ಬೈಂದೂರು(ಡಿ.31):ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿತ ನಾರಾಯಣ ವಿಶೇಷ ಮಕ್ಕಳ ಶಾಲೆ ತಲ್ಲೂರು, ಕುಂದಾಪುರ ಇಲ್ಲಿಗೆ ಭೇಟಿ ನೀಡಿದ ಬೈಂದೂರಿನ ಶಾಸಕರಾದ ಶ್ರೀ ಬಿ.ಎಮ್.ಸುಕುಮಾರ ಶೆಟ್ಟಿಯವರು ಶಾಸಕರ ನಿಧಿಯಿಂದ ಐದು ಲಕ್ಷ ರೂಪಾಯಿ ಬಿಡುಗಡೆಗೊಳಿಸಿದರು. ಇಲ್ಲಿ ಸುಮಾರು 39 ವಿಶೇಷ ಮಕ್ಕಳು ತರಬೇತಿಯನ್ನು ಪಡೆಯುತ್ತಿದ್ದಾರೆ. ಆ ಮಕ್ಕಳೊಂದಿಗೆ ಶಾಸಕರು ಸಮಯ ಕಳೆದು, ಶುಭ ಹಾರೈಸಿದರು.
Tag: bms
ಬೈಂದೂರು: ಫಲಾನುಭವಿಗಳಿಗೆ ಸಹಾಯಧನ ವಿತರಿಸಿದ ಶಾಸಕ ಶ್ರೀ ಬಿ.ಎಮ್.ಸುಕುಮಾರ ಶೆಟ್ಟಿ
ಬೈಂದೂರು(ಡಿ.28): ರಾಜ್ಯ ನಗರಾಭಿವೃದ್ಧಿ ಇಲಾಖೆ ಪೌರಾಡಳಿತ ನಿರ್ದೇಶನಾಲಯ, ಬೈಂದೂರು ಪ.ಪಂ. ಉಡುಪಿ ಜಿಲ್ಲೆ ಹಾಗೂ ತಾಲೂಕು ಆಡಳಿತ ಕಚೇರಿ ಬೈಂದೂರು ಇವರ ವತಿಯಿಂದ ಬೈಂದೂರು ರೋಟರಿ ಭವನದಲ್ಲಿ ಡಿ.27 ರಂದು ನಡೆದ 2021-22ನೇ ಸಾಲಿನ ಎಸ್.ಎಫ್.ಸಿ. ಅನುದಾನದಡಿಯಲ್ಲಿ ಫಲಾನುಭವಿಗಳಿಗೆ ಸಹಾಯಧನ ಚೆಕ್ ನ್ನು ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ವಿತರಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಶಾಸಕರು ರಾಜ್ಯ ಸರ್ಕಾರ ಮತ್ತು ಸಂಸದರ ವಿಶೇಷ ಪ್ರಯತ್ನದಿಂದ ಬೈಂದೂರು ಕ್ಷೇತ್ರಕ್ಕೆ ಅಭಿವೃದ್ಧಿ ವಿಷಯದಲ್ಲಿ […]
ಇಂಡಿಯ ಬುಕ್ ಅಫ್ ರೆಕಾರ್ಡ್ ಸಾಧಕಿ ಬಾಲ ಪ್ರತಿಭೆ ಅಗಮ್ಯ ಎಂ ಶೆಟ್ಟಿ ಯನ್ನು ಅಭಿನಂದಿಸಿದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ
ವಂಡ್ಸೆ (ಡಿ,2): ಉಪ್ಪುಂದದ ನಿವಾಸಿ , ಉದ್ಯಮಿ ಶ್ರೀ ಗುರುದತ್ತ ಶೆಟ್ಟಿ ಹಾಗೂ ಶ್ರೀಮತಿ ಮಮತಾ ಶೆಟ್ಟಿ ದಂಪತಿಯ ಒಂದು ವರ್ಷದ ಆರು ತಿಂಗಳ ಪುತ್ರಿ ಅಗಮ್ಯ ಎಂ ಶೆಟ್ಟಿ ತನ್ನ ವಿಶೇಷ ಬುದ್ಧಿಶಕ್ತಿ ಹಾಗೂ ನೆನಪಿನ ಶಕ್ತಿಯಿಂದ ಭಾರತದ ಪ್ರತಿಷ್ಠಿತ ಇಂಡಿಯ ಬುಕ್ ಅಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾರೆ . ಈ ಬಾಲಪ್ರತಿಭೆಯ ವಿಶೇಷ ಸಾಧನೆಯನ್ನು ಗುರುತಿಸಿ ಬೈಂದೂರು ಶಾಸಕ ಬಿ ಎಂ ಸುಕುಮಾರ ಶೆಟ್ಟಿಯವರು ತಮ್ನ ಸ್ವಗ್ರಹದಲ್ಲಿ ಅಗಮ್ಯ […]
