ಕಾರ್ಕಳ( ನ,26): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನವೆಂಬರ್ 26 ರಂದು ಸಂವಿಧಾನ ದಿನಾಚರಣೆ ನಡೆಯಿತು. ಭಾರತದ ಸಾರ್ವಭೌಮತೆಯ ರಕ್ಷಣೆ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸಲು ಸಂವಿಧಾನದ ರಚನೆಯನ್ನು ಮಾಡಲಾಯಿತು. ದೇಶದ ಪ್ರಜೆಗಳು ದೇಶದ ಕಾನೂನನ್ನು ಗೌರವಿಸಿ ಮತ್ತು ಸಂವಿಧಾನದ ಆಶಯದಂತೆ ಬದುಕನ್ನು ನಡೆಸಬೇಕು ಎಂದು ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಿದ್ಯಾರ್ಥಿಗಳಿಗೆ ತಿಳಿಸಿದರು. ಸಂವಿಧಾನವನ್ನು ರಚನೆ ಮಾಡಬೇಕಾದರೆ ಅನೇಕ ದೇಶಗಳಲ್ಲಿರುವ ಕಾಯ್ದೆ, ಕಾನೂನುಗಳನ್ನು ಅಳವಾಗಿ ಅಧ್ಯಯನ ನಡೆಸಿ […]
Tag: creative pu karkala
ಕೈಗಾರಿಕಾ ಕ್ಷೇತ್ರಗಳಲ್ಲಿ ವಿಫುಲ ಅವಕಾಶ : ಶ್ರೀ. ರಾಜ್ ಗಣೇಶ್ ಕಾಮತ್
ಕಾರ್ಕಳ ( ನ,20): ಇಂದಿನ ದಿನಗಳಲ್ಲಿ ಕಾಮರ್ಸ್ ವಿಭಾಗದಲ್ಲಿ C.A, C.S ಮತ್ತು CMA ಕೋರ್ಸ್ಗಳಿಗೆ ಮಹತ್ತರವಾದ ಬೇಡಿಕೆಯಿದೆ. ಅತೀ ಕಡಿಮೆ ವೆಚ್ಚದಲ್ಲಿ ಮಾಡಬಹುದಾದ ಕೋರ್ಸ್ ಎಂದರೆ CMA (ವೆಚ್ಚ ಮತ್ತು ನಿರ್ವಹಣಾ ಲೆಕ್ಕಶಾಸ್ತ್ರ) ಕೋರ್ಸ್. ಈ ಕೋರ್ಸ್ನ ಕಲಿಕಾ ಹಂತಗಳು ಹಾಗೂ ಕೋರ್ಸ್ ಮುಗಿಸಿದ ನಂತರ ಉದ್ಯೋಗಾವಕಾಶಗಳು ವಿಪುಲವಾಗಿ ಲಭ್ಯವಾಗಲಿದೆ ಎಂದು ಲೇಖ್ಪಾಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ. ರಾಜ್ ಗಣೇಶ್ ಕಾಮತ್ ಹೇಳಿದರು. ಅವರು ಕಾರ್ಕಳದ ಕ್ರಿಯೇಟಿವ್ ಪದವಿ […]
ತ್ರಿಶಾ ಪಿಯು ಕಾಲೇಜು ಕಲ್ಯಾಣಪುರ: ಕಾನೂನಿನ ಅರಿವು ಕಾರ್ಯಕ್ರಮ
ಕಲ್ಯಾಣಪುರ (ನ,9): ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್ ಕಾರ್ಕಳ ಪ್ರವರ್ತಿತ ಕಲ್ಯಾಣಪುರದ ತ್ರಿಶಾ ಪಿಯು ಕಾಲೇಜಿನಲ್ಲಿ ನ.08 ರಂದು ಕಾನೂನು ಕಾನೂನಿನ ಅರಿವು ಹಾಗೂ ನೆರವಿನ ಮೂಲಕ ನಾಗರೀಕರ ಸಬಲೀಕರಣ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿ ಆಗಿ ಆಗಮಿಸಿದ ಮಿಲಾಗ್ರಿಸ್ ಮಹಾವಿದ್ಯಾಲಯದ ಹಿರಿಯ ಉಪನ್ಯಾಸಕರಾದ ಶ್ರೀ ಜಯರಾಮ್ ಶೆಟ್ಟಿಗಾರ್ ಮಾತನಾಡಿ ಕಾನೂನಿನ ತಿಳುವಳಿಕೆ ಎಲ್ಲರಿಗೂ ಅನಿವಾರ್ಯ ಅದರಂತೆಯೇ ಸಾಮಾನ್ಯ ಜ್ಞಾನವು ಬಹಳ ಮುಖ್ಯ […]
ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸಡಗರದ ದೀಪಾವಳಿ ಹಾಗೂ ತುಳಸಿ ಹಬ್ಬ
