ಗಂಗೊಳ್ಳಿ (ಫೆ.18): “ ಬಾಲ್ಯದಿಂದಲೂ ನಮ್ಮನ್ನೆಲ್ಲ ಆಕರ್ಷಿಸಿದ ಕಲೆ ಯಕ್ಷಗಾನ. ಅಲ್ಲಿಯ ವೈವಿಧ್ಯಮಯವಾದ ವೇಷಭೂಷಣ ಮನಸ್ಸಿಗೆ ಬೆರಗು ಮತ್ತು ಅಚ್ಚರಿ ಹುಟ್ಟಿಸಿದ ಅಂಶ. ಯಾವುದೇ ಆಧುನಿಕ ಸೌಲಭ್ಯವಿಲ್ಲದ ಆ ಕಾಲದಲ್ಲಿ ಗ್ಯಾಸ್ ಲೈಟ್ ಗಳ ನೆರಳು ಬೆಳಕಿನಲ್ಲಿ ಕಲಾವಿದರು ಧರಿಸುತ್ತಿದ್ದ ಉಡುಗೆತೊಡುಗೆಗಳು, ಮುಖವರ್ಣಿಕೆ, ಕಿರೀಟ ಮೊದಲಾದವು ಪೌರಾಣಿಕ ಲೋಕವನ್ನೇ ಸೃಷ್ಟಿಸುತ್ತಿದ್ದವು. ಇಂದು ಕಾಲ ಬದಲಾಗಿದೆ. ಆದರೂ ಅಂದಿನ ಅದೇ ಆಕರ್ಷಣೆ ಯಕ್ಷಗಾನಕ್ಕಿದೆ. ಐವತ್ತರ ಸಂಭ್ರಮವನ್ನು ಆಚರಿಸುತ್ತಿರುವ ಸಾಲಿಗ್ರಾಮ ಮಕ್ಕಳ ಮೇಳವು […]
Year: 2025
ಇಂದಿನ ಸಮಾಜದಲ್ಲಿ ಹಣಕ್ಕೆ ಕೊರತೆಯಿಲ್ಲ, ಅಂತಃಕರಣದ ಕೊರತೆ ಇದೆ- ಪ್ರೋ.ಜಯದೇವ ಜಿ.ಎಸ್.
ಕುಂದಾಪುರ (ಫೆ.16): ಇಂದಿನ ಸಮಾಜದಲ್ಲಿ ಹಣಕ್ಕೆ ಕೊರತೆಯಿಲ್ಲ, ಅಂತಃಕರಣಕದ ಕೊರತೆ ಇದೆ. ಶಿಕ್ಷಕರಾದವರು ಮುಖ್ಯವಾಗಿ ಮಕ್ಕಳ ನಂಬಿಕೆಯನ್ನುಳಿಸಿಕೊಂಡು ಅವರನ್ನು ಅರ್ಥೈಸಿಕೊಂಡು ಕಾರ್ಯಪ್ರವೃತ್ತರಾಗಬೇಕು. ಆರೈಕೆ, ಕಾಳಜಿ ಮತ್ತು ಸ್ಥಿರತೆ ಈ ಅಂಶಗಳನ್ನು ಶಿಕ್ಷಕರು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಡಾ.ಜಿ.ಎಸ್ ಶಿವರುದ್ರಪ್ಪನವರ ಮಗ, ಚಾಮರಾಜನಗರದ ದೀನಬಂಧು ಟ್ರಸ್ಟ್ ನ ಸ್ಥಾಪಕರು, ಶಿಕ್ಷಣ ಚಿಂತಕರು, ಕವಿ, ಬರೆಹಗಾರರೂ ಆಗಿರುವ ಪ್ರೋ.ಜಯದೇವ ಜಿ.ಎಸ್ ರವರು ಹೇಳಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ […]
ಬನ್ನಾಡಿ ನೈರಿಬೆಟ್ಟು ದಿ| ಕಿಶೋರ್ ಹೆಗ್ಡೆ ಸಂಸ್ಮರಣೆ- “ಕಿಶೋರ ನೆನಪು”
ಬ್ರಹ್ಮಾವರ,(ಫೆ. 9): ವಡ್ಡರ್ಸೆಯ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಡೆದ ಯಕ್ಷಗಾನ ಪ್ರದರ್ಶನದ ಪೂರ್ವದಲ್ಲಿ ಬನ್ನಾಡಿ ನೈರಿಬೆಟ್ಟು ದಿ| ಕಿಶೋರ್ ಹೆಗ್ಡೆ ಸಂಸ್ಮರಣೆ ಕಾರ್ಯಕ್ರಮ ‘ಕಿಶೋರ ನೆನಪು’ ನಡೆಯಿತು. ದಿ| ಕಿಶೋರ್ ಹೆಗ್ಡೆ ಅವರು ಶ್ರೀ ಸಿದ್ದೇಶ್ವರ ಯಕ್ಷರಂಗ, ಬನ್ನಾಡಿ ಇದರ ಪ್ರಧಾನ ಕಲಾವಿದರಾಗಿದ್ದರು. ಯಕ್ಷಗಾನದ […]
ಫೆ. 22 ರಂದು ಕೋಡಿ ಬ್ಯಾರೀಸ್ ಕಾಲೇಜಿನಲ್ಲಿ ಬ್ರಹತ್ ಉದ್ಯೋಗ ಮೇಳ
