ಕುಂದಾಪುರ (22): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕ ಕಿರಣ್ ಕುಮಾರ್ ಎನ್., ದ್ವಿತೀಯ ಬಿ.ಬಿ.ಎ. ಇವರು ಬೆಂಗಳೂರಿನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Tag: bbhc
ಸಿ.ಎ. ಅಂತಿಮ ಪರೀಕ್ಷೆಯಲ್ಲಿ ನೇರಳಕಟ್ಟೆಯ ರಕ್ಷಿತ್ ತೇರ್ಗಡೆ
ಕುಂದಾಪುರ (ಜ,15) : ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆoಟ್ಸ್ ಆಫ್ ಇಂಡಿಯಾ 2023ರ ನವೆಂಬರ್ ತಿಂಗಳಲ್ಲಿ ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ನೇರಳಕಟ್ಟೆಯ ರಕ್ಷಿತ ತೇರ್ಗಡೆ ಹೊಂದಿದ್ದಾರೆ. ನೇರಳಕಟ್ಟೆಯ ನಿವಾಸಿ ಶ್ರೀಮತಿ ಸಾಧು ಹಾಗೂ ಶ್ರೀ ಶಂಕರ ಪೂಜಾರಿಯವರ ಪುತ್ರನಾದ ಇತ ತನ್ನ ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಹಿರಿಯ ಪ್ರಾಥಮಿಕ.ಶಾಲೆ, ಕರ್ಕುಂಜೆಯಲ್ಲಿ ಹೈಸ್ಕೂಲ್ ಶಿಕ್ಷಣವನ್ನು ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಳದ ಫ್ರೌಡ ಶಾಲೆ, ಮಾವಿನಕಟ್ಟೆಯಲ್ಲಿ , ಪದವಿ ಪೂರ್ವ […]
ಸಿ.ಎ. ಪರೀಕ್ಷೆಯಲ್ಲಿ ಡಾI ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ಜ.11): ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆoಟ್ಸ್ ಆಫ್ ಇಂಡಿಯಾ 2023ರ ನವೆಂಬರ್ ತಿಂಗಳಲ್ಲಿ ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ರಕ್ಷಿತ್ (2017-18) ಉತ್ತೀರ್ಣರಾಗಿದ್ದಾರೆ. ಅಂತಿಮ ಬಿ.ಕಾಂ. ಪದವಿಯ ವಿದ್ಯಾರ್ಥಿಗಳಾದ ವೈಷ್ಣವಿ ಶೆಟ್ಟಿ, ಅಮೃತ ಕೆ. ಸಿ.ಎ. ಇಂಟರ್ ಮೀಡಿಯೆಟ್ ಗ್ರೂಪ್ 2 ರ ಪರೀಕ್ಷೆ ಹಾಗೂ ಸುದರ್ಶನ ಉಪಾಧ್ಯ ಗ್ರೂಪ್ 1 ರ ಪರೀಕ್ಷೆಯಲ್ಲಿ […]
ಚೇತನ್ ಶೆಟ್ಟಿ ಕೋವಾಡಿ ಯವರಿಗೆ ಪಿಎಚ್.ಡಿ ಪದವಿ
ಕುಂದಾಪುರ, (ಜ.10) : ಇಲ್ಲಿನ ಡಾ |ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಯಾಗಿರುವ ಚೇತನ್ ಶೆಟ್ಟಿ ಕೋವಾಡಿ ಅವರಿಗೆ ಹಂಪಿಯ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ. ಮಂಗಳೂರಿನ ಥಿಯೋಲಾಜಿಕಲ್ ಸಂಶೋಧನಾ ಕೇಂದ್ರದ ಮೂಲಕ ಪ್ರಸಿದ್ಧ ಅಂಕಣ ಬರಹಗಾರ, ಲೇಖಕ, ಪುತ್ತೂರಿನ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕರಾದ ಡಾ| ನರೇಂದ್ರ ರೈ ದೇರ್ಲ ಅವರ ಮಾರ್ಗದರ್ಶನದಲ್ಲಿ “ಕರ್ನಾಟಕ […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ವಿಸ್ತರಣಾ ಚಟುವಟಿಕೆ
