ಕುಂದಾಪುರ( ಸೆ.11): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಪ್ರಥಮ ವರ್ಷದ ಬಿ.ಕಾಂ. ವಿಧ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಬಿ.ಕಾಂ. ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಅಂಕಗಳೊಂದೆ ಮುಖ್ಯವಲ್ಲ ಜೊತೆಗೆ ಈ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯಧಾರಿತ ಶಿಕ್ಷಣ ತುಂಬಾ ಅವಶ್ಯಕ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ […]
Tag: bbhc
ಡಾ|ಬಿ.ಬಿ.ಹೆಗ್ಡೆ ಕಾಲೇಜು: ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ (ಸೆ.06): ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು ನಮ್ಮ ಬದುಕಿನಲ್ಲಿ ಸವಾಲುಗಳನ್ನು ಎದುರಿಸಲು ಪೂರಕವಾಗಿದೆ. ಜೀವನ ಕೌಶಲ್ಯದ ಜೊತೆಗೆ ಕ್ರೀಯಾಶೀಲತೆ, ಸೃಜನಶೀಲತೆ, ಸಂವಹನ ಕಲೆ, ನಾಯಕತ್ವಗುಣ ಬೆಳೆಸಿಕೊಳ್ಳಲು ಕಾಲೇಜಿನಲ್ಲಿರುವ ವಿವಿಧ ವೇದಿಕೆಗಳು ಅತ್ಯವಶ್ಯಕವಾದುದು. ಆ ನೆಲೆಯಲ್ಲಿ ವಿದ್ಯಾರ್ಥಿಗಳು ಗಂಭೀರವಾಗಿ ಚಿಂತಿಸಬೇಕು ಮತ್ತು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೆಸ್ಕತ್ತೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಂಗ್ಲೀಷ್ ಶಿಕ್ಷಕರು ಹಾಗೂ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶ್ರೀ ಅಶೋಕ್ ತೆಕ್ಕಟ್ಟೆ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ
ಕುಂದಾಪುರ (ಸೆ.08): ವಿದ್ಯಾರ್ಥಿ ಬದುಕಿನಲ್ಲಿ ಕನಸು ಕಾಣುವುದರ ಜೊತೆಗೆ ಅವಿರತ ಪ್ರಯತ್ನ ಇದ್ದಲ್ಲಿ ಮಾತ್ರ ಬದುಕು ರೂಪಿಸಿಕೊಳ್ಳಲು ಸಾಧ್ಯ. ಈ ಹಂತದಲ್ಲಿ ಕಾಣುವ ಕನಸೇ ನಿಮ್ಮಲ್ಲಿನ ಪ್ರತಿಭೆ ಹಾಗೂ ಸೃಜನಶೀಲತೆಗೆ ಉತ್ತೇಜನ ನೀಡುವುದು ಹೀಗಾಗಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕ್ರಿಯಾಶೀಲ ವಿದ್ಯಾರ್ಥಿಗಳ ಬೆಳವಣಿಗೆಗೆ ಸೇತುವೆಯಾಗಲಿ ಎಂದು ಅಂತಾರಾಷ್ಟ್ರೀಯ ಖ್ಯಾತಿಯ ವೈದ್ಯರು ಹಾಗೂ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಡಾ| ಅಸೋಡು ಅನಂತರಾಮ ಶೆಟ್ಟಿಯವರು ಹೇಳಿದರು. ಅವರು ಇಲ್ಲಿನ ಡಾ| ಬಿ. […]
ಡಾ|ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ಎನ್.ಎಸ್.ಎಸ್. ಘಟಕದ ವತಿಯಿಂದ ನಿರ್ಮಲ ನಗರ ಅಭಿಯಾನ
ಕುಂದಾಪುರ (ಸೆ.09): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಪುರಸಭೆಯ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಪಖ್ವಾಡಾ ಕಾರ್ಯಕ್ರಮದಡಿಯಲ್ಲಿ ನಿರ್ಮಲ ನಗರ ಅಭಿಯಾನ ನಡೆಯಿತು. ಕುಂದಾಪುರ ಸಿಟಿ ಜೆಸಿಐನ ಸ್ಥಾಪಕಾಧ್ಯಕ್ಷ ಶ್ರೀ ಹುಸೇನ್ ಹೈಕಾಡಿ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪನ್ಯಾಸಕರಾದ ಶ್ರೀ ರಂಜಿತ್ ಟಿ.ಎನ್., ಪ್ರವೀಣ್ ಮೊಗವೀರ ಗಂಗೊಳ್ಳಿ, […]
ಡಾ|ಬಿ.ಬಿ.ಹೆಗ್ಡೆ ಕಾಲೇಜು : ಪರಿಸರ -‘ನಮಗೊಂದಿಷ್ಟು ಉಳಿಸಿ’ – ಬೀದಿ ನಾಟಕ ಪ್ರದರ್ಶನ
ಕುಂದಾಪುರ (ಸೆ.09): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಪುರಸಭೆಯ ಜಂಟಿ ಆಶ್ರಯದಲ್ಲಿ ನಗರದ ತಾಲೂಕ್ ಪಂಚಾಯತ್ ಮುಂಭಾಗ ಮತ್ತು ಕುಂದಾಪುರದ ಸಂತೆ ಮಾರುಕಟ್ಟೆಯಲ್ಲಿ ಪರಿಸರ – ‘ನಮಗೊಂದಿಷ್ಟು ಉಳಿಸಿ’ ಬೀದಿ ನಾಟಕ ಪ್ರದರ್ಶನ ನಡೆಯಿತು. ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆ ಕುರಿತ ಈ ಬೀದಿ ನಾಟಕವನ್ನು ಅಂತಿಮ ಬಿ.ಸಿ.ಎ. ವಿದ್ಯಾರ್ಥಿ ದೇವಿಪ್ರಸಾದ್ ಶೆಟ್ಟಿ ರಚಿಸಿ, ಅಂತಿಮ ಬಿ.ಎಸ್ಸಿ. […]
ಏಷಿಯನ್ ಜೂನಿಯರ್ ಗರ್ಲ್ಸ್ ಚೆಸ್ ಚಾಂಪಿಯನ್ಶಿಪ್: ಭಾರತವನ್ನು ಪ್ರತಿನಿಧಿಸುತ್ತಿರುವ ಡಾ| ಬಿ.ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿನಿ ದಿವ್ಯಾ
ಕುಂದಾಪುರ (ಸೆ,7): ಮಂಗಳೂರು ವಿ.ವಿಯ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿರುವ ಕುಂದಾಪುರದ ಡಾ|ಬಿ .ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಸಿಎ ವಿದ್ಯಾರ್ಥಿನಿ ದಿವ್ಯಾರವರು ಟಾಟಾ ಸ್ಟೀಲ್ ಏಷಿಯನ್ ಜೂನಿಯರ್ ಗರ್ಲ್ಸ್ ಚೆಸ್ ಚಾಂಪಿಯನ್ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಜಾರ್ಖಂಡ್ ರಾಜ್ಯದ ಜೇಮ್ ಶೆಡ್ ಪುರದಲ್ಲಿ ಸೆಪ್ಟೆಂಬರ್ 7ರಿಂದ 16ರ ತನಕ ಈ ಚಾಂಪಿಯನ್ಶಿಪ್ ನಡೆಯಲಿದೆ. ಮಂಗಳೂರು ವಿ.ವಿ ಅಕಾಡೆಮಿಕ್ ಕೌನ್ಸಿಲ್ ನ ವಿದ್ಯಾರ್ಥಿ ಪ್ರತಿನಿಧಿಯಾಗಿ ಗುರುತಿಸಿಕೊಂಡಿರುವ ಇವರು ರಾಷ್ಟ್ರಮಟ್ಟದ ಹಾಗೂ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು :ಪ್ರೇರಣಾ ಶಿಬಿರ – 2023 ಪ್ರೇರಣೆ– ಉಪನ್ಯಾಸ
ಕುಂದಾಪುರ (ಆ, 23): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ‘ಪರಿಚಯ 2023’ ಕಾರ್ಯಕ್ರಮ ಆಯೋಜಿಸಲಾಯಿತು . ಈ ‘ಪ್ರೇರಣಾ ಶಿಬಿರ’ದ ಅಂಗವಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಜೆಸಿಐ ತರಬೇತುದಾರರಾದ ಶ್ರೀ ಕೆ.ಕೆ. ಶಿವರಾಮ್ ಅವರು “ಪ್ರೇರಣೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಹಲವು […]
