ಕುಂದಾಪುರ(ಅ,02) ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕದ ಆಶ್ರಯದಲ್ಲಿ ನಡೆದ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ|ಕೆ.ಉಮೇಶ್ ಶೆಟ್ಟಿಯವರು ಮಾತನಾಡಿ ಗಾಂಧಿ ಹಾಗೂ ಶಾಸ್ತ್ರಿ ಇಬ್ಬರೂ ನುಡಿದಂತೆ ನಡೆದವರು ಅವರ ತತ್ವ ಬೋಧನೆಗಳು ಇಂದಿಗೂ ಪ್ರಸ್ತುತ. ಸಮಕಾಲೀನವಾಗಿ ಅವರು ಸಾದರ ಪಡಿಸಿದ ಮೌಲ್ಯಗಳು ಇನ್ನಷ್ಟು ಅಧ್ಯಯನ ಶೀಲತೆಗೆ ಒಳಗಾಗಲಿ ಎಂದರು. ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿ ಹಾಗೂ […]
Tag: bbhc
ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪೂರ್ವಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ.29):ಕಾಲೇಜಿಗೆ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ನೂತನವಾಗಿ ಸೇರ್ಪಡೆಯಾದ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ನೂತನ ಶಿಕ್ಷಣ ನೀತಿಯ ಪಠ್ಯಕ್ರಮದ ಬಗ್ಗೆ ಮಾಹಿತಿ ಒದಗಿಸುವ ದೃಷ್ಠಿಯಿಂದ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಪೂರ್ವಪರಿಚಯ ಕಾರ್ಯಕ್ರಮ ಸೆ.28 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ .ಉಮೇಶ್ ಶೆಟ್ಟಿ ಯವರು ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಶಿಸ್ತು ಮತ್ತು ಶ್ರಮದ ಅಗತ್ಯತೆಗಳ ಕುರಿತು ತಿಳಿಸಿದರು. […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಬಿ.ಬಿ.ಎ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ,29): ವಿದ್ಯಾರ್ಥಿ ಜೀವನದಲ್ಲಿ ಲಭ್ಯವಿರುವ ಪ್ರತೀ ಅವಕಾಶವನ್ನು ಸದುಪಯೋಗಿಸಿಕೊಳ್ಳುತ್ತಾ, ನಿರಂತರ ಕಲಿಕೆಗೆ ಬದುಕು ತೆರೆದುಕೊಳ್ಳಲಿ. ಕಲಿಕೆ ಬದುಕಿನ ಭಾಗವಾಗದೆ ಕಲಿಕೆಯೇ ಬದುಕಾಗಲಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಹೇಳಿದರು. ಅವರು ಕಾಲೇಜಿನ ಬಿ.ಬಿ.ಎ. ವಿದ್ಯಾರ್ಥಿಗಳ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನೆಲೆಯ ಮಾತುಗಳನ್ನಾಡಿದರು.ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಶೈಕ್ಷಣಿಕ ವಿಚಾರಗಳ ಕುರಿತ […]
ಶ್ರೀ ಚೇತನ್ ಶೆಟ್ಟಿ ಕೊವಾಡಿಯವರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ
ಕುಂದಾಪುರ (ಸೆ.29): ಶೈಕ್ಷಣಿಕ ,ಸಾಹಿತಿಕ, ಸಾಂಸ್ಕೃತಿಕ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ತಮ್ಮನ್ನು ನಿರಂತರವಾಗಿ ತೊಡಗಿಸಿಕೊಂಡಿರುವ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಉಪಪ್ರಾಂಶುಪಾಲರು,ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಯಾದ ಶ್ರೀ ಚೇತನ್ ಶೆಟ್ಟಿ ಕೊವಾಡಿಯವರು ರೋಟರಿ ಕ್ಲಬ್ ಗಂಗೊಳ್ಳಿ ಶಿಕ್ಷಕರಿಗೆ ಕೊಡಮಾಡುವ ನೇಷನ್ ಬಿಲ್ಡರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಟರಿ ಕ್ಲಬ್ ಗಂಗೊಳ್ಳಿ ಇವರ ವತಿಯಿಂದ ಡಾ. ಬಿ.ಬಿ ಹೆಗ್ಡೆ ಕಾಲೇಜಿನ ಮೂಕಾಂಬಿಕಾ ಸಭಾ ಭವನದಲ್ಲಿ ಸೆ.28 ರಂದು ಹಮ್ಮಿಕೊಂಡ ಶಿಕ್ಷಕರಿಗೆ ನೀಡಲಾಗುವ ನೇಷನ್ ಬಿಲ್ಡರ್ […]
ಶಿಕ್ಷಕರು ಭಾಗ್ಯವಂತರು-ಪ್ರೊ.ಕೆ.ಉಮೇಶ್ ಶೆಟ್ಟಿ
ಕುಂದಾಪುರ (ಸೆ.29): ಶಿಕ್ಷಕ ವೃತ್ತಿ ಶ್ರೇಷ್ಠ ವಾದುದು, ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು ಜೊತೆಗೆ ಶಿಕ್ಷಕ ವ್ರತ್ತಿಯಲ್ಲಿ ಇರುವ ನಾವು ಭಾಗ್ಯವಂತರು ಎಂದು ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಹೇಳಿದರು. ಅವರು ರೋಟರಿ ಕ್ಲಬ್ ಗಂಗೊಳ್ಳಿ ಇವರ ವತಿಯಿಂದ ಕಾಲೇಜಿನ ಮೂಕಾಂಬಿಕಾ ಸಭಾoಗಣದಲ್ಲಿ ಸೆ.28 ರಂದು ಹಮ್ಮಿಕೊಂಡ ಶಿಕ್ಷಕರಿಗೆ ನೀಡಲಾಗುವ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಣ ಕ್ಷೇತ್ರದಲ್ಲಿ […]
ಡಾ|ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ
ಕುಂದಾಪುರ( ಸೆ,27): ಇಲ್ಲಿನ ಡಾ|ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಇತ್ತೀಚೆಗೆ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಮಾತನಾಡಿ ಸಮಯ ನಿರ್ವಹಣೆ, ನಾಯಕತ್ವ ಗುಣ ಹಾಗೂ ನೈತಿಕ ಮೌಲ್ಯಗಳನ್ನು ಎನ್.ಎಸ್.ಎಸ್. ಕ್ರಿಯಾ ಚಟುವಟಿಕೆಗಳಲ್ಲಿ ಸ್ವಯಂ ಸೇವಕರು ಭಾಗವಹಿಸುವ ಮೂಲಕ ಪಡೆದುಕೊಳ್ಳಬಹುದು.ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳಿಗೆ ಭವಿಷ್ಯದ ಬದುಕು ರೂಪಿಸಿಕೊಳ್ಳಲು ಸೂಕ್ತ ವೇದಿಕೆ ಎಂದರು. ಕಾಲೇಜಿನ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಸಿಬ್ಬಂದಿ ಗುಣಮಟ್ಟ ಹೆಚ್ಚಿಸುವ ಕಾರ್ಯಕ್ರಮ
ಕುಂದಾಪುರ(ಸೆ,21): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐ ಕ್ಯೂಎಸಿ ಆಶ್ರಯದಲ್ಲಿ ಸೆ .21 ರಂದು ನಡೆದ ಸಿಬ್ಬಂದಿ ಗುಣಮಟ್ಟ ಹೆಚ್ಚಿಸುವ (Faculty Development Programme) ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಎಸ್.ಎಮ್.ಎಸ್. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಶ್ರೀ ಮಹೇಶ್ ಕುಮಾರ್, ಶಿಕ್ಷಕರಿಗೆ ಬೇಕಾದ ಗುಣಗಳು ಮತ್ತು ತರಗತಿಯ ಒಳಗೆ ಮತ್ತು ಹೊರಗೆ ಶಿಕ್ಷಕರು ಕೈಗೊಳ್ಳಬೇಕಾದ ಕಾರ್ಯ ಚಟುವಟಿಕೆಗಳ ಕುರಿತು ಸವಿಸ್ತಾರವಾಗಿ ಬೇರೆ-ಬೇರೆ ಚಟುವಟಿಕೆಗಳ ಮೂಲಕ […]
ಡಾ | ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ವಾರ್ಷಿಕ ಸಂಚಿಕೆ “ಶಿಖರ” ಅನಾವರಣ
ಕುಂದಾಪುರ(ಸೆ,20): ಮಂಗಳೂರು ವಿಶ್ವ ವಿದ್ಯಾನಿಲಯದ ಅಂತರ್ ಕಾಲೇಜು ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಸತತ 4 ಬಾರಿ ಪ್ರಥಮ ಸ್ಥಾನವನ್ನು ಪಡೆದಿರುವ ಕುಂದಾಪುರದ ಡಾ | ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಸಂಚಿಕೆ -ಶಿಖರ ಇದರ 2020-21 ನೆ ಸಾಲಿನ ಸಂಚಿಕೆ ಯನ್ನು ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಹುಂತ್ರಿಕೆ ಸುಧಾಕರ ಶೆಟ್ಟಿಯವರು ಇತ್ತೀಚೆಗೆ ನಡೆದ ಕಾಲೇಜಿನ ವಾರ್ಷಿಕೋತ್ಸವದ ಸಭಾ ಕಾರ್ಯಕ್ರದಲ್ಲಿ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮoಗಳೂರಿನ ಡಾ| […]
ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ಓಣo ಸಂಭ್ರಮಾಚರಣೆ
ಕುoದಾಪುರ : (ಸೆ,16) : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಂದಿ ವಿಭಾಗದ ವತಿಯಿಂದ ಆಯೋಜಿಸಲಾದ ಓಣಂ ಹಬ್ಬವನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಕಾರ್ಯಕ್ರಮದ ಸಂಯೋಜಕರಾದ ಡಾ| ದೀಪಾ, ಶ್ರೀಮತಿ ರೇವತಿ ಹಾಗೂ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ್ರೊ. ಕೆ. ಉಮೇಶ್ ಶೆಟ್ಟಿಯವರಿಗೆ ಉತ್ತಮ ಆಡಳಿತಗಾರ ಪ್ರಶಸ್ತಿ
ಕುಂದಾಪುರ (ಸೆ. 14) : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ.ಬಿ.ಬಿ ಹೆಗ್ಡೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ 26 ವರ್ಷಗಳ ಅನುಭವ ಹೊಂದಿರುವ ಪ್ರೊ. ಕೆ. ಉಮೇಶ್ ಶೆಟ್ಟಿಯವರಿಗೆ ಅಭಿಜ್ಞಾ ವಿಸ್ಡಮ್ ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್ ಫಾರ್ ಬೆಸ್ಟ್ ಅಡ್ಮಿನಿಸ್ಟ್ರೇಟರ್ ಪ್ರಶಸ್ತಿ ಲಭಿಸಿದೆ. ಮಂಗಳೂರಿನ ಅಭಿಜ್ಞಾ ಎಜುಕೇಷನ್ ಸಂಸ್ಥೆ ಈ ಪ್ರಶಸ್ತಿಯನ್ನು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆ. 05, 2022ರಂದು ಮಂಗಳೂರಿನಲ್ಲಿ ಪ್ರಶಸ್ತಿ ನೀಡಿ ಗೌರವಿಸಿದೆ.