ಕುಂದಾಪುರ (ಆ, 31): ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಗಸ್ಟ್ 27ರಿಂದ 31ರವರೆಗೆ ನಡೆದ ರಾಜ್ಯಮಟ್ಟದ ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಿದ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕ ಸುಜಯ್ ಶೆಟ್ಟಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ವೈಯಕ್ತಿಕವಾಗಿ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ, ಗುಂಪು ಸ್ಪರ್ಧೆಯಲ್ಲಿ ಪ್ರಹಸನ ಮತ್ತು ಸಮೂಹಗಾನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. 21 ವಿಶ್ವವಿದ್ಯಾನಿಲಯಗಳು […]
Tag: bbhc
ಬಿ. ಬಿ. ಹೆಗ್ಡೆ ಕಾಲೇಜು: ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಕುಂದಾಪುರ (ಆ, 29): ಕ್ರೀಡೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುತ್ತದೆ. ವಿದ್ಯಾರ್ಥಿಗಳು ಈ ವಯಸ್ಸಿನಲ್ಲಿ ದಿನಕ್ಕೆ ಒಂದು ಗಂಟೆಯಾದರೂ ಆಟದಲ್ಲಿ ತೊಡಗಿಕೊಂಡರೆ ಪಾಠವನ್ನು ಅರ್ಥೈಸಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ. ಮಿತವಾದ ಆಹಾರ ಪದ್ಧತಿಯೂ ಇದರಿಂದ ರೂಢಿಯಾಗುತ್ತದೆ. ಇವೆಲ್ಲವೂ ಕ್ರೀಡೆಯಿಂದ ಸಾಧ್ಯ ಎಂದು ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೀ ಸುಕುಮಾರ್ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ […]
ಬಿ. ಬಿ. ಹೆಗ್ಡೆ ಕಾಲೇಜು:“ಆತ್ಮವಿಶ್ವಾಸದಿಂದ ಇಂಗ್ಲೀಷ್ ಕಲಿಯಿರಿ” – ವಿಶೇಷ ಕಾರ್ಯಾಗಾರ
ಕುಂದಾಪುರ (ಆ, 28): ಜಾಗತೀಕರಣದ ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಭಾಷೆಯಾಗಿ ಮನ್ನಣೆ ಪಡೆದ ಇಂಗ್ಲೀಷ್ ಭಾಷೆಯ ಹಿಡಿತ ಅನಿವಾರ್ಯ. ಅದರಲ್ಲಿಯೂ ಪದವಿ ಶಿಕ್ಷಣದ ಸಂದರ್ಭದಲ್ಲಿ ಭಾಷಾ ಕೌಶಲ್ಯವನ್ನು ಬೆಳೆಸಿಕೊಂಡಾಗ ಮಾತ್ರ ಮುಂದಿನ ದಿನಗಳಲ್ಲಿ ಸರ್ವತೋಮುಖ ಯಶಸ್ಸು ಸಾಧ್ಯ ಎಂದು ಉಡುಪಿಯ ಎಮ್.ಜಿ.ಎಮ್. ಸಂಧ್ಯಾ ಕಾಲೇಜಿನ ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀ ಯಾಸಿನ್ ಮನ್ನಾ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ […]
ಬಿ.ಬಿ. ಹೆಗ್ಡೆ ಕಾಲೇಜು: ಮಧುಮೇಹ ಅರಿವು ಕಾರ್ಯಕ್ರಮ