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಒಂದು ದಿನದ ವಿಶೇಷ ಶಿಬಿರ- ಸ್ವಚ್ಛತಾ ಕಾರ್ಯಕ್ರಮ – ಅಮೃತ ಕೆರೆ
ಕುಂದಾಪುರ (ಆ,27): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಶ್ರೀ ಚಂದ್ರಶೇಖರ್ ಆಜಾದ್ ಮಿತ್ರಮಂಡಳಿ, ಬಸ್ರೂರು ಇವರ ಜಂಟಿ ಆಶ್ರಯದಲ್ಲಿ ಒಂದು ದಿನದ ವಿಶೇಷ ಶಿಬಿರದ ಅಂಗವಾಗಿ ‘ಅಮೃತ ಕೆರೆ’ ಎಂಬ ಶೀರ್ಷಿಕೆಯಲ್ಲಿ ಬಸ್ರೂರಿನ ಕೆರೆಕಟ್ಟೆಯ ದೇವರ ಕೆರೆಯ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ತಾಲೂಕ್ ಪಂಚಾಯತ್ ಮಾಜಿ ಉಪಾಧ್ಯಕ್ಷ ಶ್ರೀ ರಾಮ್ಕಿಶನ್ ಹೆಗ್ಡೆ ಶ್ರಮದಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು : ಬಿಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪೂರ್ವಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ.02): ಇಲ್ಲಿನ ಡಾ|ಬಿ.ಬಿ.ಹೆಗ್ಡೆ ಕಾಲೇಜಿನ ಬಿಬಿಎ ವಿಭಾಗದ ವತಿಯಿಂದ ಪ್ರಥಮ ವರ್ಷದ ಪದವಿಗೆ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಸೆಪ್ಟೆಂಬರ್ 02 ರಂದು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಕೆ ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಶುಭಾಶಂಸನೆಗೈದರು.ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಪ್ರಸ್ತಾವಿಕ ಮಾತುಗಳಾಡಿದರು. ವಿಭಾಗದ ಪ್ರಾಧ್ಯಾಪಕರಾದ ಹರೀಶ್.ಬಿ. ಪ್ರವೀಣ್ ಮೊಗವೀರ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು:ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ – 2023 ಉದ್ಘಾಟನೆ
ಕುಂದಾಪುರ (ಆ, 22): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ’ವನ್ನು ಆಯೋಜಿಸಲಾಯಿತು. ಕಾರ್ಕಳದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಶ್ರೀ ಕೆ. ರಾಜೇಂದ್ರ ಭಟ್ ಉದ್ಘಾಟಿಸಿ ವಿದ್ಯಾರ್ಥಿ ಬದುಕು ಹಸನಾಗಬೇಕಾದರೆ ನಿರ್ದಿಷ್ಟ ಗುರಿ, ಶ್ರದ್ಧೆ, ಸತತ ಪ್ರಯತ್ನ ಅಗತ್ಯ, ಆ ಮೂಲಕ ಉತ್ತಮ ಭವಿಷ್ಯ ನಿಮ್ಮದಾಗಲಿ ಎಂದು ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ […]










