ಕಿರಿಮಂಜೇಶ್ವರ (ನ,1) : ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ನಡೆಯಿತು. ತಾಯಿ ಭುವನೇಶ್ವರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಶಿಕ್ಷಕರಾದ ಸುಬ್ರಹ್ಮಣ್ಯ ಮರಾಠಿ ಇವರು ಕನ್ನಡದ ಐತಿಹಾಸಿಕ ಹಿನ್ನೆಲೆ ಮತ್ತು ಕನ್ನಡದ ನಾಡು ನುಡಿಯ ಬಗ್ಗೆ ,ಉಳಿವು ಅಳಿವಿನ ಬಗ್ಗೆ ಮಾತನಾಡಿದರು.ಈ ಸಭೆಯ ಅಧ್ಯಕ್ಷತೆಯನ್ನು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿಯಾದ ದೀಪಿಕಾ ಆಚಾರ್ಯ ಅವರು ಕನ್ನಡದ […]
Tag: janatha p u
ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿಗಳು
ಕಿರಿಮಂಜೇಶ್ವರ( ಆ,30): ಬೈಂದೂರು ಶೈಕ್ಷಣಿಕ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲಾ ಕ್ರೀಡಾಂಗಣ ಮಾವಿನಕಟ್ಟೆಯಲ್ಲಿ ನಡೆಯಿತು. ಈ ಕ್ರೀಡಾಕೂಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ- 14ರ ವಯೋಮಾನದ ಬಾಲಕರ ವಿಭಾಗದ ಗುಂಡು ಎಸೆತದಲ್ಲಿ ಪ್ರವೀಶ್ (8ನೇ ತರಗತಿ) ಪ್ರಥಮ ಸ್ಥಾನ ಹಾಗೂ ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಅಪೇಕ್ಷಾ(7ನೆ ತರಗತಿ) ದ್ವಿತೀಯ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. […]
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ : ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಪ್ರಥಮಸ್ಥಾನ
ಕಿರಿಮಂಜೇಶ್ವರ(ಆ,30): ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆದ ಅಂತರ ಜಿಲ್ಲಾ ಮಟ್ಟದ 7ರ ವಯೋಮಿತಿ ವಿಭಾಗದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಪ್ರಮುಖ ಬಿ ಪೂಜಾರಿ (1ನೆ ತರಗತಿ) ಪ್ರಥಮ ಸ್ಥಾನ ಪಡೆದಿದ್ದಾನೆ. ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮುಖ್ಯ ಶಿಕ್ಷಕಿ, ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಕರಾಟೆ: ಚಿನ್ನಕ್ಕೆ ಮುತ್ತಿಟ್ಟ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿಗಳು
ಬೈoದೂರು( ಆ,24):ಉತ್ತರ ಕನ್ನಡ ಕರಾಟೆ ಅಸೋಸಿಯೇಷನ್ ಭಟ್ಕಳ ಇವರು ಆಯೋಜಿಸಿದ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟದ ಕುಮಿಟೆ ವಿಭಾಗದಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಆರ್ಯನ್ (8ನೇ ತರಗತಿ), ರಜತ್ (7ನೇ ತರಗತಿ) ಚಿನ್ನದ ಪದಕ ಹಾಗೂ ಗಗನ್ ( 6ನೇ ತರಗತಿ) ಕಂಚಿನ ಪದಕವನ್ನು ಗಳಿಸಿದ್ದಾರೆ. ಕಟಾ ವಿಭಾಗದಲ್ಲಿ ಗಗನ್ (6ನೇ ತರಗತಿ) ಚಿನ್ನದ ಪದಕ, ಅಕ್ಷಿತ್ (7ನೇ ತರಗತಿ), ಅನ್ವೇಷಣ(7ನೇ ತರಗತಿ) ಶ್ರೀಶಾ (4ನೇ ತರಗತಿ) […]
ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ಆ,21): ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಬೆಂಗಳೂರು, ದೇವರಾಜ್ ಅರಸ್ ಪದವಿಪೂರ್ವ ಕಾಲೇಜು ಆರ್.ಎಲ್.ಜಾಲಪ್ಪ ಕ್ಯಾಂಪಸ್ ಕೊಡಿಗೇಹಳ್ಳಿ ದೊಡ್ಡಬಳ್ಳಾಪುರಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬಾಲಕಿಯರ ವಿಭಾಗದಲ್ಲಿಉಡುಪಿ ಜಿಲ್ಲೆಯ ಯೋಗಾಸನ ತಂಡವನ್ನು ಪ್ರತಿನಿಧಿಸಿದ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದನಿರೀಕ್ಷಾ ಮತ್ತು ತನ್ವಿತಾ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ […]
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆ
ಹೆಮ್ಮಾಡಿ( ಆ,18): ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಬೆಳಗಾವಿ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪದವಿಪೂರ್ವ ವಿಭಾಗ) ಬೆಳಗಾವಿ,ಶಾಂತಿನಿಕೇತನ ಪದವಿಪೂರ್ವ ಕಾಲೇಜು ಖಾನಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಬಾಲಕ/ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ,ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಕ್ಕೆ ಆಯ್ಕೆಯಾದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಒಟ್ಟು 7 ವಿದ್ಯಾರ್ಥಿಗಳು ಪದಕಗಳನ್ನು ಪಡೆದು ಅದ್ವಿತೀಯ ಸಾಧನೆ ಮಾಡಿದ್ದಾರೆ. ಬಾಲಕಿಯರ 70ಕೆ.ಜಿ.ವಿಭಾಗದಲ್ಲಿ ವಿದ್ಯಾರ್ಥಿನಿ […]
ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ : ಯೋಗಾಸನ ಸ್ಪರ್ಧೆ ಸಾನಿಧ್ಯಗೆ ತೃತೀಯ ಸ್ಥಾನ
ಕಿರಿಮಂಜೇಶ್ವರ (ಅ,05): ಕಾರ್ಕಳದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿನಿ ಸಾನಿಧ್ಯ ಎಸ್ ಮೊಗವೀರ ತೃತೀಯ ಸ್ಥಾನ ಗಳಿಸಿ ಉಡುಪಿ ಜಿಲ್ಲೆಗೆ ಹಾಗೆಯೇ ಜನತಾ ವಿದ್ಯಾಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾಳೆ. ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ, ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ರೋನಿತ್ ಪೂಜಾರಿ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ ( ಆ ,4): ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ನ್ಯಾಷನಲ್ ಪದವಿಪೂರ್ವ ಕಾಲೇಜು ಬಾರ್ಕೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕರ ಟೆನ್ನಿಸ್ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿ ರೋನಿತ್ ಪೂಜಾರಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಐಶು ಖಾರ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ (ಆ ,05): ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಸ್ವತಿ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ/ ಬಾಲಕಿಯರ ಟೆನ್ನಿಕ್ವಾಯ್ಟ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಐಶು ಖಾರ್ವಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ :ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ
ಕಿರಿಮoಜೇಶ್ವರ(ಆ,2): ಇಲ್ಲಿನ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಗಾಂಧಿ ಹಾಗೂ ಶಾಸ್ತ್ರೀ ಜಯಂತಿಯನ್ನು ಅಕ್ಟೋಬರ್ 02 ರಂದು ಆಚರಿಸಲಾಯಿತು. ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಲಾಯಿತು. ಶಿಕ್ಷಕರಾದ ದೀಪಿಕಾ ಹಾಗೂ ರಾಘವೇಂದ್ರ ಇವರು ಗಾಂಧೀಜಿ ಮತ್ತು ಶಾಸ್ತ್ರಿಯವರ ಜೀವನ ಸಾಧನೆಗಳನ್ನು ಸ್ಮರಿಸಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿಯಾದ ದೀಪಿಕಾ ಆಚಾರ್ಯ ಅವರು […]










