ಕಾರ್ಕಳ ( ಜ,06): ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಡಿ 26 ರಿಂದ 28 ವರೆಗೆ ಇಂಡಿಯಾ ಸ್ಕೂಲ್ ಗೇಮ್ಸ್ ಸ್ಪೋರ್ಟ್ಸ್ ಫೌಂಡೇಶನ್ ನ (S. G. S. D. F India) ವತಿಯಿಂದ ನಡೆಸಲಾದ ಮೂರನೇ ಅಂತರಾಷ್ಟ್ರೀಯ 19 ವರ್ಷದೊಳಗಿನ ಯೋಗ ಚಾಂಪಿಯನ್ ಶಿಪ್ ನಲ್ಲಿ ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಪೂರ್ವ ವಿದ್ಯಾರ್ಥಿನಿ ನಿಧಿ ಯು ಆಚಾರ್ ಭಾರತವನ್ನು ಪ್ರತಿನಿಧಿಸಿ ಬಂಗಾರದ ಪದಕವನ್ನು ಗಳಿಸಿರುತ್ತಾರೆ. ನಿಧಿ ಯು ಆಚಾರ್ […]
Tag: creative pu karkala
ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚರಣೆ ಜಾಗ್ರತಿ ಕಾರ್ಯಕ್ರಮ
ಕಾರ್ಕಳ( ಜ,02): ಯುವಕರು ಮಾದಕ ವ್ಯಸನಗಳಿಗೆ ದಾಸರಾಗಬಾರದು,ಸಮಾಜದಲ್ಲಿ ಅಪರಾಧ ಪ್ರಕರಣಗಳು ಕಡಿಮೆಯಾಗಬೇಕು ಮತ್ತು ವ್ಯಸನ ಮುಕ್ತ ಜನಾಂಗ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಜಾಗ್ರತರಾಗಿರಬೇಕು. ಗಾಂಜಾ, ಅಫೀಮಿನಂತಹ ಮಾದಕ ದ್ರವ್ಯಗಳು ಭವಿಷ್ಯವನ್ನೇ ನಾಶಪಡಿಸುತ್ತದೆ .ಹಾಗೂ ಶಾಲಾ ಕಾಲೇಜಿನ ವಿದ್ಯಾರ್ಥಿಗಳೇ ಈ ದಂಧೆಯಲ್ಲಿರುವವರ ಗುರಿಯಾಗಿದ್ದಾರೆ. ಸುಲಭವಾಗಿ ಹಣ ಗಳಿಸುವ ಕಾರ್ಯಕ್ಕೆ ಮನಸ್ಸು ಮಾಡಿ ಸಿಕ್ಕಿ ಬಿದ್ದರೆ ಕಠಿಣ ಶಿಕ್ಷೆ ಅನುಭವಿಸಬೇಕಾಗುತ್ತದೆ. ಯುವಕರು ಮಾದಕ ವ್ಯಸನದಂತಹ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಕಾರ್ಕಳ ಎಂದು ಕಾರ್ಕಳ ನಗರ […]
ಕ್ರಿಯೇಟಿವ್ ಪಿ.ಯು. ಕಾಲೇಜು ವಾರ್ಷಿಕೋತ್ಸವ ಆವಿರ್ಭವ್ – 2022
ಕಾರ್ಕಳ (ಡಿ. 26); ಕ್ರಿಯೇಟಿವ್ನಂತಹ ವಿದ್ಯಾಸಂಸ್ಥೆಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅವಕಾಶ ಕಲ್ಪಿಸುವುದರ ಜೊತೆಗೆ ಪ್ರತಿಭೆಗಳಿಗೆ ಪೂರಕವಾದ ಕಲಿಕಾ ವಾತಾವರಣವನ್ನು ಕಲ್ಪಿಸುವುದು ನಿಜಕ್ಕೂ ಶ್ಲಾಘನೀಯ ಎಂದು ರಾಜ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರಾದ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ನಡೆದ ಕ್ರಿಯೇಟಿವ್ ಆವಿರ್ಭವ್ -2022 ರ ವಾರ್ಷಿಕೋತ್ಸವದಲ್ಲಿ ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳ ಉಚಿತ ಶಿಕ್ಷಣ ವ್ಯವಸ್ಥೆ ʼಕ್ರಿಯೇಟಿವ್ ಹೊಂಗಿರಣʼ […]
ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಪಾಲಕ-ಶಿಕ್ಷಕರ ಸಭೆ
