ಕಾರ್ಕಳ( ಆ ,27): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಹಂತಗಳಲ್ಲಿ ಶಿಕ್ಷಕರ – ಪಾಲಕರ ಸಭೆಯನ್ನು ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಜೀವನ ಮೌಲ್ಯಗಳನ್ನು ಕುರಿತು ನಡೆದ ಕಾರ್ಯಕ್ರಮವು ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ವೇದಿಕೆಯಾಯಿತು. ಸಹ ಸಂಸ್ಥಾಪಕರುಗಳಾದ ವಿದ್ವಾನ್ ಗಣಪತಿ ಭಟ್ ರವರು ಮಾತನಾಡಿ ‘ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಶಿಕ್ಷಣ ಸಂಸ್ಥೆ, ಪೋಷಕರು ಮತ್ತು ಶಿಕ್ಷಕರ ತ್ರಿಕೋನ […]
Day: October 28, 2025
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಎಸ್. ಪ್ರಸನ್ನ ಕುಮಾರ ಶೆಟ್ಟಿ ಆಯ್ಕೆ
ಕೋಟೇಶ್ವರ (ಆ,27): ವಿವೇಕೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹೊಂಬಾಡಿ-ಮಂಡಾಡಿ (ಸುಣ್ಣಾರಿ) ಇದರ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸುಣ್ಣಾರಿ ಪ್ರಸನ್ನ ಕುಮಾರ ಶೆಟ್ಟಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ವಿ. ಚಂದ್ರಶೇಖರ ಹೆಗ್ಡೆ ದಬ್ಬೆಕಟ್ಟೆ, ಉಪಾಧ್ಯಕ್ಷರಾಗಿ ಸಚಿನ್ ಶೆಟ್ಟಿ ದಬ್ಬೆಕಟ್ಟೆ, ಸಂದೇಶ ಶೆಟ್ಟಿ, ಸತ್ಯನಾರಾಯಣ ಆಚಾರಿ, ವಿಶಾಲ ಶೆಟ್ಟಿ, ಕಾರ್ಯದರ್ಶಿಯಾಗಿ ರವಿ ಪೂಜಾರಿ ದಬ್ಬೆಕಟ್ಟೆ, ಕೋಶಾಧಿಕಾರಿ ನೀತಾ ಶೆಟ್ಟಿ, ಸಹ ಕಾರ್ಯದರ್ಶಿಗಳಾಗಿ ರಮೇಶ ಪೂಜಾರಿ, ಪೂರ್ಣಿಮಾ ಕಾಳಾವರ ಆಯ್ಕೆಯಾಗಿರುತ್ತಾರೆ. ಇವರನ್ನು ಆಡಳಿತ […]
ಜನತಾ ಪಿಯು ಕಾಲೇಜಿನ ಸಾಯಿಮ್ ಎಂ. ಕೆ. ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ ( ಆ ,27): ಇತ್ತೀಚೆಗೆ ತುಮಕೂರಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಾಯಿಮ್ ಎಂ. ಕೆ . ಉತ್ತಮ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ ಸ್ಪರ್ಧೆ : ನಮ್ರತಾ ಎಸ್ ಪೂಜಾರಿ ತೃತೀಯ ಸ್ಥಾನ
ಕಾರ್ಕಳ (ಆ,28): ಮೂಡಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೆ .ಅಮರನಾಥ್ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪೈ ಲಿಮಿಟೆಡ್ ವತಿಯಿಂದ ನಡೆದ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ ಸ್ಪರ್ಧೆಯಲ್ಲಿ ಗಂಗೊಳ್ಳಿ ಎಸ್ವಿ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ನಮ್ರತಾ ಎಸ್ ಪೂಜಾರಿ ತೃತೀಯ ಸ್ಥಾನ ಗಳಿಸಿದ್ದಾಳೆ. ಅಬಾಕಸ್ ಕುಂದಾಪುರ ಸೆಂಟರ್ ಮುಖ್ಯಸ್ಥ ಪ್ರಸನ್ನ ಕೆಬಿ ಬೋಧರೆ , ಸುನಿತಾ ತರಬೇತಿ ನೀಡಿದ್ದರು.










