ಕುಂದಾಪುರ (ನ.01): ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಪರಂಪರೆ ಹಿರಿದಾದುದ್ದು. ಹಳೆಗನ್ನಡ, ನಡುಗನ್ನಡ, ಹೊಸಗನ್ನಡ ಕಾಲಘಟ್ಟದ ಸಾಹಿತ್ಯದ ಸೃಜನಶೀಲ ಓದು ಕರ್ನಾಟಕದ ಭವ್ಯತೆಯನ್ನು ಪರಿಚಯಿಸುತ್ತದೆ ಎಂದು ಸಮುದಾಯ ಸಾಂಸ್ಕೃತಿಕ ಸಂಘಟನೆ ಕುಂದಾಪುರ ಇದರ ಅಧ್ಯಕ್ಷರಾದ ಡಾ| ಸದಾನಂದ ಬೈಂದೂರು ಹೇಳಿದರು. ಇವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ಸಂಘದ ಜಂಟಿ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಮಾತನಾಡಿದರು. […]
Tag: bbhc
ಡಾ|ಬಿ.ಬಿ.ಹೆಗ್ಡೆ ಕಾಲೇಜು: ‘ದಾಂಡಿಯಾ’ ಸಂಭ್ರಮ
ಕುoದಾಪುರ (ನ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತಕಲಾ ಸಂಘ ಮತ್ತು ಯೋಗ ಶಿಕ್ಷಣದ ಆಶ್ರಯದಲ್ಲಿ ನವರಾತ್ರಿಯ ವಿಶೇಷ ಆಚರಣೆಯಾದ ‘ದಾಂಡಿಯಾ’ವನ್ನು ಆಯೋಜಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ದಾಂಡಿಯಾ ನೃತ್ಯ ಪ್ರಸ್ತುತಪಡಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಲಲಿತಕಲಾ ಸಂಘದ ಸಂಯೋಜಕರಾದ ಶ್ರೀಮತಿ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: “ಸಂಗಮ” – ಸಿಬ್ಬಂದಿ ಕ್ರೀಡಾಕೂಟ
ಕುಂದಾಪುರ (ನ.01): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಿಬ್ಬಂದಿ ಸಂಘ ಆಯೋಜಿಸಿದ ಸಿಬ್ಬಂದಿಗಳ ಕ್ರೀಡಾಕೂಟ ‘ಸಂಗಮ – 2023’ಕ್ಕೆ ಕಾಲೇಜಿನ ಪ್ರಾಂಶುಪಾಲ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಚಾಲನೆ ನೀಡಿ ಶುಭಹಾರೈಸಿದರು. ಈ ಸಂದರ್ಭ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಸಿಬ್ಬಂದಿ ಸಂಘದ ಕಾರ್ಯದರ್ಶಿ ಶ್ರೀ ಮಹೇಶ್ ನಾಯ್ಕ್, ಬೋಧಕ-ಬೋಧಕೇತರರು ಉಪಸ್ಥಿತರಿದ್ದರು. ಪುರುಷರಿಗೆ ವಾಲಿಬಾಲ್, ಕ್ರಿಕೆಟ್, ಹಗ್ಗಜಗ್ಗಾಟ ಮತ್ತು ಗುಂಡು ಎಸೆತ […]
ಡಾ.ಬಿ.ಬಿ. ಹೆಗ್ಡೆ ಕಾಲೇಜು,ಎನ್.ಎಸ್.ಎಸ್ ಘಟಕ: ರಾಷ್ಟ್ರೀಯ ಏಕತಾ ದಿವಸ್- ಪ್ರತಿಜ್ಞೆ ಸ್ವೀಕಾರ