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ
ವಂಡ್ಸೆ(ನ,7): ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ವಿಜ್ಞಾನಿ ಡಾ. ದಿನೇಶ್ ಶೆಟ್ಟಿ, ಶ್ರೀ ಬಿ. ರಾಮ ಟೈಲರ್ ಹಾಗೂ ಉಪ್ಪುಂದ ಶ್ರೀಧರ ಗಾಣಿಗರನ್ನು ಬೈಂದೂರು ಶಾಸಕ ಶ್ರೀ ಬಿ.ಎಂ ಸುಕುಮಾರ ಶೆಟ್ಟಿಯವರು ತಮ್ಮ ಗ್ರಹ ಕಛೇರಿಯಲ್ಲಿ ಗೌರವಪೂರ್ವಕವಾಗಿ ಅಭಿನಂದಿಸಿದರು.
ಗಂಗೊಳ್ಳಿ: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ಗೋಪೂಜಾ ಕಾರ್ಯಕ್ರಮ
ಗಂಗೊಳ್ಳಿ(ನ,5):ಇಲ್ಲಿನ ವೀರೇಶ್ವರ ಹಾಗೂ ಉಮಾಮಹೇಶ್ವರ ದೇವಸ್ಥಾನದಲ್ಲಿ ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವತಿಯಿಂದ ದೀಪಾವಳಿಯ ಸಂಧರ್ಭದಲ್ಲಿ ವಿಶೇಷವಾಗಿ ಆಚರಿಸಲಾಗುವ ಗೋಪೂಜಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಹಾಲಿಂಗೇಶ್ವರ ದೇವಸ್ಥಾನ ಬಸ್ರೂರು ಇದರ ಧರ್ಮಧರ್ಶಿಗಳಾದ ಅಪ್ಪಣ್ಣ ಹೆಗ್ಡೆಯವರು ಉಪಸ್ಥಿತರಿದ್ದರು. ಬಿಜೆಪಿ ಮುಖಂಡರಾದ ಪ್ರಿಯದರ್ಶಿನಿ ಬಿಜೂರು, ಸುರೇಶ್ ಬಟ್ವಾಡಿ, ಪುಷ್ಪರಾಜ್ ಶೆಟ್ಟಿ, ಅನಂದ ಖಾರ್ವಿ ಉಮೇಶ್ ಮೇಸ್ತ, ಹರೀಶ್ ಮೇಸ್ತ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ […]
ಬೈಂದೂರು ಸರ್ಕಾರಿ ಐಟಿಐ ಕಾಲೇಜು: ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ ನಾರಾಯಣ್ ರವರಿಂದ ಕಾಮಗಾರಿ ಪ್ರಗತಿ ಪರಿಶೀಲನೆ
