ಉಡುಪಿ (ಏ, 5): ಕರೋನಾ ಕಾರಣದಿಂದಾಗಿ ಎಸ್.ಎಸ್.ಎಲ್.ಸಿ ತರಗತಿಗಳು 7 ತಿಂಗಳು ವಿಳಂಬವಾಗಿ ಆರಂಭವಾದ ಹಿನ್ನೆಲೆಯಲ್ಲಿ ಪಠ್ಯಕ್ರಮಕ್ಕೆ ಸಂಭಂಧಪಟ್ಟಂತೆ ಎಲ್ಲಾ ವಿಷಯಗಳಿಗೆ ಸರಳ ಅಧ್ಯಯನ ಕ್ರಮ ಅನುಸರಿಸಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗುವ ಅದರಲ್ಲೂ ವಿಶೇಷವಾಗಿ ನಿಧಾನಗತಿಯ ಕಲಿಕೆಯ ವಿದ್ಯಾರ್ಥಿಗಳು ಓದಿ ಕಲಿತು ಪರೀಕ್ಷೆ ಪಾಸಾಗಲು ಯೋಗ್ಯವಾಗಿರುವ 280 ಪುಟಗಳ” ಗೆಲುವಿನ ಹೆಜ್ಜೆ “ಪುಸ್ತಕವನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅನಾವರಣಗೊಳಿಸಿದರು. ಅವರುಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಿದ “ಗೆಲುವಿನ ಹೆಜ್ಜೆ” […]
Tag: G Shankar
ಮೇ 2 ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ
ಹಾಲಾಡಿ (ಎ, 4): ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ ಉಡುಪಿ ಹಾಗೂ ಮೊಗವೀರ ಯುವ ಸಂಘಟನೆ(ರಿ) ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಜರುಗಲಿರುವ ಮೊಗವೀರ ಸಮುದಾಯದ 25 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ಹಾಲಾಡಿಯ ಶಾಲಿನಿ ಜಿ.ಶಂಕರ್ ಕನ್ವೆನ್ಷನ್ ಸೆಂಟರ್ ನಲ್ಲಿ ಮೇ 02 ರಂದು ನಡೆಯಲಿದೆ ಎಂದು ಮೊಗವೀರ ಯುವ ಸಂಘಟನೆ(ರಿ.) ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶಿವರಾಮ ಕೋಟ ಹೇಳಿದರು. ನಾಡೋಜ ಡಾ.ಜಿ ಶಂಕರ್ […]
ಎಪ್ರಿಲ್ 4 ರಂದು ಬಗ್ವಾಡಿ ಹೋಬಳಿ ವ್ಯಾಪ್ತಿಯ ಗುರಿಕಾರರ ಸಭೆ
ಹೆಮ್ಮಾಡಿ (ಎ. 2): ಪುರಾಣ ಪ್ರಸಿದ್ದ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಿಯ ಬ್ರಹ್ಮ ರಥೋತ್ಸವವು ಇದೇ ಏಪ್ರಿಲ್ 27ರಂದು ನಡೆಯಲಿದ್ದು, ರಥೋತ್ಸವದ ಪೂರ್ವ ತಯಾರಿ ಹಿನ್ನಲೆಯಲ್ಲಿ ಬಗ್ವಾಡಿ ಹೋಬಳಿ ವ್ಯಾಪ್ತಿಯ ಗುರಿಕಾರರ ಸಭೆಯು ಏಪ್ರಿಲ್ 4 ರ ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ದೇವಸ್ಥಾನದ ಬಳಿ ಇರುವ ಮಹಿಷಾಸುರ ಮರ್ದಿನಿ ಸಭಾಭವನದಲ್ಲಿ ನಡೆಯಲಿದ್ದು, ಈ ಸಭೆಯನ್ನು ನಾಡೋಜಾ ಡಾ. ಜಿ. ಶಂಕರ್ ರವರು ಉದ್ಘಾಟಿಸಲಿದ್ದಾರೆ. ಈ ಸಭೆಯ ಅಧ್ಯಕ್ಷತೆಯನ್ನು […]
ಡಾ. ಜಿ. ಶಂಕರ್ ರವರ ಸಮಾಜ ಸೇವೆ ಶ್ಲಾಘನೀಯ : ಸಂಸದ ಬಿ. ವೈ. ರಾಘವೇಂದ್ರ
ಸಮಾಜದಿಂದ ಪಡೆದಿದ್ದನ್ನು ಪುನ: ಸಮಾಜಕ್ಕೆ ನೀಡಬೇಕಾಗಿದ್ದು ಮನುಷ್ಯ ಧರ್ಮ. ಆ ನಿಟ್ಟಿನಲ್ಲಿ ಡಾ.ಜಿ ಶಂಕರ್ ರವರು ತಮ್ಮ ಫ್ಯಾಮಿಲಿ ಟ್ರಸ್ಟ್ ಮೂಲಕ ಅನೇಕ ರೀತಿಯಲ್ಲಿ ಜನಸೇವೆ ಮಾಡುತ್ತಾ ಸಮಾಜದ ನೋವು ನಲಿವುಗಳಿಗೆ ಸ್ಪಂದಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಸಂಸದ ಬಿ.ವೈ ರಾಘವೇಂದ್ರ ರವರು ಹೇಳಿದರು.
