ಕುಂದಾಪುರ (ಮೇ 29): ಮಂಗಳೂರು ವಿಶ್ವವಿದ್ಯಾನಿಲಯದ ಜುಲೈ/ಆಗಸ್ಟ್ 2023ರ ಬಿ.ಕಾಂ. ಪದವಿ ಪರೀಕ್ಷೆಯಲ್ಲಿ ಪ್ರತೀಕ್ಷಾ ಶೆಟ್ಟಿ, D/o. ನಾರಾಯಣ ಶೆಟ್ಟಿ, ಉಳ್ಳೂರು-74, ಕುಂದಾಪುರ ಇವರು 9ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿಯವರು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಬೋಧಕ-ಬೋಧಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
Tag: bbhc
ಬಿ. ಬಿ. ಹೆಗ್ಡೆ ಕಾಲೇಜು: ಮಾಹಿತಿ ಕಾರ್ಯಾಗಾರ
ಕುಂದಾಪುರ (ಮೇ 23): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಇಕ್ವಲ್ ಅಪಾರ್ಚುನಿಟಿ ಸೆಲ್ ಆಶ್ರಯದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಇತರ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಶ್ರೀಮತಿ ಉಮಾಕಾಂತಿ, ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಕುಂದಾಪುರ ಅವರು ಮಾತನಾಡಿ, ವಿದ್ಯಾರ್ಥಿ ನೆಲೆಯಲ್ಲಿ ಸಿಗುವ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಕೌಶಲ್ಯಭರಿತರಾಗಬೇಕು ಎಂದರು. ಶ್ರೀಮತಿ ಸರಿತಾ, […]
ವಿ.ವಿ. ಸಾಫ್ಟ್ ಬಾಲ್ ಪಂದ್ಯಾಟ: ಬಿ.ಬಿ. ಹೆಗ್ಡೆ ಕಾಲೇಜು ಚಾಂಪಿಯನ್
ಕುಂದಾಪುರ (ಏಪ್ರಿಲ್ 30): ಏಪ್ರಿಲ್ 29, 30ರಂದು ಶ್ರೀ ಮಹಾವೀರ ಕಾಲೇಜು, ಮೂಡಬಿದಿರೆಯಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಪುರುಷರ ಸಾಫ್ಟ್ ಬಾಲ್ ಪಂದ್ಯಾಟದಲ್ಲಿ ಸಮಗ್ರ ಪ್ರಥಮ ಸ್ಥಾನವನ್ನು ಗಳಿಸುವ ಮೂಲಕ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು “ಬಿ.ಎಂ.ಎಸ್. ಪರ್ಯಾಯ ಪಾರಿತೋಷಕ”ವನ್ನು ಸತತ ಎರಡನೇ ಬಾರಿ ಪಡೆದುಕೊಂಡಿದೆ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಉಪಪ್ರಾಂಶುಪಾಲರಾದ ಡಾ| ಚೇತನ್ […]
ರಾಜ್ಯಮಟ್ಟದ ಪ್ರಜ್ಞಾ ಫೆಸ್ಟ್: ಬಿ. ಬಿ.ಹೆಗ್ಡೆ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ
ಕುಂದಾಪುರ (ಮೇ,18): ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಪ್ರಜ್ಞಾ ಫೆಸ್ಟ್ ನಲ್ಲಿ ಸಕ್ರಿಯವಾಗಿ ಭಾಗವಹಿಸಿ ಒಟ್ಟು 25 ಬಹುಮಾನಗಳನ್ನು ಪಡೆದು “ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿದೆ. ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ಶ್ರೀಮತಿ ದೀಪಿಕಾ ಜಿ., ರಶ್ಮಿ ಗಾವಡಿ, […]
ಬಿ.ಬಿ. ಹೆಗ್ಡೆ ಕಾಲೇಜು : ಡಿಮ್ಯಾಟ್ ಅಕೌಂಟ್ ಓಪನಿಂಗ್ ಡ್ರೈವ್
ಕುಂದಾಪುರ(ಮೇ,20):ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಸರ್ಟಿಫಿಕೇಟ್ ಕೋರ್ಸ್ನ ಸಂಯುಕ್ತ ಆಶ್ರಯದಲ್ಲಿ ಡಿಮ್ಯಾಟ್ ಖಾತೆ ತೆರೆಯುವ ಕಾರ್ಯಾಗಾರ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಷೇರು ಮಾರುಕಟ್ಟೆಯ ಅನುಕೂಲ ಮತ್ತು ಅನಾನುಕೂಲಗಳ ಬಗ್ಗೆ ಸರಿಯಾಗಿ ತಿಳಿದುಕೊಂಡು ಹೂಡಿಕೆ ಮಾಡಿದರೆ ಮಾತ್ರ ಹಣದ ಸದ್ಬಳಕೆ ಆಗುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಸ್ಟಾಕ್ ಮಾರ್ಕೆಟ್ ಆಪರೇಷನ್ಸ್ ಸರ್ಟಿಫಿಕೇಟ್ ಕೋರ್ಸ್ […]
ವಿ.ವಿ. ಮಟ್ಟದ ಅಂತರ್ ಕಾಲೇಜು ಸ್ಪರ್ಧೆ : ಡಾI ಬಿ. ಬಿ. ಹೆಗ್ಡೆ ಕಾಲೇಜಿಗೆ 2 ಪ್ರಥಮ, 5 ದ್ವಿತೀಯ ಬಹುಮಾನ
ಕುಂದಾಪುರ (ಮೇ,14): ಸುರತ್ಕಲ್ನ ಗೋವಿಂದ ದಾಸ ಕಾಲೇಜಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ ‘ದಿಗಂತ’ದಲ್ಲಿ 2 ಪ್ರಥಮ ಹಾಗೂ 5 ದ್ವಿತೀಯ ಬಹುಮಾನಗಳನ್ನು ಪಡೆದಿದೆ. ಕಾಲೇಜಿನ ತಂಡವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಸಾಂಸ್ಕೃತಿಕ ತಂಡದ […]
ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ಪ್ರಾಚ್ಯ ವಸ್ತುಗಳ ಪ್ರದರ್ಶನ
ಕುಂದಾಪುರ (ಎ. 12): ಪ್ರಾಚ್ಯ ವಸ್ತುಗಳ ಪರಿಚಯ ಮತ್ತು ಅವುಗಳ ಉಪಯೋಗದ ಕುರಿತು ವಿದ್ಯಾರ್ಥಿಗಳು ತಿಳಿದುಕೊಳ್ಳುವ ಮೂಲಕ ಪ್ರಾಚೀನ ವಸ್ತುಗಳನ್ನು ಸಂಗ್ರಹಿಸುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ಪ್ರಾಚ್ಯ ವಸ್ತು ಸಂಗ್ರಹ ಸ್ಪರ್ಧೆಯನ್ನು ಉದ್ದೇಶಿಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹೇಳಿದರು. ಈ ಸಂದರ್ಭ ತೀರ್ಪುಗಾರರಾಗಿ ಆಗಮಿಸಿದ ಪತ್ರಕರ್ತ ಮಂಜುನಾಥ ಕಾಮತ್ ಹಾಗೂ ಶ್ರೀಮತಿ ನಿಮಿತಾ […]
