ಕುಂದಾಪುರ (ಮಾ. 8) ವಿಶ್ವ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಕಾಲೇಜಿನ ಮಹಿಳಾ ಸಬಲೀಕರಣ ಘಟಕ ಹಾಗೂ ಜೇಸಿರೇಟ್ ವಿಂಗ್ ಆಫ್ ಜೆಸಿಐ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಲಾಯಿತು. ಡಾ.ಶ್ರಾವ್ಯ (ಸಮಾಜಸೇವೆ), ಮಮತಾ ಆರ್. ಶೆಟ್ಟಿ,ಹದ್ದೂರು(ಕ್ರಷಿ) ಲಿರಾ ಜೂಲಿಯೆಟ್ (ವ್ಯವಹಾರಿಕ), ಡಾ.ಸರೋಜಿನಿ (ಶಿಕ್ಷಣ) ಕಾಲೇಜಿನ ವಿದ್ಯಾರ್ಥಿನಿಯರಾದ ನಿವೇದಿತ (ಕ್ರೀಡೆ) ಶುಭಲಕ್ಷ್ಮಿ (ಶಿಕ್ಷಣ) ಇವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. […]
Tag: bbhc
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಜಾಗೃತಿ ಕಾರ್ಯಕ್ರಮ
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಾನವ ಹಕ್ಕುಗಳ ಘಟಕ, ರೋಟರಿ ದಕ್ಷಿಣ ಹಾಗೂ ಯುವ ಸ್ಪಂದನ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪೋಕ್ಸೋ ಕಾಯ್ದೆ, ಮಾನವ ಹಕ್ಕುಗಳು ಮತ್ತು ರಸ್ತೆ ಸುರಕ್ಷತೆಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಡಾ|ಬಿ. ಬಿ. ಹೆಗ್ಡೆ ಕಾಲೇಜು : ಉಚಿತ ನ್ಯಾಪ್ಕಿನ್ ವಿತರಣೆ ಕಾರ್ಯಕ್ರಮ
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜನ ಯುವ ರೆಡ್ಕ್ರಾಸ್ ಘಟಕ, ಮಹಿಳಾ ಘಟಕ ಹಾಗೂ ಭಾರತೀಯ ರೆಡ್ಕ್ರಾಸ್ ಕುಂದಾಪುರ ಘಟಕದ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ನ್ಯಾಪ್ಕಿನ್ ವಿತರಣೆ’ ಕಾರ್ಯಕ್ರಮ ಮಾರ್ಚ್ 4 ರಂದು ನಡೆಯಿತು.
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಹರಿಕಥಾ ಕಲಾಕ್ಷೇಪ ಕಾರ್ಯಕ್ರಮ
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತ ಕಲಾ ಸಂಘದ ಆಶ್ರಯದಲ್ಲಿ ‘ಹರಿಕಥಾ ಕಲಾಕ್ಷೇಪ’ ಎನ್ನುವ ಹರಿಕಥಾ ಪ್ರವಚನ ಕಾರ್ಯಕ್ರಮ ಮಾರ್ಚ್ 02 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು.
ಡಾ|ಬಿ.ಬಿ. ಹೆಗ್ಡೆ ಕಾಲೇಜು : ಯಕ್ಷಗಾನ ಮ್ಯೂಸಿಯಂಗೆ ಭೇಟಿ
ಕುಂದಾಪುರ (ಮಾ.1): ಡಾ| ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ ಇದರ ಯಕ್ಷಗಾನ ಸಂಘದ ವತಿಯಿಂದ ಫೆಬ್ರವರಿ 27ರಂದು ಸಮೀಪದ ಭಂಡಾರ್ಕಾರ್ಸ್ ಕಾಲೇಜಿನ ಯಕ್ಷಗಾನ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಯಕ್ಷಗಾನ ವಸ್ತುಸಂಗ್ರಹಾಲಯದ ಸಂಯೋಜಕರು ಹಾಗೂ ಇಂಗ್ಲಿಷ್ ಉಪನ್ಯಾಸಕ ಶಶಾಂಕ ಪಟೇಲ್ ಯಕ್ಷಗಾನದ ವಿವಿಧ ಮಾದರಿ ಮತ್ತು ಪರಿಕರಗಳ ಬಗ್ಗೆ ಮಾಹಿತಿ ನೀಡಿದರು. ಬಡಗು, ಬಡಾಬಡಗು ಹಾಗೂ ತೆಂಕುತಿಟ್ಟು ಯಕ್ಷಗಾನದ ವೈಶಿಷ್ಟತೆ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಡಾ.ಬಿ.ಬಿ […]
ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನದ ಪಾತ್ರ ಅತಿಮುಖ್ಯ : ಪ್ರೊ. ಕೆ. ಉಮೇಶ್ ಶೆಟ್ಟಿ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ತಂತ್ರಜ್ಞಾನ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಅನೇಕ ಅವಕಾಶಗಳಿದ್ದು ವಿದ್ಯಾರ್ಥಿಗಳು ತಮಗೆ ಲಭ್ಯವಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಅಂತರ್ಕಾಲೇಜು ಮಹಿಳೆಯರ ತ್ರೋಬಾಲ್ ಪಂದ್ಯಕೂಟ- ಸಮಾರೋಪ ಸಮಾರಂಭ
ಕುಂದಾಪುರ(ಫೆ.25): ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಮಂಗಳೂರು ವಿ. ವಿ. ಕುಂದಾಪುರ ವಲಯ ಮಟ್ಟದ ಅಂತರ್ಕಾಲೇಜು ಮಹಿಳಾ ತ್ರೋಬಾಲ್ ಪಂದ್ಯಕೂಟದ ಸಮಾರೋಪ ಸಮಾರಂಭ ಫೆ. 24ರ ಸಂಜೆ 4.30ಕ್ಕೆ ಕಾಲೇಜಿನ ಬಿ.ಎಂ.ಎಸ್. ಕ್ರೀಡಾಂಗಣದಲ್ಲಿ ನಡೆಯಿತು. ತ್ರೋಬಾಲ್ ಪಂದ್ಯಕೂಟದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಇದರ ಕಾರ್ಯದರ್ಶಿಗಳಾದ ಶ್ರೀ ಸೀತಾರಾಮ ನಕ್ಕತ್ತಾಯ ವಹಿಸಿದ್ದರು. ಮುಖ್ಯ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ – ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ಕಾಲೇಜು ಮಹಿಳೆಯರ ತ್ರೋಬಾಲ್ ಪಂದ್ಯಾಟ ಉದ್ಘಾಟನೆ
ಕ್ರೀಡೆಯಿಂದ ಅದೆಷ್ಟೋ ಯುವಜನತೆ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿಯನ್ನು ಮೆರೆಯುವುದರ ಜೊತೆಗೆ ತಮ್ಮ ವ್ಯಕ್ತಿತ್ವ ಮತ್ತು ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಲೆಕ್ಕಪರಿಶೋಧಕರು ಹಾಗೂ ತರಿಗೆ ಸಲಹೆಗಾರರಾದ ಶ್ರೀ ಗಣೇಶ್ ಶೆಟ್ಟಿ ಮೊಳಹಳ್ಳಿ ಹೇಳಿದರು.
ಡಾ. ಬಿ. ಬಿ. ಹೆಗ್ಡೆ ಕಾಲೇಜು – ಫೆ.24 ರಂದು ಅಂತರ್ ಕಾಲೇಜು ಮಹಿಳಾ ವಿಭಾಗದ ತ್ರೋಬಾಲ್ ಪಂದ್ಯಾಕೂಟ
ಕುಂದಾಪುರ ಎಜುಕೇಶನ್ ಸೊಸೈಟಿ(ರಿ) ಪ್ರವರ್ತಿತ ಡಾl ಬಿ.ಬಿ ಹೆಗ್ದೆ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಕುಂದಾಪುರ ವಲಯ ಮಟ್ಟದ ಮಹಿಳಾ ವಿಭಾಗದ ತ್ರೋಬಾಲ್ ಪಂದ್ಯಾಕೂಟ ಇದೇ ಫೆಬ್ರವರಿ 24ರಂದು ಕಾಲೇಜಿನ ಬಿ.ಎಂ.ಎಸ್. ಕ್ರೀಡಾಂಗಣದಲ್ಲಿ ನಡೆಯಲಿದೆ.
ಡಾ| ಬಿ. ಬಿ. ಹೆಗ್ಡೆ ಕಾಲೇಜು : ರಕ್ಷಕ – ಶಿಕ್ಷಕ ಸಭೆ
ಸಭೆಯ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿಯವರು ಮಾತನಾಡಿ, ಶಿಸ್ತುಬದ್ಧ ಶೈಕ್ಷಣಿಕ ವಾತಾವರಣದಿಂದ ಕೂಡಿರುವ ಕಾಲೇಜು ಅತ್ಯಂತ ಕಿರು ಅವಧಿಯಲ್ಲಿ ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ.










