ಕುಂದಾಪುರ, (ನ. 22): ಪ್ರತಿಯೊಂದು ಕ್ಷೇತ್ರದಲ್ಲೂ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶಗಳಿರುತ್ತವೆ. ಈ ಅವಕಾಶಗಳ ಸದುಪಯೋಗ ಪಡೆದುಕೊಳ್ಳಬೇಕು. ಮಾರುಕಟ್ಟೆ ಅಧ್ಯಯನ ಮಾಡಿ ವ್ಯವಹಾರ ಕುದುರಿಸುವುದು ಕೂಡ ಒಂದು ಕಲೆ. ಎಲ್ಲರೂ ವೈದ್ಯರು, ಎಂಜಿನಿಯರ್ ಆಗಲೂ ಸಾಧ್ಯವಿಲ್ಲ. ಅವರರ ಆಸಕ್ತಿಗೆ ಅನುಗುಣವಾಗಿ ಭವಿಷ್ಯದ ಕ್ಷೇತ್ರ ಆಯ್ಕೆ ಮಾಡಿಕೊಳ್ಳಬೇಕು ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ, ನಾಡೋಜ ಡಾ| ಜಿ.ಶಂಕರ್ ಹೇಳಿದರು. ಅವರು ಹೆಮ್ಮಾಡಿ ಜನತಾ ಪ,.ಪೂ. ಕಾಲೇಜಿನಲ್ಲಿ ನಡೆದ ‘ಜನತಾ ಅವಿಷ್ಕಾರ್ 2ಕೆ25‘ […]
Tag: janatha p u
ಹೆಮ್ಮಾಡಿ ಜನತಾ ಸಮೂಹ ವಿದ್ಯಾಸಂಸ್ಥೆ: ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭ
ಹೆಮ್ಮಾಡಿ(ನ ,13): ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್, ಕಿರಿಮಂಜೇಶ್ವರ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಾನದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಅತ್ಯಂತ ಅದ್ದೂರಿಯಾಗಿ ಹೆಮ್ಮಾಡಿಯ ಜನತಾ ಕ್ರೀಡಾoಗಣದಲ್ಲಿ ನಡೆಯಿತು. ಅದ್ದೂರಿಯ ಪುರ ಮೆರವಣಿಗೆ : ಕ್ರೀಡಾಕೂಟದ ಅಂಗವಾಗಿ ಹೆಮ್ಮಾಡಿಯ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದಿಂದ 2 ಕಿ ಮೀ […]
ರಾಜ್ಯ ಮಟ್ಟದ ಕ್ರೀಡಾಕೂಟ: ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ನ ,5): ಈಗಾಗಲೇ ನಡೆಯುತ್ತಿರುವ ರಾಜ್ಯ ಮಟ್ಟದ ವಿವಿಧ ಕ್ರೀಡಾ ಕೂಟಗಳಲ್ಲಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಯೋಗೀಶ (ನೆಟ್ ಬಾಲ್ )ಆದಿತ್ಯ (ವಾಲಿಬಾಲ್ )ಸಾಹಿಮ್ (ಕಬಡ್ಡಿ )ಪ್ರಣೀತ (ಕುಸ್ತಿ )ಭಾಗವಹಿಸಿ ಉತ್ತಮ ಸಾಧನೆಗೈದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಜನತಾ ಪಿಯು ಕಾಲೇಜಿನ ಸಾಯಿಮ್ ಎಂ. ಕೆ. ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಕುಂದಾಪುರ ( ಆ ,27): ಇತ್ತೀಚೆಗೆ ತುಮಕೂರಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಾಯಿಮ್ ಎಂ. ಕೆ . ಉತ್ತಮ ಪ್ರದರ್ಶನ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಜನತಾ ಪಿಯು ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟ
ಹೆಮ್ಮಾಡಿ(ಆ,23): ಗ್ರಾಮೀಣ ಭಾಗದಲ್ಲಿ ಕಬಡ್ಡಿಯಲ್ಲಿ ಪಾಲ್ಗೊಂಡು ಅಷ್ಟಕ್ಕೇ ಸುಮ್ಮನಾಗಬೇಡಿ ಧೈರ್ಯ ಮತ್ತು ಛಲದಿಂದ ಮುನ್ನುಗ್ಗಿ ರಾಜ್ಯ ರಾಷ್ಟ್ರ ಮಟ್ಟದಲ್ಲೂ ಹೆಸರು ಮಾಡಿ ಎಂದು ಪ್ರೊ ಕಬ್ಬಡಿ ಖ್ಯಾತಿಯ ಸಚಿನ್ ಸುವರ್ಣ ಅಭಿಪ್ರಾಯ ಪಟ್ಟರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಮುಂದಿನ […]
