ಕೊಲ್ಲೂರು (ಮೇ, 10) : ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸಂಸದ ಬಿ. ವೈ. ರಾಘವೇಂದ್ರ ಮತ್ತು ಅವರ ಧರ್ಮಪತ್ನಿ ತೇಜಸ್ವಿನಿ ರಾಘವೇಂದ್ರ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ್ ಶೆಟ್ಟಿ, ಮತ್ತು ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು. ಇಡೀ ದೇಶಕ್ಕೆ ಆವರಿಸಿಕೊಂಡಿರುವ ಮಹಾಮಾರಿ ಕೊರೊನಾ ನಿವಾರಣೆಗಾಗಿ ಸಂಸದರು ಮೂಕಾಂಬಿಕೆಗೆ ವಿಶೇಷ ಪೂಜೆ […]
Tag: bms
ಬೈಂದೂರು ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ಉತ್ಪಾದನಾ ಘಟಕ ಮಂಜೂರು
ಬೈಂದೂರು (ಮೇ, 6): ಬೈಂದೂರು ಸರ್ಕಾರಿ ಆಸ್ಪತ್ರೆಗೆ ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿ ಭೇಟಿ ನೀಡಿ ಆಸ್ಪತ್ರೆಗೆ ಮಂಜೂರರಾಗಿರುವ ಹೊಸ ಆಮ್ಲಜನಕ ಉತ್ಪಾದನಾ ಘಟಕದ ಸ್ಥಳಪರಿಶೀಲನೆ ನಡೆಸಿದರು. ಸುಮಾರು 60 ಲಕ್ಷ ರೂ. ವೆಚ್ಚದಲ್ಲಿ ಈ ಘಟಕ ನಿರ್ಮಾಣವಾಗುತ್ತಿದ್ದು, ಪ್ರತಿನಿತ್ಯ 80 ಸಿಲಿಂಡರ್ ನಷ್ಟು ಆಕ್ಸಿಜನ್ ಉತ್ಪಾದಿಸುವ ಸಾಮರ್ಥ್ಯವನ್ನು ಈ ಘಟಕ ಹೊಂದಿದೆ ಎಂದು ಅವರು ಹೇಳಿದರು. ಹಾಗೆಯೇ ಶಾಸಕರು ಕೋವಿಡ್ ನಿರ್ವಹಣೆ ಬಗ್ಗೆ ವೈದ್ಯಾಧಿಕಾರಿ ಗಳು ಹಾಗೂ […]
ಶ್ರೀ ನಾಗ ದೇವಸ್ಥಾನ ಬೆಣ್ಗೆರೆ – ಗುಜ್ಜಾಡಿ ಸ್ವಾಗತ ಗೋಪುರ ಉದ್ಘಾಟಿಸಿದ ಶಾಸಕ ಬಿ. ಎಮ್. ಸುಕುಮಾರ ಶೆಟ್ಟಿ
ಗಂಗೊಳ್ಳಿ (ಏ, 10) : ಕುಂದಾಪುರ ತಾಲ್ಲೂಕಿನ ಗುಜ್ಜಾಡಿ ಸಮೀಪದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದ ಸ್ವಾಗತ ಗೋಪುರವನ್ನು ಬೈಂದೂರಿನ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿಶ್ರೀ ನಾಗ ದೇವಸ್ಥಾನ ಮಂಡಳಿಯ ಅಧ್ಯಕ್ಷ ಉಮೇಶ್ ಮೇಸ್ತ, ಮಾಜಿ ಅಧ್ಯಕ್ಷ ಶಾಂತರಾಮ ಮೇಸ್ತ ಗುಜ್ಜಾಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಹರೀಶ ಮೇಸ್ತ , ದೇವಸ್ಥಾನದ ಭಕ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. […]
ಸದಾನಂದ ಉಪ್ಪಿನ ಕುದ್ರು ರವರ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿರುವುದರ ಬಗ್ಗೆ ನನ್ನ ಬಳಿ ದಾಖಲೆ ಇದೆ – ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಪ್ರತಿಕ್ರಿಯೆ
ವಂಡ್ಸೆ (ಏ, 10) : ಬಿ.ಜೆ.ಪಿ ಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ರವರು ಹಣಕಾಸು ವ್ಯವಹಾರಕ್ಕೆ ಸಂಬಂಧಪಟ್ಟಂತೆ ಮಾಡಿರುವ ಆರೋಪಕ್ಕೆ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿಯವರು ಪ್ರತಿಕ್ರಿಯೆ ನೀಡಿದ್ದಾರೆ. ನಾನು ಬದುಕಿನಲ್ಲಿ ಪ್ರಾಮಾಣಿಕವಾಗಿ ಆರಾಧಿಸಿ ಸರ್ವಸ್ವವೆಂದು ನಂಬಿಕೊಂಡು ಬಂದ ಜಗನ್ಮಾತೆ ತಾಯಿ ಮೂಕಾಂಬಿಕೆ ಸನ್ನಿಧಾನದಲ್ಲಿ ನನ್ನ ಬಗೆಗೆ ಆರೋಪಗಳನ್ನು ಮಾಡಿದ್ದಾರೆ. ಹಾಗಾಗಿ ಈ ಎಲ್ಲಾ ಆರೋಪಗಳ ಸತ್ಯಾಸತ್ಯೆಯನ್ನು ತಾಯಿ ಮೂಕಾಂಬಿಕೆಯ ಚಿತ್ತಕ್ಕೆ ಬಿಡುತ್ತೇನೆ ಎಂದು ಬಿ. ಎಂ. ಸುಕುಮಾರ […]
ಬೈಂದೂರು ಎಳಜಿತ್ ನ ವಿದ್ಯಾಗೌಡರ ಮನೆಗೆ ಭೇಟಿ ನೀಡಿ ಶುಭ ಹಾರೈಸಿದ ಬೈಂದೂರಿನ ಶಾಸಕರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿ
ಭಾರತೀಯ ಸೇನೆಯ ಗಡಿ ಭದ್ರತಾ ಪಡೆಗೆ ( BSF) ಆಯ್ಕೆಗೊಂಡ ಬೈಂದೂರು ಎಳಜಿತ್ ನ ವಿದ್ಯಾಗೌಡ ರ ಮನೆಗೆ ಭೇಟಿ ನೀಡಿ ಶುಭ ಹಾರೈಸಿದ ಬೈಂದೂರಿನ ಶಾಸಕರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿ
ಇಂದುಧರ ದೇವಸ್ಥಾನ ಗಂಗೊಳ್ಳಿ : ಅಮೃತ ಮಹೋತ್ಸವ ಹಾಗೂ ನೂತನ ಸಭಾಭವನ ಉದ್ಘಾಟನೆ
ಗಂಗೊಳ್ಳಿ (ಮಾ.8): ಗಂಗೊಳ್ಳಿಯಲ್ಲಿ ಕಳೆದ 75 ವರ್ಷಗಳಿಂದ ಧರ್ಮ ಜಾಗ್ರತಿ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಜನರಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸುತ್ತಿರುವ ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನ ಕುಂದಾಪುರ ಪರಿಸರದ ಪ್ರಮುಖ ಭಕ್ತಿ ಕೇಂದ್ರಗಳಲ್ಲಿ ಒಂದಾಗಿದೆ. ಸರಕಾರದ ಹಾಗೂಇತರ ಅನುದಾನವನ್ನು ಬಳಸಿಕೊಂಡು ವ್ಯವಸ್ಥಿತವಾದ ಸಭಾಭವನವನ್ನು ನಿರ್ಮಿಸಿರುವುದು ಶ್ಲಾಘನೀಯ ಎಂದು ಬೈಂದೂರಿನ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಹೇಳಿದರು. ಅವರು ಮಾರ್ಚ್ 7 ರ ರವಿವಾರ ಶ್ರೀ ಇಂದುಧರ ದೇವಸ್ಥಾನ […]
ಶಿಕ್ಷಣದಿಂದಲೇ ಸಮಾಜದ ಪರಿವರ್ತನೆ ಸಾಧ್ಯ – ಶಾಸಕ ಬಿ .ಎಂ. ಸುಕುಮಾರ್ ಶೆಟ್ಟಿ
ಶಿಕ್ಷಣ ಪ್ರತಿಯೊಂದು ಮಗುವಿಗೂ ಅವಶ್ಯಕ. ಶಿಕ್ಷಣ ಎಂದೆಂದಿಗೂ ನನ್ನ ಮೊದಲ ಆದ್ಯತೆ, ಸದೃಡ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಮೂಲ ಅಡಿಪಾಯ ಎಂದು ಬೈಂದೂರಿನ ಶಾಸಕ ಬಿ.ಎಮ್ ಸುಕುಮಾರ್ ಶೆಟ್ಟಿ ಹೇಳಿದರು.