ಕಾರ್ಕಳ(ನ,07): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ದೀಪಾವಳಿ ಮತ್ತು ತುಳಸಿ ಪೂಜಾ ಹಬ್ಬವನ್ನು ನ.05 ರಂದು ದ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ನಮ್ಮ ಪರಂಪರೆ, ಸಾಂಸ್ಕೃತಿಕ ಮೌಲ್ಯಗಳನ್ನು ತಿಳಿಯಲು ಮತ್ತು ಹಬ್ಬಗಳ ಮಹತ್ವ ತಿಳಿಯಲು ಭಾರತೀಯ ಪರಂಪರೆಯ ಹಬ್ಬಗಳು ಮಾದರಿಯಾಗಿವೆ ಎಂದು ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ತಿಳಿಸಿದರು. ಸಂಸ್ಥಾಪಕರಲ್ಲೊಬ್ಬರಾದ ಅಶ್ವಥ್ ಎಸ್ ಎಲ್ ಮಾತನಾಡಿ ಭಾರತೀಯ ಹಬ್ಬಗಳು ವೈಜ್ಞಾನಿಕವಾಗಿಯೂ, ಸಾಂಸ್ಕೃತಿಕವಾಗಿಯೂ ಅತ್ಯಂತ ಮಹತ್ವ ಹೊಂದಿದೆ. ಆಧ್ಯಾತ್ಮಿಕವಾಗಿ ನೋಡಿದಾಗಲು ಶ್ರೇಷ್ಠ […]
ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಗಾಂಧಿ-ಶಾಸ್ತ್ರಿ ಜಯಂತಿ
ಕಾರ್ಕಳ(ಅ.07): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ದೇಶದ ದ್ವಿತೀಯ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅ.02 ರಂದು ಆಚರಿಸಲಾಯಿತು. ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಮಾತನಾಡಿ ಇಂದು ಗಾಂಧೀಜಿಯವರ ಸಾಮರಸ್ಯ ಚಿಂತನೆ ಜೀವನದ ಆದರ್ಶ ನಮಗೆ ದಾರಿದೀಪವಾಗಬೇಕಿದೆ ಮತ್ತು ದೇಶ ಕಂಡ ಅಪ್ರತಿಮ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ “ಜೈ ಜವಾನ್ ಜೈ ಕಿಸಾನ್” ಘೋಷಣೆ ಹಾಗೂ ಪ್ರಬುದ್ಧತೆಯನ್ನು ಯುವಜನತೆ ಅರಿತು […]
ಕ್ರಿಯೇಟಿವ್ ಕಾಲೇಜಿನಲ್ಲಿ ವಿಶ್ವ ಹೃದಯ ದಿನಾಚರಣೆ
ಕಾರ್ಕಳ(ಸೆ.30): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆರೋಗ್ಯಕ್ಕಾಗಿ ವಿಶ್ವ ಹೃದಯ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾನಾಡಿದ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಇಂದು ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿವೆ, ಆರೋಗ್ಯವಂತ ಹೃದಯವಿರಬೇಕಾದರೆ ನಿಯಮಿತವಾದ ವ್ಯಾಯಾಮ, ಸರಿಯಾದ ಆಹಾರ ಕ್ರಮವನ್ನು ಪಾಲಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಸೈನ್ಸ್ ಕ್ಲಬ್ನ ಮುಖ್ಯಸ್ಥ ಲೋಹಿತ್ ಎಸ್ .ಕೆ ಸುಂದರ್ ಮಾತನಾಡಿ ಸ್ವಸ್ಥಮನಸ್ಸುಗಳ ಮೂಲಕ ಎಲ್ಲರೂ ಹೃದಯವಂತರಾಗಿ, ಆರೋಗ್ಯವಂತರಾಗಲಿ ಎಂದು ಹಾರೈಸಿದರು. ನಂತರ ವಿದ್ಯಾರ್ಥಿಗಳಿಂದ […]
ಕ್ರಿಯೇಟಿವ್ ಪಿಯು ಕಾಲೇಜು ಕಾರ್ಕಳ :ಕ್ರಿಯೇಟಿವ್ ಕೆಸರ್ಡೊಂಜಿ ದಿನ ಕಾರ್ಯಕ್ರಮ
ಕಾರ್ಕಳ(ಸೆ,20): ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಹಸಿರೊಡನೆ ಕಲಿಕೆಯ ಕಲರವ ಕಾರ್ಯಕ್ರಮ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹತ್ತಿರ ಇತ್ತೀಚೆಗೆ ಜರುಗಿತು. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಶ್ರೀ ಹರಿಶ್ಚಂದ್ರ ಕುಲಾಲ್ ಇಂದು ನಾವು ವಿದ್ಯಾಭ್ಯಾಸದಲ್ಲಿ ಶೈಕ್ಷಣಿಕ ಪ್ರಗತಿಯನ್ನು ಮಾತ್ರ ಗಮನಿಸುತ್ತಿದ್ದೇವೆ ಆದರೆ ನಮಗೆ ಅನ್ನ ನೀಡುವ ಕೃಷಿ ಭೂಮಿ ಮತ್ತು ಕೃಷಿಕರ ಕುರಿತು ತಿಳುವಳಿಕೆ ಪಡೆಯಲು ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ಕಾರ್ಯಕ್ರಮ. ವಿದ್ಯಾರ್ಥಿಗಳು ಕೆಸರನ್ನು ಅಸಹ್ಯ ಎಂದು ಭಾವಿಸದೇ […]
ಕ್ರಿಯೇಟಿವ್ ಪಿ ಯು ಕಾಲೇಜಿನಲ್ಲಿ ಜಿ.ಎಸ್.ಟಿ ಕುರಿತು ಮಾಹಿತಿ ಕಾರ್ಯಗಾರ
ಕಾರ್ಕಳ (ಸೆ,17): ಇಲ್ಲಿನ ಕ್ರಿಯೇಟಿವ್ ಪಿ ಯು ಕಾಲೇಜು ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಜಿ.ಎಸ್ .ಟಿ (ಸರಕು ಮತ್ತು ಸೇವಾ ತೆರಿಗೆ) ಕುರಿತಾಗಿ ಮಾಹಿತಿ ಕಾರ್ಯಗಾರವನ್ನು ಸೆ.17ರಂದು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಖ್ಯಾತ ತೆರಿಗೆ ಸಲಹೆಗಾರರಾದ ಶ್ರೀ ವಿನಯ್ ಹೆಗಡೆಯವರು ಜಿ.ಎಸ್.ಟಿ ಕುರಿತು ಮಾಹಿತಿಯನ್ನು ನೀಡಿದರು. ಜಿ.ಎಸ್.ಟಿ ಎನ್ನುವುದು ʼಒಂದು ದೇಶ-ಒಂದು ತೆರಿಗೆʼ ಪರಿಕಲ್ಪನೆಯಲ್ಲಿರುವ ಪರೋಕ್ಷ ತೆರಿಗೆಯಾಗಿದ್ದು, ಈ ತೆರಿಗೆಯು ಪ್ರತಿ ಮೌಲ್ಯದ ಸೇರ್ಪಡೆಗೆ ವಿಧಿಸುವ ತೆರಿಗೆಯಾಗಿರುತ್ತದೆ. ಇಂದು […]
ಕ್ರಿಯೇಟಿವ್ ಪಿ .ಯು. ಕಾಲೇಜು ಕಾರ್ಕಳ : ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ ಎಸ್ ಮಾಹಿತಿ ಕಾರ್ಯಗಾರ
ಕಾರ್ಕಳ (ಸೆ. 15) : ಇಲ್ಲಿನ ಪ್ರತಿಷ್ಠಿತ ಕ್ರಿಯೇಟಿವ್ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಸಿ ಎಸ್ ಮಾಹಿತಿ ಕಾರ್ಯಗಾರವನ್ನು ಸೆ.09 ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಖ್ಯಾತ ಕಂಪೆನಿ ಸೆಕ್ರೇಟರಿ ಸಂತೋಷ ಪ್ರಭುರವರು ವಿದ್ಯಾರ್ಥಿಗಳಿಗೆ ಸಿ.ಎಸ್ ನ ಮಹತ್ವದ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ C.S ಎಂಬುದು ಒಂದು ಅತ್ಯುನ್ನತ ಹುದ್ದೆ ಇಂದು ಭಾರತದಲ್ಲಿ C.S (ಕಂಪೆನಿ ಸೆಕ್ರೆಟರಿ) ನ ಕೊರತೆ ಇದ್ದು […]