ಮಾನವೀಯತೆ ಮೆರೆದ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ
ಹೆಮ್ಮಾಡಿ( ಆ.8): ಇತ್ತೀಚಿಗೆ ಗಂಗೊಳ್ಳಿಯಲ್ಲಿ ನಡೆದ ದೋಣಿ ದುರಂತದಲ್ಲಿ ಮೃತರಾದ ದಿ.ಸುರೇಶ್ ಖಾರ್ವಿಯವರ ಮಗಳಾದ ಕುಮಾರಿ ಶ್ರೀಯಾ ರವರಿಗೆ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಮಾನವೀಯ ನೆಲೆಯ ಸಹಾಯ ಮಾಡಿದ್ದಾರೆ. ಜನತಾ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಈ ವಿದ್ಯಾರ್ಥಿನಿಯ ತಂದೆ ಮೃತರಾದ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಎರಡು ವರ್ಷದ ಸಂಪೂರ್ಣ ಕಾಲೇಜಿನ ಶುಲ್ಕವನ್ನು( ಕಾಲೇಜು ಶುಲ್ಕ,ಸಮವಸ್ತ್ರ, […]
ಹೆಮ್ಮಾಡಿ: ಅಗಲಿದ ವಿದ್ಯಾರ್ಥಿಯ ಸಂತಾಪ ಸಭೆ
ಹೆಮ್ಮಾಡಿ( ಆ .05): ಇತ್ತೀಚಿಗೆ ನಿಧನ ಹೊಂದಿದ ಹೆಮ್ಮಾಡಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ನಮೇಶನ ಸಂತಾಪ ಸಭೆಯನ್ನು ಕಾಲೇಜಿನ ವತಿಯಿಂದ ಆಯೋಜಿಸಲಾಯಿತು. ಸಭೆಯಲ್ಲಿ ಮೃತ ವಿದ್ಯಾರ್ಥಿಯ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೌನ ಪ್ರಾರ್ಥನೆ ಮಾಡಲಾಯಿತು. ಮೃತ ವಿದ್ಯಾರ್ಥಿ ತಂದೆ ಲವೇಶ ಮಾತನಾಡಿ ಕಾಲೇಜಿನ ವತಿಯಿಂದ ಸಂತಾಪ ಸಭೆ ಮಾಡಿದ್ದಕ್ಕಾಗಿ ಧನ್ಯವಾದಗಳು. ಮಗನನ್ನು ಕಳೆದುಕೊಂಡ ದುಃಖದಲ್ಲಿ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಕಾಲೇಜಿನ ಬಗ್ಗೆ ತಪ್ಪು ಹೇಳಿಕೆ […]
ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ -ಜನತಾ ಪಿಯು ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ಸೆ .24): ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ -ಜನತಾ ಪಿಯು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ಸೆ.15): ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲ್ಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಕೋರಿದ್ದಾರೆ.
ಜನತಾ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಸತತ 2ನೇ ವರ್ಷವೂ ಕಬ್ಬಡಿ ಪಂದ್ಯಾಟದಲ್ಲಿ ಸಮಗ್ರ ಚಾಂಪಿಯನ್ಸ್
ಹೆಮ್ಮಾಡಿ(ಸೆ .12) ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲ್ಲೂಕು ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕ, ಬಾಲಕಿಯರ ಎರಡು ತಂಡ ಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಬಾಲಕರ ತಂಡದ ವಿದ್ಯಾರ್ಥಿಗಳಾದ ನಿಹಾಲ್,ಸಾಯಿಮ್ (ಉತ್ತಮ ದಾಳಿಗಾರ)ಓoಕಾರ್, ಯೂನಸ್, ಶಶಾಂಕ್, ಸಾಗರ್ (ಉತ್ತಮ ಹಿಡಿತಗಾರ)ಅಯಾನ್, ಹಾಗೂ ಬಾಲಕಿಯರ ತಂಡದ ನವ್ಯ (ಉತ್ತಮ ದಾಳಿಗಾರ್ತಿ), ರಕ್ಷಾ,ಸಿಂಚನ, ಸಂಜನಾ, ಅನುಷಾ, ಮೋನಿಷಾ (ಉತ್ತಮ ಹಿಡಿತಗಾರ್ತಿ)ಶ್ರಾವ್ಯ ಕ್ರೀಡಾ ಸ್ಫೂರ್ತಿಯಿಂದ […]