ಕೋಡಿ(ಫೆ. 15): ಇಲ್ಲಿನ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ನಾಲೆಡ್ಜ್ ಕ್ಯಾಂಪಸ್ ನಲ್ಲಿ ಫೆಬ್ರವರಿ 22 ರಂದು ಬ್ರಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಬ್ರಹತ್ ಉದ್ಯೋಗ ಮೇಳದಲ್ಲಿ ವಿವಿಧ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕಂಪೆನಿಗಳು ಭಾಗವಹಿಸಲಿದೆ. ಎಲ್ಲಾ ಪದವಿ, ಮತ್ತು ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಹಾಗೂ 18 ವರ್ಷ ಮೇಲ್ಪಟ್ಟ SSLC, PUC, ITI & ಡಿಪ್ಲೋಮಾ ಅರ್ಹತೆ ಪಡೆದಿರುವವರಿಗೂ ಅವಕಾಶ ಕಲ್ಪಿಸಲಾಗಿದೆ. ಉಚಿತ ನೋಂದಣಿ ಕಲ್ಪಿಸಲಾಗಿದ್ದು […]
ಶಿಕ್ಷಣಕ್ಕೆ ಮನೆಮಾತಾದ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿಗೆ ಜೆಇಇ ಮೈನ್ಸ್ 2025 ಪ್ರವೇಶ ಪರೀಕ್ಷೆಯಲ್ಲಿ 98 ಪರ್ಸಂಟೈಲ್ ಗಿಂತ ಅಧಿಕ ಅಂಕಗಳು
ಹೆಮ್ಮಾಡಿ:(ಫೆ,16): ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಮೂರನೇ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ, ಜೆಇಇ ಮೈನ್ಸ್ 2025ರ ಮೊದಲನೇ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿ ಗಿರೀಶ್ ಪೈ 98.921 ಪರ್ಸಂಟೈಲ್, ನಿಶ್ಚಿತ್ 98.674 ಪರ್ಸಂಟೈಲ್, ಆಕಾಶ್ ಹೆಬ್ಬಾರ್ […]
ಯುವ ಬಂಟರ ಸಂಘ :ಸ್ವಾವಲಂಬಿ ಬದುಕು ಕಟ್ಟಿಕೊಂಡ ಹಿರಿಯ ಮಹಿಳಾ ಸಾಧಕಿಗೆ ಸನ್ಮಾನ
ಕುಂದಾಪುರ(ಫೆ,13): ಇಲ್ಲಿನ ಯುವ ಬಂಟರ ಸಂಘದ ಆಶ್ರಯದಲ್ಲಿ ಭಾರತದ ಪ್ರಥಮ ಮಹಿಳಾ ರಾಜ್ಯಪಾಲೆ, ಶ್ರೇಷ್ಠ ಕವಯತ್ರಿ, ಭಾರತದ ಕೋಗಿಲೆ ಸರೋಜಿನಿ ನಾಯ್ಡು ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸ್ವಾವಲಂಬಿ ಬದುಕು ಕಟ್ಟಿಕೊಂಡ ಉಪ್ಪಿನಕಾಯಿ ಅಜ್ಜಿ ಎಂದೇ ಖ್ಯಾತರಾದ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಐರಬೈಲು ನಿವಾಸಿ ಶ್ರೀಮತಿ ಗುಲಾಬಿ ಶೆಟ್ಟಿ ಅವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ […]
ವ್ಯಸನಿಗಳಿಗೆ ಸಮಾಜದಲ್ಲಿ ಬದುಕಿಲ್ಲ – ಡಾ. ಪಿ. ವಿ. ಭಂಡಾರಿ
ಕುಂದಾಪುರ(ಫೆ,10): ಮಾದಕ ವ್ಯಸನಿಗಳಿಗೆ ಸಮಾಜದಲ್ಲಿ ಬಹುಕಾಲ ಬದುಕಿಲ್ಲ. ಇಂತಹ ವಸ್ತುಗಳಿಂದ ವ್ಯಕ್ತಿಯ ನೋವು, ಸಂಕಟಗಳನ್ನು ಮರೆಯಲು ಸಾಧ್ಯವಿಲ್ಲ. ಸೃಜನಾತ್ಮಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೆ ವಿದ್ಯಾರ್ಥಿಗಳು ಕಲಿಕೆಯಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಡಾ. ಎ. ವಿ. ಬಾಳಿಗ ಸಮೂಹ ಸಂಸ್ಥೆಗಳ ನಿರ್ದೇಶಕರೂ, ಮನೋವೈದ್ಯರೂ ಆದ ಡಾ. ಪಿ. ವಿ. ಭಂಡಾರಿ ಮಾತನಾಡಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಆಂಗ್ಲ ಪ್ರಾಥಮಿಕ ಮತ್ತು ವಿ. ಕೆ. […]
ಜೆ.ಇ.ಇ (ಮೈನ್) ಫಲಿತಾಂಶ : ಕ್ರಿಯೇಟಿವ್ ವಿದ್ಯಾರ್ಥಿಗಳ ಉತ್ತಮ ಸಾಧನೆ
ಉಡುಪಿ(ಫೆ,10): ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) 2025 ಅರ್ಹತಾ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಚೇತನ್ ಗೌಡ ಎನ್.ಎಸ್ 99.4676491, ಸಾನಿಕ ಕೆ.ಎನ್ 99. 2028725, ಎಂ. ಮಂಜುನಾಥ್ 99.0174525, ಮೋಹಿತ್ ಎಂ 99.1632262, ಎಚ್. ಎ ರಾಜೇಶ್ 99.1055485, ಪರ್ಸಂಟೈಲ್ ಗಳಿಸಿರುತ್ತಾರೆ. ಸಂಸ್ಥೆಯು ಆರಂಭದ ವರ್ಷದಿಂದಲೇ […]
ಕುಂದಾಪುರ ಯುವ ಬಂಟರ ಸಂಘದಿಂದ ಕೊಡುಗೆ
ಕುಂದಾಪುರ (ಫೆ, 05):ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಉಡುಪಿಯ ಕೊಳಲಗಿರಿಯ ಸಮೀಪ ಇರುವ ಹೋಂ ಡಾಕ್ಟರ್ ಫೌಂಡೇಶನ್ ನ ಆಡಳಿತಕ್ಕೂಳಪಟ್ಟ ಸ್ವರ್ಗ ಅಸಹಾಯಕರ ಅರಮನೆ ಅನಾಥಾಶ್ರಮಕ್ಕೆ 35000 ರೂಪಾಯಿ ಮೌಲ್ಯದ ಶುದ್ಧ ಕುಡಿಯುವ ನೀರಿನ ವಾಟರ್ ಫಿಲ್ಟರ್ ಹಾಗೂ ಆಶ್ರಮಕ್ಕೆ ಬೇಕಾದ 10000 ರೂಪಾಯಿ ಮೌಲ್ಯದ ದಿನಚರಿ ವಸ್ತುಗಳನ್ನು ಕೊಡುಗೆಯಾಗಿ ನೀಡಿದರು. ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ ವತ್ಸಲಾ ದಯಾನಂದ ಶೆಟ್ಟಿ ಹೋಮ್ ಡಾಕ್ಟರ್ ಫೌಂಡೇಶನ್ ನ ಆಡಳಿತ […]
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಂಪಾರು ಮೂರು ಕೈ : ಸ್ಮಾರ್ಟ್ ಕ್ಲಾಸ್ ಉದ್ಘಾಟನೆ
ಅoಪಾರು(ಫೆ,13): ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಂಪಾರು ಮೂರು ಕೈ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮ ಫೆಬ್ರವರಿ 08 ರಂದು ನಡೆಯಿತು. ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀಮತಿಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಭಾ ಕಾರ್ಯಕ್ರಮವನ್ನು ಪಂಚಾಯಿತಿ ಅಧ್ಯಕ್ಷರಾದ ಶ್ರೀಯುತ ಗೋಪಾಲಕೃಷ್ಣ ಕಿಣಿ ಇವರು ಉದ್ಘಾಟಿಸಿದರು. ಸ್ಮಾರ್ಟ್ ಕ್ಲಾಸ್ ಶ್ರೀಯುತ ತಿಮ್ಮಪ್ಪ ಶೆಟ್ಟಿ ಉದ್ಘಾಟಿಸಿದರು. ಸಿದ್ವಿನ್ ಔಟೋ ಟೆಕ್ ಕಂಪನಿ ಬೆಂಗಳೂರು ಇಲ್ಲಿಯ ಇಂಜಿನಿಯರ್ ಮನೀಶ್ ನಾಯಕ್ […]










