ಕುಂದಾಪುರ (ಸೆಪ್ಟೆಂಬರ್ 21) : ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ನಡೆಸಿದ ವಿಶ್ವವಿದ್ಯಾನಿಲಯ ವ್ಯಾಪ್ತಿಯ 220 ಕಾಲೇಜುಗಳ ಕ್ರೀಡಾ ರ್ಯಾಂಕಿoಗ್ನಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಪುರುಷ ವಿಭಾಗದಲ್ಲಿ 7ನೇ ರ್ಯಾಂಕ್ ಮಹಿಳೆಯರ ವಿಭಾಗದಲ್ಲಿ 11ನೇ ರ್ಯಾಂಕ್ ಪಡೆಯುವ ಮೂಲಕ ಸಮಗ್ರ 7ನೇ ರ್ಯಾಂಕ್ ಪಡೆದಿದೆ. ಉಡುಪಿ ಜಿಲ್ಲಾ ವ್ಯಾಪ್ತಿಯ ಕಾಲೇಜುಗಳಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಉತ್ಕೃಷ್ಟ ಸಾಧನೆಗೈದಿದೆ. ಕಾಲೇಜು ಆಡಳಿತ […]
Tag: bbhc
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಹಿoದಿ ದಿವಸ್ ಆಚರಣೆ
ಕುಂದಾಪುರ, (ಸೆ. 15): ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ, ಅದು ಸಂಸ್ಕೃತಿಯ ಪ್ರತೀಕ. ಹೀಗೆ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿ ರಾಷ್ಟ್ರದ ಅಧಿಕ್ರತ ಭಾಷೆಯಾದ ಹಿಂದಿಯನ್ನು ಕಾಣಬಹುದು. ಹೀಗಾಗಿ ಸಂಸ್ಕೃತಿ ಸಂಸ್ಕಾರವನ್ನು ಗೌರವಿಸಿ ಅನುಸರಿಸಿ ಎಂದು ಜಿ.ಎಮ್. ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆಯ ಹಿಂದಿ ಶಿಕ್ಷಕಿ ಶ್ರೀಮತಿ ಕಿರಣಾ ತಿವಾರಿ ಹೇಳಿದರು. ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಯೋಜಿಸಿದ ಹಿಂದಿ ದಿವಸ್ ಕಾರ್ಯಕ್ರಮದಲ್ಲಿ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು: ಸಂವಿಧಾನದ ಪ್ರಸ್ತಾವನೆ ಓದು ಕಾರ್ಯಕ್ರಮ
ಕುಂದಾಪುರ(ಸೆ.15): ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡ ಭಾರತ ಸಂವಿಧಾನದ ಪ್ರಸ್ತಾವನೆಯ ಓದು ಕಾರ್ಯಕ್ರಮವನ್ನು ಡಾ|ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ಸೆಪ್ಟೆಂಬರ್ 15ರಂದು ಆಚರಿಸಲಾಯಿತು. ಕಾಲೇಜಿನ ಸರ್ವಬೋಧಕ -ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆಯನ್ನು ಓದುವುದರ ಮುಖಾಂತರ ಪ್ರತಿಜ್ಞೆಗೈದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ .ಉಮೇಶ್ ಶೆಟ್ಟಿ ಹಾಗೂ ಉಪ ಪ್ರಾಂಶುಪಾಲರಾದ ಕೆ. ಚೇತನ್ ಶೆಟ್ಟಿ ಉಪಸ್ಥಿತರಿದ್ದರು.
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಬಿಸಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ.14): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಬಿಸಿಎ ವಿಭಾಗದ ವತಿಯಿಂದ ಪ್ರಥಮ ವರ್ಷದ ಪದವಿಗೆ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಸೆಪ್ಟೆಂಬರ್ 11ರಂದು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಶುಭಾಶಂಸನೆಗೈದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್ ಪ್ರಾಸ್ತಾವಿಸಿದರು. ವಿಭಾಗದ ಪ್ರಾಧ್ಯಾಪಕರು […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು,ಎನ್.ಎಸ್.ಎಸ್. ಘಟಕ : ಸ್ವಚ್ಛ ಸಂಗಮ್ -ಸ್ವಚ್ಛತಾ ಕಾರ್ಯ
ಕುಂದಾಪುರ (ಸೆ.13): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಸ್ವಚ್ಛತಾ ಪಖ್ವಾಡಾ ಯೋಜನೆಯಡಿಯಲ್ಲಿ ಸ್ವಚ್ಛ ಸಂಗಮ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜು ಸಮೀಪದ ಆನಗಳ್ಳಿ – ರಸ್ತೆ ದುರಸ್ತೆ, ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು,ಕುಂದಾಪುರ: ಹೂಡಿಕೆದಾರರ ಅರಿವು ಕಾರ್ಯಾಗಾರ
