ಕೆರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜಿನ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಗುದ್ದಲಿ ಪೂಜೆ ನೇರವೆರಿಸುವುದರೊಂದಿಗೆ ಕಾಮಗಾರಿಗೆ ಚಾಲನೆ ನೀಡಿದರು.
Tag: bms
ಮಾ.3 ರಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕೊಲ್ಲೂರು ದೇವಸ್ಥಾನಕ್ಕೆ ಅಮ್ಮ ವಿಶ್ರಾಂತಿಗೃಹ ಹಸ್ತಾಂತರ ಕಾರ್ಯಕ್ರಮ
ನಾಡೋಜಾ.ಡಾ.ಜಿ.ಶಂಕರ್ ಪ್ರವರ್ತಿತ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಉಡುಪಿ ವತಿಯಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಉಳಿದುಕೊಳ್ಳಲು ಅನುಕೂಲವಾಗುವಂತೆ ಸುಮಾರು 2.50 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ‘ಅಮ್ಮ’ ವಿಶ್ರಾಂತಿಗೃಹವನ್ನು ನಿರ್ಮಿಸಿದ್ದು, ಇದರ ಹಸ್ತಾಂತರ ಕಾರ್ಯಕ್ರಮ ಮಾ.3 ರ ಬುಧವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿದ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ
ವಂಡ್ಸೆ (ಮಾ.1) ಹಟ್ಟಿಯಂಗಡಿ ಕನ್ಯಾನ ಭಾಗದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಬೈಂದೂರಿನ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಯವರು ಶಂಕು ಸ್ಥಾಪನೆ ನೆರವೇರಿಸಿದರು.. ಇಪ್ಪತ್ತು ಲಕ್ಷ ರೂಪಾಯಿ ಮೌಲ್ಯದ ಕಾಮಗಾರಿ ಇದಾಗಿದ್ದು ಶೀಘ್ರವಾಗಿ ನಿರ್ಮಾಣ ಕಾರ್ಯ ಆಗಲಿದೆ ಎಂದು ಅವರು ಹೇಳಿದರು. ಈ ಸಂಧರ್ಭದಲ್ಲಿ ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ , ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಮೃತಾ ಶೆಟ್ಟಿ , ಉಪಾಧ್ಯಕ್ಷರಾದ ಪ್ರತಾಪ ಶೆಟ್ಟಿ ಹಾಗೂ […]
ಗಂಗೊಳ್ಳಿ ಮೀನುಗಾರಿಕಾ ಬಂದರು ಸಮಗ್ರ ಅಭಿವೃದ್ಧಿ – ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ
ಜಿಲ್ಲೆಯ ಪ್ರಮುಖ ಮೀನುಗಾರಿಕಾ ಬಂದರುಗಳಲ್ಲಿ ಒಂದಾಗಿರುವ ಗಂಗೊಳ್ಳಿ ಮೀನುಗಾರಿಕಾ ಬಂದರಿನ ಮೀನುಗಾರಿಕೆ ಜೆಟ್ಟಿಯ ಸುಮಾರು 12 ಕೋಟಿ ರೂ. ವೆಚ್ಚದ ಪುನರ್ ನಿರ್ಮಾಣ ಕಾಮಗಾರಿ ಮತ್ತು ಒಂದು ಕೋಟಿ ರೂ. ವೆಚ್ಚದ ಮೀನುಗಾರಿಕಾ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.
ಗಂಗೊಳ್ಳಿ ಮಲ್ಯರಬೆಟ್ಟು ರಸ್ತೆ ಕಾಮಗಾರಿ – ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ
ಇನ್ನು ಕೆಲವು ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಮಲ್ಯರಬೆಟ್ಟು ದೇವಸ್ಥಾನದ ರಸ್ತೆಗೆ ಸುಮಾರು 14 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ ಹೇಳಿದರು.
ಡಾ. ಬಿ. ಬಿ. ಹೆಗ್ಡೆ ಕಾಲೇಜು – ಫೆ.24 ರಂದು ಅಂತರ್ ಕಾಲೇಜು ಮಹಿಳಾ ವಿಭಾಗದ ತ್ರೋಬಾಲ್ ಪಂದ್ಯಾಕೂಟ
ಕುಂದಾಪುರ ಎಜುಕೇಶನ್ ಸೊಸೈಟಿ(ರಿ) ಪ್ರವರ್ತಿತ ಡಾl ಬಿ.ಬಿ ಹೆಗ್ದೆ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಕುಂದಾಪುರ ವಲಯ ಮಟ್ಟದ ಮಹಿಳಾ ವಿಭಾಗದ ತ್ರೋಬಾಲ್ ಪಂದ್ಯಾಕೂಟ ಇದೇ ಫೆಬ್ರವರಿ 24ರಂದು ಕಾಲೇಜಿನ ಬಿ.ಎಂ.ಎಸ್. ಕ್ರೀಡಾಂಗಣದಲ್ಲಿ ನಡೆಯಲಿದೆ.
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ- ಓಪರೇಟಿವ್ ಸೊಸೈಟಿ ನವೀಕೃತ ಶಾಖೆ ಉದ್ಘಾಟಿಸಿದ ಶ್ರೀ ಬಿ.ಎಂ. ಸುಕುಮಾರ್ ಶೆಟ್ಟಿ
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಕುಂದಾಪುರ ಇದರ ಹವಾನಿಯಂತ್ರಿತ ನವೀಕೃತ ಶಾಖೆಯನ್ನು ಬೈಂದೂರಿನ ಶಾಸಕ ಶ್ರೀ ಬಿ.ಎಂ. ಸುಕುಮಾರ್ ಶೆಟ್ಟಿ ಉದ್ಘಾಟಿಸಿದರು. ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಗ್ರಾಹಕರ ವಿಶ್ವಾಸ ಗಳಿಸಿ ಯಶಸ್ಸಿನತ್ತ ಸಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಖೆಗಳನ್ನು ಹೊಂದಿ ಸೊಸೈಟಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಅವರು ಹೇಳಿದರು.
ಡಾ| ಬಿ. ಬಿ. ಹೆಗ್ಡೆ ಕಾಲೇಜು : ರಕ್ಷಕ – ಶಿಕ್ಷಕ ಸಭೆ
ಸಭೆಯ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿಯವರು ಮಾತನಾಡಿ, ಶಿಸ್ತುಬದ್ಧ ಶೈಕ್ಷಣಿಕ ವಾತಾವರಣದಿಂದ ಕೂಡಿರುವ ಕಾಲೇಜು ಅತ್ಯಂತ ಕಿರು ಅವಧಿಯಲ್ಲಿ ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ.
ಗಂಗೊಳ್ಳಿ ಮೀನುಗಾರಿಕಾ ಬಂದರಿಗೆ ಸಚಿವ ಎಸ್. ಅಂಗಾರ ಭೇಟಿ
ಕರ್ನಾಟಕ ರಾಜ್ಯ ಮೀನುಗಾರಿಕಾ ಮತ್ತು ಬಂದರು ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಎಸ್. ಅಂಗಾರ ರವರು ಕುಂದಾಪುರ ತಾಲೂಕಿನ ಅತಿದೊಡ್ಡ ಮೀನುಗಾರಿಕೆ ಬಂದರಾಗಿರುವ ಗಂಗೊಳ್ಳಿ ಬಂದರಿಗೆ ಭೇಟಿ ನೀಡಿದರು.
ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ನಿಧಿಗೆ ಶಾಸಕ ಬಿ. ಎಮ್. ಸುಕುಮಾರ ಶೆಟ್ಟಿ 1 ಲಕ್ಷ ರೂ ದೇಣಿಗೆ
ಆಯೋದ್ಯೆ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಅಭಿಯಾನಕ್ಕೆ ಬೈಂದೂರು ಶಾಸಕರಾದ ಬಿ.ಎಮ್. ಸುಕುಮಾರ ಶೆಟ್ಟಿಯವರು ಒಂದು ಲಕ್ಷ ದೇಣಿಗೆ ನೀಡಿದರು. ದೇಶದಾದ್ಯಂತ ನಡೆಯುತ್ತಿರುವ ಈ ಅಭಿಯಾನಕ್ಕೆ ಶಾಸಕರು ಶುಭಹಾರೈಸಿದರು.










