ಕುಂದಾಪುರ (ಆ,13): ಕೆಥೋಲಿಕ್ ಸಭಾ ಉಡುಪಿ (ರಿ) ಕುಂದಾಪುರ ಘಟಕದ ಸಂಘಟನೆಯ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ನಡೆದ ಅಂತರ್ ಕಾಲೇಜು ಸಮೂಹ ನೃತ್ಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಪ್ರಥಮ ಸ್ಥಾನ, ಸಮೂಹ ಗೀತೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿಜೇತ ತಂಡದೊಂದಿಗೆ ವ್ಯವಸ್ಥಾಪಕ ಉಪನ್ಯಾಸಕರಾದ ಶ್ರೀಮತಿ ಗೀತಾ ಕುಂದರ್ ಮತ್ತು ಶ್ರೀಮತಿ ಜ್ಯೋತ್ಸ್ನಾ ಪೈ ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು, […]
Month: August 2025
ಸ. ಪ. ಪೂ.ಕಾಲೇಜು ಹೊಸಂಗಡಿ : ಬೀಳ್ಕೊಡುಗೆ ಸಮಾರಂಭ
ಹೊಸಂಗಡಿ( ಆ ,13): ಸರ್ಕಾರಿ ನೌಕರಿಯಲ್ಲಿದ್ದು, ಹೊಸಂಗಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸರಿಸುಮಾರು 12 ವರ್ಷಗಳ ಕಾಲ ತಮ್ಮ ಸೇವೆಯನ್ನು ಸಲ್ಲಿಸಿ, ಬೇರೆ ಕಾಲೇಜಿಗೆ ವರ್ಗಾವಣೆಗೊಂಡ ಜೀವಶಾಸ್ತ್ರ ಉಪನ್ಯಾಸಕ ಡಾ. ಅರುಣ್ ಕುಮಾರ್ ಶೆಟ್ಟಿ ಮತ್ತುಗಣಿತಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಅರ್ಚನಾ ಇವರ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ಜರುಗಿತು. ಸ. ಪ. ಪೂ. ಕಾ. ಹೊಸಂಗಡಿಯ ಪ್ರಾಂಶುಪಾಲರಾದ ರಂಜಿತ್ ಕುಮಾರ್ ಶೆಟ್ಟಿ, ಇವರ ಘನ ಅಧ್ಯಕ್ಷತೆಯಲ್ಲಿ, ಶ್ರೀಯುತ ಗೋಪಾಲ್ ಭಟ್ […]
ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ವಿಸ್ತರಣಾ ಚಟುವಟಿಕೆ
ಕುಂದಾಪುರ (ಆ.03): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ, ಬೈಂದೂರು ಇವರ ಸಹಯೋಗದಲ್ಲಿ ವಿಶ್ವಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ನೆಲ್ಯಾಡಿ ಬೈಲ್, ಯಡ್ತರೆಯಲ್ಲಿ ನಡೆದ ಗಮ್ಮತ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭ ಕಾಲೇಜಿನ ಕುಂದಗನ್ನಡ ಸಂಘದ ಸಂಯೋಜಕ ಶ್ರೀ ಮಹೇಶ್ ನಾಯ್ಕ್ ಉಪಸ್ಥಿತರಿದ್ದರು.
ಎಚ್.ಎಮ್.ಎಮ್ ಮತ್ತು ವಿ.ಕೆ.ರ್ ಶಾಲೆ: ಕರಾಟೆಯಲ್ಲಿ ಸಾಧನೆಗೈ ಮಹಮ್ಮದ್ ಸಫಾನ್
ಕುಂದಾಪುರ (ಆ. 9): ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ರ್ ಶಾಲೆಗಳ 10ನೇ ತರಗತಿಯ ಮಹಮ್ಮದ್ ಸಫಾನ್ ಶಿವಮೊಗ್ಗದಲ್ಲಿ ಆಯೋಜಿಸಿದ ಅಂತರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ -2025ರ ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾನೆ. ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದ್ದಾರೆ.
ಪ್ರಾಮಾಣಿಕವಾಗಿರುವವರು ಆರೋಗ್ಯವಾಗಿರುತ್ತಾರೆ : ಶ್ರೀಮತಿ ಜ್ಯೋತಿ ಮಹಾದೇವ್
ಗಣಿತನಗರ( ಆ,10) : ಬದುಕು ಆಕರ್ಷಣೆಯ ಗುಚ್ಚ. ಅದರಾಚೆಗಿರುವ ಮೌಲ್ಯವನ್ನು ಅರಿತರೆ ಜೀವನ ಸ್ವಚ್ಛವಾಗಿರಲು ಸಾಧ್ಯ. ಸಮಾಜದೆದುರು ನಾವು ಏನು ಅನ್ನೋದನ್ನು ತೋರಿಸಿಕೊಡುವಲ್ಲಿ ತಲೆತಗ್ಗಿಸದಂತೆ ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ನಮ್ಮೊಳಗಿನ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಂಡು ಮುನ್ನಡೆದ ಪ್ರಾಮಾಣಿಕರು ಆರೋಗ್ಯವಾಗಿರುತ್ತಾರೆ ಎಂದು ಹಿಪ್ನೋಥೆರಪಿಸ್ಟ್ ಶ್ರೀಮತಿ ಜ್ಯೋತಿ ಮಹಾದೇವ್ ಹೇಳಿದರು. ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಕಳದ ರೋಟರಿ ಕ್ಲಬ್, ಆನ್ಸ್ ಕ್ಲಬ್ ಹಾಗೂ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಘಟಕದ ವತಿಯಿಂದ […]
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ- ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ
ಕಾರ್ಕಳ(ಆ,09): ಮಾದಕ ದ್ರವ್ಯಗಳು ಯುವ ಜನತೆಯ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿಯನ್ನು ಮೂಡಿಸುವ ಸಲುವಾಗಿ ಆ.09 ರಂದು ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ‘ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ’ಯನ್ನು ಆಚರಿಸಲಾಯಿತು. ಕಾರ್ಕಳ ನಗರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾದ ಶ್ರೀ ಶಿವಕುಮಾರ್ ರವರು, ಮಾದಕ ವ್ಯಸನಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಅದರಿಂದ ಜೀವ/ ಜೀವನ ಎರಡನ್ನು ಕಳೆದುಕೊಳ್ಳಬೇಕಾಗುತ್ತದೆ. ಎಂಬ ಎಚ್ಚರಿಕೆಯ ನುಡಿ […]
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಗಂಗೊಳ್ಳಿ(ಆ,09): ನಿಸ್ವಾರ್ಥ ಮನೋಭಾವದ ಸೇವೆಯೇ ನಿಜವಾದ ಧರ್ಮ. ಅಂತಹ ಸೇವಾ ಮನೋಭಾವನೆಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಮಹತರವಾದ ಪಾತ್ರವನ್ನು ವಹಿಸುತ್ತದೆ ಎಂದು ಸೀನಿಯರ್ ಟ್ಯಾಕ್ಸ್ ಕನ್ಸಲ್ಟೆಂಟ್ ಜತಿಂದ್ರ ಮರವಂತೆ ಅವರು ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಅವರ ಸಹಾಯದೊಂದಿಗೆ ನಡೆದ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿಯ ರೋಟರಿ ಕ್ಲಬ್ […]
ಬಗ್ವಾಡಿ: ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ಪೂಜೆ
ಕುಂದಾಪುರ(ಆ,09): ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪುರಾಣ ಪ್ರಸಿದ್ಧ ಶಕ್ತಿಕ್ಷೇತ್ರಗಳಲ್ಲಿ ಒಂದಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತ ವಿಜೃoಭಣೆಯಿ೦ದ ನಡೆಯಿತು. ಭಕ್ತಾದಿಗಳಿಗೆ ಸಾಮೂಹಿಕವಾಗಿ ಶ್ರೀ ವರಮಹಾಲಕ್ಷ್ಮೀಯ ಪೂಜೆಯ ಅವಕಾಶ ಕಲ್ಪಿಸಲಾಗಿತ್ತು. ಕ್ಷೇತ್ರದ ಪ್ರಧಾನ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಸಾಮೂಹಿಕ ವರಮಹಾಲಕ್ಷ್ಮೀ ಪೂಜೆಯಲ್ಲಿ ಭಕ್ತಾದಿಗಳು ಪಾಲ್ಗೊಂಡರು. ಮಧ್ಯಾಹ್ನ ನಡೆದ ಮಹಾ ಅನ್ನಸಂತರ್ಪಣೆಯಲ್ಲಿ 2500ಕ್ಕೂ ಹೆಚ್ಚು ಭಕ್ತರು ಅನ್ನಪ್ರಸಾದ ಸೇವಿಸಿದರು. ಶ್ರೀಮಹಿಷಾಸುರಮರ್ದಿನಿ ದೇವಸ್ಥಾನ ಬಗ್ವಾಡಿ, ಮೊಗವೀರ ಮಹಾಜನ ಸೇವಾ […]
ಮಾನವತಾ ಧರ್ಮವೇ ಶ್ರೇಷ್ಠವಾದದ್ದು : ಉದಯಕುಮಾರ್ ಹಟ್ಟಿಯಂಗಡಿ
ಉಳ್ಳಾಲ (ಆ,09): ಧರ್ಮವನ್ನು ಇಂದು ವಿವಿಧ ಅರ್ಥದಲ್ಲಿ ವ್ಯಾಖ್ಯಾನಿಸಲಾಗುತ್ತದೆ. ಆದರೆ ಧರ್ಮದ ಮೂಲವನ್ನು ಹುಡುಕುತ್ತಾ ಹೋದರೆ ನಮಗೆ ಸತ್ಯದ ಅರಿವಾಗುತ್ತದೆ. ದಯೆಯೇ ಧರ್ಮದ ಮೂಲ ವೆಂದು ಬಸವಣ್ಣನವರು ಶತಶತಮಾನದ ಹಿಂದೆ ಹೇಳಿದ್ದಾರೆ. ಆ ನಿಟ್ಟಿನಲ್ಲಿ ದಯೆಯಿಂದ ಕೂಡಿದ ಮಾನವತಾ ಧರ್ಮವೇ ಶ್ರೇಷ್ಠ ಎಂದು ಮೊಗವೀರ ಮಹಾಜನ ಸೇವಾ ಸಂಘ( ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇದರ ಅಧ್ಯಕ್ಷರು ಸಹಕಾರಿ ರತ್ನ ಹಾಗು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ […]
ಆತ್ಮಸ್ಥೈರ್ಯ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಿ – ಈಶ್ವರ್ ಮಲ್ಪೆ
ಕುಂದಾಪುರ (ಆ. 06): ಬದುಕಿನಲ್ಲಿ ಕಠಿಣ ಸವಾಲುಗಳು ಎದುರಾದಾಗ ಅದನ್ನು ಎದುರಿಸಲು ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು, ಜೊತೆಗೆ ಪರೋಪಕಾರ ಹಾಗೂ ಸೇವಾ ಮನೋಭಾವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಸಮಾಜ ಸೇವಕ ಹಾಗೂ ಈಜು ತಜ್ಞರಾದ ಈಶ್ವರ್ ಮಲ್ಪೆ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಹಮ್ಮಿಕೊಂಡ ಸಾಮಾಜಿಕ ಜವಾಬ್ದಾರಿ ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ […]










