ಕೋಟೇಶ್ವರ (ಜೂ, 05): ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕೋಟೇಶ್ವರ ಸರಕಾರಿ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯುತ್ತಿರುವ ಲಸಿಕಾ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೋಟೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ಪೂರ್ಣಿಮಾ ಶೇಟ್, ಕೇಂದ್ರದ ನಿರ್ವಾಹಕ ಸುಹಾಸ್ ಪೈ ಜಿಲ್ಲಾಧಿಕಾರಿಗಳಿಗೆ ಲಸಿಕಾ ಕೇಂದ್ರದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸೇವಾ ಭಾರತಿಯ ಸ್ವಯಂಸೇವಕರು ಉಪಸ್ಥಿತರಿದ್ದರು.
Tag: covid
ಕುಂದಾಪುರದ ಕೋವಿಡ್ ಆಸ್ಪತ್ರೆಯನ್ನು ಸ್ವಚ್ಚಗೊಳಿಸಿದ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಕುಂದಾಪುರ ಪ್ರಖಂಡದ ಕಾರ್ಯಕರ್ತರು
ಕುಂದಾಪುರ (ಮೇ, 30): ಕರೋನಾ ಎರಡನೆಯ ಅಲೆಯಿಂದಾಗಿ ಮುಂಬರುವ ದಿನಗಳಲ್ಲಿ ತಾಲೂಕಿನ ಆಸ್ಪತ್ರೆಗಳಲ್ಲಿ ಎದುರಾಗಬಹುದಾದ ಚಿಕಿತ್ಸೆ ಹಾಗೂ ಹಾಸಿಗೆಗಳ ಅಭಾವದ ಸಮಸ್ಯೆಗಳನ್ನು ನೀಗಿಸುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ “ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಕುಂದಾಪುರ ಪ್ರಖಂಡ” ಇದರ ಕಾರ್ಯಕರ್ತರು ಕುಂದಾಪುರ ನಗರದ ಕಳೆದ ವರ್ಷ ಕೋವಿಡ್ ಆಸ್ಪತ್ರೆಯಾಗಿ ಕಾರ್ಯನಿರ್ವಹಿಸಿದ ಹಳೆ ಆದರ್ಶ ಆಸ್ಪತ್ರೆಯನ್ನು ಮೇ 30 ರಂದು ಸ್ವಚ್ಛಗೊಳಸಿ ವೈದ್ಯಕೀಯ ಸೇವೆಗಾಗಿ ಸಜ್ಜುಗೊಳಿಸಿದರು. ಇವರಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಾಥ್ […]
ಮಹಾಲಕ್ಷ್ಮೀ ಬ್ಯಾಂಕ್ ಕೋ- ಆಪರೇಟಿವ್ ಬ್ಯಾಂಕ್ : ಕೋವಿಡ್ ಸೋಂಕಿತ ಸದಸ್ಯರ ಆರೋಗ್ಯ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ
ಉಡುಪಿ (ಮೇ, 5): ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆಗೊಳಗಾದ ತಮ್ಮ ಬ್ಯಾಂಕಿನ ಸದಸ್ಯರುಗಳಿಗೆ ವೈದ್ಯಕೀಯ ಸಹಾಯ ಧನ ನೀಡುವ ಯೋಜನೆಯನ್ನು ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ರೂಪಿಸಿದ್ದು, ಕೊರೋನ ಸೋಂಕಿಗೆ ತುತ್ತಾದ ಸದಸ್ಯರು ಅರ್ಜಿ ಸಲ್ಲಿಸುವಂತೆ ಬ್ಯಾಂಕಿನ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕಿನ ಸದಸ್ಯರು ಮಾತ್ರ ಈ ಯೋಜನೆಗೆ ಅರ್ಹರಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಬ್ಯಾಂಕಿನ ಶಾಖೆಗಳನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೂಕ್ತ ದಾಖಲೆಯನ್ನು […]
ಕೋವಿಡ್ ಲಸಿಕೆ ಅಭಿಯಾನಕ್ಕೆ ಗೋಪಾಡಿ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘಟನೆಗಳ ಸಹಕಾರ
ಕೋಟೇಶ್ವರ (ಏ, 7): ಪಡು ಗೋಪಾಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 75ಕ್ಕೂ ಮಿಕ್ಕಿ ಗ್ರಾಮಸ್ಥರು ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡರು. ಈ ಸಂದರ್ಭದಲ್ಲಿ ಗೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸರೋಜ,ಪಂಚಾಯತ್ ನ ಹಿರಿಯ ಸದ್ಯಸರಾದ ಶ್ರೀ ಸುರೇಶ್ ಶೆಟ್ಟಿ ಗೋಪಾಡಿ, ಸದ್ಯಸರಾದ ಪ್ರಕಾಶ್ ಗೋಪಾಡಿ, ಶ್ರೀಮತಿ ನೇತ್ರಾವತಿ ಮಡಿವಾಳ, ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಶ್ರೀನಿವಾಸ್ ಶೆಟ್ಟಿ, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸುರೇಂದ್ರ ಸಂಗಮ್, ಗೋಪಾಡಿ, ಗೋಮಾತಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ […]