ಕಿರಿಮಂಜೇಶ್ವರ( ಸೆ,18): ಕರ್ನಾಟಕ ಸರ್ಕಾರ ,ಶಾಲಾ ಶಿಕ್ಷಣ ಇಲಾಖೆ ಕೇಂದ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ,ಇವರ ಸಹಭಾಗಿತ್ವದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ನಡೆದ ,ಕಿರಿಮoಜೇಶ್ವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ನ್ಯೂ ಇಂಗ್ಲೀಷ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿಗಳು ವೈಯಕ್ತಿಕ ಹಾಗೂ ಸಾಮೂಹಿಕ ಸ್ಪರ್ಧೆಗಳಲ್ಲಿ ಒಟ್ಟು 31 ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ. ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ನಮ್ಮ ವಿದ್ಯಾರ್ಥಿಗಳು […]
Tag: janatha p u
ಹೆಮ್ಮಾಡಿಯ ಜನತಾ ಪಿ ಯು ಕಾಲೇಜಿನ ಬಾಲಕರ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ(ಸೆ.17): ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಪದವಿಪೂರ್ವ ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ವಾಲಿಬಾಲ್ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿರಿಮಂಜೇಶ್ವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಕಿರಿಮಂಜೇಶ್ವರ (ಸೆ.13): ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು,ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು, ಸಮೂಹ ಸಂಪನ್ಮೂಲ ಕೇಂದ್ರ ಕಿರಿಮಂಜೇಶ್ವರ ಹಾಗೂ ಶುಭದ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಇವರ ಸಹಯೋಗದಲ್ಲಿ ಕಿರಿಮಂಜೇಶ್ವರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಸೆಪ್ಟೆಂಬರ್,12 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ನಾಗೇಶ್ ನಾಯ್ಕರವರು ಮಾತನಾಡಿ ‘ಪ್ರತಿಭೆಗಳು ಅರಳಲು ಸೂಕ್ತ ವೇದಿಕೆ ಕಲ್ಪಿಸಿ ಕೊಡುವ […]
ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ‘ಜನತಾ ನವನೀತ 2024’ ಸಂಪನ್ನ
ಕುಂದಾಪುರ;(ಜು,23): ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ‘ಜನತಾ ನವನೀತ-2024’ ಕಾರ್ಯಕ್ರಮ ಕುಂದಾಪುರದ ಮೊಗವೀರ ಭವನದಲ್ಲಿ ಜುಲೈ 22 ರಂದು ಜರುಗಿತು.ಸಮಾರಂಭವನ್ನು ಉದ್ಘಾಟನೆಗೈದ ಶಿಕ್ಷಕರು ಮತ್ತು ರಾಷ್ಟ್ರೀಯ ಮಟ್ಟದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಶ್ರೀ ರಾಜೇಂದ್ರ ಭಟ್ ಕೆ.ಯವರು ಮಾತನಾಡಿ ಜೀವನದಲ್ಲಿ, ಪರೀಕ್ಷೆಯಲ್ಲಿ, ಬದುಕಿನಲ್ಲಿ ಸೋತವರ ಕಥೆಗಳು ನಮ್ಮನ್ನು ಪ್ರೇರೇಪಿಸುತ್ತಾ ಹೋಗುತ್ತವೆ. ಸೋತವರ ಕಥೆಗಳು ನಮಗೆ ಆದರ್ಶಗಳಾಗುತ್ತವೆ.ಗೆದ್ದಾಗ ಮಾತ್ರ ಸಂಭ್ರಮಿಸುವುದಲ್ಲ. ಸೋತಾಗಲೂ ಸಂಭ್ರಮಿಸಬೇಕು. ಸಣ್ಣ ಸಣ್ಣ ಸೋಲುಗಳನ್ನು ಎದುರಿಸುವುದನ್ನು ಅತ್ಯದ್ಭುತವಾಗಿ ಕಲಿಯಬೇಕು. […]
ಕಂಪೆನಿ ಸೆಕ್ರೆಟರಿ ಆಫ್ ಇಂಡಿಯಾ – ಅರ್ಹತಾ ಪರೀಕ್ಷೆ(CSEET): ಜನತಾ ಪಿ ಯು ಕಾಲೇಜಿನ ಧೀರಜ್ ಆಯ್ಕೆ
ಹೆಮ್ಮಾಡಿ( ಮೇ ,17): ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಮೇ 4, 2024 ರಂದು ನಡೆಸಿದ CSEET ಅರ್ಹತಾ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧೀರಜ್ 119 /200 ಅಂಕಗಳನ್ನು ಪಡೆದು ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾನೆ. ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಪರೀಕ್ಷೆ ಇದಾಗಿದ್ದು ಜನತಾ ಪದವಿಪೂರ್ವ ಕಾಲೇಜಿನವಿದ್ಯಾರ್ಥಿ ಧೀರಜ್ ಪಿಯುಸಿ ಯಲ್ಲಿಯೇ […]
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ: ಅಪರಂಜಿ ಬೇಸಿಗೆ ಶಿಬಿರ ಸಂಪನ್ನ
ಕಿರಿಮಂಜೇಶ್ವರ( ಎ,20): ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ (ಶುಭದಾ ಆಂಗ್ಲ ಮಾಧ್ಯಮ ಶಾಲೆ) ಕಿರಿಮಂಜೇಶ್ವರದಲ್ಲಿಏಪ್ರಿಲ್ 15 ರಿಂದ 19ರ ವರೆಗೆ ಐದು ದಿನಗಳ ಕಾಲ ನಡೆದ ಚಿಣ್ಣರ ಬೇಸಿಗೆ ಶಿಬಿರ ‘ಅಪರಂಜಿ’ ಸಂಪನ್ನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡಿರುವ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಇದರ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಗಣೇಶ ಮೊಗವೀರರವರು ಮಾತನಾಡಿ ಬೇಸಿಗೆ ಶಿಬಿರದ ಮೂಲಕ ವಿದ್ಯಾರ್ಥಿಗಳಲ್ಲಿ ಬಾಂಧವ್ಯ ವೃದ್ಧಿಯಾಗುತ್ತದೆ, ವಿದ್ಯಾರ್ಥಿಗಳೇ […]
ರಾಜ್ಯ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ಗೆ ಹೆಮ್ಮಾಡಿ ಜನತಾ ಪಿ ಯು ಕಾಲೇಜಿನ ತೇಜಸ್ವಿ ಮಿಥುನ್ ಆಯ್ಕೆ
ಹೆಮ್ಮಾಡಿ(ಆ,10): ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ. ಕ್ವಿಜ್ ನಲ್ಲಿ ಸ್ಪರ್ಧಿಸಿದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗ ವಿದ್ಯಾರ್ಥಿ ತೇಜಸ್ವಿ ಮಿಥುನ್ ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿ ರಾಜ್ಯ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆ: ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ
ಹೆಮ್ಮಾಡಿ;(ಸೆ,28): ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ವಿಜೇತರಾದ ಕಾಲೇಜಿನ ವಿದ್ಯಾರ್ಥಿಗಳಾದ,ಬಾಲಕರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಪ್ರಜ್ವಲ್ ಪೂಜಾರಿ,ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ರುಪಿನ್,ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಪ್ರಜ್ವಲ್ ಜಿ.,ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ರಿತೇಶ್ ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಸಂಜನಾ ಕಟ್ಟೆ,ಮತ್ತು ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಅರ್ಫಾ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ. ರಾಜ್ಯ […]
ಅಂತರ್ ಕಾಲೇಜು ಭಕ್ತಿಗೀತೆ ಸ್ಪರ್ಧೆ: ಹೆಮ್ಮಾಡಿಯ ಜನತಾ ಸ್ವತಂತ್ರ ಪಿ .ಯು ಕಾಲೇಜಿನ ಕೇದಾರ್ ಮರವಂತೆ ದ್ವಿತೀಯ ಸ್ಥಾನ
ಹೆಮ್ಮಾಡಿ(ಸೆ,28): ಶ್ರೀ ಶಾರದಾ ಪದವಿಪೂರ್ವ ಕಾಲೇಜು ಬಸ್ರೂರು ಇವರು ಆಯೋಜಿಸಿದ ಅಂತರ್ ಕಾಲೇಜು ಭಕ್ತಿಗೀತೆ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಕೇದಾರ್ ಮರವಂತೆ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಬಾಲಕಿಯರ ಕಬಡ್ಡಿ ತಂಡ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆ
ಹೆಮ್ಮಾಡಿ(ಸೆ.11): ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯವರು,ಆರ್ .ಎನ್ . ಶೆಟ್ಟಿ ಪದವಿಪೂರ್ವ ಕಾಲೇಜು ಕುಂದಾಪುರದಲ್ಲಿ ಆಯೋಜಿಸಿದ ಕುಂದಾಪುರ ತಾಲೂಕು ಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತಾರೆ. ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರುಅಭಿನಂದನೆ ಸಲ್ಲಿಸಿದ್ದಾರೆ.










