ಕಾರ್ಕಳ( ಜ,15): ಸ್ವಾಮಿ ವಿವೇಕಾನಂದರ ಚಿಂತನೆಗಳು ಭಾರತ ಮಾತ್ರವಲ್ಲ ವಿಶ್ವವ್ಯಾಪಿಯಾದುದು. ಯುವಕರು ದೇಶದ ಭವಿಷ್ಯ ಉಜ್ವಲಗೊಳಿಸುವ ಸಾಮರ್ಥ್ಯ ಹೊಂದಿದ್ದಾರೆ. ಆತ್ಮೋದ್ಧಾರ ಮಾರ್ಗವೇ ಜಗವನ್ನು ಹಾಗೂ ಮನುಷ್ಯರನ್ನು ಅರಿಯಲು ಇರುವ ದಾರಿ. ಯುವಕರ ಕಣ್ಮಣಿಯಾಗಿ, ಸಿಡಿಲ ಸಂತನಾಗಿ ವಿಶ್ವವೇ ಭಾರತದ ಕಡೆಗೆ ತಿರುಗಿ ನೋಡುವಂತೆ ಮಾಡಿದ ಮಹಾತ್ಮ ಸ್ವಾಮಿ ವಿವೇಕಾನಂದರು. ಎಲ್ಲರಿಗೂ ಸ್ಪೂರ್ತಿಯ ಚಿಲುಮೆ ಎಂದು ಗಣಿತ ಉಪನ್ಯಾಸಕ ಶ್ರೀ ಪ್ರದೀಪ್ ಅಂಚನ್ ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ʼಯುವ ಸಪ್ತಾಹʼದ ಅಂಗವಾಗಿ […]
Tag: creative pu karkala
ಕ್ರಿಯೇಟಿವ್ ಕಾಲೇಜಿನಲ್ಲಿ ನಿನಾದ-ಸಂಚಿಕೆ 5 ಬಿಡುಗಡೆ
ಕಾರ್ಕಳ (ಡಿ.22): ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಹೊರತರಲಾಗುತ್ತಿರುವ ತ್ರೈಮಾಸಿಕ ಪತ್ರಿಕೆ “ನಿನಾದ” ಸಂಚಿಕೆ-5 ನ್ನು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವರ್ಗದವರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. ಶ್ರೀ ಲಿಂಗಪ್ಪ ಮತ್ತು ಶ್ರೀಮತಿ ರತ್ನಾ ಲಿಂಗಪ್ಪ ದಂಪತಿಗಳು ತ್ರೈಮಾಸಿಕ ಪತ್ರಿಕೆಯನ್ನು ಅನಾವರಣಗೊಳಿಸಿದರು. ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದ ಅಶ್ವತ್ ಎಸ್. ಎಲ್ ಮಾತನಾಡಿ ನಿನಾದ ಪತ್ರಿಕೆ ವಿದ್ಯಾರ್ಥಿಗಳಿಗೆ, ಯುವ ಬರಹಗಾರರಿಗೆ ಉತ್ತಮವಾದ ವೇದಿಕೆ ಒದಗಿಸುತ್ತಿದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಒಳ್ಳೆಯ, ಚಿಂತನಾತ್ಮಕ ಅಂಶಗಳನ್ನು […]
ಕ್ರಿಯೇಟಿವ್ ಆವಿರ್ಭವ-2023 ಕಾಲೇಜು ವಾರ್ಷಿಕೋತ್ಸವ
ಉಡುಪಿ (ಡಿ,04): ಇಲ್ಲಿನ ತ್ರಿಶಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾರ್ಷಿಕೋತ್ಸವ ಸಮಾರಂಭ “ವಸುಧೈವ ಕುಟುಂಬಕಂ” ಎಂಬ ಕಲ್ಪನೆಯಲ್ಲಿ ಮೂಡಿಬಂದಿತು. ಸಮಾರಂಭದಲ್ಲಿ ಮಿಲಾಗ್ರಿಸ್ ಚರ್ಚ್ನ ಧರ್ಮಗುರುಗಳಾದ ವಲೇರಿಯನ್ ಮೆಂಡೊನ್ಸಾ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡುತ್ತಾ, ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಮಾಜದಲ್ಲಿ ಜವಾಬ್ದಾರಿಯುತವಾದ ಒಂದು ಸಮುದಾಯವನ್ನು ನಿರ್ಮಾಣ ಮಾಡುವ ಕನಸು ಕಂಡು ಉತ್ತಮ ರೀತಿಯಿಂದ ಮುನ್ನಡೆಯುತ್ತಿದೆ ಎಂದು ಹೇಳಿದರು. ಉಡುಪಿ ಪ್ರಾಂತ್ಯದಲ್ಲಿ ಕ್ರಿಯೇಟಿವ್ನ ಹೆಸರು ಇತ್ತೀಚೆಗೆ ಎಲ್ಲ ಕಡೆ ಕೇಳಲಾರಂಭಿಸಿದೆ. ಉನ್ನತವಾದ […]
ಸೇವಾ ಮನೋ ಭಾವನೆ ಹಾಗೂ ಸಹಬಾಳ್ವೆ ಮೂಲಕ ಬದುಕು ಕಲಿಸಲು ಎನ್ ಎಸ್ ಎಸ್ ಸಹಕಾರಿ-ವಿ. ಸುನಿಲ್ ಕುಮಾರ್
ಕಾರ್ಕಳ(ಆ,12): ಸೇವಾ ಮನೋ ಭಾವನೆ ಹಾಗೂ ಸಹಬಾಳ್ವೆ ಮೂಲಕ ಬದುಕು ಕಲಿಸಲು ಎನ್ ಎಸ್ ಎಸ್ ಸಹಕಾರಿ ಯಾಗಿದೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು ಅವರು ಕಾರ್ಕಳ ತಾಲೂಕಿನ ಕ್ರಿಯೆಟಿವ್ ಕಾಲೇಜು ವತಿಯಿಂದ ಹಿರ್ಗಾನದ ಬಿ.ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸುಲೋಚನಾ ಸುಂದರ ಶೆಟ್ಟಿ ಕಲಾ ವೇದಿಕೆಯಲ್ಲಿ ನಡೆದ ಕಾಲೇಜಿನ ಮೊದಲ ಎನ್ ಎಸ್ ಎಸ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸೇವಾ ಭಾವನೆ ಜೀವನದ […]
ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಎನ್.ಎಸ್.ಎಸ್ ಶಿಬಿರದ ಪೂರ್ವಭಾವಿ ಸಭೆ
ಕಾರ್ಕಳ(ಆ,06): ಇಲ್ಲಿನ ಮೂರೂರಿನಲ್ಲಿ ಅಕ್ಟೋಬರ್ 12 ರಿಂದ 18 ರ ವರೆಗೆ ಬಿ. ಎಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರಿಯೇಟಿವ್ ಕಾಲೇಜಿನ ಎನ್.ಎಸ್.ಎಸ್ ಶಿಬಿರವು ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಊರಿನ ಹಿರಿಯರು ಹಾಗೂ ಗಣ್ಯರ ಮಾರ್ಗದರ್ಶನದಲ್ಲಿ ಶಿಬಿರದ ಪೂರ್ವಭಾವಿ ಸಭೆ ಇತ್ತೀಚೆಗೆ ನಡೆಯಿತು. ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಯವರು ಶಿಬಿರದ ಆಯೋಜನೆಯ ಉದ್ದೇಶ ಮತ್ತು ನಾಗರಿಕ ಸಮುದಾಯಗಳ ಪ್ರಗತಿ, ಊರಿನವರ ಸಹಕಾರ […]
ತ್ರಿಶ ಪದವಿಪೂರ್ವ ಕಾಲೇಜು ಕಲ್ಯಾಣಪುರ ಉಡುಪಿ :ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆ, ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಆಚರಣೆ
ಉಡುಪಿ(ಸೆ,09): ತ್ರಿಶ ಪದವಿಪೂರ್ವ ಕಾಲೇಜು ಕಲ್ಯಾಣಪುರ ಉಡುಪಿ ಹಾಗೂ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆ, ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಆಚರಣೆ ಇತ್ತೀಚೆಗೆ ನಡೆಯಿತು . ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ *ಕ್ರಿಯೇಟಿವ್ ಗುರು ದೇವೋಭವ* ಕಾರ್ಯಕ್ರಮವು ಆಚರಿಸಲಾಯಿತು.ಸಂಸ್ಥೆಯ ಸಂಸ್ಥಾಪಕರುಗಳಲ್ಲಿ ಓರ್ವರಾದ ಡಾ. ಗಣನಾಥ ಶೆಟ್ಟಿ ಯವರು ಪ್ರಾಸ್ತಾವಿಕವಾಗಿ ಮಾತುಗಳನ್ನಾಡುತ್ತಾ, ” ಶಿಕ್ಷಕ ವೃತ್ತಿ ಪವಿತ್ರವಾದದ್ದು ನವ ಸಮಾಜ […]
ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ : ಶಿಕ್ಷಕ ವೃತ್ತಿ ಪರಮ ಪವಿತ್ರವಾದದ್ದು- ಪ್ರೊ.ಬಿ.ಪದ್ಮನಾಭಗೌಡ
ಕಾರ್ಕಳ(ಸೆ,6): ಶಿಕ್ಷಕ ಮತ್ತು ಶಿಕ್ಷಕ ವೃತ್ತಿಗಳು ಅತ್ಯಂತ ಶ್ರೇಷ್ಠವಾದದ್ದು ವಿದ್ಯಾರ್ಥಿಗಳಲ್ಲಿ ಸದ್ಭಾವನೆಯನ್ನು ಬೆಳೆಸುತ್ತಾ, ಶಿಕ್ಷಕನೂ ಅಧ್ಯಯನಶೀಲನಾಗಬೇಕು. ನಿರಂತರವಾಗಿ ಗುರುತರವಾದ ಜವಾಬ್ದಾರಿಯಿಂದ ಬೋಧನೆ ಮಾಡುವವರಾಗಬೇಕು ಎಂದು ಪ್ರೊ.ಬಿ.ಪದ್ಮನಾಭ ಗೌಡ ಕರೆನೀಡಿದರು. ಅವರು ಕಾರ್ಕಳದ ಕ್ರಿಯೇಟಿವ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನದ ಪ್ರಯುಕ್ತ ಆಚರಿಸಲಾದ ‘ಗುರುದೇವೋ ಭವ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಇನ್ನೋರ್ವ ಅತಿಥಿ ಚೇತನಾ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಶೆಟ್ಟಿ ಮಾತನಾಡಿ ಗುರುಗಳೆಂದರೆ ಅಪಾರ […]
ಕ್ರಿಯೇಟಿವ್ ಪಿ.ಯು ಕಾಲೇಜು ಕಾರ್ಕಳ : ಕೆಸರ್ಡೊಂಜಿ ದಿನ-ಮಣ್ಣಿನೊಂದಿಗೆ ಕಲಿಕಾ ಅನುಭವ ಕಾರ್ಯಕ್ರಮ