ಬಿ. ಬಿ. ಹೆಗ್ಡೆ ಕಾಲೇಜು: ಬಾರ್ಕ್ಲೇಸ್ ಉದ್ಯೋಗ ಮತ್ತು ಸಂದರ್ಶನ ಕೌಶಲ್ಯಗಳು
ಕುಂದಾಪುರ (ಮೇ 13): ಇಲ್ಲಿನ ಪ್ರತಿಷ್ಠಿತ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವೃತ್ತಿ ಮಾರ್ಗದರ್ಶನ ವಿಭಾಗವು ಬಾರ್ಕ್ಲೇಸ್ ಬ್ಯಾಂಕ್ ಪಿಎಲ್ಸಿ ಇದರ ಸಹಯೋಗದೊಂದಿಗೆ ಹಮ್ಮಿಕೊಂಡ 3 ದಿನಗಳ ಉದ್ಯೋಗ ಮತ್ತು ಸಂದರ್ಶನ ಕೌಶಲ್ಯಗಳ ತರಬೇತಿಯ ಉದ್ಘಾಟನಾ ಕಾರ್ಯಕ್ರಮ ಮೇ ,13 ರಂದು ನೆರವೇರಿಸಿತು. ಅತಿಥಿ ನೆಲೆಯಲ್ಲಿ ಮಾತನಾಡಿದ ಫ್ರೀಲ್ಯಾನ್ಸ್ ಸಾಫ್ಟ್ ಸ್ಕಿಲ್ಸ್ ತರಬೇತುದಾರರಾದ ಶ್ರೀ ದಾಮೋದರನ್ ಸಿ. ಅವರು ಸಮಯ ನಿರ್ವಹಣೆಯು ವ್ಯಕ್ತಿಯು ಯಶಸ್ಸನ್ನು ಹೊಂದುವಲ್ಲಿ ಪ್ರಮುಖ […]
ಬಿ. ಬಿ. ಹೆಗ್ಡೆ ಕಾಲೇಜು: ಪ್ರತಿಭಾ ದಿನಾಚರಣೆ ಉದ್ಘಾಟನೆ
ಕುಂದಾಪುರ (ಮೇ 09): ಸುಪ್ತವಾಗಿರುವ ಪ್ರತಿಭೆಗಳಿಗೆ ವೇದಿಕೆ ದೊರೆತಾಗ ವಿದ್ಯಾರ್ಥಿಗಳಲ್ಲಿನ ಸಭಾ ಕಂಪನ ಕಡಿಮೆಯಾಗಿ ಮುಂದೆ ಹಲವು ವೇದಿಕೆಗಳಲ್ಲಿ ಗುರುತಿಸಿಕೊಳ್ಳಲು ಸಾಧ್ಯ. ಪದವಿ ಶಿಕ್ಷಣದ ಸಂದರ್ಭದಲ್ಲಿ ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾದದ್ದು ಎಂದು ಕುಂದಾಪುರದ ವಸಂತನಾಟ್ಯಲಯದ ನೃತ್ಯ ತರಬೇತುದಾರರಾದ ಶ್ರೀಮತಿ ಪ್ರವಿತಾ ಅಶೋಕ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆ “ಸಂಭ್ರಮ”ವನ್ನು ಉದ್ಘಾಟಿಸಿ ಮಾತನಾಡಿದರು. […]
ಬಿ. ಬಿ. ಹೆಗ್ಡೆ ಕಾಲೇಜು: ಸಂಸ್ಥಾಪನಾ ದಿನ
ಕುಂದಾಪುರ (ಮೇ 10): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸಂಸ್ಥಾಪನಾ ದಿನವನ್ನು ನಿವೃತ್ತ ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಶ್ರೀ ಹೆಚ್. ಜಯಶೀಲ ಶೆಟ್ಟಿ, ಉದ್ಘಾಟಿಸಿದರು .ಸಂಸ್ಥೆ ಸ್ಥಾಪನೆಯಾದ ತದನಂತರದಲ್ಲಿನ ಅಭಿವೃದ್ಧಿ ಅವಿಸ್ಮರಣೀಯ ಎಂದು ಹೇಳಿದರು. ಜಿಲ್ಲಾ ಪಂಚಾಯತ್ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಎಸ್.ಎ. ಪ್ರಭಾಕರ್ ಶರ್ಮ, ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿ ಸಂಸ್ಥೆ ಸ್ಥಾಪನೆಯಾದ ಹದಿನಾಲ್ಕು ವರ್ಷಗಳಲ್ಲಿ ಹಲವು ಕ್ಷೇತ್ರಗಳಲ್ಲಿ ಮಾಡಿದ […]










