ಕುಂದಾಪುರ (ಆ18): ನಶಾ ಮುಕ್ತ ಭಾರತ ಅಭಿಯಾನವು ದೇಶದ ಆರೋಗ್ಯಕರ ಮತ್ತು ಪ್ರಗತಿಪರ ಸಮಾಜ ನಿರ್ಮಾಣದ ಮಹತ್ವದ ಪ್ರಯತ್ನವಾಗಿದೆ. ಇಂದಿನ ಕಾಲದಲ್ಲಿ ಯುವಜನರು ಮಾದಕ ವಸ್ತುಗಳ ಬಲೆಗೆ ಬೀಳುತ್ತಿರುವುದು ವಿಷಾದನೀಯ. ವ್ಯಸನವು ವ್ಯಕ್ತಿಯ ಆರೋಗ್ಯವನ್ನು ಮಾತ್ರವಲ್ಲ, ಕುಟುಂಬದ ಶಾಂತಿ ಮತ್ತು ಸಮಾಜದ ಪ್ರಗತಿಯನ್ನು ಸಹ ಹಾಳುಮಾಡುತ್ತದೆ ಎಂದು ಕುಂದಾಪುರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ನಂಜ ನಾಯ್ಕ್ ಅವರು ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ ಹೆಗ್ಡೆ ಪ್ರಥಮ […]
Tag: bbhc
ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ವಿಸ್ತರಣಾ ಚಟುವಟಿಕೆ
ಕುಂದಾಪುರ (ಆ.03): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ, ಬೈಂದೂರು ಇವರ ಸಹಯೋಗದಲ್ಲಿ ವಿಶ್ವಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ನೆಲ್ಯಾಡಿ ಬೈಲ್, ಯಡ್ತರೆಯಲ್ಲಿ ನಡೆದ ಗಮ್ಮತ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭ ಕಾಲೇಜಿನ ಕುಂದಗನ್ನಡ ಸಂಘದ ಸಂಯೋಜಕ ಶ್ರೀ ಮಹೇಶ್ ನಾಯ್ಕ್ ಉಪಸ್ಥಿತರಿದ್ದರು.
ಆತ್ಮಸ್ಥೈರ್ಯ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಿ – ಈಶ್ವರ್ ಮಲ್ಪೆ
ಕುಂದಾಪುರ (ಆ. 06): ಬದುಕಿನಲ್ಲಿ ಕಠಿಣ ಸವಾಲುಗಳು ಎದುರಾದಾಗ ಅದನ್ನು ಎದುರಿಸಲು ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು, ಜೊತೆಗೆ ಪರೋಪಕಾರ ಹಾಗೂ ಸೇವಾ ಮನೋಭಾವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಸಮಾಜ ಸೇವಕ ಹಾಗೂ ಈಜು ತಜ್ಞರಾದ ಈಶ್ವರ್ ಮಲ್ಪೆ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಹಮ್ಮಿಕೊಂಡ ಸಾಮಾಜಿಕ ಜವಾಬ್ದಾರಿ ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ […]
ಬಿ.ಬಿ. ಹೆಗ್ಡೆ ಕಾಲೇಜು: ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ
ಕುಂದಾಪುರ (ಜು.25): 2025-26ನೇ ಸಾಲಿನಲ್ಲಿ ಕಾಲೇಜಿಗೆ ಸೇರ್ಪಡೆಗೊಂಡ ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಜುಲೈ 25 ರಂದು ಹಮ್ಮಿಕೊಳ್ಳಲಾಯಿತು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಬಿ.ಬಿ.ಎ ಕೋರ್ಸ್ಗಳ ವಿಶೇಷತೆಗಳು ಹಾಗೂ ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಇದರಿಂದ ಲಭ್ಯವಾಗುವ ಪ್ರಯೋಜನಗಳ ಕುರಿತು ತಿಳಿಸಿದರು. ವಿಭಾಗದ ಪ್ರಾಧ್ಯಾಪಕರುಗಳಾದ ಶ್ರೀಮತಿ ಅವಿತಾ ಕೊರೆಯಾ, ಶ್ರೀ ಹರೀಶ್ ಬಿ, ಶ್ರೀ ರಜತ್ ಬಂಗೇರ ಹಾಗೂ ವಿಶಾಲಾಕ್ಷಿ ಉಪಸ್ಥಿತರಿದ್ದರು.ಸಹಾಯಕ ಪ್ರಾಧ್ಯಾಪಕರಾದ ಶ್ರೀ […]
ಬಿ. ಬಿ. ಹೆಗ್ಡೆ ಕಾಲೇಜು: 5 ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ ಸಂಪನ್ನ
ಕುಂದಾಪುರ (ಜು.25): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡ 5 ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ ಸಂಪನ್ನಗೊoಡಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮ್ಯಾಜಿಕ್ ಬಸ್ ಫೌಂಡೇಶನ್ನ ಹಿರಿಯ ತರಬೇತುದಾರರಾದ ಶ್ರೀ ಜೋಶ್ವಾ ಡೇನಿಯಲ್ ಅತಿಥಿ ನೆಲೆಯ ಮಾತುಗಳನ್ನಾಡಿದರು. ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿಯಾದ […]
