ಕುಂದಾಪುರ (ಸೆ.15): ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ಮತ್ತು ಯೋಗಾಸನ ಭಾರತ್ ಹಮ್ಮಿಕೊಂಡ 2025-26 ನೇ ಸಾಲಿನ 6ನೇ ರಾಷ್ಟ್ರೀಯ ಯೋಗಾಸನ ಚಾಂಪಿಯನ್ ಶಿಪ್ ಛತ್ತೀಸ್ ಘಡ ಅಗ್ರಸೇನ್ ಭವನದಲ್ಲಿ ನಡೆದ್ದಿದ್ದು ಬ್ಯಾಕ್ ಬೆಂಡಿಂಗ್ ಯೋಗಾಸನದಲ್ಲಿ ಕುಂದಾಪುರ ತಾಲೂಕಿನ ತ್ರಾಸಿ ಪಂಚಾಯತ್ ಸಿಬ್ಬಂದಿ ಸಂದೀಪ್ ಪೂಜಾರಿ ತ್ರಾಸಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಸೆಮಿ ಫೈನಲ್ ನಲ್ಲಿ 4 ನೇ ಸ್ಥಾನ ಹಾಗೂ ಫೈನಲ್ ನಲ್ಲಿ 5 ನೇ […]
Month: September 2025
ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ -ಜನತಾ ಪಿಯು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ಸೆ.15): ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲ್ಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಕೋರಿದ್ದಾರೆ.
ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ : ಕ್ರಿಯೇಟಿವ್ ನ ಐದು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ
ಉಡುಪಿ ( ಸೆ.15): ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ, ಹಾಗೂ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿಯಾರಾದ ಮಾನಸ ವಿನಾಯಕ್, ಹರ್ಷಿತ ವಿನಾಯಕ್, ಆದ್ಯ ಎಸ್. […]
ಲಯನ್ಸ್ ಕ್ಲಬ್ ಕೋಸ್ಟಲ್ ವತಿಯಿಂದ ಇಂಜಿನಿಯರ್ಸ್ ಡೇ
ಕುಂದಾಪುರ(ಸೆ,15): ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ ಪ್ರಯುಕ್ತ ದೇಶದಾದ್ಯಂತ ಆಚರಿಸುತ್ತಿರುವ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನವರು ಸೆಪ್ಟೆಂಬರ್ 15 ರಂದು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಕುಂದಾಪುರದ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಶ್ರೀ ಯಶವಂತ ಅವರನ್ನು ಲಯನ್ಸ್ ಕ್ಲಬ್ ನ ಹಿರಿಯ ಸದಸ್ಯರು, ನಿವೃತ್ತ ಬ್ಯಾಂಕ್ ಉದ್ಯೋಗಿ ಹಳ್ನಾಡು ಬಿ.ಜಯರಾಮ ಶೆಟ್ಟಿ ಫಲ ಪುಷ್ಪ ನೀಡಿ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಕೋಸ್ಟಲ್ […]
ಯುವ ಬಂಟರ ಸಂಘದ ವತಿಯಿಂದ ಇಂಜಿನಿಯರ್ಸ್ ಡೇ
ಕುಂದಾಪುರ( ಸೆ,15): ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ ಪ್ರಯುಕ್ತ ದೇಶದಾದ್ಯಂತ ಆಚರಿಸುತ್ತಿರುವ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸೆಪ್ಟೆಂಬರ್ 15 ರಂದು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಕುಂದಾಪುರದ ಪುರಸಭಾ ಇಂಜಿನಿಯರ್ (ಪರಿಸರ) ಶ್ರೀ ಗುರುಪ್ರಸಾದ್ ಶೆಟ್ಟಿ ಶಿರೂರು ಅವರನ್ನು ಯುವ ಬಂಟರ ಸಂಘದ ಪೋಷಕ ಸದಸ್ಯರು ,ಹೈದರಾಬಾದ್ ನ ಹಿರಿಯ ಉದ್ಯಮಿ ನೆಲಗೊಂಡ ಸುಧಾಕರ ಶೆಟ್ಟಿ ಜನ್ಸಾಲೆ ಫಲ ಪುಷ್ಪ ನೀಡಿ […]
ಬಿ.ಬಿ. ಹೆಗ್ಡೆ ಕಾಲೇಜು: ಕೈಗಾರಿಕಾ ಭೇಟಿ ಹಾಗೂ ಶೈಕ್ಷಣಿಕ ಒಡಂಬಡಿಕೆ
