ಕುಂದಾಪುರ( ಆ,24): ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ (ನೊಂ.)ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ಇವರ ಸಹಯೋಗದೊಂದಿಗೆ ರಾಜ್ಯ ಮಟ್ಟದ ಯೋಗಾಸನಾ ಸ್ಪರ್ಧೆ ಶ್ರೀ ಅನುಭವ ಮಂಟಪ ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗ್ರಾಮ ಪಂಚಾಯತ್ ತ್ರಾಸಿ ಸಿಬ್ಬಂದಿ ಸಂದೀಪ್ ಪೂಜಾರಿಯವರು ವಿವಿಧ ಹಂತದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆ […]
Tag: bbhc
ಡಾl ಬಿ.ಬಿ ಹೆಗ್ಡೆ ಕಾಲೇಜು : ಎನ್ಎಸ್ಎಸ್ ಪ್ರಾಕ್ತನ ವಿದ್ಯಾರ್ಥಿಗಳಿಂದ ನೆಲ್ಮೆಯ ನಮನ
ಕುಂದಾಪುರ(ಆ. 23): ವಿದ್ಯಾರ್ಥಿ ಬದುಕಿನಲ್ಲಿ ಪಠ್ಯದ ಜೊತೆಗೆ ಪಠ್ಯಪೂರಕ ಚಟುವಟಿಕೆಗಳು ಅತಿ ಪ್ರಮುಖವಾದ್ದು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಏನ್ ಎಸ್ ಎಸ್ ನಂತಹ ವೇದಿಕೆಗಳು ಮಹತ್ವದ ಪಾತ್ರವನ್ನು ವಹಿಸುತ್ತದೆ. ವಿದ್ಯಾರ್ಥಿ ಸಮುದಾಯದಲ್ಲಿ ವ್ಯಕ್ತಿತ್ವದ ವಿಕಸನದ ಜೊತೆಗೆ ಮಾನವೀಯ ಮತ್ತು ಸಂವಿಧಾನಿಕ ಮೌಲ್ಯವನ್ನು ಬೆಳೆಸಲು ರಾಷ್ಟ್ರೀಯ ಸೇವಾ ಯೋಜನೆಯಂತಹ ಪಠ್ಯ ಪೂರಕ ವೇದಿಕೆಗಳು ಅತ್ಯವಶ್ಯಕ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಏನ್ ಏಸ್ ಏಸ್ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಡಾ. ಗಣನಾಥ ಎಕ್ಕಾರು […]
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ‘ವಸ್ತ್ರಭಾರತೀ’ಫ್ಯಾಶನ್ ಪೆರೇಡ್
ಕುಂದಾಪುರ (ಆ,13) : ಇಲ್ಲಿನ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ, ‘ವಸ್ತ್ರ ಭಾರತೀ’ ಅಂತರ್ ತರಗತಿ ದೇಶಭಕ್ತಿ ಫ್ಯಾಶನ್ ಪೆರೇಡ್ ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸ್ಪರ್ಧೆಯ ಪ್ರಥಮ ಸುತ್ತಿನಲ್ಲಿ 17 ತಂಡಗಳು ಭಾಗವಹಿಸಿ, ದ್ವಿತೀಯ ಸುತ್ತಿಗೆ 10 ತಂಡಗಳು ಆಯ್ಕೆಯಾದವು. ಆರು ವಿದ್ಯಾರ್ಥಿಗಳನ್ನೊಳಗೊಂಡ ತರಗತಿವಾರು ತಂಡದವರು ದಂಡಿ ಸತ್ಯಾಗ್ರಹ, ಬೇರೆ ಬೇರೆ ರಾಜ್ಯಗಳ ಸಂಸ್ಕೃತಿ, ಜನಪದ, ಭಾವೈಕ್ಯತೆ […]
ಆರೋಗ್ಯಕರ ಸಮಾಜಕ್ಕಾಗಿ ವ್ಯಸನದಿಂದ ದೂರವಿರಿ – ನಂಜ ನಾಯ್ಕ್
