ಕುಂದಾಪುರ (ಎ ,20): ಇಲ್ಲಿನ ಡಾ|ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳು ಬ್ರಹ್ಮಾವರದ ಉಪ್ಪುರಿನ ಕೆ ಎಮ್ ಎಫ್ ನಂದಿನಿ ಹಾಲಿನ ಉತ್ಪನ್ನ ಘಟಕ ಹಾಗೂ ತೆಕಟ್ಟೆ ಯ ಹೆಬ್ಬಾರ್ ಕೋಕೋನಟ್ ಆಯಿಲ್ ಘಟಕಕ್ಕೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ನಂದಾ ರೈ ಹಾಗೂ ಉಪನ್ಯಾಸಕ ರಜತ್ ಬoಗೇರ ಉಪಸ್ಥಿತರಿದ್ದರು .
Tag: bbhc
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪದವಿ ಆಸೆ ಪೂರೈಸುವ ಆಶಯದಿಂದ ರೂಪು ತಳೆದ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು
ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ , ಉಡುಪಿ ಜಿಲ್ಲೆಯ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ವಿಶೇಷ ಸಾಲಿನಲ್ಲಿ ಗುರುತಿಸಿಕೊಂಡಿದೆ. ‘ಸಮಾಜದ ಕಟ್ಟಕಡೆಯ ಮಗು ವಿದ್ಯಾವಂತನಾಗಬೇಕು’ ಎಂಬುದು ಕಾಲೇಜಿನ ಅಧ್ಯಕ್ಷರು ಮತ್ತು ಬೈಂದೂರು ಶಾಸಕರಾದ ಶ್ರೀ.ಬಿ.ಎಂ. ಸುಕುಮಾರ ಶೆಟ್ಟಿಯವರ ಧ್ಯೇಯ. 130 ವಿದ್ಯಾರ್ಥಿಗಳೊಂದಿಗೆ ಹನ್ನೆರಡು ವರ್ಷಗಳ ಹಿಂದೆ ಆರಂಭಗೊಂಡ ಸಂಸ್ಥೆಯಲ್ಲಿ ಪ್ರಸ್ತುತ 1500 ಕಲಿಕಾರ್ಥಿಗಳಿದ್ದಾರೆ ಎಂಬುದು ಸಂಸ್ಥೆಯ ಸಾಧನೆಯ ಹಾದಿಯ ಹೆಗ್ಗುರುತು. ಯುಜಿಸಿ “ನ್ಯಾಕ್’ ಸಂಸ್ಥೆಯ “B++’ […]
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪದವಿ ಆಸೆ ಪೂರೈಸುವ ಆಶಯದಿಂದ ರೂಪು ತಳೆದ ಸಂಸ್ಥೆ ಕುಂದಾಪುರದ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು
ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ , ಉಡುಪಿ ಜಿಲ್ಲೆಯ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ವಿಶೇಷ ಸಾಲಿನಲ್ಲಿ ಗುರುತಿಸಿಕೊಂಡಿದೆ. ‘ಸಮಾಜದ ಕಟ್ಟಕಡೆಯ ಮಗು ವಿದ್ಯಾವಂತನಾಗಬೇಕು’ ಎಂಬುದು ಕಾಲೇಜಿನ ಅಧ್ಯಕ್ಷರು ಮತ್ತು ಬೈಂದೂರು ಶಾಸಕರಾದ ಶ್ರೀ.ಬಿ.ಎಂ. ಸುಕುಮಾರ ಶೆಟ್ಟಿಯವರ ಧ್ಯೇಯ. 130 ವಿದ್ಯಾರ್ಥಿಗಳೊಂದಿಗೆ ಹನ್ನೆರಡು ವರ್ಷಗಳ ಹಿಂದೆ ಆರಂಭಗೊಂಡ ಸಂಸ್ಥೆಯಲ್ಲಿ ಪ್ರಸ್ತುತ 1500 ಕಲಿಕಾರ್ಥಿಗಳಿದ್ದಾರೆ ಎಂಬುದು ಸಂಸ್ಥೆಯ ಸಾಧನೆಯ ಹಾದಿಯ ಹೆಗ್ಗುರುತು. ಯುಜಿಸಿಯ ಅಂಗ ಸಂಸ್ಥೆಯಾದ “ನ್ಯಾಕ್’ […]
ಡಾ| ಬಿ.ಬಿ.ಹೆಗ್ಡೆ ಕಾಲೇಜು:‘ವಿ-ಗ್ರೋ’ ಬ್ಯುಸಿನೆಸ್ ಡೇ – ವ್ಯವಹಾರ ಯೋಜನೆ ಪ್ರಸ್ತುತಿ