ಕುಂದಾಪುರ (ಆಗಸ್ಟ್ 24): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘ, ಕುಂದಾಪುರ ತಾಲೂಕು ಇವರ ಸಹಯೋಗದೊಂದಿಗೆ ಮಧುಮೇಹ ಅರಿವು ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬಿಗ್ ಮೆಡಿಕಲ್ ಸೆಂಟರ್ ಉಡುಪಿ ಸಿಟಿ ಇಲ್ಲಿನ ವೈದ್ಯರಾದ ಡಾ| ಶ್ರುತಿ ಬಲ್ಲಾಳ್ ಕಾರ್ಯಕ್ರಮವನ್ನು ಉದ್ದೇಶಿಸಿ ಇತಿ-ಮಿತಿ ಆಹಾರ ಪದ್ಧತಿ ಹಾಗೂ ದೈನಂದಿನ […]
ಬಿ. ಬಿ. ಹೆಗ್ಡೆ ಕಾಲೇಜು : ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ
ಕುಂದಾಪುರ (ಆ,.12) : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯದಲ್ಲಿ ‘ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ’ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಗ್ರಂಥಾಲಯ ವಿಜ್ಞಾನದ ಪಿತಾಮಹ ಪದ್ಮಶ್ರೀ ಪುರಸ್ಕೃತ ಡಾ| ಎಸ್.ಆರ್. ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗ್ರಂಥಾಲಯವು ಜ್ಞಾನಾರ್ಜನೆಯೊಂದಿಗೆ ಶಿಸ್ತುಬದ್ಧ ಜೀವನ ಕೌಶಲ್ಯವನ್ನು ಬೆಳೆಸುವ ಸ್ಥಳ, ಹೀಗಾಗಿ ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು. ಈ […]
ಬಿ. ಬಿ. ಹೆಗ್ಡೆ ಕಾಲೇಜು : 78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ
ಕುಂದಾಪುರ (ಆ, 15): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಹಾಗೂ ನೇಚರ್ ಕ್ಲಬ್ ಘಟಕದ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶ್ರೀ ಬಿ. ಎನ್. ಶೆಟ್ಟಿ, ನಿವೃತ್ತ ಹೆಚ್ಚುವರಿ ಕಾರ್ಯದರ್ಶಿಗಳು, ಕರ್ನಾಟಕ ಸರ್ಕಾರ, ಕಾಲೇಜಿನ ಗವರ್ನಿಗ್ ಕೌನ್ಸಿಲ್ ಸದಸ್ಯರಾದ ಶ್ರೀ ಎನ್. ನಾರಾಯಣ್ ನಾಯಕ್, ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪ […]
ಬಿ.ಬಿ.ಹೆಗ್ಡೆ ಕಾಲೇಜು: ಪ್ರೇರಣಾ ಪೂರ್ವ ಪರಿಚಯ- “ಯಶಸ್ವಿ ವಿದ್ಯಾರ್ಥಿ ಜೀವನ”
ಕುಂದಾಪುರ (ಆಗಸ್ಟ್ 13): ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಜೀವನದಲ್ಲಿ ಗುರಿ ಬಹಳ ಮುಖ್ಯ. ಛಲ ಮತ್ತು ಗುರಿಗಳ ಸಂಯೋಗದೊಂದಿಗೆ ಗುಣಾತ್ಮಕ ಚಿಂತನೆ ಹಾಗೂ ಸಾಧನೆಯ ಸಫಲತೆಯನ್ನು ಹೆಚ್ಚಿಸುತ್ತದೆ ಎಂದು ಕೋಟ ವಿವೇಕ ವಿದ್ಯಾಸಂಸ್ಥೆಯ ಶಿಕ್ಷಕರಾಗಿರುವ ಶ್ರೀ ನರೇಂದ್ರ ಕುಮಾರ್ ಕೋಟ ಹೇಳಿದರು. ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಸಿದ […]
ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ:78ನೇ ಸ್ವಾತಂತ್ರ್ಯ ದಿನಾಚರಣೆ
ಕುಂದಾಪುರ (ಆ, 15): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್ಸಿಸಿ ಘಟಕದಲ್ಲಿ ಆಯೋಜಿಸಿದ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಕರ್ನಾಟಕ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳಾದ ಶ್ರೀ ಬಿ. ಎನ್. ಶೆಟ್ಟಿ, ನೆರವೇರಿಸಿದರು. ಶಿಕ್ಷಣದಿಂದ ರಾಷ್ಟ್ರಪ್ರೇಮವನ್ನು ಬೆಳೆಸುವ ಮೂಲಕ ಸದೃಢ ಭಾರತ ನಿರ್ಮಾಣ ಸಾಧ್ಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾಲೇಜಿನ ಗವರ್ನಿಗ್ ಕೌನ್ಸಿಲ್ ಸದಸ್ಯರಾದ ಶ್ರೀ ಎನ್. ನಾರಾಯಣ್ ನಾಯಕ್, ಪ್ರಾಂಶುಪಾಲರಾದ ಪ್ರೊ|ಕೆ. ಉಮೇಶ್ ಶೆಟ್ಟಿ, ಕಾಲೇಜಿನ […]
ಬಿ. ಬಿ. ಹೆಗ್ಡೆ ಕಾಲೇಜು :ಕೈಗಾರಿಕಾ ಭೇಟಿ
ಕುಂದಾಪುರ (ಆ, 10): ಕುಂದಾಪುರದ ಪ್ರತಿಷ್ಠಿತ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಮತ್ತು ಬೈಂದೂರು ಮಾಜಿ ಶಾಸಕರು ಹಾಗೂ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಮ್. ಸುಕುಮಾರ ಶೆಟ್ಟಿಯವರ ಕೈಗಾರಿಕೆಗಳಾದ ಮುಳ್ಳುಗುಡ್ಡೆ ಸೌಪರ್ಣಿಕ ಹೆಂಚಿನ ಕಾರ್ಖಾನೆ, ಸೌಪರ್ಣಿಕ ಡೆಕೋರೇಟಿವ್ ಟೈಲ್ಸ್, ಸೌಪರ್ಣಿಕ ಗೇರುಬೀಜ ಕಾರ್ಖಾನೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಯಿತು. ಪದವಿಪೂರ್ವ ಹಂತದಲ್ಲಿ ವಾಣಿಜ್ಯೇತರ ವಿಭಾಗಗಳಲ್ಲಿ ತೇರ್ಗಡೆಗೊಂಡು ಪ್ರಸ್ತುತ ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗದಲ್ಲಿ ಪ್ರವೇಶಾತಿ ಪಡೆದ […]
ಬಿ. ಬಿ. ಹೆಗ್ಡೆ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ‘ಪ್ರೇರಣಾ’- ಪರಿಚಯ ಕಾರ್ಯಕ್ರಮ
ಕುಂದಾಪುರ (ಆ, 12): ಪದವಿ ಪ್ರವೇಶಿಸಿದ ವಿದ್ಯಾರ್ಥಿಗಳು ಮೊಟ್ಟ ಮೊದಲು ಆಯ್ಕೆ ಮಾಡಿಕೊಂಡ ವಿಷಯವನ್ನು ಮತ್ತು ಸಂಸ್ಥೆಯನ್ನು ಪ್ರೀತಿಸಿ, ಆ ಮೂಲಕ ಕೇಳಿ ಕಲಿಯಲು ಆರಂಭಿಸುತ್ತೀರಿ. ಈ ಆರಂಭ ಹೊಸ ಆಲೋಚನೆಗಳನ್ನು ಹುಟ್ಟು ಹಾಕುವ ಮೂಲಕ ಸೃಜನಾತ್ಮಕವಾಗಿ ಬೆಳೆಯುವಿರಿ. ಆಗ ಪಡೆದ ಪದವಿ ಅರ್ಥಪೂರ್ಣವಾಗುತ್ತದೆ ಎಂದು ಉಡುಪಿಯ ಎಸ್.ಡಿ.ಎಮ್. ಆಯುರ್ವೇದ ಕಾಲೇಜಿನ ವೈದ್ಯಕೀಯ ಅಧೀಕ್ಷಕ ಡಾ| ನಾಗರಾಜ್ ಎಸ್. ಹೇಳಿದರು. ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ […]










