ಕುಂದಾಪುರ (ಜು.23): ಶಿಕ್ಷಣದ ಗುಣಮಟ್ಟ ವ್ಯಕ್ತಿತ್ವದ ನಿರ್ಮಾಣಕ್ಕೆ ಸಹಾಯಕವಾಗಬೇಕು. ಅಂತಹ ಶಿಕ್ಷಣ ಆಂತರ್ಯದ ಶಕ್ತಿಯನ್ನು ಉದ್ದೀಪನಗೊಳಿಸಿ ಜ್ಞಾನ ಸಂಪಾದಿಸುವAತಾಗಬೇಕಾದರೆ ಪಠ್ಯದೊಂದಿಗೆ ಪಠ್ಯಪೂರಕ ಚಟುವಟಿಕೆಗಳು ಮುಖ್ಯ. ಅವುಗಳಿಂದ ಶಿಕ್ಷಣ ಪರಿಪೂರ್ಣವಾಗಲು ಸಾಧ್ಯ ಈ ರೀತಿಯ ಚಟುವಟಿಕೆಗಳು ವರ್ತಮಾನದ ತುರ್ತು ಎಂದು ಉಡುಪಿಯ ಎಮ್ಜಿಎಮ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಕೆ. ಸುರೇಂದ್ರನಾಥ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ […]
Tag: bbhc
ಬಿ. ಬಿ. ಹೆಗ್ಡೆ ಕಾಲೇಜು: 5 ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರ ಉದ್ಘಾಟನೆ
ಕುಂದಾಪುರ (ಜು.21): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮ್ಯಾಜಿಕ್ ಬಸ್ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಿದ 5 ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಾಗಾರವನ್ನು ಕೆನರಾ ಬ್ಯಾಂಕ್ ಕುಂದಾಪುರ ಶಾಖೆಯ ಮುಖ್ಯ ಪ್ರಬಂಧಕರಾದ ಶ್ರೀ ರಾಜು ಕೆ. ಉದ್ಘಾಟಿಸಿ, ಕಾಲೇಜು ನೀಡುತ್ತಿರುವ ಈ ತರಬೇತಿಯನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ […]
ಸಿ ಎ ಪರೀಕ್ಷೆಯಲ್ಲಿ ಉನ್ನತ ಸಾಧನೆಗೈದ ಡಾl ಬಿ ಬಿ ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು
ಕುಂದಾಪುರ(ಜು. 06): ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಸಿಎ ಫೌಂಡೇಶನ್ ಹಾಗೂ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಡಾ| ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ಪ್ರೇಕ್ಷಿತ ಶೆಟ್ಟಿ, ಪನ್ನಗ, ಯಶಸ್ ಇವರು ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದರೆ, ಶಾಂತಿ, ಸಹನಾ ಹಾಗೂ ಸುವಿಧ ಆಚಾರ್ಯ ಇವರು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಾ| ಬಿ ಬಿ ಹೆಗ್ಡೆ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಸಿ ಎ ದಿನಾಚರಣೆ
