ಕುಂದಾಪುರ(ಜ,21): ಬಿ.ಬಿ.ಹೆಗ್ಡೆ ಕಾಲೇಜಿನ ತರಬೇತಿ ಮತ್ತು ನೇಮಕಾತಿ ವಿಭಾಗವು ಯಕ್ಷಿ ಟೆಕ್ ಸೊಲ್ಯೂಶನಸ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಜೊತೆಗಿನ ಸಹಯೋಗದಲ್ಲಿ ಜನವರಿ 17 ರಂದು ಕಾಲೇಜು ಆವರಣದಲ್ಲಿ ಯಶಸ್ವಿಯಾಗಿ ಇಂಟರ್ನ್ಶಿಪ್ ಡ್ರೈವ್ನ್ನು ಆಯೋಜಿಸಿತು. ಕಂಪ್ಯೂಟರ್ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ವಿಭಾಗ ಮುಖ್ಯಸ್ಥ ಶ್ರೀ ಮಹೇಶ್ ಕುಮಾರ್ ಸ್ವಾಗತಿಸಿ, ಇಂಟರ್ನ್ಶಿಪ್ ಮೂಲಕ ತರಬೇತಿ ಪಡೆಯುವ ಮಹತ್ವವನ್ನು ವಿವರಿಸುವ ಮೂಲಕ ಪ್ರಾರಂಭಿಸಿದರು. ಯಕ್ಷಿ ಟೆಕ್ ಸೊಲ್ಯೂಶನಸ್ ಸಂಸ್ಥೆಯ ಪ್ರತಿನಿಧಿ ಶ್ರೀ […]
Tag: bbhc
ಡಾ| ಚೇತನ್ ಶೆಟ್ಟಿ ಕೋವಾಡಿ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ
ಕುಂದಾಪುರ(ಜ.11): ಸೇವಾ ಚೇತನ ಟ್ರಸ್ಟ್ (ರಿ.), ಮೂಡುಬಗೆ ಅಂಪಾರು ಇದರ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಜನವರಿ 11ರಂದು ಅಂಪಾರು ಮೂಡುಬಗೆ ಶಾನ್ಕಟ್ಟು ಮೈದಾನದಲ್ಲಿ ನಡೆದ ‘ನಮ್ಮೂರ ಸಂಭ್ರಮ’ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಚಿಂತಕ, ವಾಗ್ಮಿ ಪ್ರಾಧ್ಯಾಪಕ ಕುಂದಾಪುರದ ಡಾ| ಬಿ. ಬಿ .ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ ಅವರಿಗೆ 2024ರ ನಮ್ಮೂರ ‘ಶಿಕ್ಷಣ ರತ್ನ’ ಪ್ರಶಸ್ತಿಯನ್ನು ಹಿರಿಯ ಉದ್ಯಮಿ ಶ್ರೀ ಆನಗಳ್ಳಿ ಕರುಣಾಕರ ಹೆಗ್ಡೆ […]
ಸಿ.ಎಮ್.ಎ ಫೌಂಡೇಷನ್ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದ ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ (ಜ.10): ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸುವ ಪ್ರಾರಂಭಿಕ ಹಂತದ CMA ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿಯೇ ಉತ್ಕೃಷ್ಟ ಸಾಧನೆಗೈದಿದ್ದಾರೆ. ವೈಷ್ಣವಿ ಹಾಗೂ ಕಾರ್ತಿಕ್ ಕೆ. ಬಿಲ್ಲವ ಇವರು ಸಿ.ಎಂ.ಎ. ಇಂಟರ್ಮೀಡಿಯೇಟ್ ಪ್ರೋಗ್ರಾಮ್ಗೆ ಅರ್ಹತೆ ಪಡೆದಿದ್ದಾರೆ. ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ನುರಿತ ತರಬೇತುದಾರರಿಂದ […]
ಬಿ.ಬಿ. ಹೆಗ್ಡೆಕಾಲೇಜಿನ ಸಚಿನ್ ಆಚಾರ್ ಕುಂಭಾಶಿ ರಾಜ್ಯ ಗಣರಾಜ್ಯೋತ್ಸವ ಪೆರೇಡ್ಗೆ ಆಯ್ಕೆ
ಕುಂದಾಪುರ (ಜ.07): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕ ಕುಂಭಾಶಿಯ ಶ್ರೀಧರ್ ಆಚಾರ್ ಮತ್ತು ಹೇಮಲತಾ ಅವರ ಪುತ್ರನಾದ ಸಚಿನ್ ಆಚಾರ್, ದ್ವಿತೀಯ ಬಿ.ಸಿ.ಎ. (ಬಿ) ಇವರು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ […]
ಬಿ.ಬಿ. ಹೆಗ್ಡೆಕಾಲೇಜು: ಕೆ. ಗಾಯತ್ರಿ ಶೇಟ್ ರವರಿಗೆ ಗೌರವಾರ್ಪಣೆ
ಕುಂದಾಪುರ (ಜನವರಿ 3): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನ ಸಂಘದ ಆಶ್ರಯದಲ್ಲಿ ವಯೋನಿವೃತ್ತಿ ಹೊಂದಿದ ಕಾಲೇಜಿನ ಕಚೇರಿ ಅಧೀಕ್ಷಕರಾದ ಕೆ. ಗಾಯತ್ರಿ ಶೇಟ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಕೆ. ಗಾಯತ್ರಿ ಶೇಟ್ ಅವರು ನಮ್ಮ ಸಂಸ್ಥೆ ಆರಂಭಗೊಂಡ ದಿನದಿಂದಲೇ ಕಚೇರಿ ಸಿಬ್ಬಂದಿಯಾಗಿ ಸೇರ್ಪಡೆಗೊಂಡು ಬೇರೆ-ಬೇರೆ ಹುದ್ದೆಗಳನ್ನು ನಿಭಾಯಿಸಿ, ಕಚೇರಿ […]