ಕುಂದಾಪುರ, (ಸೆ. 13): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕಾಮರ್ಸ್ ಟೀಚರ್ಸ್ ಅಸೋಸಿಯೇಶನ್ ವತಿಯಿಂದ ದ್ವಿತೀಯ ವರ್ಷದ ಬಿ.ಕಾಂ. ಮತ್ತು ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಹೂಡಿಕೆದಾರರ ಅರಿವು ಕಾರ್ಯಾಗಾರ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಜ್ಞಾನಾರ್ಜನೆಗೆ ಬಳಸಿಕೊಂಡ ಬಂಡವಾಳ ಭವಿಷ್ಯದ ದಾರಿದೀಪ ಎಂದು ವಿದ್ಯಾರ್ಥಿಗಳಿಗೆ ಹೂಡಿಕೆ ಬಗ್ಗೆ ಅರಿವು ಮೂಡಿಸಿದರು. […]
ಡಾI ಬಿ. ಬಿ. ಹೆಗ್ಡೆ ಕಾಲೇಜು – ಪ್ರಥಮ ವರ್ಷದ ಬಿ.ಕಾಂ. ವಿದ್ಯಾರ್ಥಿಗಳ ಪೂರ್ವ ಪರಿಚಯ ಕಾರ್ಯಕ್ರಮ
ಕುಂದಾಪುರ( ಸೆ.11): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಪ್ರಥಮ ವರ್ಷದ ಬಿ.ಕಾಂ. ವಿಧ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಬಿ.ಕಾಂ. ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಅಂಕಗಳೊಂದೆ ಮುಖ್ಯವಲ್ಲ ಜೊತೆಗೆ ಈ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯಧಾರಿತ ಶಿಕ್ಷಣ ತುಂಬಾ ಅವಶ್ಯಕ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು: ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ (ಸೆ.06): ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು ನಮ್ಮ ಬದುಕಿನಲ್ಲಿ ಸವಾಲುಗಳನ್ನು ಎದುರಿಸಲು ಪೂರಕವಾಗಿದೆ. ಜೀವನ ಕೌಶಲ್ಯದ ಜೊತೆಗೆ ಕ್ರೀಯಾಶೀಲತೆ, ಸೃಜನಶೀಲತೆ, ಸಂವಹನ ಕಲೆ, ನಾಯಕತ್ವಗುಣ ಬೆಳೆಸಿಕೊಳ್ಳಲು ಕಾಲೇಜಿನಲ್ಲಿರುವ ವಿವಿಧ ವೇದಿಕೆಗಳು ಅತ್ಯವಶ್ಯಕವಾದುದು. ಆ ನೆಲೆಯಲ್ಲಿ ವಿದ್ಯಾರ್ಥಿಗಳು ಗಂಭೀರವಾಗಿ ಚಿಂತಿಸಬೇಕು ಮತ್ತು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೆಸ್ಕತ್ತೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಂಗ್ಲೀಷ್ ಶಿಕ್ಷಕರು ಹಾಗೂ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶ್ರೀ ಅಶೋಕ್ ತೆಕ್ಕಟ್ಟೆ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ
ಕುಂದಾಪುರ (ಸೆ.08): ವಿದ್ಯಾರ್ಥಿ ಬದುಕಿನಲ್ಲಿ ಕನಸು ಕಾಣುವುದರ ಜೊತೆಗೆ ಅವಿರತ ಪ್ರಯತ್ನ ಇದ್ದಲ್ಲಿ ಮಾತ್ರ ಬದುಕು ರೂಪಿಸಿಕೊಳ್ಳಲು ಸಾಧ್ಯ. ಈ ಹಂತದಲ್ಲಿ ಕಾಣುವ ಕನಸೇ ನಿಮ್ಮಲ್ಲಿನ ಪ್ರತಿಭೆ ಹಾಗೂ ಸೃಜನಶೀಲತೆಗೆ ಉತ್ತೇಜನ ನೀಡುವುದು ಹೀಗಾಗಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕ್ರಿಯಾಶೀಲ ವಿದ್ಯಾರ್ಥಿಗಳ ಬೆಳವಣಿಗೆಗೆ ಸೇತುವೆಯಾಗಲಿ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ವೈದ್ಯರು ಹಾಗೂ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಡಾ| ಅಸೋಡು ಅನಂತರಾಮ ಶೆಟ್ಟಿಯವರು ಹೇಳಿದರು. ಅವರು ಇಲ್ಲಿನ ಡಾ| ಬಿ. […]
ಡಾ|ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ಎನ್.ಎಸ್.ಎಸ್. ಘಟಕದ ವತಿಯಿಂದ ನಿರ್ಮಲ ನಗರ ಅಭಿಯಾನ
ಕುಂದಾಪುರ (ಸೆ.09): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಪುರಸಭೆಯ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಪಖ್ವಾಡಾ ಕಾರ್ಯಕ್ರಮದಡಿಯಲ್ಲಿ ನಿರ್ಮಲ ನಗರ ಅಭಿಯಾನ ನಡೆಯಿತು. ಕುಂದಾಪುರ ಸಿಟಿ ಜೆಸಿಐನ ಸ್ಥಾಪಕಾಧ್ಯಕ್ಷ ಶ್ರೀ ಹುಸೇನ್ ಹೈಕಾಡಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪನ್ಯಾಸಕರಾದ ಶ್ರೀ ರಂಜಿತ್ ಟಿ.ಎನ್., ಪ್ರವೀಣ್ ಮೊಗವೀರ ಗಂಗೊಳ್ಳಿ, […]