ಕುಂದಾಪುರ (ಜು.01): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಸಿಎ ದಿನಾಚರಣೆಯ ಸಂದರ್ಭ ಒತ್ತಡ ನಿರ್ವಹಣೆಯ ಕುರಿತಾಗಿ ವಿಭಿನ್ನ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಉಡುಪಿಯ ಆರ್ಟ್ ಆಫ್ ಲಿವಿಂಗ್ನ ಯೋಗ ಮತ್ತು ಪ್ರಾಣಾಯಾಮ ತರಬೇತುದಾರರಾದ ಶೈಲಜಾ ಕೃಷ್ಣಾನಂದ, ಒತ್ತಡ ನಿರ್ವಹಣೆ ಹಾಗೂ ಏಕಾಗೃತೆಯ ಸಾಧನೆಯನ್ನು ಆಸನ ಹಾಗೂ ಪ್ರಾಣಾಯಾಮದ ಮೂಲಕ ಹೇಗೆ ಸಿದ್ಧಿಸಿಕೊಳ್ಳುವುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಉಡುಪಿಯ ವೀ-ರೀಚ್ ಅಕಾಡೆಮಿಯ ಸ್ಥಾಪಕರಾದ ಸಿಎಸ್ ಸಂತೋಷ್ ಪ್ರಭುರವರು […]
ಪ್ರಾಕ್ತನ ವಿದ್ಯಾರ್ಥಿಗಳಿಂದ ಸಿಎ/ಸಿಎಸ್/ಸಿಎಂಎ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಬಗ್ಗೆ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ
ಕುಂದಾಪುರ (ಏ: 11): ಇಲ್ಲಿಯ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಸಿಎ/ಸಿಎಸ್/ ಸಿಎಂಎ ವಿಧ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿಯ ಕುರಿತಾಗಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಗಳಾದ ವಿನೋಲ್ ಡಿಸೋಜಾ ಹಾಗೂ ನಾದಶ್ರೀ ಇವರು ವಿಭಿನ್ನ ಪ್ರಾಯೋಗಿಕ ಚಟುವಟಿಕೆಗಳ ಮೂಲಕ ಪರೀಕ್ಷೆಯಲ್ಲಿ ಸಮಯ ನಿರ್ವಹಣೆ ಹಾಗೂ ಪರೀಕ್ಷಾ ಪೂರ್ವ ತಯಾರಿ ನಡೆಸುವ ಕುರಿತು ಅರಿವು ಮೂಡಿಸಿದರು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ […]
ಡಾ. ಬಿ. ಬಿ. ಹೆಗ್ಡೆ ಕಾಲೇಜ್ ನಲ್ಲಿ CA CS CMA ಕೋರ್ಸ್ ಗಳ ಪೂರ್ವ ಪರಿಚಯ ಕಾರ್ಯಕ್ರಮ ಹಾಗೂ ತರಗತಿ ಅಧ್ಯಾಪನದ ಉದ್ಘಾಟನೆ
ಕುಂದಾಪುರ (ಮೇ 26): ಸಮಾಜದ ಕಟ್ಟ ಕಡೆಯ ಮಗುವೂ ವಿಧ್ಯಾಭ್ಯಾಸ ಪಡೆಯಬೇಕಂಬ ಮಹತ್ವಾಕಾಂಕ್ಷೆಯಿಂದ ಹುಟ್ಟಿಕೊಂಡ ವಿಧ್ಯಾಸಂಸ್ಥೆಯಾದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26 ನೇ ಸಾಲಿನ ಪ್ರಥಮ ವರ್ಷದ ಸಿಎ ಸಿಎಸ್ ಸಿಎಂಎ ವಿಧ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ ಹಾಗೂ ಮುಂದಿನ ದಿನಗಳಲ್ಲಿ ನಡೆಯುವ ತರಬೇತಿಯ ಉದ್ಘಾಟನಾ ಸಮಾರಂಭ ನೆರವೇರಿತು. ಉಪಪ್ರಾಂಶುಪಾಲರಾದ ಡಾ.ಚೇತನ್ ಶೆಟ್ಟಿ ಕೋವಾಡಿ ಅವರು ಸಂಸ್ಥೆಯಲ್ಲಿ ಸಿಎಸ್ ಸಿಎಂಎ ವಿಧ್ಯಾರ್ಥಿಗಳಿಗೆ ಇರಬೇಕಾದ ಶಿಸ್ತು […]
ವಾಣಿಜ್ಯ ವಿಭಾಗದ ವತಿಯಿಂದ ಸಿಎ ಸಿಎಸ್ ಸಿಎಂಎ ವಿಧ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ
ಕುಂದಾಪುರ (ಎ.8): ಇಲ್ಲಿಯ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಸಿಎ/ಸಿಎಸ್/ ಸಿಎಂಎ ವಿಧ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡ ನಿರ್ವಹಣೆ ಕುರಿತಾಗಿ ವಿಭಿನ್ನ ಕಾರ್ಯಗಾರ ಹಮ್ಮಿಕೊಳ್ಳಲಾಯಿತು. ಉಡುಪಿಯ ಆರ್ಟ್ ಆಫ್ ಲಿವಿಂಗ್ ನ ಯೋಗ ಮತ್ತು ಪ್ರಾಣಾಯಾಮ ತರಬೇತುದಾರರಾದ ಶ್ರೀಮತಿ ಶೈಲಜಾ ಕೃಷ್ಣಾನಂದ ಅವರು ಒತ್ತಡ ನಿರ್ವಹಣೆ ಹಾಗು ಏಕಾಗ್ರತೆಯ ಸಾಧನೆಯನ್ನು ಆಸನ ಹಾಗೂ ಪ್ರಾಣಾಯಾಮದ ಮೂಲಕ ಹೇಗೆ ಸಿದ್ಧಿಸಿಕೊಳ್ಳುವುದು ಎನ್ನುವುದರ ಕುರಿತು ಅರಿವು ಮೂಡಿಸಿದರು. […]
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆ : ಸಂದೀಪ್ ಪೂಜಾರಿ ಪ್ರಥಮ
ಮoಗಳೂರು(ಜೂ .16): ಆರೋಗ್ಯಧಾಮ ಯೋಗ ವಿದ್ಯಾ ಟ್ರಸ್ಟ್(ರಿ), ಮಂಗಳೂರು,ತಪಸ್ವಿ ಯೋಗ ಕೇಂದ್ರ, ಬಿಕರ್ನ ಕಟ್ಟೆ, ಮಂಗಳೂರುಮತ್ತು ಕೆನರಾ ಹೈಸ್ಕೂಲ್ ಅಸೋಸಿಯೇಷನ್ (ರಿ), ಮಂಗಳೂರು. ಇದರ ಸಹಯೋಗದೊಂದಿಗೆಯೋಗ ವಿಜ್ಞಾನದ ಹರಿಕಾರ, ಭಾರತದ ಪ್ರಥಮ ಯೋಗ ಪ್ರೊಫೆಸರ್ ದಿ. ಡಾ. ಕೆ. ಕೃಷ್ಣ ಭಟ್ ಇವರ ಸ್ಮರಣಾರ್ಥ ಜೂನ್ 15 ರಂದು ಕೆನರಾ ಪ್ರೌಡ ಶಾಲೆ ಊರ್ವ ಮಂಗಳೂರಿನಲ್ಲಿ ನಡೆದ ತುಳುನಾಡ ಯೋಗ ಕುಮಾರ-2025 ತುಳುನಾಡ ಯೋಗ ಕುಮಾರಿ-2025 ನಡೆದ ದಕ್ಷಿಣ ಕನ್ನಡ […]
ಮಂಗಳೂರು ವಿ. ವಿ ಸಿಬ್ಬಂದಿ ಪಂದ್ಯಾಕೂಟ: ವಿವಿಕ್ಯಾಂಪಸ್ ಪ್ರಥಮ, ಬಿ. ಬಿ. ಹೆಗ್ಡೆ. ರನ್ನರ್ಅಪ್
ಕುಂದಾಪುರ (ಜೂನ್ 8): ಇಲ್ಲಿನ ನಗರದ ಗಾಂಧಿ ಮೈದಾನದಲ್ಲಿ ಡಾ. ಬಿ. ಬಿ . ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಸಹಯೋಗದೊಂದಿಗೆ ವಿ. ವಿ ವ್ಯಾಪ್ತಿಯ ಸಿಬ್ಬಂದಿ ಪಂದ್ಯಕೂಟದ ಭಾಗವಾಗಿ ಪುರುಷ ಸಿಬ್ಬಂದಿಗಳ ಕ್ರಿಕೆಟ್ ಮತ್ತು ವಾಲಿಬಾಲ್ ಪಂದ್ಯಾಟ ನಡೆಯಿತು. ಪಂದ್ಯಾಕೂಟದಲ್ಲಿ ಕ್ರಿಕೆಟ್ ಮತ್ತು ವಾಲಿಬಾಲ್ನಲ್ಲಿ ಕ್ರಮವಾಗಿ ವಿ.ವಿ. ಕ್ಯಾಂಪಸ್ ಪ್ರಥಮ, ಆತಿಥೇಯ ಬಿ.ಬಿ. ಹೆಗ್ಡೆ ಕಾಲೇಜು ರನ್ನರ್ ಅಪ್ ಪ್ರಶಸ್ತಿ […]
ಬಿ.ಬಿ. ಹೆಗ್ಡೆ ಕಾಲೇಜು : ಬೀಳ್ಕೊಡುಗೆ ಕಾರ್ಯಕ್ರಮ
ಕುಂದಾಪುರ (ಜೂನ್-04): ವಿದ್ಯಾರ್ಥಿಗಳು ಸಮಯಪ್ರಜ್ಞೆ, ಪರಿಶ್ರಮ, ಶಿಸ್ತು, ಸಂಸ್ಕಾರಗಳನ್ನು ಮೈಗೂಡಿಸಿಕೊಂಡಾಗ ಪಡೆದ ಪದವಿಗೆ ಗೌರವ ಮತ್ತು ಮೌಲ್ಯ ಎಂದು ವಂಡಾರಿನ ಕೃಷ್ಣಪ್ರಸಾದ್ ಇಂಡಸ್ಟ್ರೀಸ್ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಶ್ರೀ ಸಂಪತ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಬೀಳ್ಕೊಡುಗೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ […]