ಕುಂದಾಪುರ, (ಏ, 17) : ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಕೌಶಲ್ಯ ಬೆಳೆಸುವ ಉದ್ಧೇಶದಿಂದ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗವು ಆಯೋಜಿಸಿರುವ ‘ವಿ-ಗ್ರೋ’ ಬ್ಯುಸಿನೆಸ್ ಡೇ ಇದರ ಮೊದಲನೇ ಹಂತದ ವ್ಯವಹಾರ ಯೋಜನೆ ಪ್ರಸ್ತುತಿ ಕಾರ್ಯಕ್ರಮ ನೆರವೇರಿತು. ವಿದ್ಯಾರ್ಥಿಗಳು ತಮ್ಮಲ್ಲಿರುವ ವ್ಯವಹಾರ ಜ್ಞಾನವನ್ನು, ಹೊಸ ಹೊಸ ಕ್ರಿಯಾ ಯೋಜನೆ ಮತ್ತು ಯೋಚನೆಯನ್ನು ಪ್ರಸ್ತುತ ಪಡಿಸುವ ಮೂಲಕ, ಕೌಶಲ್ಯ ಅಭಿವೃದ್ಧಿಗೆ ಇದೊಂದು ಸೂಕ್ತ […]
ಡಾ| ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ಪಿಜಿಸಿಇಟಿ ಕುರಿತು ಮಾಹಿತಿ ಕಾರ್ಯಗಾರ
ಕುಂದಾಪುರ (ಮಾ, 28): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಪ್ರವೇಶಕ್ಕಾಗಿ ನಡೆಸುವ ಪಿಜಿಸಿಇಟಿ ಪರೀಕ್ಷೆಯ ಕುರಿತು ಮಾಹಿತಿ ಕಾರ್ಯಗಾರ ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರಿನ ಅಭಿಜ್ಞಾ ವಿದ್ಯಾಸಂಸ್ಥೆಯ ನಿರ್ದೇಶಕರಾದ ಶ್ರೀ ಅಭಿಲಾಷ್ ಪರೀಕ್ಷೆಯ ತಯಾರಿ ಹೇಗಿರಬೇಕು, ಪರೀಕ್ಷೆ ಯಾವ ಸಂದರ್ಭದಲ್ಲಿ ನಡೆಸಲಾಗುತ್ತದೆ, ಪರೀಕ್ಷೆಯ ಪೂರ್ವ ತಯಾರಿಯೊಂದಿಗೆ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಎನ್ನುವುದರ ಬಗ್ಗೆ […]
ಡಾ.ಬಿ.ಬಿ. ಹೆಗ್ಡೆ ಕಾಲೇಜು: ಹಸ್ತಿನಾವತಿ ಕಾದಂಬರಿಯ ಮರು ಅನಾವರಣ
ಕುಂದಾಪುರ(,ಮಾ.28):ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜನಸೇವಾ ಟ್ರಸ್ಟ್ ಮೂಡುಗಿಳಿಯಾರು ಆಶ್ರಯದಲ್ಲಿ ‘ಹಸ್ತಿನಾವತಿ’ ಕಾದಂಬರಿಯ ಮರು ಅನಾವರಣ ಕಾರ್ಯಕ್ರಮ ಮಾ.26 ರಂದು ನಡೆಯಿತು. ಬೆಂಗಳೂರು ವಿಶ್ವವಿದ್ಯಾಲಯದ ವಿತ್ತಾಧಿಕಾರಿ ಅಜಿತ್ ಹೆಗ್ಡೆ ಶಾನಾಡಿಯವರು ಜೋಗಿಯವರ ಹಸ್ತಿನಾವತಿ ಕಾದಂಬರಿ ಅನಾವರಣಗೊಳಿಸಿ ಮಾತನಾಡಿದರು. ಈ ಕೃತಿಯಲ್ಲಿ ರಾಜಕೀಯ, ಧಾರ್ಮಿಕ, ಪ್ರೇಮಕತೆ ಎಲ್ಲವೂ ಇದೆ. ಮುಖ್ಯವಾಗಿ ಯುವ ಸಮುದಾಯ ಓದಬೇಕಾದ ಪುಸ್ತಕವಿದು. ಓದುಗರನ್ನು ಬಿಡದಂತೆ ಓದಿಸಿಕೊಂಡು ಹೋಗುವ ಕಲೆ ಜೋಗಿಯವರಿಗೆ ಜನ್ಮತಃ ಸಿದ್ಧಿಯಾಗಿದೆಎಂದರು. ಬದುಕಿನ ವಿಭಿನ್ನ ಪಾತ್ರಗಳನ್ನು […]
ಡಾ|ಬಿ. ಬಿ.ಹೆಗ್ಡೆ ಕಾಲೇಜು: ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ತರಬೇತಿಯ ಉದ್ಘಾಟನೆ
ಕುಂದಾಪುರ ( ಮಾ.14): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ನರೇನ್ ಅಕಾಡೆಮಿ ಬ್ರಹ್ಮಾವರ ಇವರ ಜಂಟಿ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರ ತರಬೇತಿ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸರಕಾರಿ ಕ್ಷೇತ್ರದಲ್ಲಿ ಲಭ್ಯವಿರುವ ವಿವಿಧ ಉದ್ಯೋಗಾವಕಾಶಗಳನ್ನು ತಮ್ಮದಾಗಿಸಿಕೊಳ್ಳಲು ಅಗತ್ಯವಿರುವ ಸ್ಪರ್ಧಾತ್ಮಕ ಪರೀಕ್ಷಾ ಕೌಶಲ್ಯಗಳನ್ನು ಹೆಚ್ಚಿಸುವ ಉದ್ಧೇಶದಿಂದ ಆರಂಭಗೊAಡಿರುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನಿರಂತರ ಕಠಿಣ ಪರಿಶ್ರಮ ವಹಿಸಿ, ಪರೀಕ್ಷೆಯಲ್ಲಿ ಯಶಸ್ಸು ತಮ್ಮದಾಗಿಸಿಕೊಳ್ಳಲಿ ಎಂದು ಕಾಲೇಜಿನ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ವಿಶ್ವ ಮಹಿಳಾ ದಿನಾಚರಣೆ-ಸಾಧಕ ಮಹಿಳೆಯರಿಗೆ ಸನ್ಮಾನ
ಕುಂದಾಪುರ(ಮಾ.,08): ವಿಶ್ವ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಕುಂದಾಪುರ ಸಿಟಿ ಜೆಸಿಐ ಹಾಗೂ ಕಾಲೇಜಿನ ಎನ್.ಎಸ್.ಎಸ್. ಘಟಕ, ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಾದ ಶರ್ಮಿಳಾ ಬುತೆಲ್ಲೋ (ಉದ್ಯಮ ಕ್ಷೇತ್ರ), ಜ್ಯೋತಿ (ಕೃಷಿ ಮತ್ತು ಹೈನುಗಾರಿಕೆ), ಶ್ರೀನಿಧಿ ಖಾರ್ವಿ(ಸಾಂಸ್ಕೃತಿಕ), ಅಂಕಿತಾ ಸಿ. ಶೇಟ್ (ಬಹುಮುಖ ಪ್ರತಿಭೆ), ಪ್ರತೀಕ್ಷಾ (ಶೈಕ್ಷಣಿಕ), ದಿವ್ಯಾ (ಕ್ರೀಡೆ) ಇವರನ್ನು ಸನ್ಮಾನಿಸಲಾಯಿತು ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ […]
ಡಾ| ಬಿ.ಬಿ.ಹೆಗ್ಡೆ ಕಾಲೇಜು: ವೈಯಕ್ತಿಕ ಹಣಕಾಸು ನಿರ್ವಹಣೆ ಕುರಿತು ಕಾರ್ಯಾಗಾರ
ಕುಂದಾಪುರ (ಫೆ ,28 ): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಸಂಘದ ವತಿಯಿಂದ ‘ವೈಯಕ್ತಿಕ ಹಣಕಾಸು ನಿರ್ವಹಣೆ’ ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಇತ್ತೀಚೆಗೆ ನಡೆಸಲಾಯಿತು. ಈ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಎಮ್.ಎಸ್.ಎನ್. ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್, ಮಂಗಳೂರು ಇದರ ಅಸಿಸ್ಟೆಂಟ್ ಪ್ರೊಫೆಸರಾದ ಡಾ| ಶರಣ್ ಕುಮಾರ್ ಶೆಟ್ಟಿಯವರು ಆಗಮಿಸಿದ್ದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. […]
ಡಾ| ಬಿ.ಬಿ. ಹೆಗ್ಡೆ ಕಾಲೇಜು – ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಾಗಾರ
ಕುಂದಾಪುರ (ಫೆ.06): ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಹಾಗೂ ಇಂಡಿಯನ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು. ಇಂಡಿಯನ್ ರೆಡ್ ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಯುವ ರೆಡ್ ಕ್ರಾಸ್ ಕಾರ್ಯವೈಕರಿಯಲ್ಲಿ ಇಂದಿನ ಯುವ ಪೀಳಿಗೆ ಹೇಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. […]










