ಕುಂದಾಪುರ(ಮೇ ,23): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಹಾಗೂ ಎನ್.ಸಿ.ಸಿ. ಘಟಕಗಳ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ, ಹಾಗೂ ಲಯನ್ಸ್ ಕ್ಲಬ್ ಕುಂದಾಪುರ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಮೇ 23 ರಂದು ಜರಗಿತು. ಇಂಡಿಯನ್ ರೆಡ್ ಕ್ರಾಸ್ ಕುಂದಾಪುರ ಘಟಕದ ಸಭಾಪತಿ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಕ್ತದಾನದ […]
Year: 2025
ಕೆ.ಸಿ.ಇಟಿ ಫಲಿತಾಂಶ: ಜ್ಞಾನಸುಧಾದ ತರುಣ್.ಎ.ಸುರಾನಾಗೆ ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 6ನೇ ರ್ಯಾಂಕ್
ಗಣಿತನಗರ(ಮೇ ,24): : ಇಂಜಿನಿಯರಿಂಗ್ ಹಾಗೂ ಇತರ ವೃತ್ತಿಪರ ಕೋರ್ಸುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ತರುಣ್ ಎ. ಸುರಾನ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ 6ನೇ ರ್ಯಾಂಕನ್ನು ಪಡೆದಿರುತ್ತಾರೆ, ಸಂಸ್ಥೆಯ 40 ವಿದ್ಯಾರ್ಥಿಗಳು ಇಂಜಿನಿಯರಿಂಗ್ ವಿಭಾಗದಲ್ಲಿ ಸಾವಿರದೊಳಗಿನ ರ್ಯಾಂಕ್ ಪಡೆದಿದ್ದಾರೆ. ತರುಣ್ ಎ. ಸುರಾನ 6ನೇ ರ್ಯಾಂಕ್ (ಬಿ.ಫಾರ್ಮದಲ್ಲಿ 30ನೇ ರ್ಯಾಂಕ್, ಅಗ್ರಿಯಲ್ಲಿ 54ನೇ ರ್ಯಾಂಕ್), ವಿಷ್ಣು ಧರ್ಮ ಪ್ರಕಾಶ್ […]
ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4 ನೇ ರ್ಯಾಂಕ್
ಕಾರ್ಕಳ ( ಮೇ ,24): ಏಪ್ರಿಲ್ 15,16 ಮತ್ತು 17 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜು ರಾಜ್ಯ ಮಟ್ಟದ 100 ರ್ಯಾಂಕ್ನೊಳಗೆ 14 ಸ್ಥಾನ ಪಡೆಯುವ ಮೂಲಕ ಅದ್ಭುತ ಸಾಧನೆ ಮಾಡಿದೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ಸುಮಂತ್ ಗೌಡ ಎಸ್ ದಾನಪ್ಪಗೌಡರ್ ಕೃಷಿ ವಿಜ್ಞಾನ ವಿಭಾಗದಲ್ಲಿ […]
ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಹಾಗೂ ದತ್ತಿ ಪುರಸ್ಕಾರ ಪ್ರದಾನ
ಕುಂದಾಪುರ(ಮೇ, 21): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕುಂದಾಪುರ ತಾಲೂಕು ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ದಿ. ಪುಳಿಮಾರು ಎಂ ಕೃಷ್ಣಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಹಾಗೂ ಯಕ್ಷಪ್ರೇಮಿ ಶ್ರೀ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರ ಕಾರ್ಯಕ್ರಮ ಕಾಲೇಜಿನ ಶ್ರೀ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ ಖ್ಯಾತ ಸಾಹಿತಿ, ಅಂಕಣ ಬರಹಗಾರ್ತಿ […]
ಕುಂದಾಪುರದ ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಾಯಿಸ್ಪರ್ಶ ಕೆ. ರಾಜ್ಯಕ್ಕೆ ಪ್ರಥಮ
ಕುಂದಾಪುರ(ಮೇ ,22): ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಸಾಯಿಸ್ಪರ್ಶ ಕೆ. 2024-2025 ರ ಸಾಲಿನ ಎಸ್. ಎಸ್. ಎಲ್. ಸಿ. ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುತ್ತಾಳೆ. ಈಕೆ ಕುಂದಾಪುರದ ದೇವದಾಸ ಕೆ. ಮತ್ತು ಶಶಿಕಲಾ ಎಸ್. ದಂಪತಿಯ ಪುತ್ರಿ. ಸಂಸ್ಥೆಯ […]
ಡಾ. ಬಿ.ಬಿ. ಹೆಗ್ಡೆ ಕಾಲೇಜು : ರಕ್ಷಕ -ಶಿಕ್ಷಕರ ಸಭೆ
ಕುಂದಾಪುರ (ಮೇ 17): ಇಲ್ಲಿನ ಡಾ. ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಎರಡನೇ ಅವಧಿಗೆ ರಕ್ಷಕ- ಶಿಕ್ಷಕ ಸಭೆಯನ್ನು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿಯವರು ಮಾತನಾಡಿ, ವರ್ತಮಾನದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳು ವಿದ್ಯಾರ್ಥಿಗಳ ಮೇಲೆ ಬಹಳ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರುತ್ತಿದೆ. ರಕ್ಷಕರು, ಪೋಷಕರು ಈ ಕುರಿತು ಗಮನಕೊಡಬೇಕು . ವಿದ್ಯಾರ್ಥಿಗಳ ಬದುಕನ್ನು ರೂಪಿಸುವಲ್ಲಿ ಹೆತ್ತವರ ಪಾತ್ರ […]
ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ : ಕುಂದಗನ್ನಡ ಸಂಘದ ವಿದ್ಯಾರ್ಥಿಗಳಿಂದ ವಿಸ್ತರಣಾ ಚಟುವಟಿಕೆ
ಕುಂದಾಪುರ (ಮೇ.19): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆಯ ಭಾಗವಾಗಿ ಮೂಡುಗಿಳಿಯಾರಿನ ಶ್ರೀ ಸ್ವಾಮಿ ನಂದೀಕೇಶ್ವರ ದೈವಸ್ಥಾನದ ಕೋಲ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕರಿಸಿದರು. ಈ ಸಂದರ್ಭ ದೈವಸ್ಥಾನದ ಆಡಳಿತ ಮಂಡಳಿಯ ಮೊಕ್ತೇಸರರಾದ ಸುಭಾಷ್ ಚಂದ್ರ ಶೆಟ್ಟಿ, ಸೇವಾಕರ್ತರಾದ ರತ್ನಾಕರ್ ಶೆಟ್ಟಿ, ಚಂದ್ರ ಪಾಣಾ, ಕಾಲೇಜಿನ ಕುಂದಗನ್ನಡ ಸಂಘದ ಸಂಯೋಜಕಿ ರೇಷ್ಮಾ ಶೆಟ್ಟಿ, ಪ್ರವೀಣ ಪೂಜಾರಿ ಉಪಸ್ಥಿತರಿದ್ದರು.
ಗಂಗೊಳ್ಳಿ : ಸುಶ್ಮಿತಾ ಎಸ್. ಗಾಣಿಗರಿಗೆ ಸನ್ಮಾನ
ಗಂಗೊಳ್ಳಿ(ಮೇ ,22): ವೈಷ್ಣವಿ ಇವೆಂಟ್ಸ್ ಗಂಗೊಳ್ಳಿ, ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ ಮತ್ತು ಬಿಲ್ಲವರ ಹಿತ ರಕ್ಷಣಾ ವೇದಿಕೆ ಗಂಗೊಳ್ಳಿಯ ವತಿಯಿಂದ 2025ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ ಎಸ್ ಗಾಣಿಗ ಅವರನ್ನು ಗಂಗೊಳ್ಳಿಯ ಶ್ರೀ ಸೀತಾಳಿ ನವದುರ್ಗೆ ದೇವಸ್ಥಾನದ ಆವರಣದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವೈಷ್ಣವಿ ಇವೆಂಟ್ಸ್ […]
ಉಡುಪಿ ಜಿಲ್ಲಾ ಮಟ್ಟದ ಅತ್ಲೇಟಿಕ್ಸ್ ಕ್ರೀಡಾಕೂಟ 2025: ಕುಂದಾಪುರ ಟ್ರ್ಯಾಕ್ & ಫೀಲ್ಡ್ ಅತ್ಲೇಟಿಕ್ಸ್ ಅಕಾಡೆಮಿ ಕ್ರೀಡಾಪಟುಗಳಿಂದ ಉತ್ತಮ ಸಾಧನೆ
ಕುಂದಾಪುರ ( ಮೇ ,17): ಉಡುಪಿ ಜಿಲ್ಲಾ ಅಮೆಚುರ್ ಅತ್ಲೇಟಿಕ್ ಅಸೋಸಿಯೇಷನ್ ಇವರ ಸಹಯೋಗದೊಂದಿಗೆ, ಉಡುಪಿ ಜಿಲ್ಲಾ ಮಟ್ಟದ ಕಿರಿಯರ ಅತ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ಕುಂದಾಪುರ ಟ್ರ್ಯಾಕ್ ಅಂಡ್ ಫೀಲ್ಡ್ ಅತ್ಲೇಟಿಕ್ಸ್ ಅಕಾಡೆಮಿ 6 ಚಿನ್ನ, 2 ಬೆಳ್ಳಿ, 4 ಕಂಚಿನ ಪದಕದೊಂದಿಗೆ ಒಟ್ಟು 12 ಪದಕಗಳನ್ನು ಪಡೆದು ಉತ್ತಮ ಸಾಧನೆ ತೋರಿದ್ದಾರೆ. 8 ವರ್ಷ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಭವಿಷ್ಯ – ಬಾಲ್ ಥ್ರೋ ನಲ್ಲಿ ಚಿನ್ನದ ಪದಕ, ಪ್ರಾರ್ಥನಾ […]
ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ಶ್ರದ್ದಾ ಎಸ್ ಮೊಗವೀರ ದ್ವಿತೀಯ ಪಿ.ಯು.ಸಿ.ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ್ಯಾಂಕ್
ಹೆಮ್ಮಾಡಿ (ಮೇ ,15): ಪದವಿಪೂರ್ವ ಶಿಕ್ಷಣ ಮಂಡಳಿಯವರು ಆಯೋಜಿಸಿದ 2ನೇ ಹಂತದ ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರದ್ಧಾ ಎಸ್ ಮೊಗವೀರ 595 /600 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯ ಮಟ್ಟದಲ್ಲಿ 5ನೇ ರ್ಯಾಂಕ್ ಪಡೆದು ಶೈಕ್ಷಣಿಕ ಸಾಧನೆ ಮೆರೆದಿದ್ದಾರೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.