ಕುಂದಾಪುರ (ಜ.01) : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ನೇಚರ್ ಕ್ಲಬ್ ಆಶ್ರಯದಲ್ಲಿ ಆಲೂರಿನ ಗುರುವಂದನ ಪೊಟರಿಯಲ್ಲಿ ವಿಸ್ತರಣಾ ಚಟುವಟಿಕೆ ಜರುಗಿತು. ಸಂಸ್ಥಾಪಕರಾದ ಶ್ರೀ ರಘುರಾಮ್ ಕುಲಾಲ್ ವಿದ್ಯಾರ್ಥಿಗಳಿಗೆ ಕುಂಬಾರಿಕೆಯ ಮೇಲೆ ಆಧುನಿಕತೆಯ ಪರಿಣಾಮವನ್ನು ವಿವರಿಸುವ ಜೊತೆಗೆ, ಸರ್ಕಾರ ಒದಗಿಸುವ ಹಲವಾರು ಯೋಜನೆಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು. ವರ್ತಮಾನದ ಪ್ಲಾಸ್ಟಿಕ್ ಯುಗದಲ್ಲಿ ಅಳಿಯುವಿಕೆಯ ಅಂಚಿನಲ್ಲಿರುವ ಕುಂಬಾರಿಕೆಗೆ ವಿಶ್ವಮಾನ್ಯತೆ ದೊರೆಯುವಂತೆ ಮಾಡುವ […]
ಅಂತರ್ ಕಾಲೇಜು ಲಲಿತಕಲಾ ಸ್ಪರ್ಧೆ : ಡಾI ಬಿ.ಬಿ. ಹೆಗ್ಡೆ ಕಾಲೇಜಿಗೆ ದ್ವಿತೀಯ ಸಮಗ್ರ ಪ್ರಶಸ್ತಿ
ಕುಂದಾಪುರ (ಡಿ.27): ಮಂಗಳೂರಿನ ಮ್ಯಾಪ್ಸ್ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ನಡೆದ ಅಂತರ್-ಕಾಲೇಜು ಮಟ್ಟದ ಲಲಿತಕಲಾ ಸ್ಪರ್ಧೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ವೈಯಕ್ತಿಕವಾಗಿ ತೃತೀಯ ಬಿ.ಬಿ.ಎ. ಸ್ವಸ್ತಿಕ್ ಕಾರ್ಟೂನಿಂಗ್ನಲ್ಲಿ ಪ್ರಥಮ ಸ್ಥಾನ, ತೃತೀಯ ಬಿ.ಕಾಂ. ಮನೀಷ್ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ ಹಾಗೂ ದ್ವಿತೀಯ ಬಿ.ಕಾಂ. ವಿನಾಯಕ ಫೋಟೋಗ್ರಾಫಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ದ್ವಿತೀಯ ಸಮಗ್ರ […]
ಮಂಗಳೂರು ವಿ. ವಿ. ಚೆಸ್ ತಂಡದ ನಾಯಕಿಯಾಗಿ ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ದಿವ್ಯಾ ಆಯ್ಕೆ
ಕುಂದಾಪುರ(ಡಿ.25): ತಮಿಳುನಾಡಿನ ಡಾ.ಅಂಬೇಡ್ಕರ್ ಲಾ ಯೂನಿವರ್ಸಿಟಿನಲ್ಲಿ ನಡೆಯಲಿರುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಚೆಸ್ ಚಾಂಪಿಯನ್ ಶಿಪ್ ಗೆ ಮಂಗಳೂರು ವಿಶ್ವ ವಿದ್ಯಾನಿಲಯದ ಚೆಸ್ ತಂಡದ ನಾಯಕಿಯಾಗಿ ಕುಂದಾಪುರದ ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿ ಸಿ ಎ ವಿದ್ಯಾರ್ಥಿನಿ ದಿವ್ಯಾ ಆಯ್ಕೆಯಾಗಿದ್ದಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಿ .ಎಂ ಸುಕುಮಾರ್ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಬೋಧಕ- […]
ಡಾ|ಬಿ.ಬಿ.ಹೆಗ್ಡೆ ಕಾಲೇಜು: ಮಂಗಳೂರು ವಿ.ವಿ. ಮಟ್ಟದ ಅಂತರ್-ಕಾಲೇಜು ಸಾಹಿತ್ಯ ಸ್ಪರ್ಧೆ ಉದ್ಘಾಟನೆ
ಕುಂದಾಪುರ, (ಡಿ.21): ವಿದ್ಯಾರ್ಥಿಗಳು ನೋಡುಗರಾಗುವುದರ ಜೊತೆಗೆ ತಾವು ಕ್ರಿಯಾಶೀಲವಾಗಿ ಮಾಡುವಂತವರಾಗಬೇಕು. ಆ ಮೂಲಕ ಎಲ್ಲಾ ಕ್ಷೇತ್ರಗಳಲ್ಲಿ ಜ್ಞಾನ ಸಿಗಲು ಸಾಧ್ಯ. ಎಲ್ಲಾ ವಿಭಾಗಗಳಲ್ಲಿ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆ, ವ್ಯಕ್ತಿತ್ವ ವಿಕಸನ ಸಾಧ್ಯ. ಇದು ತರಗತಿ ಕೋಣೆಯ ಪಠ್ಯ ಶಿಕ್ಷಣಕ್ಕಿಂತ ಇಂತಹ ಸಾಹಿತ್ಯ ಸ್ಪರ್ಧೆಯಂತಹ ಪಠ್ಯಪೂರಕ ಚಟುವಟಿಕೆಗಳಿಂದ ಸಾಧ್ಯ ಎಂದು ಇಂಡಿಯನ್ ರೆಡ್ಕ್ರಾಸ್ ಸಂಸ್ಥೆ ಉಡುಪಿ ಘಟಕದ ಗೌರವ ಕಾರ್ಯದರ್ಶಿಗಳಾದ ಡಾ| ಗಣನಾಥ ಶೆಟ್ಟಿ ಎಕ್ಕಾರ್ ಹೇಳಿದರು. ಅವರು ಇಲ್ಲಿನ ಡಾ| […]
ಡಾ|ಬಿ.ಬಿ.ಹೆಗ್ಡೆ ಕಾಲೇಜು:ಅಂಗಾoಗ ದಾನ ಅರಿವು, ನೋಂದಣಿ
ಕುಂದಾಪುರ (ಡಿ.21): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಮೂಲಕ ರಾಜ್ಯ ಅಂಗಾoಗ ಮತ್ತು ಅಂಗಾoಶ ಕಸಿ ಸಂಘಟನೆ (ಸೊಟ್ಟೊ) ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅಂಗಾAಗ ದಾನದ ಕುರಿತು ಅರಿವು ಮತ್ತು ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಟ್ರಾನ್ಸ್ಪ್ಲಾಂಟ್ (ಕಸಿ) ಸಂಯೋಜಕರಾದ ಶ್ರೀಮತಿ ಪದ್ಮಾ ಅವರು ಅಂಗಾoಗ ದಾನದ ಮಹತ್ವ […]
ಡಾ.ಬಿ.ಬಿ ಹೆಗ್ಡೆ ಕಾಲೇಜು: ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆ ಉದ್ಘಾಟನೆ
ಕುಂದಾಪುರ ( ಡಿ.11): ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ರೇಂಜರ್ಸ್ ಮತ್ತು ರೋವರ್ಸ್ ಘಟಕದ 2023 -2024 ನೇ ವಾರ್ಷಿಕ ಚಟುವಟಿಕೆಗಳನ್ನು ಭಾರತ್ ಸ್ಕೌಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಇದರ ಜಿಲ್ಲಾ ಕಾರ್ಯದರ್ಶಿಯಾದ ಶ್ರೀ ಆನಂದ ಅಡಿಗ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು , ಪ್ರತಿಫಲದ ಅಪೇಕ್ಷೆ ಇಲ್ಲದೇ ಕಾರ್ಯಮಾಡಲು ಮುಂದಾಗಬೇಕು. ವಿಧೇಯತೆ, ವಿನಯತೆ ಅಳವಡಿಸಿಕೊಂಡು ಪರೋಕಾರಕ್ಕೆ ಸ್ಪಂದಿಸಬೇಕು […]










