ವಂಡ್ಸೆ (ಜೂ, 8): ಹಿಂದು ಜಾಗರಣ ವೇದಿಕೆ ಬೈಂದೂರು ತಾಲೂಕಿನ ಕಾರ್ಯಕರ್ತರುಬೆಳ್ಕಲ್ ತೀರ್ಥದ ಪಾವಿತ್ರ್ಯತೆಯ ಉಳಿವಿಗಾಗಿ ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಸಲ್ಲಿಸಿದ ಮನವಿಗೆಬೈಂದೂರು ಶಾಸಕ ಶ್ರೀ ಬಿ.ಎಂ.ಸುಕುಮಾರ ಶೆಟ್ಟಿ ಸ್ಪಂದಿಸಿದ್ದಾರೆ. ಮನವಿಗೆ ಸ್ಪಂದಿಸಿದ ಶಾಸಕರು ಬೆಳ್ಕಲ್ ತೀರ್ಥದ ಕ್ಷೇತ್ರದ ಪಾವಿತ್ರ್ಯತೆ ಉಳಿವಿಗಾಗಿ ಸೂಕ್ತ ವ್ಯವಸ್ಥೆ ಕಲ್ಪಸಿ, ತೀರ್ಥ ಸ್ಥಾನಕ್ಕೆ ಹೋಗುವವರು ಯಾವುದೇ ಮಾಂಸದ ಊಟ,ಪ್ಲಾಸ್ಟಿಕ್ ಬಾಟಲಿ,ಮದ್ಯ ತೆಗೆದುಕೊಂಡು ಹೋಗದಂತೆ ಕ್ರಮ ಕೈಗೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಕರೆ ಮಾಡಿ […]
Tag: bms
ಅಪಘಾತಗೊಂಡ ಕಲಾವಿದ ಸುಬ್ರಹ್ಮಣ್ಯ ಮೊಗವೀರ ಮನೆಗೆ ಬೈಂದೂರು ಶಾಸಕರ ಭೇಟಿ
ವಂಡ್ಸೆ (ಜು, 8) : ಇತ್ತೀಚೆಗೆ ಬೈಕ್ ಅಪಘಾತಕ್ಕೆ ಒಳಗಾದ ಯಕ್ಷಗಾನ ಕಲಾವಿದ ಬಗ್ವಾಡಿಯ ಸುಬ್ರಹ್ಮಣ್ಯ ಮೊಗವೀರ ನ ಮನೆಗೆ ಬೈಂದೂರಿನ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿಯವರು ಭೇಟಿ ನೀಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಮೀನುಗಾರಿಕೆ ಇಲಾಖೆಯಿಂದ ಶೀಘ್ರವಾಗಿ ಮನೆ ನಿರ್ಮಿಸಿಕೊಡುವುದಾಗಿ ತಿಳಿಸಿ, ತಕ್ಷಣವೇ ಸಂಬಂಧಪಟ್ಟವರಿಗೆ ಶಾಸಕರು ಮಾತನಾಡಿದರು. ಜೊತೆಗೆ ಕಿರು ಮೊತ್ತದ ಆರ್ಥಿಕ ಸಹಾಯಧನ ನೀಡಿ ಧೈರ್ಯ ತುಂಬಿದ ಶಾಸಕರು ಮನೆ ನಿರ್ಮಿಸಲು ಬೇಕಾಗುವ ಹಂಚುಗಳನ್ನು […]
ವಂಡ್ಸೆ : ಗ್ರಾಮೀಣ ಭಾಗದ ನೆಟ್ ವರ್ಕ್ ಸಮಸ್ಯೆ ಬಗೆಹರಿಸಲು ಶಾಸಕ ಬಿ. ಎಮ್. ಸುಕುಮಾರ ಶೆಟ್ಟಿ ನೇತ್ರತ್ವದಲ್ಲಿ ಸಭೆ
ವಂಡ್ಸೆ (ಜೂ, 28) : ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ನೆಟ್ ವರ್ಕ್ ಸಮಸ್ಯೆ ಹೆಚ್ಚಿದ್ದು, ಲಾಕ್ಡೌನ್ ಕಾರಣದಿಂದಾಗಿ ವಿದ್ಯಾರ್ಥಿಗಳಿಗೆ ಅನಿವಾರ್ಯವಾದ ಅನ್ ಲೈನ್ ಶಿಕ್ಷಣಕ್ಕೆ ನೆಟ್ ವರ್ಕ್ ಸಮಸ್ಯೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಸಂದಿಗ್ಧ ಪರಿಸ್ಥಿತಿಯನ್ನು ಸರಿಪಡಿಸುವ ಸಲುವಾಗಿ ಬೈಂದೂರು ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಸಂಬಂಧಪಟ್ಟ ನೆಟ್ವರ್ಕ್ ನಿರ್ವಹಣಾಧಿಕಾರಿಗಳೊಂದಿಗೆ ತಮ್ಮ ಗ್ರಹ ಕಛೇರಿಯಲ್ಲಿ ಜೂನ್, 22 ರಂದು ಸಭೆ ನಡೆಸಿದರು. ನೆಟ್ ವರ್ಕ್ […]
ವಂಡ್ಸೆ : ಶಾಸಕರ ನಿವಾಸದಲ್ಲಿ ಶ್ಯಾಮಪ್ರಸಾದ್ ಮುಖರ್ಜಿಯವರ ನುಡಿ ನಮನ ಕಾರ್ಯಕ್ರಮ
ವಂಡ್ಸೆ (ಜೂ, 24) : ಭಾರತದ ಸಮಗ್ರತೆ ಮತ್ತು ಸಾರ್ವಭೌಮತೆಗೆ ಅಡ್ಡಿಯಾದ ಆರ್ಟಿಕಲ್ 370 ಬಗ್ಗೆ ಮೊದಲು ಧ್ವನಿ ಎತ್ತಿದವರು ಡಾ.ಶ್ಯಾಮ ಪ್ರಸಾದ್ ಮುಖರ್ಜಿಯವರು. ಇವರ ಪ್ರಯತ್ನದ ಫಲವಾಗಿ ಜನಸಂಘದ ರಚನೆಯಾಯಿತು. ಇವರು ಬಿತ್ತಿದ ರಾಷ್ಟ್ರೀಯತೆ ಮತ್ತು ಭಾರತೀಯತೆಯ ಗುಣಗಳಿಂದಾಗಿ ಇಂದು ನಮ್ಮ ಬಿಜೆಪಿ ಪಕ್ಷ ವಿಶ್ವದ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಬೈಂದೂರು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ ಹೇಳಿದರು. ಉದಾತ್ತ ಕಾರಣಗಳಿಗಾಗಿ ಹುತಾತ್ಮರಾದ ಶ್ಯಾಮಪ್ರಸಾದ್ ಮುಖರ್ಜಿಯವರು ಎಂದೆಂದಿಗೂ […]
ವಂಡ್ಸೆ : ಶಾಸಕರ ನಿವಾಸದಲ್ಲಿ ವಿಶ್ವ ಯೋಗ ದಿನಾಚರಣೆ
ವಂಡ್ಸೆ (ಜೂ, 22): ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಪಾಡಿಕೊಳ್ಳಲು ಯೋಗಾಸನ ಅತ್ಯವಶ್ಯಕ. ಆ ನಿಟ್ಟಿನಲ್ಲಿ ಜೂನ್, 21 ರಂದು ಜಗತ್ತಿನ ವಿವಿಧ ಭಾಗಗಳಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಗುತ್ತದೆ. ನಮ್ಮ ರಾಜ್ಯದ ವಿವಿಧ ಭಾಗಗಳಲ್ಲೂ ವಿಶ್ವ ಯೋಗ ದಿನಾಚರಣೆ ಆಚರಿಸಿದ್ದು, ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ತಮ್ಮ ನೆಂಪುವಿನಲ್ಲಿರುವ ನಿವಾಸದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸುವುದರ ಮೂಲಕ ಯೋಗಾಸನದ ಮಹತ್ವವನ್ನು ತಿಳಿಸಿದರು. ಈ […]
ಗಂಗೊಳ್ಳಿ: ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಭೇಟಿ – ಕರೋನಾ ನಿಯಂತ್ರಣ ಕ್ರಮಗಳ ಕುರಿತು ಪರಿಶೀಲನೆ
ಗಂಗೊಳ್ಳಿ (ಜೂ, 12): ಬೈಂದೂರು ಶಾಸಕ ಶ್ರೀ. ಬಿ.ಎಂ.ಸುಕುಮಾರ್ ಶೆಟ್ಟಿ ಗಂಗೊಳ್ಳಿ ಗ್ರಾಮಕ್ಕೆ ಗ ಭೇಟಿ ನೀಡಿ ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಕ್ರಮಗಳನ್ನು ಪರಿಶೀಲಿಸಿ ಮಾಹಿತಿಯನ್ನು ಪಡೆದುಕೊಂಡರು. ಕೋವಿಡ್ ನಿಯಂತ್ರಣಕ್ಕೆ 50 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಇರುವ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶವನ್ನು ಜೂ.10 ರಿಂದ ಸಂಪೂರ್ಣ ಲಾಕ್ಡೌನ್ ಮಾಡಲಾಗಿದ್ದು, ಉತ್ತಮ ರೀತಿಯಲ್ಲಿ ಲಾಕ್ಡೌನ್ ವ್ಯವಸ್ಥೆ ಮಾಡಿರುವುದಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಕರೋನಾ […]
ಗಂಗೊಳ್ಳಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹ ಕುಟುಂಬಗಳಿಗೆ ಮೀನುಗಾರಿಕಾ ಸವಲತ್ತುಗಳನ್ನು ವಿತರಿಸಿದ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ
ಗಂಗೊಳ್ಳಿ (ಮೇ, 26): ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಏಳು ಅರ್ಹ ಕುಟುಂಬಗಳಿಗೆ ತಲಾ 3.90 ಲಕ್ಷ ರೂಪಾಯಿ ಮೌಲ್ಯದ ದೋಣಿ ಮತ್ತಿತರ ಮೀನುಗಾರಿಕಾ ಸಲಕರಣೆಗಳನ್ನು ಬೈಂದೂರಿನ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ವಿತರಿಸಿದರು.ಮೀನುಗಾರರು ನೆಮ್ಮದಿಯ ಜೀವನ ನಡೆಸುವಂತಾಗಬೇಕು ಎಂಬ ಆಶಯದೊಂದಿಗೆ ಮೀನುಗಾರಿಕೆ ದೋಣಿ, ಇಂಜಿನ್, ಬಲೆ, ಲೈಫ್ ಜಾಕೆಟ್, ಶಾಖ ನಿರೋಧಕ ಪೆಟ್ಟಿಗೆ ಹಸ್ತಾಂತರಿಸಲಾಗಿದೆ ಎಂದು ಶಾಸಕರು […]
ಮೆಸ್ಕಾಂ ಅಧಿಕಾರಿಗಳೊಂದಿಗೆ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಸಭೆ
ಕುಂದಾಪುರ ( ಮೇ, 22): ಮಳೆಗಾಲದಲ್ಲಿನ ವಿದ್ಯುತ್ ಸಮಸ್ಯೆ ಹಾಗೂ ಮೆಸ್ಕಾಂ ಸಿಬ್ಬಂದಿಗಳು ಎದುರಿಸುತ್ತಿರುವ ಸವಾಲುಗಳ ಕುರಿತಾಗಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿಮೆಸ್ಕಾಂ ಅಧಿಕಾರಿಗಳ ಜೊತೆ ಕುಂದಾಪುರ ತಾಲೂಕು ಪಂಚಾಯತ್ ಕಛೇರಿಯಲ್ಲಿ ಸಭೆ ನಡೆಸಿದರು. ಮಳೆಗಾಲದ ಸಂಧರ್ಭದಲ್ಲಿನ ಮೆಸ್ಕಾಂ ಸಿಬ್ಬಂದಿಗಳ ಸಮಸ್ಯೆಗಳ ಕುರಿತಾಗಿ ಮಾಹಿತಿಯನ್ನು ಪಡೆಯುವುದರ ಜೊತೆಗೆ ಕರೋನಾ ಕಾರಣದಿಂದಾಗಿ ಮನೆಯಲ್ಲೇ ಓದುತ್ತಿರುವ ವಿದ್ಯಾರ್ಥಿಗಳಿಗೆ ಆನ್ಲೈನ್ ಕ್ಲಾಸ್ ಹಾಗೂ ಹಲವು ಉದ್ಯೋಗಸ್ಥರು ಮನೆಯಲ್ಲಿಂದಲೇ ಕೆಲಸ ನಿರ್ವಹಿಸುತ್ತಿರುವುದರಿಂದ ವಿದ್ಯುತ್ ವ್ಯತ್ಯಯ […]
ತೌಖ್ತೆ ಚಂಡಮಾರುತದ ತೀವ್ರತೆಯಿಂದ ಕಡಲ್ಕೊರೆತಕ್ಕೆ ಒಳಗಾದ ಪ್ರದೇಶಕ್ಕೆ ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಭೇಟಿ
ಬೈಂದೂರು (ಮೇ, 15) : ತೌಖ್ತೆ ಚಂಡಮಾರುತದ ತೀವ್ರತೆಯಿಂದ ಕಡಲ್ಕೊರೆತಕ್ಕೆ ಒಳಗಾದ ಬೈಂದೂರು ಕ್ಷೇತ್ರದ ಕಡಲ ತೀರದ ಭಾಗಗಳಿಗೆ ಶಾಸಕರಾದ ಬಿ.ಎಂ.ಸುಕುಮಾರ್ ಶೆಟ್ಟಿ ಭೇಟಿ ನೀಡಿದರು. ಚಂಡ ಮಾರುತದಿಂದಾಗಿ ಸಂಭವಿಸಿದ ಹಾನಿಗಳ ಕುರಿತು ಪರಿಶೀಲನೆ ನಡೆಸಿ ಮುಖ್ಯಮಂತ್ರಿಗಳು ಮತ್ತು ಸಂಸದ ಬಿ.ವೈ ರಾಘವೇಂದ್ರರ ಗಮನಕ್ಕೆ ತಂದು ಸಂತ್ರಸ್ತರಿಗೆ ಪರಿಹಾರ ಒದಗಿಸುವ ಭರವಸೆ ನೀಡಿದರು.
ಬೈಂದೂರು ಶಾಸಕರ ಗೃಹ ಕಛೇರಿಗೆ ನೂತನ ತಹಶೀಲ್ದಾರ್ ಭೇಟಿ
ಬೈಂದೂರು (ಮೇ,13): ಬೈಂದೂರು ತಾಲೂಕಿನ ನೂತನ ತಹಶೀಲ್ದಾರರಾಗಿ ಅಧಿಕಾರ ಸ್ವೀಕರಿಸಿರುವ ಶೋಭಾಲಕ್ಷ್ಮೀ ಹೆಚ್. ಎಸ್ ರವರು ಬೈಂದೂರು ಶಾಸಕ ಬಿಎಂ ಸುಕುಮಾರ್ ಶೆಟ್ಟಿ ಯವರ ಗೃಹಕಛೇರಿಗೆ ಮೇ 13ರಂದು ಭೇಟಿ ನೀಡಿದರು. ನೂತನ ತಹಶೀಲ್ದಾರರಾಗಿ ಅಧಿಕಾರ ಸ್ವೀಕರಿಸಿರುವ ಶೋಭಾ ಲಕ್ಷ್ಮಿ ಹೆಚ್ ರವರನ್ನು ಶಾಸಕರು ಶುಭ ಹಾರೈಸಿ ತಾಲೂಕಿನ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಕೋವಿಡ್ ನಿರ್ವಹಣೆ ಹಾಗೂ ಜಿಲ್ಲೆಯ ಅತ್ಯಂತ ಗ್ರಾಮೀಣ ಭಾಗವಾಗಿರುವ ಬೈಂದೂರು ಕ್ಷೇತ್ರದ ಜನತೆಯ ಆಡಳಿತಾತ್ಮಕ […]