ಕುಂದಾಪುರ (ಆ.23): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ವಂಡಾರಿನ ಶ್ರೀ ಕೃಷ್ಣ ಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ಗೇರುಬೀಜ ಕಾರ್ಖಾನೆಗೆ ಕೈಗಾರಿಕಾ ಭೇಟಿಯನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕೃಷ್ಣ ಪ್ರಸಾದ್ ಗ್ರೂಪ್ ಆಫ್ ಇಂಡಸ್ಟ್ರೀಸ್ ನ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಈ ಸಂಪತ್ ಕುಮಾರ್ ಶೆಟ್ಟಿ ಗೇರು ಉದ್ಯಮದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ವ್ಯವಹಾರ […]
ಬಿ .ಬಿ ಹೆಗ್ಡೆ ಕಾಲೇಜು : ಸ್ವಾಸ್ತ್ಯ ಸಂಕಲ್ಪ – ಆರೋಗ್ಯಅರಿವು ಕಾರ್ಯಕ್ರಮ
ಕುಂದಾಪುರ (ಸೆ. 12): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರೋವರ್ಸ್ & ರೇಂಜರ್ಸ್ ಘಟಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಆರೋಗ್ಯ ಅರಿವು ಕಾರ್ಯಕ್ರಮವನ್ನು ಸೆಪ್ಟೆಂಬರ್ 12ರಂದು ಕಾಲೇಜಿನ ಎ.ವಿ. ಹಾಲ್ ನಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. […]
ಸರಸ್ವತಿ ವಿದ್ಯಾಲಯದಲ್ಲಿ ಎಸ್. ವಿ. ಕಾಮರ್ಸ್ ಕ್ಲಬ್ ಉದ್ಘಾಟನೆ
ಗಂಗೊಳ್ಳಿ (ಸೆ .15): ವಿದ್ಯಾರ್ಥಿಗಳು ಪಠ್ಯದ ಜೊತೆ ವ್ಯವಹಾರ ಜ್ಞಾನ ಮತ್ತು ಸಂವಹನ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು. ಬದುಕಿನಲ್ಲಿ ಯಶಸ್ಸನ್ನು ಕಂಡುಕೊಳ್ಳಲು ಇದು ಅತಿ ಮುಖ್ಯವಾಗುತ್ತದೆ ಎಂದು ಉದ್ಯಮಿ ವಿಠ್ಠಲ ಬಿ ಶಣೈ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಎಸ್.ವಿ. ಕಾಮರ್ಸ್ ಕ್ಲಬ್ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿಯ ಉದ್ಯಮಿ ರೋಷನ್ ಖಾರ್ವಿ ಎಸ್. ವಿ ಕಾಮರ್ಸ್ ಕ್ಲಬ್ ಲಾಂಛನವನ್ನು […]
ಹೇರಂಜಾಲು: 10ನೇ ಆಯುರ್ವೇದ ದಿನಾಚರಣೆ- ಪೌಷ್ಟಿಕ ಮಾಸಾಚರಣೆ
ಹೇರಂಜಾಲು( ಸೆ.15): ಆಯುರ್ವೇದದಲ್ಲಿ ತಿಳಿಸಿರುವ ದಿನಚರ್ಯೆ, ಋತುಚರ್ಯೆ, ಸದ್ವೃತ್ತ ಪಾಲನೆ ಮಾಡುವುದರಿಂದ ಆರೋಗ್ಯವಂತನು ರೋಗ ಬಾರದಂತೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಜೊತೆಯಲ್ಲಿ ರೋಗಿಯ ರೋಗವನ್ನು ಕೂಡ ಗುಣಪಡಿಸಬಹುದು. ನಮ್ಮ ಮನೆಯಂಗಳದಲ್ಲಿ ಇರುವಂತಹ ಅನೇಕ ಸಸ್ಯಗಳನ್ನ ಆಹಾರವಾಗಿ ಉಪಯೋಗಿಸುವುದರಿಂದ ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಜೊತೆಯಲ್ಲಿ ಅವುಗಳಿಂದಲೇ ಪೌಷ್ಟಿಕ ಆಹಾರವನ್ನು ಕೂಡ ನಾವು ಹೇಗೆ ತಯಾರಿಸಿ ಸೇವಿಸಬಹುದು ಎಂದು ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – […]
ಫುಟ್ಬಾಲ್ : ಕಾರ್ಕಳ ಜ್ಞಾನಸುಧಾದ ಮೂವರು ರಾಜ್ಯ ತಂಡಮಟ್ಟಕ್ಕೆ
ಕಾರ್ಕಳ( ಸೆ.15): ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸೈಂಟ್ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವದಲ್ಲಿ ಜರುಗಿದ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು, ಸಂಸ್ಥೆಯ ಅನ್ಸಿತ್ ಎ ಭಂಡಾರಿ, ಮನ್ವಿಶ್ ರಾವ್ ಮತ್ತು ಅಖಿಲ್ ಸಾಯಿ ಕೋಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.










