ಬೈoದೂರು( ಆ,24):ಉತ್ತರ ಕನ್ನಡ ಕರಾಟೆ ಅಸೋಸಿಯೇಷನ್ ಭಟ್ಕಳ ಇವರು ಆಯೋಜಿಸಿದ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟದ ಕುಮಿಟೆ ವಿಭಾಗದಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಆರ್ಯನ್ (8ನೇ ತರಗತಿ), ರಜತ್ (7ನೇ ತರಗತಿ) ಚಿನ್ನದ ಪದಕ ಹಾಗೂ ಗಗನ್ ( 6ನೇ ತರಗತಿ) ಕಂಚಿನ ಪದಕವನ್ನು ಗಳಿಸಿದ್ದಾರೆ. ಕಟಾ ವಿಭಾಗದಲ್ಲಿ ಗಗನ್ (6ನೇ ತರಗತಿ) ಚಿನ್ನದ ಪದಕ, ಅಕ್ಷಿತ್ (7ನೇ ತರಗತಿ), ಅನ್ವೇಷಣ(7ನೇ ತರಗತಿ) ಶ್ರೀಶಾ (4ನೇ ತರಗತಿ) […]
Tag: janatha p u
ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ಆ,21): ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಬೆಂಗಳೂರು, ದೇವರಾಜ್ ಅರಸ್ ಪದವಿಪೂರ್ವ ಕಾಲೇಜು ಆರ್.ಎಲ್.ಜಾಲಪ್ಪ ಕ್ಯಾಂಪಸ್ ಕೊಡಿಗೇಹಳ್ಳಿ ದೊಡ್ಡಬಳ್ಳಾಪುರಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬಾಲಕಿಯರ ವಿಭಾಗದಲ್ಲಿಉಡುಪಿ ಜಿಲ್ಲೆಯ ಯೋಗಾಸನ ತಂಡವನ್ನು ಪ್ರತಿನಿಧಿಸಿದ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದನಿರೀಕ್ಷಾ ಮತ್ತು ತನ್ವಿತಾ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ […]
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆ
ಹೆಮ್ಮಾಡಿ( ಆ,18): ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬೆಳಗಾವಿ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪದವಿಪೂರ್ವ ವಿಭಾಗ) ಬೆಳಗಾವಿ,ಶಾಂತಿನಿಕೇತನ ಪದವಿಪೂರ್ವ ಕಾಲೇಜು ಖಾನಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಬಾಲಕ/ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ,ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಕ್ಕೆ ಆಯ್ಕೆಯಾದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಒಟ್ಟು 7 ವಿದ್ಯಾರ್ಥಿಗಳು ಪದಕಗಳನ್ನು ಪಡೆದು ಅದ್ವಿತೀಯ ಸಾಧನೆ ಮಾಡಿದ್ದಾರೆ. ಬಾಲಕಿಯರ 70ಕೆ.ಜಿ.ವಿಭಾಗದಲ್ಲಿ ವಿದ್ಯಾರ್ಥಿನಿ […]
ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ : ಯೋಗಾಸನ ಸ್ಪರ್ಧೆ ಸಾನಿಧ್ಯಗೆ ತೃತೀಯ ಸ್ಥಾನ
ಕಿರಿಮಂಜೇಶ್ವರ (ಅ,05): ಕಾರ್ಕಳದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿನಿ ಸಾನಿಧ್ಯ ಎಸ್ ಮೊಗವೀರ ತೃತೀಯ ಸ್ಥಾನ ಗಳಿಸಿ ಉಡುಪಿ ಜಿಲ್ಲೆಗೆ ಹಾಗೆಯೇ ಜನತಾ ವಿದ್ಯಾಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾಳೆ. ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ರೋನಿತ್ ಪೂಜಾರಿ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ ( ಆ ,4): ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ನ್ಯಾಷನಲ್ ಪದವಿಪೂರ್ವ ಕಾಲೇಜು ಬಾರ್ಕೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕರ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿ ರೋನಿತ್ ಪೂಜಾರಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಐಶು ಖಾರ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಆ ,05): ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಸ್ವತಿ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ/ ಬಾಲಕಿಯರ ಟೆನ್ನಿಕ್ವಾಯ್ಟ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಐಶು ಖಾರ್ವಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ :ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ
ಕಿರಿಮoಜೇಶ್ವರ(ಆ,2): ಇಲ್ಲಿನ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಗಾಂಧಿ ಹಾಗೂ ಶಾಸ್ತ್ರೀ ಜಯಂತಿಯನ್ನು ಅಕ್ಟೋಬರ್ 02 ರಂದು ಆಚರಿಸಲಾಯಿತು. ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಲಾಯಿತು. ಶಿಕ್ಷಕರಾದ ದೀಪಿಕಾ ಹಾಗೂ ರಾಘವೇಂದ್ರ ಇವರು ಗಾಂಧೀಜಿ ಮತ್ತು ಶಾಸ್ತ್ರಿಯವರ ಜೀವನ ಸಾಧನೆಗಳನ್ನು ಸ್ಮರಿಸಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿಯಾದ ದೀಪಿಕಾ ಆಚಾರ್ಯ ಅವರು […]
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಕ್ಷಿತಾ ಭಟ್ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ ( ಆ ,03): ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಬಾಪೂಜಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ ಭಟ್ ಪ್ರಥಮ ಸ್ಥಾನ ಪಡೆದು,ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನೆಟ್ ಬಾಲ್ ಪಂದ್ಯಾಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ಆ,01): ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 30 ರಂದು ಆಯೋಜಿಸಿದ ಪದವಿ ಪೂರ್ವ ಬಾಲಕರ ನೆಟ್ ಬಾಲ್ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಾಗರಾಜ್ ಹಾಗೂ ಯೋಗೀಶ್ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ […]
ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ದಸರಾ ಕ್ರೀಡಾಕೂಟದ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ(ಆ,01): ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ನೆಟ್ ಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ನೆಟ್ ಬಾಲ್ ತಂಡ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ವಿಭಾಗೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಆಯ್ಕೆಯಾದ ವಿದ್ಯಾರ್ಥಿಗಳು ಕ್ರಮವಾಗಿ ಯೋಗೇಶ್, ಸ್ರಜನ್, ಮೌನೇಶ್ ,ನಾಗರಾಜ ,ಅರ್ಜುನ್, ಪ್ರಜ್ವಲ್, ಗೌತಮ್, ಮನು, ಹ್ರತ್ವಿಕ್, ಪನ್ನಗ, ಹಾಗೂ ನವನೀತ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ/ಬೋಧಕೇತರ […]