ಹಿರಿಯಡ್ಕ(ಫೆ.03): ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ – ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಮಕ್ಕಳು ಹಿರಿಯಡ್ಕದ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ವಿಹಾರದ ಮುಖ್ಯ ಅತಿಥಿಯಾಗಿ ಆಗಮಿಸಿದ ರಂಗಕರ್ಮಿ, ಸಾಹಿತಿ ಶ್ರೀಮತಿ ಪೂರ್ಣಿಮಾ ಸುರೇಶ್ ಸ್ಥಳ ಸಾನಿಧ್ಯದ ಪರಿಚಯ ಮಾಡಿಕೊಟ್ಟರು. ನಮ್ಮ ಊರಿನ ಕ್ಷೇತ್ರದ ಮಹಿಮೆಗಳನ್ನು, ಹಿರಿಯರು ಆಚರಿಸಿಕೊಂಡು ಬರುತ್ತಿರುವ ಧಾರ್ಮಿಕ, ದೈವಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮುಂದುವರಿಸಿಕೊoಡು ಹೋಗುವ […]
Tag: general news
ಫೆ. 04 ರಂದು ಪುತ್ತೂರು ಪೋಳ್ಯ ಮಠದಲ್ಲಿ ಗರುಡ ರಥೋತ್ಸವ
ಪುತ್ತೂರು(ಫೆ. 03): ತಾಲೂಕಿನ ಪೋಳ್ಯ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ದ ಶ್ರೀ ಲಕ್ಷ್ಮೀ ವೆಂಕಟ್ರಮಣ ಮಠದ ರಥೋತ್ಸವವು ಫೆಬ್ರವರಿ 4ರಂದು ವಿಜೃಂಭಣೆಯಿಂದ ನಡೆಯಲಿದೆ. ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ಈ ದೇವಾಲಯ”ಎರಡನೇ ತಿರುಪತಿ” ಎಂಬ ಹೆಸರಿನಿಂದ ಪ್ರಸಿದ್ಧಿಯಾಗಿದೆ.ಇಲ್ಲಿ ಪ್ರಧಾನ ದೇವರು ಶ್ರೀ ಲಕ್ಷ್ಮೀ ವೆಂಕಟ್ರಮಣ, ಜೊತೆಗೆ ಭವಾನಿಶಂಕರ, ದೇವಿ, ಮತ್ತು ಮೂರು ವಿಭಿನ್ನ ಶಕ್ತಿಯುಳ್ಳ ಗಣಪತಿ ಸೇರಿದಂತೆ ಪಂಚ ದೇವತೆಗಳನ್ನು ಆರಾಧಿಸಲಾಗುತ್ತದೆ. ಸ್ಥಳ ದೈವಗಳಾಗಿ ಧೂಮಾವತಿ ಮತ್ತು ಗುಳಿಗ ದೈವಗಳೂ […]
ಬ್ರಹ್ಮಾವರ: ಅಭಿಮತ ಸಂಭ್ರಮ ಕಚೇರಿ ಉದ್ಘಾಟನೆ
ಬ್ರಹ್ಮಾವರ(ಫೆ,02): ಅಭಿಮತ ಸಂಭ್ರಮ ಈ ಬಾರಿ ಬ್ರಹ್ಮಾವರದಲ್ಲಿ ಆಕೃತಿಗೊಳ್ಳುತ್ತಿರುವುದು ಸಂತಸ ತಂದಿದೆ. ಅಭಿಮತ ಸಂಭ್ರಮದ ಕಂಪು ರಾಜ್ಯ ಹಾಗೂ ದೇಶ ಮಟ್ಟದಲ್ಲಿಯೂ ಪಸರಿಸಲಿ ಎಂದು ನೀಲಾವರ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿಯವರು ಶುಭ ಹಾರೈಸಿದರು. ಅಭಿಮತ ಸಂಭ್ರಮವನ್ನು ಹೊಸ ಬಗೆಯ ಸಾಧ್ಯತೆಯೊಂದಿಗೆ ಬ್ರಹ್ಮಾವರದಲ್ಲಿ ವಿನೂತನವಾಗಿ ಆಯೋಜಿಸುವ ಕುರಿತು ಬ್ರಹ್ಮಾವರದ ಸ್ವರ್ಣ ನಗರದಲ್ಲಿ ಫೆಬ್ರವರಿ 02 ರಂದು ಹಮ್ಮಿಕೊಂಡ ಅಭಿಮತ ಸಂಭ್ರಮದ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ […]
ಉದಯ ಕುಮಾರ ಶೆಟ್ಟಿ ಯವರಿಗೆ ರಾಜ್ಯಮಟ್ಟದ ಅತ್ಯುತ್ತಮ ಮತದಾರ ಸಾಕ್ಷರತಾ ಕ್ಲಬ್ ಸಂಚಾಲಕ ಪುರಸ್ಕಾರ
ಆಲೂರು ( ಜ.28): ಇಲ್ಲಿನ *ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ಉದಯ ಕುಮಾರ ಶೆಟ್ಟಿಯವರು ರಾಜ್ಯಮಟ್ಟದ ಅತ್ಯುತ್ತಮ ಮತದಾರ ಸಾಕ್ಷರತಾ ಕ್ಲಬ್ ಸಂಚಾಲಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಬೆಂಗಳೂರಿನ ಟೌನ್ ಹಾಲ್ ನಲ್ಲಿ ನೆಡೆದ ಕಾರ್ಯಕ್ರಮದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಉದಯ ಕುಮಾರ ಶೆಟ್ಟಿಯವರನ್ನು ಗೌರವಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ ಮೀನಾ,ಬಿ.ಬಿ.ಎಂ.ಪಿ ಆಯುಕ್ತರಾದ ತುಷಾರ ಗಿರಿನಾಥ್ ಉಪಸ್ಥಿತರಿದ್ದರು.
ರಾಷ್ಟ್ರಮಟ್ಟದ ಅಬಾಕಾಸ್ ಸ್ಪರ್ಧೆ: ಛಾಯಾ ವಿ . ಅರ್. ದ್ವಿತೀಯ ಸ್ಥಾನ
ಕುಂದಾಪುರ( ಜ .15): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನ ವೈಟ್ ಫೆದರ್ ಕನ್ವೇಷನ್ ಹಾಲ್ ನಲ್ಲಿ ನಡೆದ 20ನೇ ರಾಷ್ಟ್ರಮಟ್ಟದ ಅಬಾಕಾಸ್ ಸ್ಪರ್ಧೆಯ 4ನೇ ವಿಭಾಗದಲ್ಲಿ ಕುಂದಾಪುರದ ಛಾಯಾ ವಿ . ಆರ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕುಂದಾಪುರದ ಎಚ್ಎ.ಮ್ .ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುವ ಇವರು ಕುಂದಾಪುರದ ಪ್ರಸಿದ್ದ ಛಾಯಾ ಚಿತ್ರ ಗ್ರಾಹಕ ವಿಶ್ವನಾಥ ಮುನ್ನಾ ಹಾಗೂ ರಜನಿ ದಂಪತಿಯ ಪುತ್ರಿ.
ಶ್ರೀ ದುರ್ಗಾಂಬಿಕೆ ದೇವಸ್ಥಾನ ಕೆಳಾ ಹೇರೂರು: ಜ .16 ರಂದು ವರ್ಷಾವಧಿ ಜಾತ್ರಾ ಮಹೋತ್ಸವ
ಬೈಂದೂರು(ಜ.14): ಬೈಂದೂರು ತಾಲೂಕಿನ ಹೇರೂರು ಗ್ರಾಮದ ಕೆಳಾಹೇರೂರಿನ ಶ್ರೀ ದುರ್ಗಾಂಬಿಕೆ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಜನವರಿ 16 ನೇ ಗುರುವಾರದಂದು ಜರುಗಲಿದೆ. ಭಕ್ತಾದಿಗಳು ಸಕುಟುಂಬ ಸಮೇತರಾಗಿ ಆಗಮಿಸಿ, ಶ್ರೀದೇವರ ಸನ್ನಿಧಾನದಲ್ಲಿ ನಡೆಯುವ ಧಾರ್ಮಿಕ ಪೂಜಾ ವಿಧಿ ವಿಧಾನಗಳಲ್ಲಿ ಭಾಗವಹಿಸಿ, ಮಧ್ಯಾಹ್ನದ ಮಹಾ ಅನ್ನಸಂತರ್ಪಣೆಯ ಮಹಾಪ್ರಸಾದವನ್ನು ಸ್ವೀಕರಿಸಿ, ಶ್ರೀದೇವಿಯ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ದೇಗುಲದ ಮೊಕ್ತೇಸರರಾದ ಶ್ರೀ ಮಹಾಬಲ ಶೆಟ್ಟಿ ಗರಡಿ ಮನೆ ಹಾಗೂ ಗರಡಿಮನೆ ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ವೇದಿಕ್ ಮಾಥ್ಸ್ ಸ್ಪರ್ಧೆ: ಶಾಶ್ವತ್ ಉತ್ತಮ ಸಾಧನೆ
ಕುಂದಾಪುರ( ಜ .13): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವಿಟ್ ಲಿಮಿಟೆಡ್ ಕಂಪನಿ ಜನವರಿ 12 ರಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ 20 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಶಾಶ್ವತ್ ತೃತೀಯ ಸ್ಥಾನ ಪಡೆದಿದ್ದಾನೆ. ಬೈಂದೂರು ಸಮೀಪದ ನಾಗೂರಿನ ಸಂದೀಪನ್ ಶಾಲೆಯ 6ನೇ ತರಗತಿಯ ವಿದ್ಯಾರ್ಥಿಯಾದ ಈತ ಶ್ರೀಮತಿ ವನಿತಾ ಮತ್ತು ಶ್ರೀ ಚಂದ್ರ ಪೂಜಾರಿ ದಂಪತಿಯ ಪುತ್ರ. ಇತನ ಸಾಧನೆಗೆ ಕಂಬದಕೋಣೆಯ ವಿದ್ಯಾಲಕ್ಷ್ಮೀ ಟ್ಯೂಷನ್ […]
