ಕುಂದಾಪುರ (ಮಾ, 25) : ರಾಷ್ಟ್ರೀಯ ಶಿಕ್ಷಣ ನೀತಿಯೇ ತಿಳಿಸಿರುವಂತೆ ಪದವಿಯ ಸಂದರ್ಭದಲ್ಲಿ ಸಂಶೋಧನೆಗೆ ಹೆಚ್ಚು ಒತ್ತು ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗಿಂತ ಮೊದಲು ಉಪನ್ಯಾಸಕರು ಹೆಚ್ಚು ಸಂಶೋಧನೆಯಲ್ಲಿ ತೊಡಗುವಂತಾಗಬೇಕು. ಸಂಶೋಧನಾತ್ಮಕ ಲೇಖನಗಳನ್ನು ಹೇಗೆ ಮತ್ತು ಎಲ್ಲಿ ಪ್ರಕಟಿಸಬೇಕು ಎನ್ನುವುದನ್ನು ಉಜಿರೆಯ ಎಸ್.ಡಿ.ಎಮ್. ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ|.ನಾಗೇಂದ್ರ ಎಸ್ ತಿಳಿಸಿಕೊಟ್ಟರು. ಅವರು ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ಮಾರ್ಚ್ 24ರಂದು ನಡೆದ “ಪ್ರಾಧ್ಯಾಪಕರ […]
Tag: bbhc
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಅಂತರ್ ಕಾಲೇಜು ಸಾಂಪ್ರದಾಯಿಕ ಕ್ರೀಡೆಗಳ ಸಂಪನ್ನ
ಕುಂದಾಪುರ (ಮಾ,22): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ ಕಾಲೇಜು ಮಟ್ಟದ ಸಾಂಪ್ರದಾಯಿಕ ಕ್ರೀಡೆಗಳ ಸಮಾರೋಪ ಸಮಾರಂಭ ಮಾರ್ಚ್ 19ರಂದು ನಡೆಯಿತು. ಕಾರ್ಯಕ್ರಮದಲ್ಲಿ ಬ್ರಹ್ಮಾವರದ ಎಸ್.ಎಮ್.ಎಸ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ವೆಂಕಟೇಶ್ ಭಟ್, ಕುಂದಾಪುರದ ಭಂಡಾರ್ಕಾರ್ ಆರ್ಟ್ಸ್ ಎಂಡ್ ಸಾಯನ್ಸ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ಶಂಕರನಾರಾಯಣ, ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನ […]
ಡಾ| ಬಿ.ಬಿ. ಹೆಗ್ಡೆ ಕಾಲೇಜು : ಸಾಂಪ್ರದಾಯಿಕ ದಿನಾಚರಣೆ
ಸಂಸ್ಕೃತಿ, ಆಚರಣೆಗಳು ಕೇವಲ ಒಂದು ದಿನಕ್ಕಷ್ಟೇ ಸೀಮಿತವಾಗಬಾರದು. ಧಾರ್ಮಿಕ ಕಾರ್ಯಕ್ರಮಗಳಿಗಾದರೂ ಸಾಂಪ್ರದಾಯಿಕ ಉಡುಗೆ ತೊಡುವಂತಾಗಬೇಕು. ಆ ಮೂಲಕ ನಮ್ಮ ಸಂಸ್ಕೃತಿ ಆಚಾರ ವಿಚಾರಗಳು ಉಳಿಯುವಂತಾದರೆ ಈ ದಿನದ ಆಚರಣೆ ಅರ್ಥಪೂರ್ಣವಾಗುತ್ತದೆ.
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟರಿಗೆ ನುಡಿನಮನ
ಬರಿ ಪದಕ್ಕೆ ಪದ ಸೇರಿಸಿ ಹಾಡು ಕಟ್ಟಿ, ಒಂದೊಂದು ಅಕ್ಷರವನ್ನೂ ತುಂಬಾ ಅನುಭವಿಸಿ ಭಾವಗಳನ್ನೇ ಎದೆಗಿಳಿಸಿದ ಕವಿ ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರ ಗೀತೆಗಳು ಬದುಕಿನ ಗೀತೆಗಳು ಎಂದು ಸಾಂಸ್ಕೃತಿಕ ಚಿಂತಕ ಶ್ರೀ ಮುಸ್ತಾಕ್ ಹೆನ್ನಾಬೈಲು ಹೇಳಿದರು.
ಡಾ| ಬಿ. ಬಿ. ಹೆಗ್ಡೆ ಕಾಲೇಜು : ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆ ಉದ್ಘಾಟನೆ ಮತ್ತು ನಿಪುಣ ಪರೀಕ್ಷೆ ತರಬೇತಿ
ಭಾರತ್ ಸೈಟ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲೆಯ ಜಿಲ್ಲಾ ಸಂಘಟಕರಾದ ಶ್ರೀಮತಿ ಸುಮನ ಶೇಖರ್ ಮಾರ್ಚ್ 16ರಂದು ಡಾ.ಬಿ .ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರೂವರ್ಸ್ ಮತ್ತು ರೇಂಜರ್ಸ್ ಘಟಕಗಳ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿದರು.
ಡಾ. ಬಿ.ಬಿ. ಹೆಗ್ಡೆ ಕಾಲೇಜು : ಎನ್ . ಎಸ್. ಎಸ್. ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ(ಮಾ.15): ಭಾರತ ಕರ್ಮಭೂಮಿ, ಈ ದೇಶದಲ್ಲಿ ಜನಿಸಿರುವುದೇ ನಮ್ಮೆಲ್ಲರ ಸೌಭಾಗ್ಯ. ಭಾರತದಂತಹ ದೇಶದಲ್ಲಿ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಎನ್.ಎಸ್.ಎಸ್. ಪ್ರಮುಖ ಪಾತ್ರವಹಿಸುತ್ತಿದೆ. ವಿದ್ಯಾರ್ಥಿಗಳು ಎನ್.ಎಸ್.ಎಸ್. ಕಾರ್ಯಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಶಿಸ್ತು-ಸಂಯಮ, ಸಹಬಾಳ್ವೆಯೊಂದಿಗೆ ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು,ಜೊತೆಗೆ ದೇಶ ಕಟ್ಟುವ ಕಾರ್ಯದಲ್ಲಿ ಪ್ರವೃತ್ತರಾಗಬೇಕೆಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಉಪನ್ಯಾಸಕರಾದ ಶ್ರೀ ಸಂಜೀವ ಗುಂಡ್ಮಿ ಹೇಳಿದರು. ಅವರು ಡಾ| ಬಿ. ಬಿ . ಹೆಗ್ಡೆ ಪ್ರಥಮ ದರ್ಜೆ […]
ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸುದೀಪ್ ಶೆಟ್ಟಿ ಆಜ್ರಿ ಆಯ್ಕೆ
ಕುಂದಾಪುರ (ಮಾ.13) ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ 2020 -21ನೇ ಸಾಲಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸುದೀಪ್ ಶೆಟ್ಟಿ ಆಜ್ರಿಯವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಜಿತ್ ಶೆಟ್ಟಿ ಹಾಗೂ ಭರತ್ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾಗಿ ದೀಪಾ ಪೂಜಾರಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರೆಸಿಲ್ಲಾ, ಜೊತೆ ಕಾರ್ಯದರ್ಶಿಗಳಾಗಿ ಆಶಾ ಶೆಟ್ಟಿ ಹಾಗೂ ಸ್ವಸ್ತಿ ಶೆಟ್ಟಿ , ಕೋಶಾಧಿಕಾರಿಯಾಗಿ ಯೋಗೀಶ್ ಶ್ಯಾನುಭಾಗ್ ಆಯ್ಕೆಯಾಗಿದ್ದಾರೆ. ಕಾಲೇಜಿನ ಸಭಾಂಗಣದಲ್ಲಿ ಮಾರ್ಚ್ 13 ರಂದು ನಡೆದ […]
ಕ್ರೀಡೆಗೆ ಶಿಸ್ತು ಮತ್ತು ನಿರಂತರ ಪರಿಶ್ರಮ ಮುಖ್ಯ : ಮನೀಷ್ ಪೂಜಾರಿ
ಕುಂದಾಪುರ, ಮಾ.(10) : ಅತ್ಯಂತ ಕಿರು ಅವಧಿಯಲ್ಲಿ ಕ್ರೀಡೆಯಲ್ಲಿ ಉತ್ಕ್ರಷ್ಟ ಸಾಧನೆ ಮಾಡುವ ಮೂಲಕ ಮಂಗಳೂರು ವಿಶ್ವವಿದ್ಯಾನಿಲಯದ ಗಮನ ಸೆಳೆದ ಸಂಸ್ಥೆ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆಕಾಲೇಜು. ವಿದ್ಯಾರ್ಥಿದೆಸೆಯಲ್ಲಿ ನನ್ನ ಕ್ರೀಡಾಪ್ರತಿಭೆಯನ್ನು ಗುರುತಿಸಿದ ಈ ಸಂಸ್ಥೆಗೆ ನಾನು ಅಭಾರಿಯಾಗಿದ್ದೇನೆ. ಕ್ರೀಡಾಪಟುಗಳು ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಶಿಸ್ತು ಮತ್ತು ನಿರಂತರ ಪರಿಶ್ರಮ ಮುಖ್ಯ ಎಂದು ಖಾಸಗಿ ಕಂಪೆನಿ ಉದ್ಯೋಗಿ ಕಾಲೇಜಿನ ಪೂರ್ವ ವಿದ್ಯಾರ್ಥಿ ಮನೀಷ್ ಪೂಜಾರಿ ಹೇಳಿದರು.ಅವರು ನಗರದ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ವಾರ್ಷಿಕ ಕ್ರೀಡಾಕೂಟ ಸಂಪನ್ನ
ಕುಂದಾಪುರ, (ಮಾ. 10) : ನಗರದ ಗಾಂಧಿ ಮೈದಾನದಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭ ಮಾರ್ಚ್ 10ರಂದು ನಡೆಯಿತು.ಕಾಲೇಜು ಪೂರ್ವ ವಿದ್ಯಾರ್ಥಿ ಉದ್ಯಮಿ ಶ್ರೀಧರ್ ಶೆಟ್ಟಿ ಕೆರಾಡಿ, ಯುವಜನ ಸೇವಾ ವಿಭಾಗದ ಕ್ರೀಡಾಧಿಕಾರಿ ಶ್ರೀ ಕುಸುಮಾಕರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಶ್ರೀ ಸೀತಾರಾಮ ನಕೃತ್ತಾಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜನ ಪ್ರಾಂಶುಪಾಲರಾದ ಪ್ರೊ| […]
ಡಾ| ಬಿ.ಬಿ ಹೆಗ್ಡೆ ಕಾಲೇಜು : ಲಯನ್ಸ್ ಕ್ಲಬ್ ಕುಂದಾಪುರ ವತಿಯಿಂದ ವಾಟರ್ ಕೂಲರ್ ಹಸ್ತಾಂತರ
ಒಂದು ಜಿಲ್ಲೆ ಒಂದು ಯೋಜನೆಯಡಿ ಲಯನ್ಸ್ ಕ್ಲಬ್ ಕುಂದಾಪುರದ ಅಧ್ಯಕ್ಷರಾಗಿರುವ ಲಯನ್ ಕೆ. ಚಂದ್ರಶೇಖರ್ ರವರು ಡಾ. ಬಿ. ಬಿ. ಹೆಗ್ಡೆ ಕಾಲೇಜಿಗೆ ಕೊಡುಗೆಯಾಗಿ ನೀಡಿದ ವಾಟರ್ ಕೂಲರ್ ನ್ನು ಲಯನ್ಸ್ ಕ್ಲಬ್ ಇದರ ಜಿಲ್ಲಾ ಗವರ್ನರ್ Ln. ಎನ್.ಎಮ್ ಹೆಗ್ಡೆ ಹಾಗೂ ಮಾಜಿ ಜಿಲ್ಲಾ ಗವರ್ನರ್ ಪ್ರಕಾಶ್.ಟಿ.ಸೋನ್ಸ್ ಉದ್ಘಾಟಿಸಿದರು.