ಹೆಮ್ಮಾಡಿ ( ಜ,27): DCX ಸಿಸ್ಟಮ್ಸ್ ಲಿಮಿಟೆಡ್ ಅರ್ಪಿಸುವ ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯದ ಪರಮ ಪೂಜ್ಯ ಪೀಠಾದಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108ಶ್ರೀಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಕೊಡಮಾಡುವ ಪ್ರತಿಷ್ಠಿತ ಶ್ರೀ ಪರಿಮಳ ಪ್ರಶಸ್ತಿ 2025 ಈ ಪ್ರಶಸ್ತಿಗೆ ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ರೂವಾರಿ,ಶಿಕ್ಷಣ ಕ್ಷೇತ್ರದ ಸಾಧಕ ಶ್ರೀ ಗಣೇಶ್ ಮೊಗವೀರರವರನ್ನು ಆಯ್ಕೆಯಾಗಿದ್ದಾರೆ. ಇದುವರೆಗೆ ಶ್ರೀಯುತರು ಶಿಕ್ಷಣ […]
Tag: janatha p u
ಶ್ರೀ ಗಣೇಶ ಮೊಗವೀರರಿಗೆ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್
ಕುಂದಾಪುರ(ಜ.23): ಪ್ರತಿಷ್ಠಿತ ಟೊಪ್ನೆಟೆಕ್ ಫೌಂಡೇಷನ್ ಕೊಡಮಾಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ 2025-“ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿತ್ವ” ಈ ಪ್ರಶಸ್ತಿಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಆಯ್ಕೆಯಾಗಿದ್ದಾರೆ. ಶ್ರೀಯುತರು ಇದುವರೆಗೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಸೇವೆಯನ್ನು ಪರಿಗಣಿಸಿ ಆಯ್ಕೆ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಲಾಗಿದ್ದು, ಏಪ್ರಿಲ್ […]
ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ತನ್ವಿತಾ ವಿ. ಡಾ| ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಆಯ್ಕೆ
ಕೋಟ(ಡಿ.28): ಡಾ.ಶಿವರಾಮ ಕಾರಂತ ಪ್ರತಿಷ್ಠಾನ(ರಿ.) ಕೋಟ, ಡಾ.ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ,ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ, ಕೋಟದ ಡಾ| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಕೊಡಮಾಡುವ ನಾಲ್ಕನೇ ವರ್ಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ವಿಶೇಷ ಸಾಧಕರ ವಿಭಾಗದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ತನ್ವಿತಾ ವಿಶೇಷ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ತನ್ವಿತಾ ಪ್ರೌಢ ಶಿಕ್ಷಣದ ಸಮಯದಲ್ಲಿ ಯೋಗ ಸ್ಪರ್ಧೆಯಲ್ಲಿ ರಾಷ್ಟ್ರ,ಅಂತರಾಷ್ಟ್ರೀಯ ಮಟ್ಟದ […]
ಹೆಮ್ಮಾಡಿ: ವೆಲಾಸಿಟಿ ಅಕಾಡೆಮಿ ಇಂಡಿಯಾ ವತಿಯಿಂದ ಶ್ರೀ ಗಣೇಶ ಮೊಗವೀರರಿಗೆ ಸನ್ಮಾನ
ಹೆಮ್ಮಾಡಿ( ಡಿ.19): ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇದರ ಪ್ರಾಂಶುಪಾಲರು ಹಾಗೂ ವಿಯೆಟ್ನಾಂ ಅಂತರಾಷ್ಟ್ರೀಯ ಬೆಸ್ಟ್ ಐಕಾನ್ ಅವಾರ್ಡ್ ಪ್ರಶಸ್ತಿ ಪುರಸ್ಕೃತರಾದ ಶ್ರೀ ಗಣೇಶ ಮೊಗವೀರರನ್ನು ವೆಲಾಸಿಟಿ ಅಕಾಡೆಮಿ ಇಂಡಿಯಾ ಕರಾಟೆ ತರಭೇತಿ ಸಂಸ್ಥೆಯ ಮುಖ್ಯಸ್ಥರಾದ ಅಕ್ಷಯ್ ಹೆಮ್ಮಾಡಿಯವರು ತಮ್ಮ ಸಂಸ್ಥೆಯ ವತಿಯಿಂದ ಡಿಸೆಂಬರ್ 15 ರಂದು ಹೆಮ್ಮಾಡಿಯ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೋಗೀಶ್ ಗುಡ್ರಿ ವಹಿಸಿಕೊಂಡರು. ಕಾರ್ಯಕ್ರಮದ […]
ಅಂತರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆ: ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ಧನ್ವಿ ಮರವಂತೆಗೆ ಚಿನ್ನದ ಪದಕ
ಹೆಮ್ಮಾಡಿ ( ಡಿ,12): ಥೈಲ್ಯಾಂಡ್ ಯೂತ್ ಯೋಗ ಅಸೋಸಿಯೇಷನ್ ಮತ್ತು ವರ್ಲ್ಡ್ ಯೂಥ್ ಯೋಗ ಫೆಡರೇಶನ್ ಹಾಗೂ ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ರಿಜಿಸ್ಟರ್ಡ್ ಶಿವಮೊಗ್ಗ ಕರ್ನಾಟಕ ಇವರ ಸಹಭಾಗಿತ್ವದಲ್ಲಿ ಡಿಸೆಂಬರ್ 09 ರಂದು ಥೈಲ್ಯಾಂಡ್ ನ ಪಟ್ಟಾಯದಲ್ಲಿ ನಡೆದ 6ನೇ ವರ್ಷದ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಏಳು ದೇಶಗಳ ಸ್ಪರ್ಧಿಗಳಲ್ಲಿ ಸುಮಾರು 80 ಜನ ಸ್ಪರ್ಧಿಗಳು ಭಾಗವಹಿಸಿದ್ದರು. […]
ಧನ್ವಿ ಮರವಂತೆ ಅಂತಾರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ ಆಯ್ಕೆ
ಹೆಮ್ಮಾಡಿ( ಡಿ .9): ಥಾಯ್ಲೆಂಡ್ ನಲ್ಲಿ ನೆಡೆಯುವ ಅಂತರಾಷ್ಟ್ರೀಯ ಮಟ್ಟದ ವರ್ಷಿಣಿ ಯೋಗ ಎಜ್ಯುಕೇಶ ನ್ ಆಂಡ್ ಕಲ್ಚರಲ್ ಸ್ಪೋರ್ಟ್ಸ್ ಟ್ರಸ್ಟ್. ರಿ.ಶಿವಮೊಗ್ಗ ಇವರ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧನ್ವಿ ಪೂಜಾರಿ ಮರವಂತೆ ಆಯ್ಕೆಯಾಗಿರುತ್ತಾಳೆ. ಆಯ್ಕೆಯಾದ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಜನತಾ ಪಿ. ಯು ಕಾಲೇಜಿನ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ ( ಡಿ.09): ಮದ್ಭಗವದ್ಗೀತಾ ಅಭಿಯಾನ 2024 ಈ ಪ್ರಯುಕ್ತ ಆಚರಣಾ ಸಮಿತಿಯವರು ಆಯೋಜಿಸಿದ ಜಿಲ್ಲಾ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಹೆಮ್ಮಾಡಿಯ ಜನತಾ ಕಾಲೇಜಿನ ಶ್ರುತಿಕಾ ಶೆಟ್ಟಿ ದ್ವಿತೀಯ ಸ್ಥಾನ
ಹೆಮ್ಮಾಡಿ( ಡಿ .01): ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಉಡುಪಿ,ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ ೫೦ರ ಸಂಭ್ರಮಾಚರಣೆಯ ಪ್ರಯಕ್ತ ಆಯೋಜಿಸಿದ ಜಿಲ್ಲಾ ಮಟ್ಟದ ‘ಕನ್ನಡ ಭಾಷಣ’ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು/ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸಾಧನೆಗೈದ ಹೆಮ್ಮಾಡಿಯ ಜನತಾ ಕಾಲೇಜು
ಹೆಮ್ಮಾಡಿ ( ಡಿ .01): ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು,ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮೆರೆದು, 7 ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕ್ರಮವಾಗಿ,ಕನ್ನಡ ಭಾಷಣ ಸ್ಪರ್ಧೆಯಲ್ಲಿ ಶ್ರುತಿಕಾ ಶೆಟ್ಟಿ ಪ್ರಥಮ ಸ್ಥಾನ, ಕನ್ನಡ ಪ್ರಬಂಧ […]
ವಿಯೆಟ್ನಾಂ ಇಂಡಿಯಾ ಅಂತರಾಷ್ಟ್ರೀಯ ಐಕಾನಿಕ್ ಪ್ರಶಸ್ತಿಗೆ ಶ್ರೀ ಗಣೇಶ ಮೊಗವೀರ ಆಯ್ಕೆ
ಕುಂದಾಪುರ( ನ .27): ಏಷ್ಯನೆಟ್ ಸುವರ್ಣ ಹಾಗೂ ಕನ್ನಡ ಪ್ರಭ ಪತ್ರಿಕೆಯವರು ಕೊಡಮಾಡುವ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರು ಆಯ್ಕೆಯಾಗಿದ್ದಾರೆ. ಶ್ರೀಯುತರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ವಿಶೇಷ ಕೊಡುಗೆಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ನವೆಂಬರ್ ,28 ರಂದು ವಿಯೆಟ್ನಾಂ ನಲ್ಲಿ ನಡೆಯಲಿರುವ ಅದ್ದೂರಿಯ ಸಮಾರಂಭದಲ್ಲಿ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ […]