನೆರವಿನೊಂದಿಗೆ ರಕ್ತದಾನ ಶಿಬಿರ ನೆರವೇರಲಿರುದೆ. ಇದೇ ಸಂದರ್ಭ ಖ್ಯಾತ ಸಮಾಜ ಸೇವಕ ಶ್ರೀ ವಿಶು ಶೆಟ್ಟಿ, ಸ್ವಚ್ಛ ಕಾರ್ಕಳ ಬ್ರಿಗೇಡ್ನ ಶ್ರೀ […]