ಯಡ್ತರೆ ಮೊಗವೀರ ಗರಡಿ ಕಿರು ಸೇತುವೆ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ
ಬೈಂದೂರು (ಮಾ.5) ಯಡ್ತರೆ ಮೊಗವೀರ ಗರಡಿಯು ಮೊಗವೀರ ಸಮಾಜ ಬಾಂಧವರ ಅತ್ಯಂತ ಪೂಜನೀಯ ಮತ್ತು ಪ್ರತಿಷ್ಠಿತ ಗರಡಿಗಳಲ್ಲಿ ಒಂದಾಗಿದೆ. ಈ ಗರಡಿಗೆ ಕಳೆದ ಬಾರಿ ಭೇಟಿ ನೀಡಿದಾಗ ಸುಗಮ ಸಂಚಾರಕ್ಕೆ ಕಿರು ಸೇತುವೆಯ ಅವಶ್ಯಕತೆ ಇದೆ ಎನ್ನುವುದಾಗಿ ನನಗೆ ಬೇಡಿಕೆಯನ್ನು ಈ ಭಾಗದ ಜನತೆ ಸಲ್ಲಿಸಿದ್ದರು. ಅದನ್ನು ಗಮನದಲ್ಲಿ ಇರಿಸಿಕೊಂಡು ಈ ಬಾರಿ ಕಿಂಡಿ ಅಣೆಕಟ್ಟು ಪಟ್ಟಿಯಲ್ಲಿ ಇದನ್ನು ಸೇರಿಸಲಾಗಿದೆ ಎಂದು ಶಾಸಕ ಸುಕುಮಾರ ಶೆಟ್ಟಿ ಹೇಳಿದರು. ಅವರು ಯಡ್ತರೆ […]
ಮಾ. 7 ರಂದು ಶ್ರೀ ವಿನಾಯಕ ಯುವಕ ಸಂಘ (ರಿ) ನೆಂಪು ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ವಿವಿಧ ಕಾರ್ಯಕ್ರಮಗಳು
ಶ್ರೀ ವಿನಾಯಕ ಯುವಕ ಸಂಘ(ರಿ) ನೆಂಪು ,ಕರ್ಕುಂಜೆ ಇವರ ಆಶ್ರಯದಲ್ಲಿ ಇದೇ ಮಾರ್ಚ್ 7 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ನೆಂಪು ವಠಾರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಧಾರ್ಮಿಕ ಪ್ರವಚನ ಹಾಗೂ ಸಾಂಸ್ಕೃತಿಕ ವೈಭವ ನಡೆಯಲಿದೆ.
ಡಾ. ಜಿ. ಶಂಕರ್ ರವರ ಸಮಾಜ ಸೇವೆ ಶ್ಲಾಘನೀಯ : ಸಂಸದ ಬಿ. ವೈ. ರಾಘವೇಂದ್ರ
ಸಮಾಜದಿಂದ ಪಡೆದಿದ್ದನ್ನು ಪುನ: ಸಮಾಜಕ್ಕೆ ನೀಡಬೇಕಾಗಿದ್ದು ಮನುಷ್ಯ ಧರ್ಮ. ಆ ನಿಟ್ಟಿನಲ್ಲಿ ಡಾ.ಜಿ ಶಂಕರ್ ರವರು ತಮ್ಮ ಫ್ಯಾಮಿಲಿ ಟ್ರಸ್ಟ್ ಮೂಲಕ ಅನೇಕ ರೀತಿಯಲ್ಲಿ ಜನಸೇವೆ ಮಾಡುತ್ತಾ ಸಮಾಜದ ನೋವು ನಲಿವುಗಳಿಗೆ ಸ್ಪಂದಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಸಂಸದ ಬಿ.ವೈ ರಾಘವೇಂದ್ರ ರವರು ಹೇಳಿದರು.