ಕುಂದಾಪುರ(ಆ,31):ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಸ್ವಾತಂತ್ರ್ಯ ಭಾರತದ ಪ್ರಥಮ ಗ್ರಹ ಸಚಿವ,ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಜನ್ಮ ದಿನಾಚರಣೆ ಸಲುವಾಗಿ ರಾಷ್ಟ್ರೀಯ ಏಕತಾ ದಿವಸ್ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಅಕ್ಟೋಬರ್ 31 ರಂದು ಕಾಲೇಜಿನ ಮೂಕಾಂಬಿಕ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಹಾಗೂ ಉಪಪ್ರಾಂಶುಪಾಲರು ಹಾಗೂ ಎನ್.ಎಸ್.ಎಸ್.ಯೋಜನಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದು, ನಿರ್ವಹಣಾ ವಿಭಾಗದ ಸಹ ಪ್ರಾಧ್ಯಾಪಕ ಪ್ರವೀಣ್ ಮೊಗವೀರ […]
ಡಾIಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಕನ್ನಡ ದೇಶಭಕ್ತಿ ಗೀತೆಗಳ ಸಮೂಹ ಗಾಯನ ಸ್ಪರ್ಧೆ
ಕುಂದಾಪುರ ( ಆ,31): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ಸಂಘದ ಜಂಟಿ ಆಶ್ರಯದಲ್ಲಿ ರಾಜ್ಯೋತ್ಸವದ ಪ್ರಯುಕ್ತ ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ ಶೀರ್ಷಿಕೆಯಡಿಯಲ್ಲಿ ಕನ್ನಡ ದೇಶಭಕ್ತಿ ಗೀತೆಗಳ ಸಮೂಹ ಗಾಯನ ಸ್ಪರ್ಧೆ ನಡೆಯಿತು. ಈ ಸಂಧರ್ಭದ್ಲಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು. ಉಪಪ್ರಾಂಶುಪಾಲ ಶ್ರೀ. ಚೇತನ್ ಶೆಟ್ಟಿ ಕೊವಾಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ […]
ಡಾIಬಿ.ಬಿ.ಹೆಗ್ಡೆ ಕಾಲೇಜು:ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ವಿಸ್ತರಣಾ ಚಟುವಟಿಕೆ
ಕುಂದಾಪುರ(ಆ,27): ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರದಲ್ಲಿ ವಿಸ್ತರಣಾ ಚಟುವಟಿಕೆ ಜರುಗಿತು. ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ತಂತ್ರಜ್ಞರಾದ ಶ್ರೀ ವೀರೇಂದ್ರರವರು ವಿದ್ಯಾರ್ಥಿಗಳಿಗೆ ರಕ್ತವನ್ನು ನೀಡಲು ಹೇಗೆ ಸಹಾಯಕರಾಗಬೇಕು ಜೊತೆಗೆ ರಕ್ತ ಸಂಗ್ರಹ, ಪರಿಷ್ಕರಣೆ, ಮತ್ತು ಸಂಗ್ರಹಿಸಿದ ರಕ್ತದ ಪ್ರಕ್ರಿಯೆಗಳನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದ ಸಭಾಪತಿಗಳಾದ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು ಎನ್.ಎಸ್.ಎಸ್ ಘಟಕ: ಹೂವಿನ ಕೋಲು ಪ್ರದರ್ಶನ
ಕುಂದಾಪುರ (ಅ. 24) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯಕ್ಷಗಾನ ಮತ್ತು ಕನ್ನಡ ಸಂಘದ ಆಶ್ರಯದಲ್ಲಿ ನವರಾತ್ರಿ ಪ್ರಯುಕ್ತ ಸಾಂಪ್ರದಾಯಿಕ ಹೂವಿನ ಕೋಲು ಪ್ರದರ್ಶನ ನಡೆಯಿತು. ‘ಕೃಷ್ಣಾರ್ಜುನ’ ಪ್ರಸಂಗವನ್ನು ಆಯ್ಕೆ ಮಾಡಿಕೊಂಡು ಅರ್ಜುನನಾಗಿ ಅಂತಿಮ ಬಿ.ಎಸ್ಸಿ.ಯ ಲಕ್ಷ್ಮೀಕಾಂತ್ ಯು. ಶೆಟ್ಟಿ, ಕೃಷ್ಣನಾಗಿ, ದ್ವಿತೀಯ ಬಿ.