ಕಾರ್ಕಳ( ಜೂ ,18): 2026-27ನೇ ಸಾಲಿನ JOSAA ಕೌನ್ಸೆಲಿಂಗ್ನ ಮೊದಲ ಸುತ್ತಿನ ಸೀಟ್ ಹಂಚಿಕೆ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 26 ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಆಯ್ಕೆಯಾಗಿದ್ದಾರೆ. ಆಯ್ಕೆಯಾದವರಲ್ಲಿ 4 ವಿದ್ಯಾರ್ಥಿಗಳು ಐ.ಐ.ಟಿ, 9 ವಿದ್ಯಾರ್ಥಿಗಳು ಎನ್.ಐ.ಟಿ ಹಾಗೂ 13 ವಿದ್ಯಾರ್ಥಿಗಳು ಐ.ಐ.ಐ.ಟಿ ಸಂಸ್ಥೆಗಳಿಗೆ ಪ್ರವೇಶ ಪಡೆದಿದ್ದಾರೆ. ಐ.ಐ.ಟಿ ಪ್ರವೇಶ ಪಡೆದ ವಿದ್ಯಾರ್ಥಿಗಳು: ನಾಗದೇವ್ […]
Day: June 23, 2026
ಕುಂದಾಪುರ: ಎಚ್.ಎಂ.ಎಂ. ಪೂರ್ವ ಪ್ರಾಥಮಿಕ ವಿಭಾಗ ಆರಂಭೋತ್ಸವ
ಕುಂದಾಪುರ(ಜೂ,20): ಕುಂದಾಪುರ ಎಜುಕೇಶನ್ ಸೊಸೈಟಿ ಪೂರ್ವ ಪ್ರಾಥಮಿಕ ವಿಭಾಗದ ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಮಕ್ಕಳಿಗೆ ಮತ್ತು ಪೋಷಕರಿಗೆ ಆತ್ಮೀಯ ಸ್ವಾಗತ ಕೋರಿ, ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ .ಜಿ. ಭಟ್ ಹಾಗೂ ತರಗತಿ ಶಿಕ್ಷಕರೆಲ್ಲರೂ ಸೇರಿ, ಮಕ್ಕಳಿಗೆ ಆರತಿ ಎತ್ತಿ ಪ್ರೀತಿಯಿಂದ ಬರಮಾಡಿಕೊಂಡರು. […]
ಡಾ. ಬಿ.ಬಿ.ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಸಿ.ಎ. ಫೈನಲ್ನಲ್ಲಿ ತೇರ್ಗಡೆ
ಕುಂದಾಪುರ(ಜೂ,22): ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆoಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಸಿ.ಎ. ಫೈನಲ್ ಮೇ 2026ರ ಪರೀಕ್ಷೆಯಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿನಿ ಶ್ರಾವ್ಯ ಶೆಟ್ಟಿ ಅವರು ಚೊಚ್ಚಲ ಪ್ರಯತ್ನದಲ್ಲಿಯೇ ಸಿ.ಎ. ಪರೀಕ್ಷೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗುವ ಮೂಲಕ ದಾಖಲೆ ನಿರ್ಮಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಸಿ.ಎ. ಪರೀಕ್ಷೆಯು ದೇಶದ ಅತ್ಯಂತ ಪ್ರತಿಷ್ಠಿತ ಹಾಗೂ ಸವಾಲಿನ ವೃತ್ತಿಪರ ಪರೀಕ್ಷೆಗಳಲ್ಲಿ […]
ಕುಂದಾಪುರ : ಎಚ್.ಎಂ.ಎಂ. ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕ-ಪೋಷಕ ಸಭೆ
ಕುಂದಾಪುರ (ಜೂ,22): ಕುಂದಾಪುರ ಎಜುಕೇಶನ್ ಸೊಸೈಟಿ ಪೂರ್ವ ಪ್ರಾಥಮಿಕ ವಿಭಾಗದ ಹೊಸ ಶೈಕ್ಷಣಿಕ ವರ್ಷದ ಮೊದಲ ಸಭೆಜೂನ್ 22 ರಂದು ನಡೆಯಿತು. ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಮಕ್ಕಳಿಗೆ ಮತ್ತು ಪೋಷಕರಿಗೆ ಆತ್ಮೀಯ ಸ್ವಾಗತ ಕೋರಿ, ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು.ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ .ಜಿ. ಭಟ್ ಶಾಲೆಯ ಹೊಸ ಶೈಕ್ಷಣಿಕ ವರ್ಷದ ಯೋಜನೆ ಹಾಗೂ ಯೋಚನೆಗಳನ್ನು ಮಂಡಿಸಿದರು. ಸಹಾಯಕ […]










