ಕುಂದಾಪುರ (ಮೇ 17): ಇಲ್ಲಿನ ಡಾ. ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಎರಡನೇ ಅವಧಿಗೆ ರಕ್ಷಕ- ಶಿಕ್ಷಕ ಸಭೆಯನ್ನು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿಯವರು ಮಾತನಾಡಿ, ವರ್ತಮಾನದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳು ವಿದ್ಯಾರ್ಥಿಗಳ ಮೇಲೆ ಬಹಳ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರುತ್ತಿದೆ. ರಕ್ಷಕರು, ಪೋಷಕರು ಈ ಕುರಿತು ಗಮನಕೊಡಬೇಕು . ವಿದ್ಯಾರ್ಥಿಗಳ ಬದುಕನ್ನು ರೂಪಿಸುವಲ್ಲಿ ಹೆತ್ತವರ ಪಾತ್ರ […]
Tag: bbhc
ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ : ಕುಂದಗನ್ನಡ ಸಂಘದ ವಿದ್ಯಾರ್ಥಿಗಳಿಂದ ವಿಸ್ತರಣಾ ಚಟುವಟಿಕೆ
ಕುಂದಾಪುರ (ಮೇ.19): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆಯ ಭಾಗವಾಗಿ ಮೂಡುಗಿಳಿಯಾರಿನ ಶ್ರೀ ಸ್ವಾಮಿ ನಂದೀಕೇಶ್ವರ ದೈವಸ್ಥಾನದ ಕೋಲ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕರಿಸಿದರು. ಈ ಸಂದರ್ಭ ದೈವಸ್ಥಾನದ ಆಡಳಿತ ಮಂಡಳಿಯ ಮೊಕ್ತೇಸರರಾದ ಸುಭಾಷ್ ಚಂದ್ರ ಶೆಟ್ಟಿ, ಸೇವಾಕರ್ತರಾದ ರತ್ನಾಕರ್ ಶೆಟ್ಟಿ, ಚಂದ್ರ ಪಾಣಾ, ಕಾಲೇಜಿನ ಕುಂದಗನ್ನಡ ಸಂಘದ ಸಂಯೋಜಕಿ ರೇಷ್ಮಾ ಶೆಟ್ಟಿ, ಪ್ರವೀಣ ಪೂಜಾರಿ ಉಪಸ್ಥಿತರಿದ್ದರು.
ವಿ. ಕೆ. ಆರ್. ಶಾಲೆ ಕುಂದಾಪುರ : ಎಸ್. ಎಸ್. ಎಲ್. ಸಿ ಸಾಧಕರಿಗೆ ಸನ್ಮಾನ
ಕುಂದಾಪುರ,(ಮೇ,10) : ಕುಂದಾಪುರ ಎಜುಕೇಶನ್ ಸೊಸೈಟಿ( ರಿ) ಎಚ್. ಎಂ. ಎಂ. ಮತ್ತು ವಿ. ಕೆ. ಆರ್. ಶಾಲೆಗಳಲ್ಲಿ 2024- 25 ನೇ ಸಾಲಿನಲ್ಲಿ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ 8 ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ರ್ಯಾಂಕ್ ಗಳಿಕೆಗೆ ಪ್ರೋತ್ಸಾಹಿಸಿದ ಆಡಳಿತ ಮಂಡಳಿ ಮತ್ತು ಶಿಕ್ಷಕರ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಹತ್ತನೇ ತರಗತಿ […]
ಬಿ. ಬಿ. ಹೆಗ್ಡೆ ಕಾಲೇಜು ವಾರ್ಷಿಕೋತ್ಸವ: ಪ್ರಶಸ್ತಿ ಪ್ರದಾನ
ಕುಂದಾಪುರ (ಮೇ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮೇ 02 ರಂದು ಕಾಲೇಜಿನ ಬಿ.ಎಮ್.ಎಸ್. ಕ್ರೀಡಾಂಗಣದ ಬಯಲು ಸಭಾಂಗಣದಲ್ಲಿ ನಡೆಯಿತು. ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಹಮ್ಮಿಕೊಂಡ ವಿವಿಧ ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಿಗೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಈ ಸಂದರ್ಭ ಯಕ್ಷಗಾನ ಕಲಾರಂಗ ಉಡುಪಿಯ ಕಾರ್ಯದರ್ಶಿ ಮುರಳಿ ಕಡೇಕಾರ್ ಮಾತನಾಡಿ, […]
ಬಿ .ಬಿ .ಹೆಗ್ಡೆ ಕಾಲೇಜು : ಎಚ್.ಐ.ವಿ/ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ
ಕುಂದಾಪುರ (ಏಪ್ರಿಲ್ 24): ಇಲ್ಲಿನ ಡಾ| ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2ರ ಆಶ್ರಯದಲ್ಲಿ ಅರಿವು-ಅರಿವು ಮುಖ್ಯ ಶೀರ್ಷಿಕೆಯಡಿಯಲ್ಲಿ ಎಚ್.ಐ.ವಿ./ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿ ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ಮೇಲ್ವಿಚಾರಕರಾದ ಶ್ರೀ ಮಹಾಬಲೇಶ್ವರ್ ಅವರು ಮಾತನಾಡಿ, ಎಚ್.ಐ.ವಿ./ಏಡ್ಸ್ ಕೇವಲ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಚ್ಯ ವಸ್ತುಗಳ ಪ್ರದರ್ಶನ