ಬೈಂದೂರು (ಅ,23): ಬೈಂದೂರು ಸರ್ಕಾರಿ ಐಟಿಐ ಕಾಲೇಜನ್ನು ಟಾಟಾ ಸಂಸ್ಥೆಯ ಸಹಯೋಗದೊಂದಿಗೆ ಅಂತರರಾಷ್ಟ್ರೀಯ ಮಟ್ಟಕ್ಕೆ ಉನ್ನತೀಕರಿಸುವ ಕಾಮಗಾರಿಗಳು ನಡೆಯುತ್ತಿದ್ದು, ಉನ್ನತ ಶಿಕ್ಷಣ,ಕೌಶಲ್ಯಾಭಿವೃದ್ಧಿ ,ಐಟಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಶ್ವಥ್ ನಾರಾಯಣ ಅ,23 ರಂದು ಬೈಂದೂರು ಸರಕಾರಿ ಐ.ಟಿ.ಐ ಕಾಲೇಜಿಗೆ ಭೇಟಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. ನೂತನ 11 ಕೋರ್ಸ್ಗಳು ಆರಂಭವಾಗಲಿದ್ದು, ಅವುಗಳಲ್ಲಿ ಆರು ವಿಷಯಗಳು ಎರಡು ವರ್ಷ ಹಾಗೂ ಐದು ವಿಷಯಗಳು ಒಂದು ವರ್ಷದ ಅವಧಿಯದ್ದಾಗಿದೆ ಎಂದು ತಿಳಿಸಿದರು.ಈ ಸಂಧರ್ಭದಲ್ಲಿ […]
ಅಂಪಾರು: ಪ್ರಕೃತಿ ವಿಕೋಪಕ್ಕೆ ಮನೆ ಹಾನಿ- ಶಾಸಕ ಬಿ.ಎಮ್.ಸುಕುಮಾರ್ ಶೆಟ್ಟಿಯವರಿಂದ ಪರಿಹಾರದ ಚೆಕ್ ವಿತರಣೆ
ಅಂಪಾರು (ಅ,14): ಇತ್ತೀಚೆಗೆ ಅಂಪಾರು ಪರಿಸರದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಕ್ಕೆ ಮನೆ ಹಾನಿಯಾದ 63 ಕುಟುಂಬಗಳಿಗೆ ಬೈಂದೂರು ಶಾಸಕ ಶ್ರೀ ಬಿ.ಎಮ್ .ಸುಕುಮಾರ್ ಶೆಟ್ಟಿ ಯವರು ಪರಿಹಾರದ ಚೆಕ್ ವಿತರಿಸಿದರು. 25 ℅ ಮನೆ ಹಾನಿಯಾದ ವರಿಗೆ ಐವತ್ತು ಸಾವಿರ ರೂ, 50 ℅ ಮನೆ ಹಾನಿ ಯಾದವರಿಗೆ 3ಲಕ್ಷ ರೂ ಹಾಗೂ ಸಂಪೂರ್ಣ ಮನೆ ಹಾನಿ ಯಾದವರಿಗೆ 5 ಲಕ್ಷ ಪರಿಹಾರ ಕೊಡಿಸುವ ಭರವಸೆಯನ್ನು ನೀಡಿದರು.ಕ್ರಷಿ ತೋಟ ಹಾನಿಯಾದ […]
ಅಕಾಲಿಕ ಮಳೆಯಿಂದಾಗಿ ಜನ ಜೀವನ ಅಸ್ಥವ್ಯಸ್ಥ: ದುರಸ್ಥಿ ಕಾರ್ಯನಿರತ ಅಂಪಾರು ಗ್ರಾಮಪಂಚಾಯತ್ ನ ಪರಿಶ್ರಮಕ್ಕೆ ಶ್ಲಾಘನೆ
ಅಂಪಾರು(ಅ,9):ಇತ್ತೀಚೆಗೆ ಅಂಪಾರು ಪರಿಸರದಲ್ಲಿ ಗುಡುಗು ,ಮಿಂಚು ಸಹಿತ ಸುರಿದ ಅಕಾಲಿಕ ಮಳೆಯ ಪರಿಣಾಮವಾಗಿ ಅಂಪಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಬಗೆ, ಶಾನ್ಕಟ್ಟು ಕನ್ನಾಲಿಗೆಯಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿತ್ತು. ಜೋರಾಗಿ ಬೀಸಿದ ಗಾಳಿಯಿಂದಾಗಿ ಬೃಹದಾಕಾರದ ಮರಗಳು ಮನೆ ಹಾಗೂ ರಸ್ತೆಯ ಮೇಲೆರಗಿದ್ದವು.