ಗುಜ್ಜಾಡಿ : ನಾಗಮಂಡಲೋತ್ಸವದ ಸುವರ್ಣ ಮಹೋತ್ಸವ- ಮುಹೂರ್ತ, ದರ್ಶನ ಸೇವೆ
ಕುಂದಾಪುರ( ಜ.10): ತಾಲೂಕಿನ ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದಲ್ಲಿ ಮಾರ್ಚ್ 30 ಹಾಗೂ 31 ರಂದು ನಾಗ ಮಂಡಲೋತ್ಸವದ ಸುವರ್ಣ ಮಹೋತ್ಸವ ಪ್ರಯುಕ್ತ ನಡೆಯಲಿರುವ ಜೀರ್ಣಾಷ್ಟಬಂಧ ಪುರಸ್ಸರ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗ ಮಂಡಲೋತ್ಸವ ಪೂರ್ವಭಾವಿಯಾಗಿ ಮುಹೂರ್ತ, ದರ್ಶನ ಸೇವೆ ಜನವರಿ 08 ರಂದು ಜರುಗಿತು. ಮಾರ್ಚ್ 30 ಹಾಗೂ 31 ರಂದು ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ ನಾಗಮಂಡಲೋತ್ಸವದ ಸುವರ್ಣ ಮಹೋತ್ಸವದ ಪೂರ್ವಭಾವಿಯಾಗಿ ಈ […]
ಬೈಂದೂರು : ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಅಮೈರಾ ಸಾಧನೆ
ಬೈಂದೂರು(ಜ. 07): ಬೈಂದೂರಿನಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ -2025 ನಲ್ಲಿ ಅಮೈರಾ ರವರು ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದಿರುತ್ತಾರೆ. ಈಕೆ ಕುಂದಾಪುರದ ಓಕ್ ವುಡ್ ಇಂಡಿಯನ್ ಶಾಲೆಯ 4ನೇ ತರಗತಿಯ ವಿದ್ಯಾರ್ಥಿ ಹಾಗೂ ಕುಂದಾಪುರದ ಕೆ.ಡಿ.ಎಫ್. ಕರಾಟೆ ಶಾಲೆಯ ಕಿಯೋಷಿ ಕಿರಣ್ ಕುಂದಾಪುರ, ಶಿಹಾನ್ ಸಂದೀಪ್ ವಿ.ಕೆ., ಶಿಹಾನ್ ಕೀರ್ತಿ ಜಿ.ಕೆ., ಸೇನ್ ಸಾಯಿ […]
ಬೈಂದೂರು ಚಂದ್ರಶೇಖರ ನಾವಡರ ‘ ಕಂಟೋನ್ಮೆಂಟ್ ಕಥೆಗಳು’ ಲೋಕಾರ್ಪಣೆ
ನಾಗೂರು( ಜ.6): ದೇಶಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡುವ ಸೈನಿಕರಿಂದಾಗಿ ನಾವು ನೆಮ್ಮದಿಯಿಂದ ಬದುಕುತ್ತಿದ್ದೇವೆ. ಭಾರತೀಯ ಸೇನೆ ಯುವಕರಲ್ಲಿ ದೇಶಭಕ್ತಿಯ ಭಾವವನ್ನು ಮೂಡಿಸುವ ಭರಪೂರ ಪ್ರಯತ್ನ ಮಾಡುತ್ತದೆ.ಅಂತಹ ಅತ್ಯುತ್ತಮ ತರಬೇತಿ ವ್ಯವಸ್ಥೆ ನಮ್ಮ ಸೇನೆಯಲ್ಲಿದೆ. ಎಂದು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶ್ರೀ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು. ಅವರು ನಾಗೂರು ಶ್ರೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ಭಾನುವಾರ ನಡೆದ ಲೇಖಕ, ಮಾಜಿ ಸೈನಿಕ ಬೈಂದೂರು ಚಂದ್ರಶೇಖರ ನಾವಡರ ಸೈನಿಕರ ನಿತ್ಯ ಬದುಕಿನ […]