ಕುಂದಾಪುರ (ಎ.16): ಪ್ರಾಚ್ಯ ವಸ್ತುಗಳು ಪೂರ್ವಜರ ಸಂಪ್ರದಾಯದ ಪ್ರತೀಕ ಅವುಗಳನ್ನು ಉಳಿಸುವ ಮತ್ತು ಪರಿಚಯಿಸುವಲ್ಲಿ ವಿದ್ಯಾರ್ಥಿಗಳ ಪ್ರಯತ್ನ ಶ್ಲಾಘನೀಯ ಎಂದು ಉದಯವಾಣಿ ದಿನಪತ್ರಿಕೆಯ ಉಪಮುಖ್ಯ ವರದಿಗಾರ ಶ್ರೀ ಲಕ್ಷ್ಮಿ ಮಚ್ಚಿನ ಹೇಳಿದರು. ಇವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಪ್ರಾಚ್ಯ ವಸ್ತುಗಳ ಪ್ರದರ್ಶನದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಇನ್ನೋರ್ವ ಮುಖ್ಯ ಅತಿಥಿ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮಾತನಾಡಿ, ಪ್ರಾಚ್ಯ […]
ಬಿ. ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಸಂಚಿಕೆ “ಶಿಖರ”ಅನಾವರಣ
ಕುಂದಾಪುರ, (ಎ 15): ಮಂಗಳೂರು ವಿಶ್ವವಿದ್ಯಾನಿಲಯ ಅಂತರ್-ಕಾಲೇಜು ಮಟ್ಟದ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಗಮನ ಸೆಳೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2023-24ನೇ ಸಾಲಿನ ವಾರ್ಷಿಕ ಸಂಚಿಕೆ ‘ಶಿಖರ’ವನ್ನು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಶ್ರೀ ಶ್ರೀನಿವಾಸ ಸೋಮಯಾಜಿಯವರು ಅನಾವರಣಗೊಳಿಸಿ, ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ […]
ಬಿ. ಬಿ. ಹೆಗ್ಡೆ ಕಾಲೇಜಿಗೆ ‘ಪ್ರಜ್ಞಾ– 2025’ ಸಮಗ್ರ ಪುರಸ್ಕಾರ
ಕುಂದಾಪುರ (ಎ.22): ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ಎರಡು ದಿನ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆ ‘ಪ್ರಜ್ಞಾ 2025’ ರಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮೊದಲನೇ ದಿನ ಶೈಕ್ಷಣಿಕ ಸ್ಪರ್ಧೆಯಲ್ಲಿ 15 ಬಹುಮಾನ, ಎರಡನೇ ದಿನ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಆಯೋಜಿಸಿದ ಎಲ್ಲಾ ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನ ಪಡೆದು, ಒಟ್ಟು 24 ಬಹುಮಾನ ಪಡೆಯುವ ಮೂಲಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಎರಡೂ ವಿಭಾಗಗಳಲ್ಲಿ […]
ಬಿ. ಬಿ. ಹೆಗ್ಡೆ ಕಾಲೇಜು : ಜೀವನಮೌಲ್ಯ–ಉಪನ್ಯಾಸ
ಕುಂದಾಪುರ( ಏ, 09): ಸರಳ ಜೀವನದ ಸೂತ್ರವೇ ಜೀವನ ಮೌಲ್ಯ. ತಾವು ಸರಳವಾಗಿ ಬದುಕುವ ಮೂಲಕ ಇನ್ನೊಬ್ಬರಿಗೆ ನೆರವಾಗಬೇಕು. ಇದು ಜೀವನಕ್ಕೆ ಸಂತೃಪ್ತಿ ನೀಡುತ್ತದೆ ಎಂದು ಉಡುಪಿಯ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಹೇಳಿದರು. ಇವರು ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಮಾಲಿಕೆ 4ರ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಈ ಸಂದರ್ಭ ಕಾಲೇಜಿನ ಗವರ್ನಿಂಗ್ ಕೌನ್ಸಿಲ್ […]
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ
ಕುಂದಾಪುರ (ಏ,5): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಡಿಪಾರ್ಟ್ಮೆಂಟ್ ಹಾಗೂ ಕುಂದಾಪುರದ ಸ್ಪರ್ಧಾ ಸಾರಥಿ ಅಕಾಡೆಮಿ ಇವುಗಳ ಜಂಟಿ ಆಶ್ರಯದಲ್ಲಿ ದ್ವಿತೀಯ ಮತ್ತು ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರ ಕಾಲೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿ ಉಪ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪಾಟೀಲ್ ಮಾತನಾಡಿ, ಹೆತ್ತವರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಕ್ರಿಯಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ […]