ಕುಂದಾಪುರ (ಸೆ.24): ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳನ್ನು ಬೆಳೆಸಲು ಎನ್.ಎಸ್.ಎಸ್. ಸಹಕಾರಿ. ವಿದ್ಯಾರ್ಥಿ ದೆಸೆಯಲ್ಲಿ ಸಕ್ರಿಯವಾಗಿ ಇಂತಹ ಸೇವಾ ಘಟಕಗಳಲ್ಲಿ ತೊಡಗಿಸಿಕೊಂಡರೆ ವಿದ್ಯಾರ್ಥಿಗಳಲ್ಲಿ ರಚನಾತ್ಮಕ ಬದಲಾವಣೆ ಆಗುವುದರ ಜೊತೆಗೆ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಲು ಸಾಧ್ಯ ಎಂದು ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಶ್ರೀ ಕಿರಣ್ ಹೇಳಿದರು. ಅವರ ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ […]
Tag: bbhc
ರಾಷ್ಟ್ರಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ: ಡಾ| ಬಿ.ಬಿ ಹೆಗ್ಡೆ ಕಾಲೇಜಿನ ಎನ್ಎಸ್ಎಸ್ ಸ್ವಯಂಸೇವಕಿ ಶ್ರೇಯ ಖಾರ್ವಿ ಪ್ರಥಮ ಸ್ಥಾನ
ಕುಂದಾಪುರ (ಸೆ.22): ಜೈಪುರದ ಐಐಎಸ್ ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಏಕ್ ಭಾರತ್ ಶ್ರೇಷ್ಠ ಭಾರತ್ ಕಾರ್ಯಕ್ರಮದಡಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಹಮ್ಮಿಕೊಂಡ ರಾಷ್ಟ್ರಮಟ್ಟದ ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ಕುಂದಾಪುರದ ಪ್ರತಿಷ್ಠಿತ ಡಾ| ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಸ್ವಯಂಸೇವಕಿ ಶ್ರೇಯ ಖಾರ್ವಿ ಪ್ರಥಮ ಸ್ಥಾನ ಪಡೆದಿದ್ದಾರೆ. ದೇಶದ ವಿವಿಧ ವಿಶ್ವವಿದ್ಯಾನಿಲಯದ ಕಾಲೇಜುಗಳ ಎನ್ಎಸ್ಎಸ್ ಸ್ವಯಂಸೇವಕರು ಭಾಗವಹಿಸಿದ ಈ ರಾಷ್ಟ್ರಮಟ್ಟದ ಈ ಸ್ಪರ್ಧೆಯಲ್ಲಿ ನಮ್ಮ ಸಂಸ್ಥೆಯ ಎನ್ಎಸ್ಎಸ್ […]
ಡಾ| ಬಿ.ಬಿ. ಹೆಗ್ಡೆ ಕಾಲೇಜು: ವಿವಿಧ ವೇದಿಕೆಗಳ ಪೂರ್ವ ಪರಿಚಯ
ಕುಂದಾಪುರ (ಸೆ, 20): ಕಾಲೇಜಿನಲ್ಲಿ ನಡೆಯುವ ವಿವಿಧ ವಿಸ್ತರಣಾ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಬೇಕು. ಶೈಕ್ಷಣಿಕ ಸಂಸ್ಥೆಯೊoದು ಪಠ್ಯ ಕೇಂದ್ರಿತ ತಾಣವಾಗದೆ, ಪ್ರಾಯೋಗಿಕ ಕೇಂದ್ರವಾಗಿ, ಕಲಿಕೆಗಳಲ್ಲಿ ಅಂತಸ್ಥವಾಗಿರುವ ಗ್ರಹಿಕೆ ಹಾಗೂ ಅಭಿವ್ಯಕ್ತಿ ಸಾಮರ್ಥ್ಯವನ್ನು ಬಲಗೊಳಿಸಿದಾಗಲೇ ವಿದ್ಯಾರ್ಥಿ ಸಮುದಾಯ ಶಕ್ತಿಯಾಗಿ ರೂಪುಗೊಳ್ಳಲು ಸಾಧ್ಯ ಎಂದು ನಿವೃತ್ತ ಇಂಗ್ಲೀಷ್ ಪ್ರಾಧ್ಯಾಪಕಿ ಡಾ| ಪಾರ್ವತಿ ಜಿ. ಐತಾಳ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ […]
ಡಾ| ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ರೋವರ್ಸ & ರೇಂಜರ್ಸ್ ಘಟಕದ ವತಿಯಿಂದ ಪರಿಸರ ಸ್ನೇಹಿ ಗಣಪ
ಕುಂದಾಪುರ (ಸೆಪ್ಟೆಂಬರ್ 19): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೋವರ್ಸ & ರೇಂಜರ್ಸ್ ಘಟಕದ ಆಶ್ರಯದಲ್ಲಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ರಚನೆಯ ಸ್ಪರ್ಧೆಯನ್ನು ಕಾಲೇಜಿನ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 19ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ತೃತೀಯ ಬಿಬಿಎ ವಿದ್ಯಾರ್ಥಿ ಸ್ವಸ್ತಿಕ್ ಪ್ರಥಮ ಸ್ಥಾನ, ತೃತೀಯ ಬಿಸಿಎ ವಿದ್ಯಾರ್ಥಿ ವಿನೋದ್ ರಾಜ್ ದ್ವಿತೀಯ ಸ್ಥಾನ ಹಾಗೂ ಪ್ರಥಮ ಬಿ.ಕಾಂ. ಇ ವಿಭಾಗದ ಸುಜನ್ ಹಾಗೂ […]
ಮಂಗಳೂರು ವಿ. ವಿ. ಕ್ರೀಡಾ ರ್ಯಾಂಕಿoಗ್: ಡಾ| ಬಿ. ಬಿ. ಹೆಗ್ಡೆ ಕಾಲೇಜು ಉಡುಪಿ ಜಿಲ್ಲೆಗೆ ಪ್ರಥಮ
ಕುಂದಾಪುರ (ಸೆಪ್ಟೆಂಬರ್ 21) : ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗ ನಡೆಸಿದ ವಿಶ್ವವಿದ್ಯಾನಿಲಯ ವ್ಯಾಪ್ತಿಯ 220 ಕಾಲೇಜುಗಳ ಕ್ರೀಡಾ ರ್ಯಾಂಕಿoಗ್ನಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಪುರುಷ ವಿಭಾಗದಲ್ಲಿ 7ನೇ ರ್ಯಾಂಕ್ ಮಹಿಳೆಯರ ವಿಭಾಗದಲ್ಲಿ 11ನೇ ರ್ಯಾಂಕ್ ಪಡೆಯುವ ಮೂಲಕ ಸಮಗ್ರ 7ನೇ ರ್ಯಾಂಕ್ ಪಡೆದಿದೆ. ಉಡುಪಿ ಜಿಲ್ಲಾ ವ್ಯಾಪ್ತಿಯ ಕಾಲೇಜುಗಳಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಉತ್ಕೃಷ್ಟ ಸಾಧನೆಗೈದಿದೆ. ಕಾಲೇಜು ಆಡಳಿತ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಹಿoದಿ ದಿವಸ್ ಆಚರಣೆ
ಕುಂದಾಪುರ, (ಸೆ. 15): ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ, ಅದು ಸಂಸ್ಕೃತಿಯ ಪ್ರತೀಕ. ಹೀಗೆ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿ ರಾಷ್ಟ್ರದ ಅಧಿಕ್ರತ ಭಾಷೆಯಾದ ಹಿಂದಿಯನ್ನು ಕಾಣಬಹುದು. ಹೀಗಾಗಿ ಸಂಸ್ಕೃತಿ ಸಂಸ್ಕಾರವನ್ನು ಗೌರವಿಸಿ ಅನುಸರಿಸಿ ಎಂದು ಜಿ.ಎಮ್. ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆಯ ಹಿಂದಿ ಶಿಕ್ಷಕಿ ಶ್ರೀಮತಿ ಕಿರಣಾ ತಿವಾರಿ ಹೇಳಿದರು. ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಯೋಜಿಸಿದ ಹಿಂದಿ ದಿವಸ್ ಕಾರ್ಯಕ್ರಮದಲ್ಲಿ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು: ಸಂವಿಧಾನದ ಪ್ರಸ್ತಾವನೆ ಓದು ಕಾರ್ಯಕ್ರಮ
ಕುಂದಾಪುರ(ಸೆ.15): ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡ ಭಾರತ ಸಂವಿಧಾನದ ಪ್ರಸ್ತಾವನೆಯ ಓದು ಕಾರ್ಯಕ್ರಮವನ್ನು ಡಾ|ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ಸೆಪ್ಟೆಂಬರ್ 15ರಂದು ಆಚರಿಸಲಾಯಿತು. ಕಾಲೇಜಿನ ಸರ್ವಬೋಧಕ -ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆಯನ್ನು ಓದುವುದರ ಮುಖಾಂತರ ಪ್ರತಿಜ್ಞೆಗೈದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ .ಉಮೇಶ್ ಶೆಟ್ಟಿ ಹಾಗೂ ಉಪ ಪ್ರಾಂಶುಪಾಲರಾದ ಕೆ. ಚೇತನ್ ಶೆಟ್ಟಿ ಉಪಸ್ಥಿತರಿದ್ದರು.
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಬಿಸಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ.14): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಬಿಸಿಎ ವಿಭಾಗದ ವತಿಯಿಂದ ಪ್ರಥಮ ವರ್ಷದ ಪದವಿಗೆ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಸೆಪ್ಟೆಂಬರ್ 11ರಂದು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಶುಭಾಶಂಸನೆಗೈದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್ ಪ್ರಾಸ್ತಾವಿಸಿದರು. ವಿಭಾಗದ ಪ್ರಾಧ್ಯಾಪಕರು […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು,ಎನ್.ಎಸ್.ಎಸ್. ಘಟಕ : ಸ್ವಚ್ಛ ಸಂಗಮ್ -ಸ್ವಚ್ಛತಾ ಕಾರ್ಯ
ಕುಂದಾಪುರ (ಸೆ.13): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಸ್ವಚ್ಛತಾ ಪಖ್ವಾಡಾ ಯೋಜನೆಯಡಿಯಲ್ಲಿ ಸ್ವಚ್ಛ ಸಂಗಮ್ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜು ಸಮೀಪದ ಆನಗಳ್ಳಿ – ರಸ್ತೆ ದುರಸ್ತೆ, ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು,ಕುಂದಾಪುರ: ಹೂಡಿಕೆದಾರರ ಅರಿವು ಕಾರ್ಯಾಗಾರ
ಕುಂದಾಪುರ, (ಸೆ. 13): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕಾಮರ್ಸ್ ಟೀಚರ್ಸ್ ಅಸೋಸಿಯೇಶನ್ ವತಿಯಿಂದ ದ್ವಿತೀಯ ವರ್ಷದ ಬಿ.ಕಾಂ. ಮತ್ತು ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಹೂಡಿಕೆದಾರರ ಅರಿವು ಕಾರ್ಯಾಗಾರ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಜ್ಞಾನಾರ್ಜನೆಗೆ ಬಳಸಿಕೊಂಡ ಬಂಡವಾಳ ಭವಿಷ್ಯದ ದಾರಿದೀಪ ಎಂದು ವಿದ್ಯಾರ್ಥಿಗಳಿಗೆ ಹೂಡಿಕೆ ಬಗ್ಗೆ ಅರಿವು ಮೂಡಿಸಿದರು. […]