ಕುಂದಾಪುರ (ಆ18): ನಶಾ ಮುಕ್ತ ಭಾರತ ಅಭಿಯಾನವು ದೇಶದ ಆರೋಗ್ಯಕರ ಮತ್ತು ಪ್ರಗತಿಪರ ಸಮಾಜ ನಿರ್ಮಾಣದ ಮಹತ್ವದ ಪ್ರಯತ್ನವಾಗಿದೆ. ಇಂದಿನ ಕಾಲದಲ್ಲಿ ಯುವಜನರು ಮಾದಕ ವಸ್ತುಗಳ ಬಲೆಗೆ ಬೀಳುತ್ತಿರುವುದು ವಿಷಾದನೀಯ. ವ್ಯಸನವು ವ್ಯಕ್ತಿಯ ಆರೋಗ್ಯವನ್ನು ಮಾತ್ರವಲ್ಲ, ಕುಟುಂಬದ ಶಾಂತಿ ಮತ್ತು ಸಮಾಜದ ಪ್ರಗತಿಯನ್ನು ಸಹ ಹಾಳುಮಾಡುತ್ತದೆ ಎಂದು ಕುಂದಾಪುರ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ನಂಜ ನಾಯ್ಕ್ ಅವರು ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ ಹೆಗ್ಡೆ ಪ್ರಥಮ […]
ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ವಿಸ್ತರಣಾ ಚಟುವಟಿಕೆ
ಕುಂದಾಪುರ (ಆ.03): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ, ಬೈಂದೂರು ಇವರ ಸಹಯೋಗದಲ್ಲಿ ವಿಶ್ವಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ನೆಲ್ಯಾಡಿ ಬೈಲ್, ಯಡ್ತರೆಯಲ್ಲಿ ನಡೆದ ಗಮ್ಮತ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭ ಕಾಲೇಜಿನ ಕುಂದಗನ್ನಡ ಸಂಘದ ಸಂಯೋಜಕ ಶ್ರೀ ಮಹೇಶ್ ನಾಯ್ಕ್ ಉಪಸ್ಥಿತರಿದ್ದರು.
ಆತ್ಮಸ್ಥೈರ್ಯ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಿ – ಈಶ್ವರ್ ಮಲ್ಪೆ
ಕುಂದಾಪುರ (ಆ. 06): ಬದುಕಿನಲ್ಲಿ ಕಠಿಣ ಸವಾಲುಗಳು ಎದುರಾದಾಗ ಅದನ್ನು ಎದುರಿಸಲು ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು, ಜೊತೆಗೆ ಪರೋಪಕಾರ ಹಾಗೂ ಸೇವಾ ಮನೋಭಾವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಸಮಾಜ ಸೇವಕ ಹಾಗೂ ಈಜು ತಜ್ಞರಾದ ಈಶ್ವರ್ ಮಲ್ಪೆ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಹಮ್ಮಿಕೊಂಡ ಸಾಮಾಜಿಕ ಜವಾಬ್ದಾರಿ ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ […]
ಬಿ.ಬಿ. ಹೆಗ್ಡೆ ಕಾಲೇಜು: ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ
ಕುಂದಾಪುರ (ಜು.25): 2025-26ನೇ ಸಾಲಿನಲ್ಲಿ ಕಾಲೇಜಿಗೆ ಸೇರ್ಪಡೆಗೊಂಡ ಬಿ.ಬಿ.ಎ. ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಜುಲೈ 25 ರಂದು ಹಮ್ಮಿಕೊಳ್ಳಲಾಯಿತು. ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಬಿ.ಬಿ.ಎ ಕೋರ್ಸ್ಗಳ ವಿಶೇಷತೆಗಳು ಹಾಗೂ ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಇದರಿಂದ ಲಭ್ಯವಾಗುವ ಪ್ರಯೋಜನಗಳ ಕುರಿತು ತಿಳಿಸಿದರು. ವಿಭಾಗದ ಪ್ರಾಧ್ಯಾಪಕರುಗಳಾದ ಶ್ರೀಮತಿ ಅವಿತಾ ಕೊರೆಯಾ, ಶ್ರೀ ಹರೀಶ್ ಬಿ, ಶ್ರೀ ರಜತ್ ಬಂಗೇರ ಹಾಗೂ ವಿಶಾಲಾಕ್ಷಿ ಉಪಸ್ಥಿತರಿದ್ದರು.ಸಹಾಯಕ ಪ್ರಾಧ್ಯಾಪಕರಾದ ಶ್ರೀ […]