ಕಾರ್ಕಳ(ಡಿ,6): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ 2022-23 ನೇ ಸಾಲಿನ ಪಾಲಕರ-ಶಿಕ್ಷಕರ ಸಭೆ ಡಿಸೆಂಬರ್ 04 ರಂದು ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥಾಪಕರಾದ ಅಶ್ವತ್ ಎಸ್ ಎಲ್, ಕ್ರಿಯೇಟಿವ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ವಿವಿಧ ಚಟುವಟಿಕೆಗಳಿಗೆ ಪ್ರಾಧಾನ್ಯತೆ ನೀಡಿ ತರಬೇತಿ ನೀಡಲಾಗುತ್ತಿದೆ. ಆಯಾ ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿಯನ್ನು ಅತ್ಯಂತ ಪಾರದರ್ಶಕವಾಗಿ ಪರಿಶೀಲಿಸಿ, ಲೋಪದೋಷಗಳನ್ನು ಪರಿಹರಿಸಲಾಗುತ್ತಿದೆ. ಮುಂಬರುವ NEET,CET, KVPY, NATA, NDA, IIT ಪರೀಕ್ಷೆಗಳಿಗೆ ನುರಿತ ಅನುಭವಿ ಪ್ರಾಧ್ಯಾಪಕರು […]
ಹಿರಿಯರ ಕನ್ನಡ ಸೇವೆಯು ನಮಗೆ ಮಾದರಿಯಾಗಲಿ – ಡಾ. ಹಿರೇಮಗಳೂರು ಕಣ್ಣನ್
ಕಾರ್ಕಳ ( ನ,30): ಕನ್ನಡದ ಕಂಪು ವಿಶ್ವದೆಲ್ಲೆಡೆ ಪಸರಿಸಲು ನಾವು ಕಟಿಬದ್ಧರಾಗಬೇಕು. ಕನ್ನಡದ ನೆಲ, ಜಲ, ಭಾಷೆಗಳು ಉತ್ತುಂಗಕ್ಕೇರಲು ಇಂದಿನ ಯುವ ಪೀಳಿಗೆ ಪ್ರಯತ್ನಿಸಬೇಕು. ನಮ್ಮ ಪೂರ್ವಿಕರು ನಮಗೆ ದೊರಕಿಸಿಕೊಟ್ಟಿರುವ ಈ ಭವ್ಯ ಭಾಷೆ, ಕಲೆ, ಸಂಪತ್ತನ್ನು ವೃದ್ಧಿಸಬೇಕು. ತಂದೆ-ತಾಯಿಗಳನ್ನು ಪ್ರೀತಿಯಿಂದ ಸಲಹಬೇಕು. ಹಾಗೆಯೇ ನಮ್ಮ ಮಾತೃಭೂಮಿ ತಾಯಿ ಭಾಷೆಯನ್ನು ಬೆಳೆಸಬೇಕು ಎಂದು ಕನ್ನಡದ ಪೂಜಾರಿ ಡಾ. ಹಿರೇಮಗಳೂರು ಕಣ್ಣನ್ ಕರೆ ನೀಡಿದರು. ಅವರು ನವೆಂಬರ್ 29 ರಂದು ಕಾರ್ಕಳದ […]
ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ
ಕಾರ್ಕಳ( ನ,26): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನವೆಂಬರ್ 26 ರಂದು ಸಂವಿಧಾನ ದಿನಾಚರಣೆ ನಡೆಯಿತು. ಭಾರತದ ಸಾರ್ವಭೌಮತೆಯ ರಕ್ಷಣೆ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸಲು ಸಂವಿಧಾನದ ರಚನೆಯನ್ನು ಮಾಡಲಾಯಿತು. ದೇಶದ ಪ್ರಜೆಗಳು ದೇಶದ ಕಾನೂನನ್ನು ಗೌರವಿಸಿ ಮತ್ತು ಸಂವಿಧಾನದ ಆಶಯದಂತೆ ಬದುಕನ್ನು ನಡೆಸಬೇಕು ಎಂದು ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಿದ್ಯಾರ್ಥಿಗಳಿಗೆ ತಿಳಿಸಿದರು. ಸಂವಿಧಾನವನ್ನು ರಚನೆ ಮಾಡಬೇಕಾದರೆ ಅನೇಕ ದೇಶಗಳಲ್ಲಿರುವ ಕಾಯ್ದೆ, ಕಾನೂನುಗಳನ್ನು ಅಳವಾಗಿ ಅಧ್ಯಯನ ನಡೆಸಿ […]
ಕೈಗಾರಿಕಾ ಕ್ಷೇತ್ರಗಳಲ್ಲಿ ವಿಫುಲ ಅವಕಾಶ : ಶ್ರೀ. ರಾಜ್ ಗಣೇಶ್ ಕಾಮತ್
ಕಾರ್ಕಳ ( ನ,20): ಇಂದಿನ ದಿನಗಳಲ್ಲಿ ಕಾಮರ್ಸ್ ವಿಭಾಗದಲ್ಲಿ C.A, C.S ಮತ್ತು CMA ಕೋರ್ಸ್ಗಳಿಗೆ ಮಹತ್ತರವಾದ ಬೇಡಿಕೆಯಿದೆ. ಅತೀ ಕಡಿಮೆ ವೆಚ್ಚದಲ್ಲಿ ಮಾಡಬಹುದಾದ ಕೋರ್ಸ್ ಎಂದರೆ CMA (ವೆಚ್ಚ ಮತ್ತು ನಿರ್ವಹಣಾ ಲೆಕ್ಕಶಾಸ್ತ್ರ) ಕೋರ್ಸ್. ಈ ಕೋರ್ಸ್ನ ಕಲಿಕಾ ಹಂತಗಳು ಹಾಗೂ ಕೋರ್ಸ್ ಮುಗಿಸಿದ ನಂತರ ಉದ್ಯೋಗಾವಕಾಶಗಳು ವಿಪುಲವಾಗಿ ಲಭ್ಯವಾಗಲಿದೆ ಎಂದು ಲೇಖ್ಪಾಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ. ರಾಜ್ ಗಣೇಶ್ ಕಾಮತ್ ಹೇಳಿದರು. ಅವರು ಕಾರ್ಕಳದ ಕ್ರಿಯೇಟಿವ್ ಪದವಿ […]
ತ್ರಿಶಾ ಪಿಯು ಕಾಲೇಜು ಕಲ್ಯಾಣಪುರ: ಕಾನೂನಿನ ಅರಿವು ಕಾರ್ಯಕ್ರಮ
ಕಲ್ಯಾಣಪುರ (ನ,9): ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್ ಕಾರ್ಕಳ ಪ್ರವರ್ತಿತ ಕಲ್ಯಾಣಪುರದ ತ್ರಿಶಾ ಪಿಯು ಕಾಲೇಜಿನಲ್ಲಿ ನ.08 ರಂದು ಕಾನೂನು ಕಾನೂನಿನ ಅರಿವು ಹಾಗೂ ನೆರವಿನ ಮೂಲಕ ನಾಗರೀಕರ ಸಬಲೀಕರಣ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿ ಆಗಿ ಆಗಮಿಸಿದ ಮಿಲಾಗ್ರಿಸ್ ಮಹಾವಿದ್ಯಾಲಯದ ಹಿರಿಯ ಉಪನ್ಯಾಸಕರಾದ ಶ್ರೀ ಜಯರಾಮ್ ಶೆಟ್ಟಿಗಾರ್ ಮಾತನಾಡಿ ಕಾನೂನಿನ ತಿಳುವಳಿಕೆ ಎಲ್ಲರಿಗೂ ಅನಿವಾರ್ಯ ಅದರಂತೆಯೇ ಸಾಮಾನ್ಯ ಜ್ಞಾನವು ಬಹಳ ಮುಖ್ಯ […]
ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸಡಗರದ ದೀಪಾವಳಿ ಹಾಗೂ ತುಳಸಿ ಹಬ್ಬ
ಕಾರ್ಕಳ(ನ,07): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ದೀಪಾವಳಿ ಮತ್ತು ತುಳಸಿ ಪೂಜಾ ಹಬ್ಬವನ್ನು ನ.05 ರಂದು ದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ನಮ್ಮ ಪರಂಪರೆ, ಸಾಂಸ್ಕೃತಿಕ ಮೌಲ್ಯಗಳನ್ನು ತಿಳಿಯಲು ಮತ್ತು ಹಬ್ಬಗಳ ಮಹತ್ವ ತಿಳಿಯಲು ಭಾರತೀಯ ಪರಂಪರೆಯ ಹಬ್ಬಗಳು ಮಾದರಿಯಾಗಿವೆ ಎಂದು ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ತಿಳಿಸಿದರು. ಸಂಸ್ಥಾಪಕರಲ್ಲೊಬ್ಬರಾದ ಅಶ್ವಥ್ ಎಸ್ ಎಲ್ ಮಾತನಾಡಿ ಭಾರತೀಯ ಹಬ್ಬಗಳು ವೈಜ್ಞಾನಿಕವಾಗಿಯೂ, ಸಾಂಸ್ಕೃತಿಕವಾಗಿಯೂ ಅತ್ಯಂತ ಮಹತ್ವ ಹೊಂದಿದೆ. ಆಧ್ಯಾತ್ಮಿಕವಾಗಿ ನೋಡಿದಾಗಲು ಶ್ರೇಷ್ಠ […]
ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಗಾಂಧಿ-ಶಾಸ್ತ್ರಿ ಜಯಂತಿ
ಕಾರ್ಕಳ(ಅ.07): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ದೇಶದ ದ್ವಿತೀಯ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅ.02 ರಂದು ಆಚರಿಸಲಾಯಿತು. ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಮಾತನಾಡಿ ಇಂದು ಗಾಂಧೀಜಿಯವರ ಸಾಮರಸ್ಯ ಚಿಂತನೆ ಜೀವನದ ಆದರ್ಶ ನಮಗೆ ದಾರಿದೀಪವಾಗಬೇಕಿದೆ ಮತ್ತು ದೇಶ ಕಂಡ ಅಪ್ರತಿಮ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ “ಜೈ ಜವಾನ್ ಜೈ ಕಿಸಾನ್” ಘೋಷಣೆ ಹಾಗೂ ಪ್ರಬುದ್ಧತೆಯನ್ನು ಯುವಜನತೆ ಅರಿತು […]










