ಗಂಗೊಳ್ಳಿ ( ಆ ,26): ಕೆನರಾ ಬ್ಯಾಂಕ್, ಗಂಗೊಳ್ಳಿ ವತಿಯಿಂದ ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಯೋಗೇಶ್ ಎನ್ ಸಕ್ಲಾತಿ ದ್ವಿತೀಯ ಸ್ಥಾನವನ್ನು ಅಪೂರ್ವ ಖಾರ್ವಿ ತೃತೀಯ ಸ್ಥಾನವನ್ನು ಪಡೆದರು. ಗಂಗೊಳ್ಳಿ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ವಾಸು ದೇವಾಡಿಗ ಬಹುಮಾನಗಳನ್ನು […]
Month: October 2025
ವರ್ಡ್ ಪ್ರೆಸ್ ಕ್ಯಾಂಪಸ್ ಕನೆಕ್ಟ್ : ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
ಕುಂದಾಪುರ (ಅ.24): ವಿದ್ಯಾರ್ಥಿಗಳು ತಮ್ಮ ಪದವಿಯ ಜೊತೆಗೆ ಮುಂದುವರಿದ ತಂತ್ರಜ್ಞಾನಗಳನ್ನೂ ಸಹ ಕಲಿತಾಗ ಮಾತ್ರ ಉನ್ನತ ಜ್ಞಾನದೊಂದಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಬೇಡಿಕೆ ಪಡೆಯಲು ಸಾಧ್ಯ ಎಂದು ಕುಂದಾಪುರದ ಫೋರ್ಥ್ ಫೋಕಸ್ ಸಂಸ್ಥೆಯ ಸ್ಥಾಪಕರಾದ ಶ್ರೀ ವಿ. ಗೌತಮ್ ನಾವಡ ಅವರು ಹೇಳಿದರು. ಅವರು ದಿನಾಂಕ 24 ಅಕ್ಟೋಬರ್ 2025 ರಂದು ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಗಣಕಶಾಸ್ತç ವಿಭಾಗ ಮತ್ತು ವರ್ಡ್ ಪ್ರೆಸ್ ಉಡುಪಿ ಕಮ್ಯೂನಿಟಿ ಇವರ […]
ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕರ-ಪಾಲಕರ ಸಭೆ
ಕಾರ್ಕಳ( ಆ ,27): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಹಂತಗಳಲ್ಲಿ ಶಿಕ್ಷಕರ – ಪಾಲಕರ ಸಭೆಯನ್ನು ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಜೀವನ ಮೌಲ್ಯಗಳನ್ನು ಕುರಿತು ನಡೆದ ಕಾರ್ಯಕ್ರಮವು ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ ವೇದಿಕೆಯಾಯಿತು. ಸಹ ಸಂಸ್ಥಾಪಕರುಗಳಾದ ವಿದ್ವಾನ್ ಗಣಪತಿ ಭಟ್ ರವರು ಮಾತನಾಡಿ ‘ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಶಿಕ್ಷಣ ಸಂಸ್ಥೆ, ಪೋಷಕರು ಮತ್ತು ಶಿಕ್ಷಕರ ತ್ರಿಕೋನ […]
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಎಸ್. ಪ್ರಸನ್ನ ಕುಮಾರ ಶೆಟ್ಟಿ ಆಯ್ಕೆ
ಕೋಟೇಶ್ವರ (ಆ,27): ವಿವೇಕೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹೊಂಬಾಡಿ-ಮಂಡಾಡಿ (ಸುಣ್ಣಾರಿ) ಇದರ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸುಣ್ಣಾರಿ ಪ್ರಸನ್ನ ಕುಮಾರ ಶೆಟ್ಟಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ವಿ. ಚಂದ್ರಶೇಖರ ಹೆಗ್ಡೆ ದಬ್ಬೆಕಟ್ಟೆ, ಉಪಾಧ್ಯಕ್ಷರಾಗಿ ಸಚಿನ್ ಶೆಟ್ಟಿ ದಬ್ಬೆಕಟ್ಟೆ, ಸಂದೇಶ ಶೆಟ್ಟಿ, ಸತ್ಯನಾರಾಯಣ ಆಚಾರಿ, ವಿಶಾಲ ಶೆಟ್ಟಿ, ಕಾರ್ಯದರ್ಶಿಯಾಗಿ ರವಿ ಪೂಜಾರಿ ದಬ್ಬೆಕಟ್ಟೆ, ಕೋಶಾಧಿಕಾರಿ ನೀತಾ ಶೆಟ್ಟಿ, ಸಹ ಕಾರ್ಯದರ್ಶಿಗಳಾಗಿ ರಮೇಶ ಪೂಜಾರಿ, ಪೂರ್ಣಿಮಾ ಕಾಳಾವರ ಆಯ್ಕೆಯಾಗಿರುತ್ತಾರೆ. ಇವರನ್ನು ಆಡಳಿತ […]
ಜನತಾ ಪಿಯು ಕಾಲೇಜಿನ ಸಾಯಿಮ್ ಎಂ. ಕೆ. ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ ( ಆ ,27): ಇತ್ತೀಚೆಗೆ ತುಮಕೂರಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಾಯಿಮ್ ಎಂ. ಕೆ . ಉತ್ತಮ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ ಸ್ಪರ್ಧೆ : ನಮ್ರತಾ ಎಸ್ ಪೂಜಾರಿ ತೃತೀಯ ಸ್ಥಾನ
ಕಾರ್ಕಳ (ಆ,28): ಮೂಡಬಿದಿರೆಯ ಆಳ್ವಾಸ್ ಪಿಯು ಕಾಲೇಜಿನ ಕೆ .ಅಮರನಾಥ್ ಶೆಟ್ಟಿ ವೇದಿಕೆಯಲ್ಲಿ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪೈ ಲಿಮಿಟೆಡ್ ವತಿಯಿಂದ ನಡೆದ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ ಸ್ಪರ್ಧೆಯಲ್ಲಿ ಗಂಗೊಳ್ಳಿ ಎಸ್ವಿ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ನಮ್ರತಾ ಎಸ್ ಪೂಜಾರಿ ತೃತೀಯ ಸ್ಥಾನ ಗಳಿಸಿದ್ದಾಳೆ. ಅಬಾಕಸ್ ಕುಂದಾಪುರ ಸೆಂಟರ್ ಮುಖ್ಯಸ್ಥ ಪ್ರಸನ್ನ ಕೆಬಿ ಬೋಧರೆ , ಸುನಿತಾ ತರಬೇತಿ ನೀಡಿದ್ದರು.
ಡಾ. ಚೇತನ್ ಶೆಟ್ಟಿ ಕೋವಾಡಿಯವರಿಗೆ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ
ಕುಂದಾಪುರ(ಆ,26): ಅಂತರಾಷ್ಟ್ರೀಯಯ ಶಿಕ್ಷಕರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ, ಬೆಂಗಳೂರು ಇವರು ಶೈಕ್ಷಣಿಕ ಮತ್ತು ಸಾಹಿತ್ಯಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಅವರಿಗೆ ರಾಜ್ಯಮಟ್ಟದ ಶಿಕ್ಷಕರ ರತ್ನ ಪ್ರಶಸ್ತಿಯನ್ನು ಸೆಪ್ಟೆಂಬರ್ 26ರಂದು ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಿದರು. ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ […]
ಡಾIಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮ
ಕುಂದಾಪುರ (ಅ.21) : ಸಾಂಪ್ರದಾಯಿಕವಾಗಿ ನಡೆಯುವ ದೀಪಾವಳಿ ಹಬ್ಬ ಕೃಷಿ ಸಂಬAಧಿಯಾಗಿದ್ದು, ಪೌರಾಣಿಕ ಹಿನ್ನೆಲೆಯನ್ನು ಹೊಂದಿದೆ. ದೀಪಾವಳಿಯ ಸಂದರ್ಭದಲ್ಲಿ ನಡೆಯುವ ಬಲೀಂದ್ರ ಪೂಜೆ, ಲಕ್ಷ್ಮಿ ಪೂಜೆ, ತುಳಸಿ ಪೂಜೆ, ಗೋಪೂಜೆ ಈ ಎಲ್ಲಾ ಆಚರಣೆಗಳು ವಿದ್ಯಾರ್ಥಿಗಳಿಗೆ ತಿಳಿದಿರಬೇಕೆಂದು ಹೆಮ್ಮಾಡಿಯ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಜಗದೀಶ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ದೀಪಾವಳಿ ಸಂಭ್ರಮ […]
ಯಕ್ಷಗಾನ ಎಂಬುದು ಮನೋಲ್ಲಾಸವನ್ನು ಹೆಚ್ಚಿಸುವ ಕಲೆ -ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು
ಕೋಟ ( ಆ,20): “ಯಕ್ಷಗಾನ ಎಂಬುದು ಮನೋಲ್ಲಾಸವನ್ನು ಹೆಚ್ಚಿಸುವ ಕಲೆ. ಜೀವನದಲ್ಲಿ ಮಾನಸಿಕವಾಗಿ ಕುಗ್ಗಿದ ಮನಸ್ಸುಗಳಿಗೆ ಯಕ್ಷಗಾನವು ಔಷಧೋಪಚಾರದಂತೆ. ಪರಂಪರೆಯ ಯಕ್ಷಗಾನದ ಶಾಸ್ತ್ರೀಯತೆಯನ್ನು ಉಳಿಸಿ ಬೆಳೆಸುವಲ್ಲಿ ಮಕ್ಕಳ ಯಕ್ಷಗಾನದ ಪ್ರದರ್ಶನಗಳು ಹೆಚ್ಚು ಫಲಪ್ರದ. ಮಕ್ಕಳ ಮನಸ್ಸು ಕಲ್ಮಶವಿರದ ಶುದ್ಧ ಮನಸ್ಸು. ಹಾಗಾಗಿ ಮಕ್ಕಳ ಪ್ರದರ್ಶನಗಳಲ್ಲಿ ಯಾವುದೇ ಅಪಸವ್ಯಗಳು ಕಾಣಿಸಿಕೊಳ್ಳುವುದಿಲ್ಲ. ಇತ್ತೀಚೆಗೆ ಯಕ್ಷಗಾನವು ವಾಣಿಜ್ಯೀಕರಣವಾದಾಗ ಅದರ ಮೂಲ ಸ್ವರೂಪಕ್ಕೆ ಧಕ್ಕೆ ಬಂದಿದೆ. ಕಲಾವಿದರ ವೈಯಕ್ತಿಕ ಮಾತುಕತೆಗಳೇ ರಂಗದ ಸಂಭಾಷಣೆಗಳಾಗಿ ಮೂಡಿಬರುತ್ತಿವೆ. ಇಂಥವುಗಳಿಗೆ […]
ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ ಉದ್ಘಾಟನೆ
ಕುಂದಾಪುರ(ಅ.14): ಸನಾತನ ಧರ್ಮವನ್ನು ಹೊಂದಿದ ಭಾರತೀಯರಿಗೆ ಸಂಸ್ಕೃತಿಯ ಬೇರು ಗಟ್ಟಿಯಾಗಿದೆ. ಈ ಸಾಂಸ್ಕೃತಿಕ ಪರಂಪರೆಯನ್ನು, ಮಾನವ ಧರ್ಮವನ್ನು ಅರ್ಥೈಸಿಕೊಳ್ಳುವ ಮೂಲಕ ಜೀವನದ ಅರ್ಥವನ್ನು ತಿಳಿಯಬಹುದು ಎಂದು ಉಡುಪಿಯ ಉಜ್ವಲ್ ಗ್ರೂಪ್ಸ್ ನ ಆಡಳಿತ ನಿರ್ದೇಶಕರಾದ ಶ್ರೀ ಅಜಯ್ ಪಿ. ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಉಪನ್ಯಾಸ ಮಾಲಿಕೆಯನ್ನು ಉದ್ಘಾಟಿಸಿ ಮಾತನಾಡಿದರು. […]