ಬಿ. ಬಿ. ಹೆಗ್ಡೆ ಕಾಲೇಜು: 5 ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ ಸಂಪನ್ನ
ಕುಂದಾಪುರ (ಜು.25): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡ 5 ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ ಸಂಪನ್ನಗೊoಡಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮ್ಯಾಜಿಕ್ ಬಸ್ ಫೌಂಡೇಶನ್ನ ಹಿರಿಯ ತರಬೇತುದಾರರಾದ ಶ್ರೀ ಜೋಶ್ವಾ ಡೇನಿಯಲ್ ಅತಿಥಿ ನೆಲೆಯ ಮಾತುಗಳನ್ನಾಡಿದರು. ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿಯಾದ […]
ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅನುಭವ ಕೇಂದ್ರಿತ ಶಿಕ್ಷಣಕ್ಕೆ ಪ್ರೇರಣೆ – ಜಾನ್ ಡಿ’ಸೋಜಾ
ಕುಂದಾಪುರ(ಜು. 23): ವಿದ್ಯಾರ್ಥಿಗಳ ಬದುಕು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗಬಾರದು, ಅದು ಅನುಭವ ಕೇಂದ್ರಿತವಾಗಿರಬೇಕು. ಆ ನಿಟ್ಟಿನಲ್ಲಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಗೆ ಕಲಿಕೆ ಜೊತೆಗೆ ವಿವಿಧ ಅನುಭವಕೇಂದ್ರಿತ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಪ್ರಶಂಸನೀಯ ಎಂದು ಕುಂದಾಪುರದ ಹಿರಿಯ ಪತ್ರಕರ್ತರಾದ ಜಾನ್ ಡಿ’ಸೋಜ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ […]
ಬಿ.ಬಿ. ಹೆಗ್ಡೆ ಕಾಲೇಜು: ಉತ್ತಮ ಆರೋಗ್ಯವೇ ನಿಜವಾದ ಸಂಪತ್ತು–ಡಾ| ಸೋನಿ ಡಿ’ಕೋಸ್ಟ
ಕುಂದಾಪುರ (ಜು.24): ದಿನನಿತ್ಯದ ಪ್ರಾರ್ಥನೆ, ವ್ಯಾಯಾಮ, ಗುಣಮಟ್ಟದ ಆಹಾರ ಪದ್ಧತಿ ಹಾಗೂ ಒತ್ತಡ ನಿರ್ವಹಣೆ ಇಂತಹ ಆರೋಗ್ಯಕರ ಅಭ್ಯಾಸಗಳಿಂದ ಮಾತ್ರ ಉತ್ತಮ ಆರೋಗ್ಯವನ್ನು ಪಡೆಯಲು ಸಾಧ್ಯ ಎಂದು ಕುಂದಾಪುರದ ಇಶಾನಿ ಮೆಡಿಕಲ್ ಸೆಂಟರ್ನ ವೈದ್ಯಾಧಿಕಾರಿ ಡಾ| ಸೋನಿ ಡಿಕೋಸ್ಟ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ಉತ್ತಮ ಆರೋಗ್ಯ’ […]