ಇನ್ನೂ ಕೆಲವು ಭಾಗಗಳಲ್ಲಿ ಫಲವತ್ತಾದ ಅಡಿಕೆ, ತೆಂಗಿನ ಮರಗಳು ಧರೆಗುರುಳಿ ಬಿದ್ದಿದೆ.ಅದಲ್ಲದೇ ಗಾಳಿಯ ರಭಸಕ್ಕೆ ಮನೆಗಳ ಹಾಗೂ ದನದ ಕೊಟ್ಟಿಗೆಗಳ ಹೆಂಚು ಹಾಗೂ ತಗಡಿನ ಮಾಡು ಸಂಪೂರ್ಣ ಜಖಂಗೊಂಡಿದ್ದು, ಸಿಡಿಲಿನ ಹೊಡೆತಕ್ಕೆ ಸಿಲುಕಿ […]
ಅರಾಟೆ : ವಾಜಪೇಯಿ ಬಸ್ಸು ತಂಗುದಾಣ ಉದ್ಘಾಟಿಸಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ
ಅರಾಟೆ (ಸೆ, 27) : ಬೈಂದೂರು ವಿಧಾನಸಭಾ ಕ್ಷೇತ್ರದ ಹೊಸಾಡು ಗ್ರಾಮಪಂಚಾಯತ್ ವ್ಯಾಪ್ತಿಯ ಅರಾಟೆ ಎಂಬಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಮೂಲಕ ಮೂರು ಲಕ್ಷ ರೂಪಾಯಿ ವೆಚ್ಚದಲ್ಲಿ, ದೇಶ ಕಂಡ ಧೀಮಂತ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಯವರ ಹೆಸರಿನಲ್ಲಿ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣವನ್ನು ಬೈಂದೂರಿನ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾಪಕ್ಷದ ಬೈಂದೂರು ಮಂಡಲದ ಅಧ್ಯಕ್ಷರಾದ ದೀಪಕ್ ಕುಮಾರ್ […]
ಕ್ಷೇತ್ರದ ಅಭಿವೃದ್ಧಿ ಯೋಜನೆಗಳ ಕುರಿತು ಸದನದಲ್ಲಿ ಧ್ವನಿ ಎತ್ತಿದ ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ
ಬೈಂದೂರು (ಸೆ,22): ಉಡುಪಿ ಜಿಲ್ಲೆಯ ಹಿಂದುಳಿದ ಹಾಗೂ ಗ್ರಾಮೀಣ ಪ್ರದೇಶವನ್ನು ಹೊಂದಿರುವ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು 9000 ವಸತಿ ರಹಿತರಿದ್ದು, ಅವರಿಗೆ ಶಾಶ್ವತ ನೆಲೆ ಕಂಡುಕೊಳ್ಳಲು ಹೆಚ್ಚುವರಿ ಮನೆಗಳನ್ನು ಮಂಜುರು ಮಾಡಬೇಕು,ಹಿಂದೆ ಪ್ರತಿ ಗ್ರಾಮ ಪಂಚಾಯತ್ ಗೆ ನೀಡಿರುವ 20 ಮನೆಗಳ ಆದೇಶ ಆದಷ್ಟು ಶೀಘ್ರವಾಗಿ ಶೀಘ್ರ ನೀಡಬೇಕು ಎಂದು ಬೈಂದೂರಿನ ಶಾಸಕ ಬಿ.ಎಂ .ಸುಕುಮಾರ ಶೆಟ್ಟಿ ಸದನದಲ್ಲಿ ವಸತಿ ಸಚಿವ ಶ್ರೀ ವಿ. ಸೋಮಣ್ಣ […]