ಕಾಂ. (ಡಿ)ನ ಪವಿತ್ರ ಪೈ ಅರ್ಥ ಹೇಳಿದರು. ಭಾಗವತಿಕೆಯಲ್ಲಿ ದ್ವಿತೀಯ ಬಿ.ಸಿ.ಎ. (ಎ)ನ ಪೂಜಾ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು: ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ. ಘಟಕದ ವತಿಯಿಂದ ಆರೋಗ್ಯ ಅರಿವು ಕಾರ್ಯಕ್ರಮ
ಕುಂದಾಪುರ (ಅ. 25) : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಎನ್.ಸಿ.ಸಿ. ಘಟಕ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಮಾಹಿತಿ ಮತ್ತು ಶಿಕ್ಷಣ ವಿಭಾಗ, ಕುಂದಾಪುರ ತಾಲೂಕು ಆರೋಗ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಅರಿವು ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ ತಾಲೂಕು ಆರೋಗ್ಯ ಅಧಿಕಾರಿ ಡಾ| […]
ಡಾ|ಬಿ.ಬಿ.ಹೆಗ್ಡೆ ಕಾಲೇಜು : ರೋವರ್ಸ್ ಹಾಗೂ ರೇಂಜರ್ಸ್ ಘಟಕದಿಂದ ಸೇವಾ ಶಿಬಿರ
ಕುಂದಾಪುರ (ಅ.26): ಕರಾವಳಿಯ ಪ್ರಸಿದ್ಧ ಕ್ಷೇತ್ರವಾದ ಉಚ್ಚಿಲ ಮಹಾ ಲಕ್ಷ್ಮೀ ದೇವಸ್ಥಾನದ ದಸರಾ ಮಹೋತ್ಸವದ ಪ್ರಯುಕ್ತ ಕುಂದಾಪುರದ ಡಾ|ಬಿ.ಬಿ ಹೆಗ್ಡೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಸ್ವಯಂ ಸೇವಕರಿಂದ ಒಂದು ದಿನದ ಸೇವಾ ಶಿಬಿರವನ್ನು ಅಕ್ಟೋಬರ್ 22ರಂದು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಸ್ವಯಂಸೇವಕರು ಸಕ್ರಿಯವಾಗಿ ಈ ಶಿಬಿರದಲ್ಲಿ ಭಾಗವಹಿಸಿದ್ದರು.ಕಾಲೇಜಿನ ರೋವರ್ಸ್ ಘಟಕದ ಸಂಯೋಜಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ, ಶಿಬಿರವನ್ನು ಸಂಯೋಜಿಸಿದರು.ಜಿಲ್ಲಾ ಸ್ಕೌಟ ಮತ್ತು ಗೈಡ್ ಪ್ರಮುಖರಾದ ಶ್ರೀಮತಿ ಸುಮನ ಉಪಸ್ಥಿತರಿದ್ದರು.
ರಾಜ್ಯಮಟ್ಟದ ಎನ್ನೆಸ್ಸೆಸ್ ಯುವಜನೋತ್ಸವದಲ್ಲಿ ಡಾ Iಬಿ. ಬಿ. ಹೆಗ್ಡೆ ಕಾಲೇಜಿನ ಸ್ವಯಂಸೇವಕ ಮದನ್ ಎಮ್. ವಿ
ಕುoದಾಪುರ (ಅ.17) : ಅಕ್ಟೋಬರ್ 03 ರಿಂದ 07 ವರೆಗೆ ರಾಯಚೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕ ಮದನ್ ಎಮ್. ವಿ ಅವರು ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಿದ್ದಾರೆ. ವೈಯಕ್ತಿಕವಾಗಿ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ, ಗುಂಪು ಸ್ಪರ್ಧೆಯಲ್ಲಿ ವಸ್ತು ಪ್ರದರ್ಶನದಲ್ಲಿ ಪ್ರಥಮ, ಭಾವೈಕ್ಯತಾ ಮೆರವಣಿಗೆಯಲ್ಲಿ ದ್ವಿತೀಯ ಹಾಗೂ ಪ್ರಹಸನದಲ್ಲಿ […]