ಕುಂದಾಪುರ, ಮೇ 28: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದಲ್ಲಿ ಮೇ 28, 2025 ರಂದು ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮಾರ್ಗದರ್ಶನ ಕಾರ್ಯಕ್ರಮವನ್ನು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಪದವಿಯ ನಂತರ ಉದ್ಯೋಗದಲ್ಲಿ ಪ್ರವೇಶಿಸಬೇಕೆ ಅಥವಾ ಹೆಚ್ಚಿನ ಅಧ್ಯಯನ ಮಾಡಬೇಕೆಂಬ ಮಹತ್ವದ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮುಖ ಸಂಪನ್ಮೂಲ ವ್ಯಕ್ತಿಗಳಾಗಿ MITE, ಮೂಡಬಿದ್ರಿಯ ಉದ್ಯೋಗ, […]
Tag: bbhc
ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ : ಬ್ರಹತ್ ರಕ್ತ ದಾನ ಶಿಬಿರ
ಕುಂದಾಪುರ(ಮೇ ,23): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಹಾಗೂ ಎನ್.ಸಿ.ಸಿ. ಘಟಕಗಳ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ, ಹಾಗೂ ಲಯನ್ಸ್ ಕ್ಲಬ್ ಕುಂದಾಪುರ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಮೇ 23 ರಂದು ಜರಗಿತು. ಇಂಡಿಯನ್ ರೆಡ್ ಕ್ರಾಸ್ ಕುಂದಾಪುರ ಘಟಕದ ಸಭಾಪತಿ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ರಕ್ತದಾನದ […]
ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಹಾಗೂ ದತ್ತಿ ಪುರಸ್ಕಾರ ಪ್ರದಾನ
ಕುಂದಾಪುರ(ಮೇ, 21): ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕುಂದಾಪುರ ತಾಲೂಕು ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ದಿ. ಪುಳಿಮಾರು ಎಂ ಕೃಷ್ಣಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಹಾಗೂ ಯಕ್ಷಪ್ರೇಮಿ ಶ್ರೀ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರ ಕಾರ್ಯಕ್ರಮ ಕಾಲೇಜಿನ ಶ್ರೀ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ ಖ್ಯಾತ ಸಾಹಿತಿ, ಅಂಕಣ ಬರಹಗಾರ್ತಿ […]
ಡಾ. ಬಿ.ಬಿ. ಹೆಗ್ಡೆ ಕಾಲೇಜು : ರಕ್ಷಕ -ಶಿಕ್ಷಕರ ಸಭೆ
ಕುಂದಾಪುರ (ಮೇ 17): ಇಲ್ಲಿನ ಡಾ. ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಎರಡನೇ ಅವಧಿಗೆ ರಕ್ಷಕ- ಶಿಕ್ಷಕ ಸಭೆಯನ್ನು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿಯವರು ಮಾತನಾಡಿ, ವರ್ತಮಾನದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳು ವಿದ್ಯಾರ್ಥಿಗಳ ಮೇಲೆ ಬಹಳ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರುತ್ತಿದೆ. ರಕ್ಷಕರು, ಪೋಷಕರು ಈ ಕುರಿತು ಗಮನಕೊಡಬೇಕು . ವಿದ್ಯಾರ್ಥಿಗಳ ಬದುಕನ್ನು ರೂಪಿಸುವಲ್ಲಿ ಹೆತ್ತವರ ಪಾತ್ರ […]
ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ : ಕುಂದಗನ್ನಡ ಸಂಘದ ವಿದ್ಯಾರ್ಥಿಗಳಿಂದ ವಿಸ್ತರಣಾ ಚಟುವಟಿಕೆ
ಕುಂದಾಪುರ (ಮೇ.19): ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘದ ವಿದ್ಯಾರ್ಥಿಗಳು ವಿಸ್ತರಣಾ ಚಟುವಟಿಕೆಯ ಭಾಗವಾಗಿ ಮೂಡುಗಿಳಿಯಾರಿನ ಶ್ರೀ ಸ್ವಾಮಿ ನಂದೀಕೇಶ್ವರ ದೈವಸ್ಥಾನದ ಕೋಲ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಹಕರಿಸಿದರು. ಈ ಸಂದರ್ಭ ದೈವಸ್ಥಾನದ ಆಡಳಿತ ಮಂಡಳಿಯ ಮೊಕ್ತೇಸರರಾದ ಸುಭಾಷ್ ಚಂದ್ರ ಶೆಟ್ಟಿ, ಸೇವಾಕರ್ತರಾದ ರತ್ನಾಕರ್ ಶೆಟ್ಟಿ, ಚಂದ್ರ ಪಾಣಾ, ಕಾಲೇಜಿನ ಕುಂದಗನ್ನಡ ಸಂಘದ ಸಂಯೋಜಕಿ ರೇಷ್ಮಾ ಶೆಟ್ಟಿ, ಪ್ರವೀಣ ಪೂಜಾರಿ ಉಪಸ್ಥಿತರಿದ್ದರು.
ವಿ. ಕೆ. ಆರ್. ಶಾಲೆ ಕುಂದಾಪುರ : ಎಸ್. ಎಸ್. ಎಲ್. ಸಿ ಸಾಧಕರಿಗೆ ಸನ್ಮಾನ
ಕುಂದಾಪುರ,(ಮೇ,10) : ಕುಂದಾಪುರ ಎಜುಕೇಶನ್ ಸೊಸೈಟಿ( ರಿ) ಎಚ್. ಎಂ. ಎಂ. ಮತ್ತು ವಿ. ಕೆ. ಆರ್. ಶಾಲೆಗಳಲ್ಲಿ 2024- 25 ನೇ ಸಾಲಿನಲ್ಲಿ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ 8 ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಾಧನೆಗೈದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ರ್ಯಾಂಕ್ ಗಳಿಕೆಗೆ ಪ್ರೋತ್ಸಾಹಿಸಿದ ಆಡಳಿತ ಮಂಡಳಿ ಮತ್ತು ಶಿಕ್ಷಕರ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಹತ್ತನೇ ತರಗತಿ […]
ಬಿ. ಬಿ. ಹೆಗ್ಡೆ ಕಾಲೇಜು ವಾರ್ಷಿಕೋತ್ಸವ: ಪ್ರಶಸ್ತಿ ಪ್ರದಾನ
ಕುಂದಾಪುರ (ಮೇ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮೇ 02 ರಂದು ಕಾಲೇಜಿನ ಬಿ.ಎಮ್.ಎಸ್. ಕ್ರೀಡಾಂಗಣದ ಬಯಲು ಸಭಾಂಗಣದಲ್ಲಿ ನಡೆಯಿತು. ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಹಮ್ಮಿಕೊಂಡ ವಿವಿಧ ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಿಗೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಈ ಸಂದರ್ಭ ಯಕ್ಷಗಾನ ಕಲಾರಂಗ ಉಡುಪಿಯ ಕಾರ್ಯದರ್ಶಿ ಮುರಳಿ ಕಡೇಕಾರ್ ಮಾತನಾಡಿ, […]
ಬಿ .ಬಿ .ಹೆಗ್ಡೆ ಕಾಲೇಜು : ಎಚ್.ಐ.ವಿ/ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ
ಕುಂದಾಪುರ (ಏಪ್ರಿಲ್ 24): ಇಲ್ಲಿನ ಡಾ| ಬಿ .ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2ರ ಆಶ್ರಯದಲ್ಲಿ ಅರಿವು-ಅರಿವು ಮುಖ್ಯ ಶೀರ್ಷಿಕೆಯಡಿಯಲ್ಲಿ ಎಚ್.ಐ.ವಿ./ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿ ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ಮೇಲ್ವಿಚಾರಕರಾದ ಶ್ರೀ ಮಹಾಬಲೇಶ್ವರ್ ಅವರು ಮಾತನಾಡಿ, ಎಚ್.ಐ.ವಿ./ಏಡ್ಸ್ ಕೇವಲ […]
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರಾಚ್ಯ ವಸ್ತುಗಳ ಪ್ರದರ್ಶನ
ಕುಂದಾಪುರ (ಎ.16): ಪ್ರಾಚ್ಯ ವಸ್ತುಗಳು ಪೂರ್ವಜರ ಸಂಪ್ರದಾಯದ ಪ್ರತೀಕ ಅವುಗಳನ್ನು ಉಳಿಸುವ ಮತ್ತು ಪರಿಚಯಿಸುವಲ್ಲಿ ವಿದ್ಯಾರ್ಥಿಗಳ ಪ್ರಯತ್ನ ಶ್ಲಾಘನೀಯ ಎಂದು ಉದಯವಾಣಿ ದಿನಪತ್ರಿಕೆಯ ಉಪಮುಖ್ಯ ವರದಿಗಾರ ಶ್ರೀ ಲಕ್ಷ್ಮಿ ಮಚ್ಚಿನ ಹೇಳಿದರು. ಇವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಪ್ರಾಚ್ಯ ವಸ್ತುಗಳ ಪ್ರದರ್ಶನದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಇನ್ನೋರ್ವ ಮುಖ್ಯ ಅತಿಥಿ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮಾತನಾಡಿ, ಪ್ರಾಚ್ಯ […]
ಬಿ. ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಸಂಚಿಕೆ “ಶಿಖರ”ಅನಾವರಣ
ಕುಂದಾಪುರ, (ಎ 15): ಮಂಗಳೂರು ವಿಶ್ವವಿದ್ಯಾನಿಲಯ ಅಂತರ್-ಕಾಲೇಜು ಮಟ್ಟದ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಗಮನ ಸೆಳೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2023-24ನೇ ಸಾಲಿನ ವಾರ್ಷಿಕ ಸಂಚಿಕೆ ‘ಶಿಖರ’ವನ್ನು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಶ್ರೀ ಶ್ರೀನಿವಾಸ ಸೋಮಯಾಜಿಯವರು ಅನಾವರಣಗೊಳಿಸಿ, ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ […]