ಮಾ.3 ರಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕೊಲ್ಲೂರು ದೇವಸ್ಥಾನಕ್ಕೆ ಅಮ್ಮ ವಿಶ್ರಾಂತಿಗೃಹ ಹಸ್ತಾಂತರ ಕಾರ್ಯಕ್ರಮ
ನಾಡೋಜಾ.ಡಾ.ಜಿ.ಶಂಕರ್ ಪ್ರವರ್ತಿತ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಉಡುಪಿ ವತಿಯಿಂದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಉಳಿದುಕೊಳ್ಳಲು ಅನುಕೂಲವಾಗುವಂತೆ ಸುಮಾರು 2.50 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ‘ಅಮ್ಮ’ ವಿಶ್ರಾಂತಿಗೃಹವನ್ನು ನಿರ್ಮಿಸಿದ್ದು, ಇದರ ಹಸ್ತಾಂತರ ಕಾರ್ಯಕ್ರಮ ಮಾ.3 ರ ಬುಧವಾರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಜಿ. ಶಂಕರ್ ಆರೋಗ್ಯ ಸುರಕ್ಷಾ ಕಾರ್ಡ ವಿತರಣೆ
ಸಮಾಜದ ಎಲ್ಲಾ ವರ್ಗದವರಿಗೂ ಜಾತಿ, ಮತ, ಧರ್ಮ ಭೇಧಭಾವವಿಲ್ಲದೆ ಆರೋಗ್ಯ ಭದ್ರತೆ ನೀಡುವ ಸಲುವಾಗಿ ಪ್ರಾರಂಭಿಸಿದ ಡಾ. ಜಿ. ಶಂಕರ್ ರವರ ಮಹತ್ವಾಕಾಂಕ್ಷೆಯ ಯೋಜನೆಯಾದ ಜಿ. ಶಂಕರ್ ಆರೋಗ್ಯ ಸುರಕ್ಷಾ ವಿಮಾ ಯೋಜನೆಯ ಕಾರ್ಡುಗಳನ್ನು ಮೊಗವೀರ ಯುವ ಸಂಘಟನೆಯ ಪ್ರಧಾನ ಕಛೇರಿ ಮಾಧವ ಮಂಗಲ ಸಮುದಾಯ ಭವನ ಅಂಬಲಪಾಡಿ – ಉಡುಪಿ ಹಾಗೂ ಮೊಗವೀರ ಯುವ ಸಂಘಟನೆಗಳ ವಿವಿಧ ಘಟಕಗಳ ಕಛೇರಿ ಯಲ್ಲಿ ಫೆಬ್ರವರಿ 01 ನೇ ತಾರೀಕಿನಿಂದಲೇ ವಿತರಣೆ ಪ್ರಾರಂಭಿಸಿದ್ದು, […]
ಯಕ್ಷಗಾನ ಕಲೆಯನ್ನು ಗೌರವಿಸಿ ಬೆಳೆಸಬೇಕು: ಡಾ. ಜಿ. ಶಂಕರ್
ಯಕ್ಷಗಾನ ಕರಾವಳಿ ಭಾಗದ ಸಾಂಸ್ಕೃತಿಕ ಶ್ರೀಮಂತಿಕೆ ಪ್ರತೀಕವಾಗಿದ್ದು, ಯಕ್ಷಗಾನ ಕಲೆ ಹಾಗೂ ಕಲಾವಿದರುಗಳನ್ನು ಗುರುತಿಸಿ ಗೌರವಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ ಉಡುಪಿ ಇದರ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ ಹೇಳಿದರು.
ನಾಡೋಜ ಡಾ. ಜಿ ಶಂಕರ್ ಬ್ರಹತ್ ಆರೋಗ್ಯ ಯೋಜನೆಗೆ ಚಾಲನೆ
ಸಮಾಜದ ಎಲ್ಲಾ ವರ್ಗದವರಿಗೂ ಜಾತಿ, ಮತ, ಧರ್ಮ ಭೇಧಭಾವವಿಲ್ಲದೆ ಆರೋಗ್ಯ ಭದ್ರತೆ ನೀಡುವ ಸಲುವಾಗಿ ಪ್ರಾರಂಭಿಸಿದ ಡಾ. ಜಿ. ಶಂಕರ್ ರವರ ಮಹತ್ವಾಕಾಂಕ್ಷೆಯ ಯೋಜನೆಯಾದ ಜಿ. ಶಂಕರ್ ಆರೋಗ್ಯ ಸುರಕ್ಷಾ ವಿಮಾ ಯೋಜನೆಯನ್ನು ಜನವರಿ 19 ರಂದು ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ಎಸ್ ಬಲ್ಲಾಳ್ ರವರು ಹೆಲ್ತ್ ಕಾರ್ಡ್ ಬಿಡುಗಡೆ ಮಾಡುವುದರ ಮೂಲಕ ಯೋಜನೆಗೆ ಚಾಲನೆ ನೀಡಿದರು. ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ, ಉಡುಪಿಯ ಪ್ರವರ್ತಕರು, […]