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅನುಭವ ಕೇಂದ್ರಿತ ಶಿಕ್ಷಣಕ್ಕೆ ಪ್ರೇರಣೆ – ಜಾನ್ ಡಿ’ಸೋಜಾ
ಕುಂದಾಪುರ(ಜು. 23): ವಿದ್ಯಾರ್ಥಿಗಳ ಬದುಕು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗಬಾರದು, ಅದು ಅನುಭವ ಕೇಂದ್ರಿತವಾಗಿರಬೇಕು. ಆ ನಿಟ್ಟಿನಲ್ಲಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಗೆ ಕಲಿಕೆ ಜೊತೆಗೆ ವಿವಿಧ ಅನುಭವಕೇಂದ್ರಿತ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಪ್ರಶಂಸನೀಯ ಎಂದು ಕುಂದಾಪುರದ ಹಿರಿಯ ಪತ್ರಕರ್ತರಾದ ಜಾನ್ ಡಿ’ಸೋಜ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ […]
ಬಿ.ಬಿ. ಹೆಗ್ಡೆ ಕಾಲೇಜು: ಉತ್ತಮ ಆರೋಗ್ಯವೇ ನಿಜವಾದ ಸಂಪತ್ತು–ಡಾ| ಸೋನಿ ಡಿ’ಕೋಸ್ಟ
ಕುಂದಾಪುರ (ಜು.24): ದಿನನಿತ್ಯದ ಪ್ರಾರ್ಥನೆ, ವ್ಯಾಯಾಮ, ಗುಣಮಟ್ಟದ ಆಹಾರ ಪದ್ಧತಿ ಹಾಗೂ ಒತ್ತಡ ನಿರ್ವಹಣೆ ಇಂತಹ ಆರೋಗ್ಯಕರ ಅಭ್ಯಾಸಗಳಿಂದ ಮಾತ್ರ ಉತ್ತಮ ಆರೋಗ್ಯವನ್ನು ಪಡೆಯಲು ಸಾಧ್ಯ ಎಂದು ಕುಂದಾಪುರದ ಇಶಾನಿ ಮೆಡಿಕಲ್ ಸೆಂಟರ್ನ ವೈದ್ಯಾಧಿಕಾರಿ ಡಾ| ಸೋನಿ ಡಿಕೋಸ್ಟ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ಉತ್ತಮ ಆರೋಗ್ಯ’ […]
ಬಿ. ಬಿ. ಹೆಗ್ಡೆ ಕಾಲೇಜು: ‘ಪ್ರೇರಣಾ’ಪೂರ್ವ ಪರಿಚಯ ಉದ್ಘಾಟನೆ
ಕುಂದಾಪುರ (ಜು.23): ಶಿಕ್ಷಣದ ಗುಣಮಟ್ಟ ವ್ಯಕ್ತಿತ್ವದ ನಿರ್ಮಾಣಕ್ಕೆ ಸಹಾಯಕವಾಗಬೇಕು. ಅಂತಹ ಶಿಕ್ಷಣ ಆಂತರ್ಯದ ಶಕ್ತಿಯನ್ನು ಉದ್ದೀಪನಗೊಳಿಸಿ ಜ್ಞಾನ ಸಂಪಾದಿಸುವAತಾಗಬೇಕಾದರೆ ಪಠ್ಯದೊಂದಿಗೆ ಪಠ್ಯಪೂರಕ ಚಟುವಟಿಕೆಗಳು ಮುಖ್ಯ. ಅವುಗಳಿಂದ ಶಿಕ್ಷಣ ಪರಿಪೂರ್ಣವಾಗಲು ಸಾಧ್ಯ ಈ ರೀತಿಯ ಚಟುವಟಿಕೆಗಳು ವರ್ತಮಾನದ ತುರ್ತು ಎಂದು ಉಡುಪಿಯ ಎಮ್ಜಿಎಮ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಕೆ. ಸುರೇಂದ್ರನಾಥ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ […]
ಬಿ. ಬಿ. ಹೆಗ್ಡೆ ಕಾಲೇಜು: 5 ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ ಉದ್ಘಾಟನೆ
ಕುಂದಾಪುರ (ಜು.21): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಿದ 5 ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರವನ್ನು ಕೆನರಾ ಬ್ಯಾಂಕ್ ಕುಂದಾಪುರ ಶಾಖೆಯ ಮುಖ್ಯ ಪ್ರಬಂಧಕರಾದ ಶ್ರೀ ರಾಜು ಕೆ. ಉದ್ಘಾಟಿಸಿ, ಕಾಲೇಜು ನೀಡುತ್ತಿರುವ ಈ ತರಬೇತಿಯನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ […]
ಸಿ ಎ ಪರೀಕ್ಷೆಯಲ್ಲಿ ಉನ್ನತ ಸಾಧನೆಗೈದ ಡಾl ಬಿ ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ(ಜು. 06): ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಸಿಎ ಫೌಂಡೇಶನ್ ಹಾಗೂ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಡಾ| ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ಪ್ರೇಕ್ಷಿತ ಶೆಟ್ಟಿ, ಪನ್ನಗ, ಯಶಸ್ ಇವರು ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದರೆ, ಶಾಂತಿ, ಸಹನಾ ಹಾಗೂ ಸುವಿಧ ಆಚಾರ್ಯ ಇವರು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಾ| ಬಿ ಬಿ ಹೆಗ್ಡೆ […]










