ಕುಂದಾಪುರ( ಸೆ .15): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಶಾಲೆಯಲ್ಲಿ ಮಕ್ಕಳ ಸುರಕ್ಷತೆ ಹಾಗೂ ವೈಯಕ್ತಿಕ ಸುರಕ್ಷತೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ‘Good Touch–Bad Touch’ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಾಗಾರದಲ್ಲಿ ಸಮಾಲೋಚಕಿ ಹಾಗೂ ಯೋಗ ತರಬೇತುದಾರ್ತಿ ಶ್ರೀಮತಿ ಭಾರತಿ ಅವರು ಮಕ್ಕಳಿಗೆ ಸುರಕ್ಷಿತ ಹಾಗೂ ಅಸುರಕ್ಷಿತ ಸ್ಪರ್ಶದ ಕುರಿತು ಸರಳವಾಗಿ ವಿವರಿಸಿದರು. ತಮ್ಮ ದೇಹದ ಬಗ್ಗೆ ಜಾಗೃತಿ ಹೊಂದುವುದು, ಅಸೌಕರ್ಯ ಉಂಟುಮಾಡುವ ಸ್ಪರ್ಶವನ್ನು ಗುರುತಿಸುವುದು […]
Tag: hmm vkr
ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸ್ಪರ್ಧೆ: ವಿ. ಕೆ. ಆರ್. ಆಚಾರ್ಯ ಶಾಲೆ ಅತ್ಯುತ್ತಮ ಸಾಧನೆ
ಕುಂದಾಪುರ( ಆ ,26): ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಕ್ಯಾಥೋಲಿಕ್ ಸಭಾ ಉಡುಪಿ ಪ್ರದೇಶ ಹಾಗೂ ಹೋಲಿ ರೋಸರಿ ಚರ್ಚ್ ಕುಂದಾಪುರ ಇವುಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿಯರಾದ ಸಂಹಿತ ತಂತ್ರಿ ಆಯಿಷ ತಾನಾಜ್ಜ್ ,ರಿಯಾ ಅರ್ ಪುತ್ರನ್ , ಜೆನಿಫರ್ ಇಂಡಿಯಾ, ಆರಾಧ್ಯ ಎಂ,ಲಿಶಾ ಡಯಾಸ್ […]
ಎಚ್ ಎಮ್ ಎಮ್ ಶಾಲಾ ಮಕ್ಕಳಿಂದ ಗೋಡಂಬಿ ಕಾರ್ಖಾನೆಗೆ ಶೈಕ್ಷಣಿಕ ಭೇಟಿ
ಕುಂದಾಪುರ (ಆ.10): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಶಾಲೆಯ ವಿದ್ಯಾರ್ಥಿಗಳು ಹೆಮ್ಮಾಡಿ ಗೋಡಂಬಿ ಕಾರ್ಖಾನೆಗೆ ಶೈಕ್ಷಣಿಕ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಗೋಡಂಬಿಯ ಸಂಸ್ಕರಣೆ, ವಿಂಗಡಣೆ, ಪ್ಯಾಕಿಂಗ್ ಹಾಗೂ ಮಾರುಕಟ್ಟೆಗೆ ಸಾಗಿಸುವ ವಿವಿಧ ಹಂತಗಳ ಬಗ್ಗೆ ಮಾಹಿತಿ ಪಡೆದರು. ಕಾರ್ಖಾನೆಯ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಗೋಡಂಬಿ ಸಂಸ್ಕರಣೆಯ ಸಂಪೂರ್ಣ ಪ್ರಕ್ರಿಯೆಯನ್ನು ವಿವರಿಸಿದರು. ಪಠ್ಯಪುಸ್ತಕದಲ್ಲಿ ಕಲಿತ ವಿಷಯಗಳನ್ನು ಪ್ರಾಯೋಗಿಕವಾಗಿ ತಿಳಿದುಕೊಳ್ಳಲು ಈ ಭೇಟಿ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವಾಗಿತ್ತು. […]
ಎಚ್.ಎಂ.ಎಂ & ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ: ಪೊಲೀಸ್ ಠಾಣೆಗೆ ಭೇಟಿ
ಕುಂದಾಪುರ(ಆ,12): ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಂ.ಎಂ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳು ಆಗಸ್ಟ್ 12 ರಂದು ಕುಂದಾಪುರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಅಧಿಕಾರಿಗಳ ಕರ್ತವ್ಯ ಹಾಗೂ ಶಾಲಾ ವಾಹನದಲ್ಲಿ ಸಂಚಾರ ಮಾಡುವಾಗ ಅನುಸರಿಸಬೇಕಾದ ನಿಯಮ ಹಾಗೂ ಮೊಬೈಲ್ ಬಳಕೆ ನಿಷೇಧದ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಅಧಿಕಾರಿಗಳು ಸರಳವಾಗಿ ವಿವರಿಸಿ ಮಕ್ಕಳಿಗೆ ಶುಭ ಹಾರೈಸಿದರು.