ಬಿ. ಬಿ. ಹೆಗ್ಡೆ ಕಾಲೇಜಿನ ಸಾಂಸ್ಕೃತಿಕ ತಂಡದ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ಡಿ.30): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಜನಪದ ಗೀತೆ (ಗುಂಪು ವಿಭಾಗ) ಸ್ಪರ್ಧೆಗೆ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿರುವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ಶ್ರೀಮತಿ ದೀಪಿಕಾ ಜಿ., ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿನಿ ಶೃದ್ಧಾ ಆರ್ .ಸಾಧನೆ
ಕುಂದಾಪುರ ಡಿ.30: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ‘ಘೋಷಣೆ’ ಸ್ಪರ್ಧೆಗೆ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿರುವ ಕಾಲೇಜಿನ ವಿದ್ಯಾರ್ಥಿನಿ ಶೃದ್ಧಾ ಆರ್., ಅಂತಿಮ ಬಿಬಿಎ ಇವರಿಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ಶ್ರೀಮತಿ ದೀಪಿಕಾ ಜಿ., ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಶ್ರೀ ಬಿ.ಅಪ್ಪಣ್ಣ ಹೆಗ್ಡೆಯವರ 90ನೇ ಜನ್ಮದಿನದ ಸಂಭ್ರಮಾಚರಣೆ
ಕುಂದಾಪುರ (ಡಿ.24) : ಶ್ರೀ ಬಿ. ಅಪ್ಪಣ್ಣ ಹೆಗ್ಡೆಯವರ 90ನೇ ಜನ್ಮದಿನದ ಸಲುವಾಗಿ ಡಾ| ಬಸ್ರೂರು ಭುಜಂಗ ಹೆಗ್ಡೆ (ಬಿ.ಬಿ.ಹೆಗ್ಡೆ) ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಗೌರವಿಸಲಾಯಿತು. ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಮತ್ತು ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬಿ. ಬಿ. ಹೆಗ್ಡೆ ಕಾಲೇಜು : ಅಕ್ಷರ-ಅಕ್ಕರೆಯ ಹೊನಲು–ವಿಶೇಷ ಉಪನ್ಯಾಸ
ಕುಂದಾಪುರ (ಡಿ.03): ನಮ್ಮ ದೇಶಕ್ಕೆ ಇಂದು ಅಗತ್ಯವಿರುವುದು ಬರಿಯ ವಿದ್ಯಾವಂತರಲ್ಲ, ಪ್ರಾಮಾಣಿಕರು, ಸತ್ಯವಂತರು, ಸಚ್ಚಾರಿತ್ರ್ಯವುಳ್ಳವರ ಅಗತ್ಯವಿದೆ. ಇದು ಶಿಕ್ಷಣದಿಂದ ಸಾಧ್ಯವಾದಾಗ ಮಾತ್ರ ಶಿಕ್ಷಣ ನಿಜವಾದ ಅರ್ಥವಂತಿಕೆಯಿಂದ ಇರಲು ಸಾಧ್ಯ ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಸಂಸ್ಥಾಪಕರಾದ ಶ್ರೀ ಬಸವ ಕುಮಾರ ಪಾಟೀಲ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘ ಹಾಗೂ ಕುಂದಗನ್ನಡ ಸಂಘ ಆಯೋಜಿಸಿದ ‘ಅಕ್ಷರ-ಅಕ್ಕರೆಯ ಹೊನಲು’ ವಿಶೇಷ ಉಪನ್ಯಾಸ […]
ಬಿ. ಬಿ. ಹೆಗ್ಡೆ ಕಾಲೇಜು: ಸಿಬ್ಬಂದಿಗಳ ವಾರ್ಷಿಕ ಸಭೆ
ಕುಂದಾಪುರ (ಡಿ.09): ಸಂಸ್ಥೆಯ ಬೆಳವಣಿಗೆಗೆ ವಿದ್ಯಾರ್ಥಿಗಳಷ್ಟೇ ಸಿಬ್ಬಂದಿ ವರ್ಗದವರೂ ಮುಖ್ಯ. ಸಿಬ್ಬಂದಿ ಸಂಘದ ಮುಖೇನ ನಾವೆಲ್ಲರೂ ಸಮಾನ ಮನಸ್ಕರಾಗಿ ದುಡಿದಾಗ ಸಂಸ್ಥೆಯ ಯಶಸ್ಸು ಸಾಧ್ಯ ಎಂದು ಕಾಲೇಜಿನ ಪಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಕಾಲೇಜಿನ ಸಿಬ್ಬಂದಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ವಾರ್ಷಿಕ ಸಭೆಯನ್ನು ಉದ್ಧೇಶಿಸಿ ಮಾತನಾಡಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ಸಿಬ್ಬಂದಿ ಸಂಘದ ಕಾರ್ಯದರ್ಶಿ, ಕಾರ್ಯಕ್ರಮದ ಸಂಯೋಜಕ ಶ್ರೀ ಮಹೇಶ್ […]