ಕಾರ್ಕಳ(ಆ,26): ಇಲ್ಲಿನ ಹಿರ್ಗಾನ ಗ್ರಾಮದಲ್ಲಿರುವ ಬೆಂಗಾಲ್ ಕೃಷಿ ಭೂಮಿಯಲ್ಲಿ ಕ್ರಿಯೇಟಿವ್ ಪಿ.ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗೆ ಕೃಷಿ ಮತ್ತು ಅದಕ್ಕೆ ಸಂಬಂಧಿಸಿದ ವಸ್ತುಗಳ ಪ್ರದರ್ಶನದೊಂದಿಗೆ ಕೆಸರಿನಲ್ಲಿ ಜೀವನದ ಕಲಿಕೆ ಮತ್ತು ವಿವಿಧ ಆಟೋಟ ಕಾರ್ಯಕ್ರಮಗಳು ಇತ್ತೀಚೆಗೆ ನಡೆಯಿತು. ಕೆಸರ್ಡೊಂಜಿ ದಿನ ಕಾರ್ಯಕ್ರಮವನ್ನು ನೇಜಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಹಿರ್ಗಾನ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರಾದ ಸಂತೋಷ್ ಶೆಟ್ಟಿಯವರು ಇಂದು ನಮಗೆ ಧನ ಸಂಪಾದನೆಗೆ ಅನೇಕ ಮಾರ್ಗಗಳಿವೆ ಆದರೆ ಹೊಟ್ಟೆ […]
ಹಿರಿಯರ ತ್ಯಾಗ ಬಲಿದಾನವನ್ನು ಸಾರ್ಥಕ ಪಡಿಸೋಣ: ಎಮ್ ಕೆ ವಿಜಯ ಕುಮಾರ್
ಕಾರ್ಕಳ(ಆ,15): ನಮ್ಮ ದೇಶಕ್ಕೆ ಹಿರಿಯರ ನಿಃಸ್ವಾರ್ಥ, ತ್ಯಾಗ, ದೇಶಪ್ರೇಮದ ಪರಾಕಾಷ್ಠೆಯ ಪರಿಣಾಮ ಇಂದು ಸ್ವತಂತ್ರ ಭಾರತದಲ್ಲಿ ನಾವು ಜೀವಿಸುತ್ತಿದ್ದೇವೆ. ಬ್ರಿಟಿಷರಿಂದ ಸ್ವಾತಂತ್ರ್ಯವನ್ನು ಪಡೆಯಲು ನಮ್ಮ ಪೂರ್ವಜರು ಭಾರತವೆಂಬುದು ಶ್ರೇಷ್ಠ ಭಾರತವಾಗಬೇಕೆಂದು ಬಲಿದಾನಗೈದರು. ಇಂತಹ ಅಮೃತಕಾಲವನ್ನು ನಾವು ಸಂಪತ್ತಿನಂತೆ ಕಾಪಾಡಿಕೊಳ್ಳಬೇಕು ಎಂದು ಕಾರ್ಕಳದ ಖ್ಯಾತನ್ಯಾಯವಾದಿ ಶ್ರೀ ಎಂ ಕೆ ವಿಜಯಕುಮಾರ್ ಕರೆ ನೀಡಿದರು. ಅವರು ಕಾರ್ಕಳ ಕ್ರಿಯೇಟಿವ್ ಪಿ ಯು ಕಾಲೇಜಿನಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡುತ್ತ ಇಂತಹ ಭರತ ಭೂಮಿಯಲ್ಲಿ ಜನಿಸಿರುವುದೇ […]
ಕಾರ್ಕಳ:ಕ್ರಿಯೇಟಿವ್ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಕಂಪೆನಿ ಸೆಕ್ರಟರಿ( ಸಿ.ಎಸ್) ಪರೀಕ್ಷೆಯಲ್ಲಿ ಉತ್ತಮ ಸಾಧನೆ
ಕಾರ್ಕಳ(ಆ.11): ಕಂಪೆನಿ ಸೆಕ್ರೆಟರಿ ಸಂಸ್ಥೆಗಳಿಗೆ ನಡೆದ ಸ್ಪರ್ಧಾತ್ಮಕ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಜ್ವಲ್ ಮಂಜುನಾಥ ಭಟ್, ಶ್ರೀಯಾ ಕೆ ಎಸ್, ಶ್ರಾವ್ಯ ಭಟ್ ಎಸ್, ಪ್ರಣೀತಾ, ಧನುಷ್ ಡಿ ಡಿ ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ. ವಿದ್ಯಾರ್ಥಿಗಳ ಕಠಿಣ ಪರಿಶ್ರಮ, ಅನುಭವಿ ಉಪನ್ಯಾಸಕರ ತಂಡದೊಂದಿಗೆ ಕಾರ್ಯ ಪ್ರವೃತ್ತವಾಗಿರುವ ಸಂಸ್ಥೆ ತನ್ನ ಮೊದಲ ದಿನಗಳಿಂದಲೂ ವಾಣಿಜ್ಯ ವಿಭಾಗದಲ್ಲಿ ಸಿ.ಎ, ಸಿ.ಎಸ್ ಮತ್ತು ಬ್ಯಾಂಕಿಂಗ್ ಪರೀಕ್ಷೆಗಳಿಗೆ ವಿಶೇಷ ತರಗತಿ […]