ಚೆಸ್ ಪಂದ್ಯಾಟ : ಸಾಧನೆ ಮೆರೆದ ಎಚ್ಎಮ್ಎಮ್ ಹಾಗೂ ವಿ.ಕೆ.ಆರ್ ಶಾಲೆಗಳ ವಿದ್ಯಾರ್ಥಿಗಳು
ಕುಂದಾಪುರ ( ಜು ,31): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳ ವಿದ್ಯಾರ್ಥಿಗಳು ಸಿದ್ದಾಪುರದ ಜ್ಞಾನ ಸರಸ್ವತಿ ವಿದ್ಯಾಲಯದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. 14 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಕೃತಿ ಜಿ. ಖಾರ್ವಿ ಪ್ರಥಮ ಸ್ಥಾನ ಪಡೆದಿದ್ದಾರೆ. 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಅದ್ಯಾನ ಜಾವೇದ್ ದ್ವಿತೀಯ ಸ್ಥಾನ ಗಳಿಸಿದ್ದಾರೆ. 17 […]
ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಶಾಲೆ: ಚೆಸ್ ನಲ್ಲಿ ಮಿಂಚಿದ ಪುಟಾಣಿ ಪ್ರತಿಭೆ ಶ್ರೀನಿತ್
ಕುಂದಾಪುರ( ಜು ,24): ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಶಾಲೆಯ ವಿದ್ಯಾರ್ಥಿ ಶ್ರೀನಿತ್ ಶೇಟ್ ಕಾರ್ಕಳದಲ್ಲಿ ನಡೆದ ಕರ್ನಾಟಕ ಚೆಸ್ ಅಸೋಸಿಯೇಷನ್ (KCA) ವತಿಯಿಂದ ಆಯೋಜಿಸಲಾದ 12ನೇ ಅಂತರಜಿಲ್ಲಾ ರಾಪಿಡ್ ಮತ್ತು ಬ್ಲಿಟ್ಜ್ ಚೆಸ್ ಟೂರ್ನಿಯ ಅಂಡರ್-9 ವಯೋಮಾನದ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ರಾಪಿಡ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಬ್ಲಿಟ್ಜ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ . […]
ಎಚ್ .ಎಮ್ .ಎಮ್ ಪೂರ್ವ ಪ್ರಾಥಮಿಕ ವಿಭಾಗ : ರೈನಿ ಡೇ ಸೆಲೆಬ್ರೇಷನ್ – 2026
ಕುಂದಾಪುರ(ಜು,10): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ರೈನಿ ಡೇ ಯನ್ನು ಜುಲೈ, 07 ರಂದು ಆಚರಿಸಲಾಯಿತು. ಬಣ್ಣದ ಛತ್ರಿ ಮತ್ತು ರೇನ್ ಕೋಟ್ ಧರಿಸಿದ ನಮ್ಮ ಪುಟ್ಟ ಮಕ್ಕಳು ತೊಯ್ದ ಅಂಗಳದಲ್ಲಿ ಮಳೆ ದಿನವನ್ನು ಸಂಭ್ರಮದಿಂದ ಆಚರಿಸಿದರು. ಮಳೆ ಹಾಡು, ಕಾಗದ ದೋಣಿ, ಆಟಗಳ ಮೂಲಕ ಮಕ್ಕಳು ಖುಷಿಯಿಂದ ಕುಣಿದಾಡಿದರು ಮತ್ತು ಮಳೆಯ ಮಹತ್ವವನ್ನು ಕಲಿತರು.
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಂಗ್ಲ ಮಾಧ್ಯಮ ಶಾಲೆ: ಯಕ್ಷಗಾನ ತರಬೇತಿಗೆ ಶುಭಾರಂಭ
ಕುಂದಾಪುರ (ಜು,15): ಯಕ್ಷ ಶಿಕ್ಷಣ ಟ್ರಸ್ಟ್ (ರಿ) ಉಡುಪಿ ಇವರ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಬಡಗುತಿಟ್ಟು ಯಕ್ಷಗಾನ ಹೆಜ್ಜೆ ತರಬೇತಿ ಇದರ ಉದ್ಘಾಟನಾ ಸಮಾರಂಭ ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು. ಸಂಸ್ಥೆಯ ಉಪ ಪ್ರಾಂಶುಪಾಲೆ ಶ್ರೀಮತಿ ಶುಭಾ ಕೆ. ಎನ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಕ್ಷ ಶಿಕ್ಷಣ ಟ್ರಸ್ಟ್ ಮತ್ತು ಕಲಾರಂಗ ಉಡುಪಿ […]
ಕುಂದಾಪುರ: ಎಚ್.ಎಂ.ಎಂ. ಪೂರ್ವ ಪ್ರಾಥಮಿಕ ವಿಭಾಗ ಆರಂಭೋತ್ಸವ
ಕುಂದಾಪುರ(ಜೂ,20): ಕುಂದಾಪುರ ಎಜುಕೇಶನ್ ಸೊಸೈಟಿ ಪೂರ್ವ ಪ್ರಾಥಮಿಕ ವಿಭಾಗದ ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಮಕ್ಕಳಿಗೆ ಮತ್ತು ಪೋಷಕರಿಗೆ ಆತ್ಮೀಯ ಸ್ವಾಗತ ಕೋರಿ, ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ .ಜಿ. ಭಟ್ ಹಾಗೂ ತರಗತಿ ಶಿಕ್ಷಕರೆಲ್ಲರೂ ಸೇರಿ, ಮಕ್ಕಳಿಗೆ ಆರತಿ ಎತ್ತಿ ಪ್ರೀತಿಯಿಂದ ಬರಮಾಡಿಕೊಂಡರು. […]
ಕುಂದಾಪುರ : ಎಚ್.ಎಂ.ಎಂ. ಪೂರ್ವ ಪ್ರಾಥಮಿಕ ವಿಭಾಗದ ಶಿಕ್ಷಕ-ಪೋಷಕ ಸಭೆ
ಕುಂದಾಪುರ (ಜೂ,22): ಕುಂದಾಪುರ ಎಜುಕೇಶನ್ ಸೊಸೈಟಿ ಪೂರ್ವ ಪ್ರಾಥಮಿಕ ವಿಭಾಗದ ಹೊಸ ಶೈಕ್ಷಣಿಕ ವರ್ಷದ ಮೊದಲ ಸಭೆಜೂನ್ 22 ರಂದು ನಡೆಯಿತು. ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಮಕ್ಕಳಿಗೆ ಮತ್ತು ಪೋಷಕರಿಗೆ ಆತ್ಮೀಯ ಸ್ವಾಗತ ಕೋರಿ, ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು.ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ .ಜಿ. ಭಟ್ ಶಾಲೆಯ ಹೊಸ ಶೈಕ್ಷಣಿಕ ವರ್ಷದ ಯೋಜನೆ ಹಾಗೂ ಯೋಚನೆಗಳನ್ನು ಮಂಡಿಸಿದರು. ಸಹಾಯಕ […]










