ಕುಂದಾಪುರ(ಫೆ,27): ಕೊಳಲು ನುಡಿಸುವುದರ ಮೂಲಕ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪಡೆದು ಅದ್ವಿತೀಯ ಸಾಧನೆಗೈದ ಗಂಗೊಳ್ಳಿಯ ಮಾಸ್ಟರ್ ಶ್ಯಾಮ್ ತನ್ನ 14 ನೆ ವಯಸ್ಸಿನಲ್ಲಿಯೇ ವಿಭಿನ್ನ ರಾಗಗಳನ್ನು ಕೊಳಲಿನಲ್ಲಿ ಒಂದು ನಿಮಿಷದಲ್ಲಿ ನುಡಿಸಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆ ನಿರ್ಮಿಸಿದ್ದಾನೆ. 2024ನೇ ಸಾಲಿನ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ ಸ್ವೀಕರಿಸಿ ಈಗ ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆ ಮಾಡಿರುವ ಈತ ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು […]
Year: 2025
ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ : ಕ್ರಿಯೇಟಿವ್ ವಿದ್ಯಾರ್ಥಿಗಳಿಂದ ಸಾಧನೆ
ಬಿ ಆರ್ಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ತೇಜಸ್ ವಿ ನಾಯಕ್ 99.4223451 ಪರ್ಸೆಂಟೈಲ್, ಸಾಚಿ ಶಿವಕುಮಾರ್ ಕಡಿ 99.3362631 ಪರ್ಸೆಂಟೈಲ್ ಗಳಿಸಿ ಉತ್ತಮ ಸಾಧನೆಗೈದಿದ್ದಾರೆ.ಬಿ ಪ್ಲಾನಿಂಗ್ ಫಲಿತಾಂಶದಲ್ಲಿ ತೇಜಸ್ ವಿ ನಾಯಕ್ 99.5751775 ಪರ್ಸೆಂಟೈಲ್ ಗಳಿಸಿದ್ದಾರೆ. ಹೀಗೆ ಒಟ್ಟು ಫಲಿತಾಂಶದಲ್ಲಿ 99 ಪರ್ಸೆಂಟೈಲಿಗಿಂತ ಅಧಿಕ 2 ವಿದ್ಯಾರ್ಥಿಗಳು, 97 ರಿಂದ ಅಧಿಕ 3, 95ಕ್ಕಿಂತ ಅಧಿಕ 8 ಹಾಗೂ 16 ವಿದ್ಯಾರ್ಥಿಗಳು 90 ಪರ್ಸೆಂಟೈಲಿಗಿಂತ ಅಧಿಕ ಫಲಿತಾಂಶವನ್ನು ದಾಖಲಿಸಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಯನ್ನು […]
ಸಿ.ಎಸ್. ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಉನ್ನತ ಸಾಧನೆಗೈದ ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ (ಫೆ. 25): ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಎಕ್ಸಿಕ್ಯೂಟಿವ್ ಗ್ರೂಪ್ 1 ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿಯೇ ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ಜಪ್ತಿಯ ಶಶಿಧರ ಉಡುಪ ಹಾಗೂ ಕಾವೇರಿ ಉಡುಪ ಅವರ ಪುತ್ರನಾದ ಶ್ರೀಕಾಂತ್ ಉಡುಪ ಹಾಗೂ ಶಿರೂರಿನ ರಾಜು ಪೂಜಾರಿ ಹಾಗೂ ಸುಶೀಲ ಪೂಜಾರಿ ಅವರ ಪುತ್ರನಾದ ನಿಖಿಲ್ ಆರ್. ಪೂಜಾರಿ […]
ಸಿ.ಎಸ್. ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ
ಕುಂದಾಪುರ (ಫೆ. 25): ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಎಕ್ಸಿಕ್ಯೂಟಿವ್ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ, ಹಾಲಾಡಿಯ ಸಂಜೀವ ಹಾಗೂ ಹೇಮಾವತಿ ದಂಪತಿಗಳ ಪುತ್ರಿಯಾದ ಸುಷ್ಮಾ ಇವರು ಸಿ.ಎಸ್. ಎಕ್ಸಿಕ್ಯೂಟಿವ್ ಗ್ರೂಪ್ 1 ಹಾಗೂ ಗ್ರೂಪ್ 2 ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿರುವಾಗಲೇ ಪದವಿಯ ಜೊತೆಗೆ ಅSಇಇಖಿ […]
ವಕ್ವಾಡಿ: ರಕ್ತದಾನ ಶಿಬಿರ ಸಂಪನ್ನ
ಕೋಟೇಶ್ವರ( ಫೆ .27): ವಕ್ವಾಡಿ ಫ್ರೆಂಡ್ ವಕ್ವಾಡಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಕಾರದಲ್ಲಿ ಫೆಬ್ರವರಿ 23 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಭಾಂಗಣ ವಕ್ವಾಡಿಯಲ್ಲಿ ನಡೆಯಿತು. ಈ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಕೀಲರಾದ ಸತೀಶ್ಚಂದ್ರ ಕಾಳಾವರ್ಕಾರ್, ಸಂಪತ್ ಕುಮಾರ್ ಶೆಟ್ಟಿ ಶಾನಾಡಿ,ಗಜೇಂದ್ರ ಶೆಟ್ಟಿ ವಕ್ವಾಡಿ, ರಕ್ತದ ಆಪತ್ಬಾಂದವ ಸತೀಶ್ ಸಾಲ್ಯಾನ್ […]
ಕುಂದಾಪುರ: ಮಹಿಳೆಯರಿಗಾಗಿ ಫಿಟ್ಬಿಟ್ಸ್ ಯೋಗ ಮತ್ತು ಫಿಟ್ನೆಸ್ ಡ್ಯಾನ್ಸ್ ಕ್ಲಾಸ್
ಕುಂದಾಪುರ(ಫೆ. 26):ಇಲ್ಲಿನ ಚರ್ಚ್ ರೋಡ್ ಸಮೀಪದ ಮಾತೃಛಾಯಾ ಕಟ್ಟಡದ ಪ್ರಥಮ ಮಹಡಿಯಲ್ಲಿ ಮಹಿಳೆಯರಿಗಾಗಿ ಫಿಟ್ಬಿಟ್ಸ್ ಯೋಗ ಮತ್ತು ಫಿಟ್ನೆಸ್ ಡ್ಯಾನ್ಸ್ ಕ್ಲಾಸ್ ಪ್ರಾರಂಭಗೊಂಡಿದೆ. ದೈಹಿಕ ಹಾಗೂ ಮಾನಸಿಕ ಅರೋಗ್ಯ ವೃದ್ಧಿಸಿಕೊಳ್ಳುವ ಸಲುವಾಗಿ ಪ್ರಾರಂಭಗೊಂಡ ಈ ಫಿಟ್ಬಿಟ್ಸ್ ಯೋಗ ಮತ್ತು ಫಿಟ್ನೆಸ್ ಡ್ಯಾನ್ಸ್ ಕ್ಲಾಸ್ ನ ಪ್ರಯೋಜನವನ್ನು ಮಹಿಳೆಯರು ಪಡೆದುಕೊಳ್ಳುವಂತೆ ತರಬೇತುದಾರರಾದ ಶ್ರೀಮತಿ ರೇವತಿ ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಿಗ್ಗೆ ಯ ಬ್ಯಾಚ್ :ಸಮಯ 6 ರಿಂದ 7 ಗಂಟೆ ತನಕಸಂಜೆ […]
ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ: 80 ನೇ ಶಿವರಾತ್ರಿ ಮಹೋತ್ಸವ ಹಾಗೂ ಕುಣಿತ ಭಜನಾ ಸ್ಪರ್ಧೆ
ಗಂಗೊಳ್ಳಿ ( ಫೆ .216): ಇಲ್ಲಿನ ಶ್ರೀ ಇಂದುಧರ ದೇವಸ್ಥಾನ ಇದರ 80ನೇ ಮಹಾಶಿವರಾತ್ರಿ ಮಹೋತ್ಸವದ ಪ್ರಯುಕ್ತ ಫೆಬ್ರವರಿ 25ರಂದು ಸಂಜೆ, 7:00ರಿಂದ ಅಂತರ್ ಜಿಲ್ಲಾ ಮಟ್ಟದ ಕುಣಿತ ಸ್ಪರ್ಧೆಯನ್ನು ಆಯೋಜಿಸಲಾಯಿತು. ಧಾರ್ಮಿಕ ಮುಖಂಡರಾದ ಬಿ. ಸದಾನಂದ ಶೆಣೈಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗಂಗೊಳ್ಳಿ ಪರ್ಶಿನ್ ಬೋಟ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ ಶ್ರೀ ಲಕ್ಷ್ಮಿನಾರಾಯಣ ಮಡಿವಾಳರವರು ಕುಣಿತ ಭಜನೆ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ […]
ಬಿ. ಬಿ. ಹೆಗ್ಡೆ ಕಾಲೇಜು: ಪ್ರಾಕ್ತನ ವಿದ್ಯಾರ್ಥಿಗಳಿಂದ ವೆಹಿಕಲ್ ಶೆಲ್ಟರ್ ಕೊಡುಗೆ
ಕುಂದಾಪುರ( ಫೆ.24): ಕುಂದಾಪುರ ಎಜುಕೇಷನ್ ಸೊಸೈಟಿಯ ಸುವರ್ಣ ಸಂಭ್ರಮದ ಅಂಗವಾಗಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿಗೆ ಕೊಡ ಮಾಡಿದ ವೆಹಿಕಲ್ ಶೆಲ್ಟರ್ ಅನ್ನು ಕುಂದಾಪುರದ ನಿವೃತ್ತ ಪ್ರಾಂಶುಪಾಲರಾದ ಡಾ. ಜಿ. ಎಚ್. ಪ್ರಭಾಕರ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕುಂದಾಪುರ ಎಜುಕೇಷನ್ ಸೊಸೈಟಿಯ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ […]
ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ
ಗಂಗೊಳ್ಳಿ(ಫೆ,25):ಅವಕಾಶ ಫೌಂಡೇಶನ್ ತನ್ನ ದಶಮಾನೋತ್ಸವದ ಅಂಗವಾಗಿ ಇತ್ತೀಚಿಗೆ ಅಮಾವಾಸೆ ಬೈಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಆರರಿಂದ ಎಂಟನೇ ತರಗತಿಯವರೆಗಿನ ವಿದ್ಯಾರ್ಥಿಗಳ ವಿಭಾಗದ ಗ್ರಾಮೀಣ ಜೀವನ ಕುರಿತಾದ ಚಿತ್ರಕಲಾ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗ ಇವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಇವರು ಗಂಗೊಳ್ಳಿಯ ಸ್ಯಾಕ್ಸೋಫೋನ್ ಕಲಾವಿದ ಮಾಧವ ದೇವಾಡಿಗ ಮತ್ತು ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ […]
ಜೆಇಇ ಮೈನ್ (ಬಿ.ಆರ್ಕ್) ಫಲಿತಾಂಶ : ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ,22 ವಿದ್ಯಾರ್ಥಿಗಳಿಗೆ 95ಕ್ಕಿಂತ ಅಧಿಕ ಪರ್ಸಂಟೈಲ್
ಕಾರ್ಕಳ(ಫೆ,24):ರಾಷ್ಟ್ರಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕ್ನ ಮೊದಲ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 22 ವಿದ್ಯಾರ್ಥಿಗಳಿಗೆ 95ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಕೆ.ಮನೋಜ್ ಕಾಮತ್ 99.8233055 ಪರ್ಸಂಟೈಲ್, ದರ್ಶನ್ ಡಿ ಬಾಯಾರ್ 99.6466111 ಪರ್ಸಂಟೈಲ್, ಚಿಂತನ ಜೆ. ಮೆಘವತ್ 99.2615078 ಪರ್ಸಂಟೈಲ್, ಆಕಾಶ್ ಎಚ್ ಪ್ರಭು 98.9987314 ಪರ್ಸಂಟೈಲ್, ಪ್ರಜ್ವಲ್ ನಾಯಕ್ 98.6430772 […]










